ಸಿಎಂ ಪತ್ನಿಯಂತೆ ಖರ್ಗೆ ಕುಟುಂಬದ ಸಿದ್ಧಾರ್ಥ್​ ಟ್ರಸ್ಟ್​ ಸಹ 5 ಎಕರೆ ಸೈಟ್​ ಹಿಂತಿರುಗಿಸಲು ನಿರ್ಧಾರ

ವಿವಾದಕ್ಕೊಳಗಾಗಿರುವ 14 ಬದಲಿ ಸೈಟ್​​ಗಳನ್ನು ಸಿಎಂ ಸಿದ್ದರಾಮಯ್ಯನವರ ಪತ್ನಿ ಅವರು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ(ಮುಡಾ) ಹಿಂದಿರುಗಿಸಿದ್ದಾರೆ. ಇದರ ಬೆನ್ನಲ್ಲೇ ರಾಜಕೀಯ ವಲಯದಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಹೊತ್ತಲ್ಲೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ಕುಟುಂಬಸ್ಥರು ಟ್ರಸ್ಟಿಗಳಾಗಿರುವ ಸಿದ್ದಾರ್ಥ್ ವಿಹಾರ ಟ್ರಸ್ಟ್​ ಸಹ 5 ಎಕರೆ ವಿಸ್ತೀರ್ಣದ ಸಿಎ ನಿವೇಶವನ್ನು ವಾಪಸ್ ನೀಡಲು ತೀರ್ಮಾನಿಸಿದೆ. ಈ ಬಗ್ಗೆ ಖುದ್ದು ಸಚಿವ ಪ್ರಿಯಾಂಕ್ ಖರ್ಗೆ ಅಧಿಕೃತವಾಗಿ ಹೇಳಿದ್ದಾರೆ.

ಸಿಎಂ ಪತ್ನಿಯಂತೆ ಖರ್ಗೆ ಕುಟುಂಬದ ಸಿದ್ಧಾರ್ಥ್​ ಟ್ರಸ್ಟ್​ ಸಹ 5 ಎಕರೆ ಸೈಟ್​ ಹಿಂತಿರುಗಿಸಲು ನಿರ್ಧಾರ
ಖರ್ಗೆ
Follow us
|

Updated on: Oct 13, 2024 | 12:36 PM

ಬೆಂಗಳೂರು, (ಅಕ್ಟೋಬರ್ 13): ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಭಾರೀ ವಿವಾದ ಬೆನ್ನಲ್ಲೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುಟುಂಬದ ಸಿದ್ದಾರ್ಥ ವಿಹಾರ್ ಟ್ರಸ್ಟ್ ಗೆ ನೀಡಿರುವ ಕೆಐಎಡಿಬಿ ಸಿಎ ಸೈಟ್ ವಾಪಸ್ ನೀಡಲು ತೀರ್ಮಾನಿಸಲಾಗಿದೆ. ಈ ವಿವಾದ ರಾಜ್ಯಪಾಲರ ಅಂಗಳಕ್ಕೆ ತಲುಪುತ್ತಿದ್ದಂತೆಯೇ ಖರ್ಗೆ ಕುಟುಂಬ ಈ ಸೈಟ್​ಗಳನ್ನು ವಾಪಸ್ ನೀಡಲು ನಿರ್ಧರಿಸಿದೆ. ಈ ಬಗ್ಗೆ ಇಂದು (ಅಕ್ಟೋಬರ್ 13) ಬೆಂಗಳೂರಿನಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಸುದ್ದಿಗೋಷ್ಠಿ ನಡೆಸಿ ತಮ್ಮ ಕುಟುಂಬದ ಟ್ರಸ್ಟ್​ಗೆ ನೀಡಲಾಗಿದ್ದ ಸೈಟ್​ ಹಿಂದಿರುಗಿಸುವ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

ಕೆಐಎಡಿಬಿ ಹಂಚಿಕೆ ಮಾಡಿದ್ದ ಭೂಮಿ ವಾಪಸ್​​ಗೆ ನಿರ್ಧರಿಸಲಾಗಿದೆ. ಕಾನೂನು ಬಾಹಿರವಾಗಿ ಸೈಟ್ ಹಂಚಿಕೆಯಾಗಿದೆ ಎಂಬ ಆರೋಪವಿತ್ತು. ಈ ವಿಚಾರದಲ್ಲಿ ಟ್ರಸ್ಟ್ ಅಧ್ಯಕ್ಷ ರಾಹುಲ್​ಗೆ ಮಾಹಿತಿ ಇರಲಿಲ್ಲ ಅನ್ಸುತ್ತೆ. ನಮ್ಮ ಕುಟುಂಬದಲ್ಲಿ ಮೂವರು ಅಷ್ಟೇ ರಾಜಕೀಯದಲ್ಲಿ ಇದ್ದೇವೆ. ನಮ್ಮ ಅಣ್ಣ ಅವರು ಮೃದು ಸ್ವಭಾವದವರು. ಅವರಿಂದ ಕುಟುಂಬದ ಸದಸ್ಯರರಿಗೆ ಹಿಂಸೆ ಆಗುತ್ತಿದೆ ಎಂದು ನೊಂದಿದ್ದಾರೆ . ಹೀಗಾಗಿ ಸೆಪ್ಟೆಂಬರ್ 29 ರಂದು ಅವರು ಕೆಐಎಡಿಬಿಗೆ ಪತ್ರ ಬರೆದಿದ್ದಾರೆ. ಸೈಟ್ ಕೊಟ್ಟಿರೋದನ್ನ ಕಾನೂನಾತ್ಮಕ ವಾಗಿ ಮರಳಿ‌ ನೀಡುತ್ತಿದ್ದೇವೆ ಎಂದು ಪತ್ರ ಬರೆದಿದ್ದಾರೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದರು.

ಇದನ್ನೂ ಓದಿ: ಕೆಐಎಡಿಬಿ ಭೂಮಿ ಹಂಚಿಕೆ ಪ್ರಕರಣ: ಖರ್ಗೆ ಕುಟುಂಬಕ್ಕೂ ಬಿಸಿಮುಟ್ಟಿಸಲು ಮುಂದಾದ ರಾಜ್ಯಪಾಲರು

ಟ್ರಸ್ಟ್ ಅಧ್ಯಕ್ಷ ರಾಹುಲ್‌ ಖರ್ಗೆ ಅವರಿಗೆ ಹೆಚ್ಚು ಅರಿವು ಇರಲಿಲ್ಲ ಅನ್ಸುತ್ತೆ. ಅವರಿಗೆ ಕೇಂದ್ರದಿಂದ ಸಾಕಷ್ಟು ಅವಾರ್ಡ್ ಸಿಕ್ಕಿದೆ. ಯುಪಿಎಸ್ ಇ ನಲ್ಲೂ ರ್ಯಾಂಕ್ ಬಂದಿದ್ರು. ಯುರೋಸ್ಪೇಸ್ ನಲ್ಲಿ ಜಾಗ ಬೇಕು ಅಂತ ಅರ್ಜಿ ಹಾಕಿದ್ದರು. ಅದರ ಅನ್ವಯ ಅವರಿಗೆ ಸೈಟ್ ಅಲರ್ಟ್​​ ಆಗಿದೆ. ಸಂಪೂರ್ಣ ದಾಖಲೆ ಆಧಾರದ‌ ಮೇಲೆ ಸೈಟ್ ಸಿಕ್ಕಿದೆ. ಇಲ್ಲಿ ತರಾತುರಿಯಲ್ಲಿ ಏನು ಆಗಿಲ್ಲ ಎಂದು ಸಮಜಾಯಿಷಿ ನೀಡಿದರು.

ಸಿಎ ಸೈಟ್ ತೆಗೆದುಕೊಳ್ಳುವ ಬಗ್ಗೆ ರಾಹುಲ್ ಖರ್ಗ ನಿರ್ಧಾರ ಮಾಡಿದ್ದರು. ಈಗ ಅವರೇ ಇಷ್ಟ ಇಲ್ಲ ಅಂತ ಮರಳಿ ನೀಡಿದ್ದಾರೆ. ರಾಹುಲ್ ಖರ್ಗೆ ಯಾರು ಅಂತ ಯಾರಿಗೂ ಗೊತ್ತಿಲ್ಲ. ಕಷ್ಟ ಪಟ್ಟು ರಾಹುಲ್‌ ಖರ್ಗೆ ಯುಪಿಎಸ್ ಇ ಪಾಸ್ ಆಗಿದ್ದಾರೆ. ಕಷ್ಟ ಪಟ್ಟು ನಮ್ಮ ಕುಟುಂಬದಲ್ಲಿ ರಾಹುಲ್‌ ಖರ್ಗೆ ವಿದ್ಯಾಭ್ಯಾಸ ಮಾಡಿದ್ದಾರೆ. ಇದೊಂದು ರಾಜಕೀಯ ಆರೋಪ ಅಷ್ಟೇ. ಆದ್ರೆ ಇದರಲ್ಲಿ ಯಾವುದೇ ಅಕ್ರಮ ನಡೆದಿಲ್ಲ. ರಾಹುಲ್ ಖರ್ಗೆ ನಮ್ಮ ರೀತಿ ಅಲ್ಲ.. ಅವರು ಮೃದು ಸ್ವಭಾವದವರು. ಬಿಜೆಪಿಯವರು ಮನುಸ್ಕೃತಿ ಸಭಾವದವರು. ಬಿಜೆಪಿ ನಾಯಕರ ಮಕ್ಕಳನ್ನ RSS ಗೆ ಕಳಿಸೋದಿಲ್ಲ. ನಮಗೆ ಸದಾ ಕಾಲ ವೈಯಕ್ತಿಕವಾಗಿ ದಾಳಿ‌ ಮಾಡುತ್ತಾರೆ. ಚುಚ್ಚು ಮಾತುಗಳನ್ನ ತೇಜೋವಧೆ ಮಾಡುತ್ತಾರೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ದಾವಣಗೆರೆ: ಎಳೆಹೊಳೆ ಗ್ರಾಮದಲ್ಲಿ ಕ್ರಿಶ 1271ರ ಶಾಸನ ಪತ್ತೆ
ದಾವಣಗೆರೆ: ಎಳೆಹೊಳೆ ಗ್ರಾಮದಲ್ಲಿ ಕ್ರಿಶ 1271ರ ಶಾಸನ ಪತ್ತೆ
ದಾವಣಗೆರೆ: ಗೌಳಿ ಸಮುದಾಯದಿಂದ ವಿಭಿನ್ನವಾಗಿ ದಸರಾ ಆಚರಣೆ
ದಾವಣಗೆರೆ: ಗೌಳಿ ಸಮುದಾಯದಿಂದ ವಿಭಿನ್ನವಾಗಿ ದಸರಾ ಆಚರಣೆ
"ಇಟ್ಟ ರಾಮನ ಬಾಣ ಹುಸಿಯಿಲ್ಲ" ಆತಂಕ ಮೂಡಿಸಿದ ಮೈಲಾರಲಿಂಗೇಶ್ವರ ಕಾರ್ಣಿಕ
ತುಮಕೂರು ದಸರಾದಲ್ಲಿ ಪುನೀತ್ ಅವರ ಹಾಡು ಹಾಡಿದ ಸಚಿವ ಪರಮೇಶ್ವರ್
ತುಮಕೂರು ದಸರಾದಲ್ಲಿ ಪುನೀತ್ ಅವರ ಹಾಡು ಹಾಡಿದ ಸಚಿವ ಪರಮೇಶ್ವರ್
ಬಾಂಗ್ಲಾ ಬೌಲರ್​ಗಳನ್ನ ಚೆಂಡಾಡಿದ ಭಾರತೀಯ ಬ್ಯಾಟರ್​ಗಳು: ಇಲ್ಲಿದೆ ಹೈಲೈಟ್ಸ್
ಬಾಂಗ್ಲಾ ಬೌಲರ್​ಗಳನ್ನ ಚೆಂಡಾಡಿದ ಭಾರತೀಯ ಬ್ಯಾಟರ್​ಗಳು: ಇಲ್ಲಿದೆ ಹೈಲೈಟ್ಸ್
Daily Devotional: ಸನಾತನ ಹಿಂದೂ ಧರ್ಮದಲ್ಲಿ ದರ್ಭೆಯ ಮಹತ್ವ ತಿಳಿಯಿರಿ
Daily Devotional: ಸನಾತನ ಹಿಂದೂ ಧರ್ಮದಲ್ಲಿ ದರ್ಭೆಯ ಮಹತ್ವ ತಿಳಿಯಿರಿ
ವಾರ ಭವಿಷ್ಯ: ಅಕ್ಟೋಬರ್ 14 ರಿಂದ 20 ರವರೆಗೆ ವಾರ ಭವಿಷ್ಯ ಹೀಗಿದೆ
ವಾರ ಭವಿಷ್ಯ: ಅಕ್ಟೋಬರ್ 14 ರಿಂದ 20 ರವರೆಗೆ ವಾರ ಭವಿಷ್ಯ ಹೀಗಿದೆ
ಈ ರಾಶಿಯವರ ಸಣ್ಣ ನಿರ್ಲಕ್ಷ್ಯವು ದೊಡ್ಡ ಅನಾಹುತಕ್ಕೆ ಕಾರಣವಾಗಬಹುದು
ಈ ರಾಶಿಯವರ ಸಣ್ಣ ನಿರ್ಲಕ್ಷ್ಯವು ದೊಡ್ಡ ಅನಾಹುತಕ್ಕೆ ಕಾರಣವಾಗಬಹುದು
ಸಂಜು 5 ಎಸೆತಗಳಲ್ಲಿ 5 ಸಿಕ್ಸರ್ ಸಿಡಿಸಿದ್ದು ಹೇಗೆ ಗೊತ್ತಾ? ವಿಡಿಯೋ ನೋಡಿ
ಸಂಜು 5 ಎಸೆತಗಳಲ್ಲಿ 5 ಸಿಕ್ಸರ್ ಸಿಡಿಸಿದ್ದು ಹೇಗೆ ಗೊತ್ತಾ? ವಿಡಿಯೋ ನೋಡಿ
ಅದ್ದೂರಿ, ಸಡಗರದ ದಸರಾ ಉತ್ಸವ, ಸಿದ್ದರಾಮಯ್ಯ ಸರ್ಕಾರಕ್ಕೆ ಫುಲ್ ಮಾರ್ಕ್ಸ್
ಅದ್ದೂರಿ, ಸಡಗರದ ದಸರಾ ಉತ್ಸವ, ಸಿದ್ದರಾಮಯ್ಯ ಸರ್ಕಾರಕ್ಕೆ ಫುಲ್ ಮಾರ್ಕ್ಸ್