ಕೆಐಎಡಿಬಿ ಅಕ್ರಮ ಆರೋಪ: ಛಲವಾದಿ ನಾರಾಯಣಸ್ವಾಮಿ ವಿರುದ್ಧ ರಾಜ್ಯಪಾಲರಿಗೆ ದೂರು

ಒಂದೆಡೆ ಮುಡಾ ಹಗರಣ ವಿಚಾರವಾಗಿ ಬಿಜೆಪಿ ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ವಿರುದ್ಧ ರಾಜಕೀಯ ಹೋರಾಟ ನಡೆಸುತ್ತಿದ್ದರೆ ಅತ್ತ ಕಾಂಗ್ರೆಸ್ ನಾಯಕರು ಸಹ ಬಿಜೆಪಿ ಅವಧಿಯ ಹಗರಣಗಳನ್ನು, ಅಕ್ರಮಗಳನ್ನು ಪ್ರಸ್ತಾಪಿಸಿ ತಿರುಗೇಟು ನೀಡುತ್ತಿದ್ದಾರೆ. ಇದೀಗ ಕೆಐಎಡಿಬಿ ಅಕ್ರಮ ಆರೋಪ ಸಂಬಂಧ ರಾಜ್ಯಪಾಲರಿಗೆ ದೂರು ನೀಡಿದ್ದಾರೆ.

ಕೆಐಎಡಿಬಿ ಅಕ್ರಮ ಆರೋಪ: ಛಲವಾದಿ ನಾರಾಯಣಸ್ವಾಮಿ ವಿರುದ್ಧ ರಾಜ್ಯಪಾಲರಿಗೆ ದೂರು
ಛಲವಾದಿ ನಾರಾಯಣಸ್ವಾಮಿ
Edited By:

Updated on: Sep 03, 2024 | 12:37 PM

ಬೆಂಗಳೂರು, ಸೆಪ್ಟೆಂಬರ್ 3: ಕೆಐಎಡಿಬಿಯಿಂದ ಅಕ್ರಮವಾಗಿ ಭೂಮಿ ಪಡೆದ ಆರೋಪ ಸಂಬಂಧ ಬಿಜೆಪಿ ಎಂಎಲ್​ಸಿ ಛಲವಾದಿ ನಾರಾಯಣಸ್ವಾಮಿ ವಿರುದ್ಧ ಸಲೀಂ ಅಹ್ಮದ್ ನೇತೃತ್ವದ ಕಾಂಗ್ರೆಸ್ ಸದಸ್ಯರ ನಿಯೋಗ ರಾಜ್ಯಪಾಲರಿಗೆ ದೂರು ನೀಡಿದೆ. ಛಲವಾದಿ ನಾರಾಯಣಸ್ವಾಮಿ ಕೆಐಎಡಿಬಿಯಿಂದ ಬೇರೆಯವರ ಹೆಸರಲ್ಲಿ ಭೂಮಿ ಪಡೆದು ತಮ್ಮ ಹೆಸರಿಗೆ ನೋಂದಣಿ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿರುವ ಕಾಂಗ್ರೆಸ್ ಸದಸ್ಯರು ತನಿಖೆ ನಡೆಸಲು ಅನುಮತಿ ನೀಡುವಂತೆ ರಾಜ್ಯಪಾಲರನ್ನು ಒತ್ತಾಯಿಸಿದ್ದಾರೆ.

ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್ ನೇತೃತ್ವದ ನಿಯೋಗದಲ್ಲಿ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ, ವಸಂತ ಕುಮಾರ್, ಪುಟ್ಟಣ್ಣ, ರವಿ, ಉಮಾಶ್ರೀ ಹಾಗೂ ಸುಧಾಮ್ ದಾಸ್, ದಿನೇಶ್ ಗೂಳಿಗೌಡ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

ಕೆಐಎಡಿಬಿ ಸಿಎ ನಿವೇಶನ ಹಂಚಿಕೆಯಲ್ಲಿ ಇಬ್ಬಗೆ ನೀತಿ

ಮತ್ತೊಂದೆಡೆ, ಕೆಐಎಡಿಬಿ ಸಿಎ ನಿವೇಶನ ಹಂಚಿಕೆಯಲ್ಲಿ ಇಬ್ಬಗೆ ನೀತಿ ಆರೋಪ ಕೇಳಿಬಂದಿದೆ. ಸರ್ಕಾರದ ಇಲಾಖೆಗೆ ಜಾಗ ನೀಡಲು ಮೀನಾಮೇಷ ಎಣಿಸಲಾಗುತ್ತಿದ್ದು, ಖಾಸಗಿ ಟ್ರಸ್ಟ್, ಕಂಪೆನಿಗಳಿಗೆ ಸಿಎ ನಿವೇಶನ ನೀಡಲು ಕೆಐಎಡಿಬಿ ಅತ್ಯುತ್ಸಾಹ ತೋರಿದೆ ಎನ್ನಲಾಗಿದೆ.

ಇದನ್ನೂ ಓದಿ: ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡ ಮಾಲೀಕರು: ಹೊಸ ಕ್ರಮ ಕೈಗೊಳ್ಳಲು ಮುಂದಾದ ಬಿಬಿಎಂಪಿ

ಸಿದ್ಧಾರ್ಥ ವಿಹಾರ ಟ್ರಸ್ಟ್‌ಗೆ ಜಾಗ ನೀಡುವ ಕೆಐಎಡಿಬಿ, ಸರ್ಕಾರದ ಇಲಾಖೆಗೆ ಜಾಗ ನೀಡಿಲ್ಲ. ಇದೇ ಹೈಟೆಕ್‌ ಡಿಫೆನ್ಸ್ ಏರೋಸ್ಪೇಸ್ ಪಾರ್ಕ್​​ನಲ್ಲೇ ಸಮಾಜ ಕಲ್ಯಾಣ ಇಲಾಖೆ ಜಾಗಕ್ಕಾಗಿ ಅರ್ಜಿ ಹಾಕಿತ್ತು. ಇಲಾಖೆ ಪ್ರಧಾನ ಕಾರ್ಯದರ್ಶಿ ಮಣಿವಣ್ಣನ್ ಎರಡು ಎಕರೆ ಜಾಗಕ್ಕಾಗಿ ಮನವಿ ಮಾಡಿದ್ದರು. ಹೈಸ್ಕೂಲ್ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಹಾಸ್ಟೆಲ್, ಸ್ಕಿಲ್ ಡೆವಲಪ್ಮೆಂಟ್ ಕೇಂದ್ರ ಮಾಡಲು ಇಲಾಖೆ ಜಾಗ ಕೇಳಿತ್ತು. ಆದರೆ ಕೆಐಎಡಿಬಿ ಸಮಾಜ ಕಲ್ಯಾಣ ಇಲಾಖೆಗೆ ಜಾಗ ನೀಡಿಲ್ಲ. ಜಾಗ ಹಂಚಿಕೆಗೆ ಸಮಾಜ ಕಲ್ಯಾಣ ಇಲಾಖೆಯ ಮನವಿ ಪುರಸ್ಕರಿಸಬಹುದು ಎಂದು ಏಕಗವಾಕ್ಷಿ ಸಮಿತಿ ಕೂಡ ಶಿಫಾರಸ್ಸು ಮಾಡಿತ್ತು. ಆದರೆ ಪ್ರಾಜೆಕ್ಟ್ ರಿಪೋರ್ಟ್ ಸಲ್ಲಿಸಿಲ್ಲ ಎಂಬ ಕಾರಣಕ್ಕೆ ಅರ್ಜಿಯನ್ನು ಕೆಐಎಡಿಬಿ ಪರಿಗಣಿಸಿಲ್ಲ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
Follow Us