ಅಕ್ರಮ ವಿದ್ಯುತ್​ ತಂತಿಬೇಲಿ ಸ್ಪರ್ಶದಿಂದ ಮೃತಪಟ್ಟ ವನ್ಯಜೀವಿಗಳ ಮಾಹಿತಿ ಕೇಳಿದ ಖಂಡ್ರೆ

ಕಾಡಿನಿಂದ ನಾಡಿಗೆ ಬರುವ ವನ್ಯಜೀವಿಗಳು ಇಲ್ಲಿ ಅಕ್ರಮ ವಿದ್ಯುತ್​ ತಂತಿಬೇಲಿ ಸ್ಪರ್ಶ, ಅಪಘಾತ ಅಥವಾ ಮನುಷ್ಯನ ದಾಳಿಯಿಂದ ಸಾವಿಗೀಡಾಗುತ್ತವೆ. ಹೀಗೆ ಮೃತಪಟ್ಟ ವನ್ಯಜೀವಿಗಳ ಕುರಿತು ಮತ್ತು ಈ ಬಗ್ಗೆ ತೆಗೆದುಕೊಂಡ ಕ್ರಮದ ಬಗ್ಗೆ ಸಚಿವ ಈಶ್ವರ್​ ಖಂಡ್ರೆ ಮಾಹಿತಿ ಕೇಳಿದ್ದಾರೆ.

ಅಕ್ರಮ ವಿದ್ಯುತ್​ ತಂತಿಬೇಲಿ ಸ್ಪರ್ಶದಿಂದ ಮೃತಪಟ್ಟ ವನ್ಯಜೀವಿಗಳ ಮಾಹಿತಿ ಕೇಳಿದ ಖಂಡ್ರೆ
ಸಚಿವ ಈಶ್ವರ್​ ಖಂಡ್ರೆ
Follow us
ವಿವೇಕ ಬಿರಾದಾರ
|

Updated on:Sep 01, 2024 | 10:41 AM

ಬೆಂಗಳೂರು, ಸೆಪ್ಟೆಂಬರ್​​ 01: ಕಳೆದ ಐದು ವರ್ಷಗಳಲ್ಲಿ ಅಕ್ರಮ ವಿದ್ಯುತ್ ತಂತಿಬೇಲಿ ಸ್ಪರ್ಶದಿಂದ ಮತ್ತು ಬೇಲಿ ಉರುಳಿಗೆ ಸಿಲುಕಿ ಹಾಗೂ ಅಸಹಜವಾಗಿ ಮೃತಪಟ್ಟಿರುವ ವನ್ಯಜೀವಿಗಳ ಬಗ್ಗೆ ಮಾಹಿತಿ ನೀಡುವಂತೆ ಅರಣ್ಯ ಇಲಾಖೆ ಸಚಿವ ಈಶ್ವರ್​ ಖಂಡ್ರೆ (Eshwar Kandre) ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಈ ಕುರಿತು ಸಚಿವ ಈಶ್ವರ್ ಖಂಡ್ರೆ ಸುತ್ತೋಲೆ ಹೊರಡಿಸಿದ್ದಾರೆ.

ರಾಜ್ಯದ ಅರಣ್ಯದ ಅಂಚಿನಲ್ಲಿರುವ ತೋಟಗಳಲ್ಲಿ ಅನಧಿಕೃತವಾಗಿ ಅಳವಡಿಸಲಾಗಿರುವ ವಿದ್ಯುತ್ ತಂತಿಬೇಲಿ ಸ್ಪರ್ಶದಿಂದ ಕಾಡಾನೆಗಳು ಸೇರಿದಂತೆ ಹಲವು ವನ್ಯಜೀವಿಗಳು ಮೃತಪಡುತ್ತಿದ್ದು, ಬೇಲಿಯ ಉರುಳಿಗೆ ಸಿಲುಕಿ ಚಿರತೆ ಇತ್ಯಾದಿ ಕಾಡು ಪ್ರಾಣಿಗಳು ಸಾವಿಗೀಡಾಗುತ್ತಿರುವ ಬಗ್ಗೆ ವರದಿಯಾಗುತ್ತಿವೆ.

ಇದನ್ನೂ ಓದಿ: ದೇವದಾರಿ ಹಿಲ್ಸ್​ನಲ್ಲಿ ಗಣಿಗಾರಿಕೆಗೆ ಸರ್ಕಾರ ಅನುಮತಿ ನಿರಾಕರಣೆ; ಗುತ್ತಿಗೆಗೆ ಸಹಿ ಹಾಕದಂತೆ ಈಶ್ವರ ಖಂಡ್ರೆ ಸೂಚನೆ

ವನ್ಯಜೀವಿಗಳು ಸ್ವಾಭಾವಿಕವಾಗಿ ಅಥವಾ ಅಸಹಜವಾಗಿ ಮೃತಪಟ್ಟ ಸಂದರ್ಭದಲ್ಲಿ ಕೂಡಲೇ ಅರಣ್ಯ ಸಚಿವರ ಕಾರ್ಯಾಲಯಕ್ಕೆ ಮಾಹಿತಿ ನೀಡಲು ಮತ್ತು ಮರಣೋತ್ತರ ಪರೀಕ್ಷೆ ಹಾಗೂ ಅಡಿಟ್ ಮಾಡಿ ನಿಖರ ವರದಿಯನ್ನು ಸಲ್ಲಿಸಬೇಕು.

ಕಳೆದ ಐದು ವರ್ಷಗಳಲ್ಲಿ ಅಕ್ರಮ ವಿದ್ಯುತ್ ತಂತಿಬೇಲಿ ಸ್ಪರ್ಶದಿಂದ ಮತ್ತು ಬೇಲಿ ಉರುಳಿಗೆ ಸಿಲುಕಿ ಹಾಗೂ ಅಸಹಜವಾಗಿ ಎಷ್ಟು ವನ್ಯಜೀವಿಗಳು ಮೃತಪಟ್ಟಿವೆ? ಈ ಎಲ್ಲ ಪ್ರಕರಣಗಳಲ್ಲಿ ಕೈಗೊಂಡಿರುವ ಕ್ರಮವೇನು? ಈ ಪ್ರಕ್ರಿಯೆ ಯಾವ ಹಂತದಲ್ಲಿದೆ? ಎಷ್ಟು ತಪ್ಪಿತಸ್ಥರಿಗೆ ಶಿಕ್ಷೆಯಾಗಿದೆ ಎಂಬ ಸಮಗ್ರ ವಲಯವಾರು ವರದಿಯನ್ನು 10 ದಿನಗಳ ಒಳಗಾಗಿ ವರದಿ ನೀಡುವಂತೆ ಈಶ್ವರ್​ ಖಂಡ್ರೆ ಸೂಚನೆ ನೀಡಿದ್ದಾರೆ.

ಇತ್ತೀಚಿಗೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಅಗರದಹಳ್ಳಿಯಲ್ಲಿಉರುಳಿಗೆ ಸಿಲುಕಿ ಚಿರತೆ ಮೃತಪಟ್ಟಿತ್ತು.  ಚಿರತೆ ಭದ್ರಾ ಅಭಯಾರಣ್ಯದ ವಲಯದಿಂದ ಹೊರಬಂದು ಅಗರದಹಳ್ಳಿಯ ಕಾಲುವೆ ಕೆಳಗೆ ಸೇರಿಕೊಂಡಿತ್ತು. ಇದನ್ನು ಸೆರೆ ಹಿಡಿಯಲು ಭದ್ರಾ ಕಣಿವಮ್ಮ ದೇವಸ್ಥಾನದ ಬಳಿ ಬೋನು ಇಟ್ಟಿದ್ದರೂ ಚಿರತೆ ಸೆರೆ ಸಿಕ್ಕಿರಲಿಲ್ಲ. ಆದರೆ ಆಗಸ್ಟ್​ 8ರ ತಡರಾತ್ರಿ ಕಾಲುವೆಯಿಂದ ಅಡಿಕೆ ತೋಟಕ್ಕೆ ಹೋಗವಾಗ ಉರುಳಿಗೆ ಸಿಲುಕಿ ಚಿರತೆ ಮೃತಪಟ್ಟಿತ್ತು.

ಹೀಗೆ ಅನೇಕ ಪ್ರಾಣಿಗಳು ಅಕ್ರಮ ವಿದ್ಯುತ್ ತಂತಿ ಸ್ಪರ್ಶಿಸಿ, ಉರುಳಿಗೆ ಬಿದ್ದಯ ಮೃತಪಟ್ಟಿವೆ. ಇದರ ಬಗ್ಗೆ ಸಾಕಷ್ಟು ವರದಿಯಾದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಸಚಿವ ಈಶ್ವರ್​ ಖಂಡ್ರೆ ಎಚ್ಚೆತ್ತುಕೊಂಡಿದ್ದು, ಅಧಿಕಾರಿಗಳಿಗೆ ಖಡಕ್​ ಸೂಚನೆ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:37 am, Sun, 1 September 24

ತಂದೆಯ ರೀತಿ ಆಶೀರ್ವಾದ ಮಾಡಿದ್ದರು: ಸರಿಗಮ ವಿಜಿ ನಿಧನಕ್ಕೆ ತರುಣ್ ಸಂತಾಪ
ತಂದೆಯ ರೀತಿ ಆಶೀರ್ವಾದ ಮಾಡಿದ್ದರು: ಸರಿಗಮ ವಿಜಿ ನಿಧನಕ್ಕೆ ತರುಣ್ ಸಂತಾಪ
ಬಹಳ ಎಚ್ಚರವಹಿಸಬೇಕೆಂದು ಹೇಳುತ್ತಾರೆ ಪ್ರಯಾಗ್​ರಾಜ್​ಗೆ ಬಂದಿರುವ ಕನ್ನಡಿಗ
ಬಹಳ ಎಚ್ಚರವಹಿಸಬೇಕೆಂದು ಹೇಳುತ್ತಾರೆ ಪ್ರಯಾಗ್​ರಾಜ್​ಗೆ ಬಂದಿರುವ ಕನ್ನಡಿಗ
ಕೊಪ್ಪಳ ಗವಿಮಠದ ಅಜ್ಜನ ಜಾತ್ರೆಗೆ ಹರಿದು ಬಂದ ಜನ ಸಾಗರದ ವಿಡಿಯೋ ನೋಡಿ
ಕೊಪ್ಪಳ ಗವಿಮಠದ ಅಜ್ಜನ ಜಾತ್ರೆಗೆ ಹರಿದು ಬಂದ ಜನ ಸಾಗರದ ವಿಡಿಯೋ ನೋಡಿ
ಯಡಿಯೂರಪ್ಪ ಕಾಲಿಗೆ ಚಕ್ರ ಕಟ್ಟಿಕೊಂಡು ಪಕ್ಷ ಸಂಘಟನೆ ಮಾಡಿದ್ದಾರೆ: ಬಿವೈವಿ
ಯಡಿಯೂರಪ್ಪ ಕಾಲಿಗೆ ಚಕ್ರ ಕಟ್ಟಿಕೊಂಡು ಪಕ್ಷ ಸಂಘಟನೆ ಮಾಡಿದ್ದಾರೆ: ಬಿವೈವಿ
ಮೂಕ ಪ್ರಾಣಿಯ ಕೆಚ್ಚಲು ಕೊಯ್ಯುವುದು ತಾಯಿಗೆ ದ್ರೋಗ ಬಗೆದಂತೆ: ತನ್ವೀರ್ ಸೇಟ
ಮೂಕ ಪ್ರಾಣಿಯ ಕೆಚ್ಚಲು ಕೊಯ್ಯುವುದು ತಾಯಿಗೆ ದ್ರೋಗ ಬಗೆದಂತೆ: ತನ್ವೀರ್ ಸೇಟ
ಆರತಿ ಉಕ್ಕಡಕ್ಕೆ ಭೇಟಿ ನೀಡಿದ ದರ್ಶನ್; ಅಹಲ್ಯ ದೇವಿಗೆ ವಿಶೇಷ ಪೂಜೆ
ಆರತಿ ಉಕ್ಕಡಕ್ಕೆ ಭೇಟಿ ನೀಡಿದ ದರ್ಶನ್; ಅಹಲ್ಯ ದೇವಿಗೆ ವಿಶೇಷ ಪೂಜೆ
ನವಿ ಮುಂಬೈನಲ್ಲಿ ಏಷ್ಯಾದ 2ನೇ ದೊಡ್ಡ ಇಸ್ಕಾನ್ ದೇವಾಲಯ ಉದ್ಘಾಟಿಸಿದ ಮೋದಿ
ನವಿ ಮುಂಬೈನಲ್ಲಿ ಏಷ್ಯಾದ 2ನೇ ದೊಡ್ಡ ಇಸ್ಕಾನ್ ದೇವಾಲಯ ಉದ್ಘಾಟಿಸಿದ ಮೋದಿ
ದೇವರಾಜ ಮಾರ್ಕೆಟ್ ಡೆಮಾಲಿಶ್ ಮಾಡಲು ನ್ಯಾಯಾಲಯ ಆದೇಶಿಸಿದೆ: ಮಹದೇವಪ್ಪ
ದೇವರಾಜ ಮಾರ್ಕೆಟ್ ಡೆಮಾಲಿಶ್ ಮಾಡಲು ನ್ಯಾಯಾಲಯ ಆದೇಶಿಸಿದೆ: ಮಹದೇವಪ್ಪ
ಮಹಾಕುಂಭದಲ್ಲಿ ಭಕ್ತಸಾಗರ; ಕಣ್ಸೆಳೆಯುತ್ತಿದೆ ವಿಹಂಗಮ ನೋಟ
ಮಹಾಕುಂಭದಲ್ಲಿ ಭಕ್ತಸಾಗರ; ಕಣ್ಸೆಳೆಯುತ್ತಿದೆ ವಿಹಂಗಮ ನೋಟ
ನಾಳೆಯಲ್ಲ, ಮುಂದಿನ ಸಂಪುಟ ಸಭೆಯಲ್ಲಿ ಜಾತಿಗಣತಿ ವರದಿ ಮಂಡನೆ: ಸಿದ್ದರಾಮಯ್ಯ
ನಾಳೆಯಲ್ಲ, ಮುಂದಿನ ಸಂಪುಟ ಸಭೆಯಲ್ಲಿ ಜಾತಿಗಣತಿ ವರದಿ ಮಂಡನೆ: ಸಿದ್ದರಾಮಯ್ಯ