AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಾ. ಕೂಡ್ಲಿಗೆ ಖಾದ್ರಿ ಶಾಮಣ್ಣ ಪತ್ರಿಕೋದ್ಯಮ ಪ್ರಶಸ್ತಿ

ಹಿರಿಯ ಪತ್ರಕರ್ತ ಡಾ. ಕೂಡ್ಲಿ ಗುರುರಾಜ್ ಅವರಿಗೆ ಖಾದ್ರಿ ಶಾಮಣ್ಣ ಪತ್ರಿಕೋದ್ಯಮ ಪ್ರಶಸ್ತಿ ಲಭಿಸಿದೆ. ಕಳೆದ 38 ವರ್ಷಗಳ ಕಾಲ ಕನ್ನಡ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿರುವ ಅವರು ಮೈಸೂರು, ಹುಬ್ಬಳ್ಳಿ, ಬೆಂಗಳೂರಿನಲ್ಲಿ ವರದಿಗಾರರಾಗಿ ಕೆಲಸ ಮಾಡಿದ್ದಾರೆ. ಪತ್ರಿಕೋದ್ಯಮದಲ್ಲಿ ಡಾಕ್ಟರೇಟ್ ಪಡೆದಿರುವ ಅವರು ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಅಚ್ಚುಮೆಚ್ಚಿನ ಅಧ್ಯಾಪಕರೂ ಆಗಿದ್ದಾರೆ. 15 ಸಾವಿರ ರೂ. ನಗದು ಮತ್ತು ಫಲಕವನ್ನು ಒಳಗೊಂಡ ಈ ಪ್ರಶಸ್ತಿಯ ಪ್ರದಾನ ಜೂನ್‌ನಲ್ಲಿ ನಡೆಯಲಿದೆ.

ಡಾ. ಕೂಡ್ಲಿಗೆ ಖಾದ್ರಿ ಶಾಮಣ್ಣ ಪತ್ರಿಕೋದ್ಯಮ ಪ್ರಶಸ್ತಿ
ಡಾ. ಕೂಡ್ಲಿ ಗುರುರಾಜ್
ವಿವೇಕ ಬಿರಾದಾರ
|

Updated on:May 25, 2025 | 7:26 PM

Share

ಬೆಂಗಳೂರು, ಮೇ 25: ಖಾದ್ರಿ ಶಾಮಣ್ಣ (Khadri Shamanna) ಪತ್ರಿಕೋದ್ಯಮ ಪ್ರಶಸ್ತಿ ಈ ಬಾರಿ ಹಿರಿಯ ಪತ್ರಕರ್ತರಾದ ಮೈಸೂರಿನ ಡಾ. ಕೂಡ್ಲಿ ಗುರುರಾಜ ಅವರಿಗೆ ಲಭಿಸಿದೆ. ಪ್ರಶಸ್ತಿ 15 ಸಾವಿರ ರೂ. ನಗದು ಹಾಗೂ ಫಲಕ ಹೊಂದಿದೆ. ಕೂಡ್ಲಿ ಗುರುರಾಜ ಅವರು ಮೂಲತಃ ಮೈಸೂರಿನವರು. ಕಿರಿಯದಯಸ್ಸಿನಲ್ಲೇ ಪತ್ರಿಕೋದ್ಯಮಕ್ಕೆ ಬಂದವರು. ಪತ್ರಿಕೋದ್ಯಮದಲ್ಲಿ ಡಾಕ್ಟರೇಟ್ ಪಡೆದು ಅಧ್ಯಾಪಕರಾಗಿ ಹಾಗೂ ಪತ್ರಕರ್ತರಾಗಿ ಮೈಸೂರಿನ ಆರತಿ ಪತ್ರಿಕೆಯಿಂದ ವೃತ್ತಿ ಆರಂಭಿಸಿದರು.

ಮೈಸೂರು ಮಿತ್ರ, ಆಂದೋಲನ ಪತ್ರಿಕೆಗಳಲ್ಲಿ ದುಡಿದು ಸಂಯುಕ್ತ ಕರ್ನಾಟಕ, ಕನ್ನಡಪ್ರಭ, ವಿಜಯ ಕರ್ನಾಟಕ, ಟೈಮ್ಸ್ ಆಫ್ ಇಂಡಿಯಾ ಕನ್ನಡ ಆವೃತ್ತಿ, ವಿಜಯ ನೆಕ್ಸ್, ಉದಯವಾಣಿ ಪತ್ರಿಕೆಗಳಲ್ಲಿ ಕೆಲಸ ಮಾಡಿ ಅಪಾರ ಅನುಭವ ಪಡೆದವರು. ಹುಬ್ಬಳ್ಳಿ, ಬೆಂಗಳೂರಿನಲ್ಲಿ ವರದಿಗಾರರಾಗಿ ಕೆಲಸ ಮಾಡಿ, ಈಗ ಮೈಸೂರಿನಲ್ಲಿ ಜನಮಿತ್ರ ಪತ್ರಿಕೆ ವಿಶೇಷ ವರದಿಗಾರರು. ಪತ್ರಿಕೋದ್ಯಮದ ಬಗ್ಗೆ ಗ್ರಂಥಗಳನ್ನೂ ರಚಿಸಿದ್ದಾರೆ. ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಅಚ್ಚುಮೆಚ್ಚಿನ ಅಧ್ಯಾಪಕ.

ಇದನ್ನೂ ಓದಿ: ಬೂಕರ್ ಪ್ರಶಸ್ತಿ ಪಡೆದ ಕನ್ನಡದ ಮೊದಲ ಸಾಹಿತಿ ಬಾನು ಮುಷ್ತಾಕ್: ವ್ಯಕ್ತಿ ಚಿತ್ರಣ ಇಲ್ಲಿದೆ

ಕಳೆದ 38 ವರ್ಷಗಳಿಂದ ಸತತವಾಗಿ ಕನ್ನಡ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸುತ್ತಿರುವ ಕೂಡ್ಲಿ ಗುರುರಾಜ ಅವರಿಗೆ ಈ ಪ್ರಶಸ್ತಿ ನೀಡಲು ಖಾದ್ರಿ ಶಾಮಣ್ಣ ಟ್ರಸ್ಟ್ ಸಂತಸ ವ್ಯಕ್ತಪಡಿಸುತ್ತದೆ. ಪ್ರಶಸ್ತಿ ಪ್ರದಾನ ಸಮಾರಂಭ ಜೂನ್​​ನಲ್ಲಿ ನಡೆಯಲಿದೆ. ಕಳೆದ ವರ್ಷ ಪ್ರಜಾವಾಣಿ ಪತ್ರಿಕೆಯ ಶ್ರೀ ಎಂ. ನಾಗರಾಜ ಅವರಿಗೆ ಈ ಪ್ರಶಸ್ತಿ ನೀಡಲಾಗಿತ್ತು ಎಂದು ಟ್ರಸ್ಟ್ ಪರವಾಗಿ ಪತ್ರಕರ್ತ ಎಚ್.ಆರ್.ಶ್ರೀಶ ತಿಳಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:23 pm, Sun, 25 May 25