AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧ್ಯಂತರ ನಿರೀಕ್ಷಣಾ ಜಾಮೀನು ಸಿಕ್ಕ ಬೆನ್ನಲ್ಲೇ ಎಸ್​ಐಟಿ ಮುಂದೆ ಹಾಜರಾದ ಭವಾನಿ ರೇವಣ್ಣ!

ಹಾಸನ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಪ್ರಜ್ವಲ್​ ರೇವಣ್ಣ ಅವರ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿದೆ. ಅಲ್ಲದೆ ಪ್ರಜ್ವಲ್​ ರೇವಣ್ಣ ಅವರದ್ದು ಎನ್ನಲಾಗಿರುವ ಪೆನ್​ಡ್ರೈವ್​​ನಲ್ಲಿನ ಮಹಿಳೆಯನ್ನು ಅಪಹರಿಸಲಾಗಿದೆ ಎಂದು ದೂರು ದಾಖಲಾಗಿದೆ. ಈ ಅಪಹರಣ ಪ್ರಕರಣದಲ್ಲಿ ಭವಾನಿ ರೇವಣ್ಣ ಅವರ ಹೆಸರು ಕೇಳಿಬಂದಿರುವ ಹಿನ್ನೆಲೆಯಲ್ಲಿ ಎಸ್​ಐಟಿ ಅವರನ್ನು ವಿಚಾರಣೆ ನಡೆಸುತ್ತಿದೆ.

ಮಧ್ಯಂತರ ನಿರೀಕ್ಷಣಾ ಜಾಮೀನು ಸಿಕ್ಕ ಬೆನ್ನಲ್ಲೇ ಎಸ್​ಐಟಿ ಮುಂದೆ ಹಾಜರಾದ ಭವಾನಿ ರೇವಣ್ಣ!
ಭವಾನಿ ರೇವಣ್ಣ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:Jun 07, 2024 | 1:55 PM

Share

ಬೆಂಗಳೂರು, ಜೂನ್​ 07: ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತೆಯನ್ನು ಅಪರಹರಿಸಿದ ಪ್ರಕರಣದಲ್ಲಿ ವಿಶೇಷ ತನಿಖಾ ದಳ (SIT) ಅಧಿಕಾರಿಗಳ ವಿಚಾರಣೆಗೆ ಹಾಜರಾಗದೆ ಕಳೆದ 15-20 ದಿನಗಳಿಂದ ನಾಪತ್ತೆಯಾಗಿದ್ದ ಭವಾನಿ ರೇವಣ್ಣ (Bhavani Revanna) ಕೊನೆಗೂ ಪ್ರತ್ಯಕ್ಷವಾಗಿದ್ದಾರೆ. ಹೈಕೋರ್ಟ್​​ನ ​ ಏಕ ಸದಸ್ಯ ಪೀಠ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದ ಬೆನ್ನಲ್ಲೇ ಮಾಜಿ ಸಚಿವ ಹೆಚ್​ಡಿ ರೇವಣ್ಣ (HD Revanna) ಪತ್ನಿ ಭವಾನಿ ರೇವಣ್ಣ ವಿಚಾರಣೆಗೆ ಎಸ್​ಐಟಿ ಅಧಿಕಾರಿಗಳ ಎದುರು ಹಾಜರಾಗಿದ್ದಾರೆ.

ಏನಿದು ಪ್ರಕರಣ?

ಪ್ರಜ್ವಲ್​ ರೇವಣ್ಣ ಅವರದ್ದು ಅಂತ ಬಿಡುಗಡೆಯಾಗಿರುವ ಅಶ್ಲೀಲ ವಿಡಿಯೋದಲ್ಲಿ ನನ್ನ ತಾಯಿಯ ಚಿತ್ರವೂ ಇದ್ದು, ಇದೀಗ ಅವರು ಕಣ್ಮರೆಯಾಗಿದ್ದಾರೆ ಎಂದು ಮೇ 2ರ ತಡರಾತ್ರಿ ಮೈಸೂರಿನ ಕೆಆರ್​​ ನಗರ ಠಾಣೆಯಲ್ಲಿ ಸಂತ್ರಸ್ತೆ ಪುತ್ರ ದೂರು ದಾಖಲಾಗಿದೆ. ಹೆಚ್​ಡಿ ರೇವಣ್ಣ, ಭವಾನಿ ರೇವಣ್ಣ ಮತ್ತು ಭವಾನಿ ರೇವಣ್ಣ ಸಂಬಂಧಿ ಬಾಬು ವಿರುದ್ಧ ದೂರು ದಾಖಲಾಗಿದೆ. ಪ್ರಕರಣದ ತನಿಖೆ ನಡೆಸುತ್ತಿರುವ ಎಸ್​ಐಟಿ ಅಧಿಕಾರಿಗಳು ಈಗಾಗಲೆ ಆರೋಪಿ ಬಾಬು ಅನ್ನು ಬಂಧಿಸಿದ್ದಾರೆ. ಪ್ರಕರಣದ ಮೊದಲ ಆರೋಪಿಯಾಗಿರುವ ಮಾಜಿ ಸಚಿವ ಹೆಚ್​ಡಿ ರೇವಣ್ಣ ಅವರನ್ನು ಎಸ್​ಐಟಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡು, ವಿಚಾರಣೆ ನಡೆಸಿದ್ದರು.

ಹೆಚ್​ಡಿ ರೇವಣ್ಣ ಅವರಿಗೆ ಜನಪ್ರತಿನಿಧಿಗಳ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. ಸದ್ಯ ಹೆಚ್​ಡಿ ರೇವಣ್ಣ ಜಾಮೀನಿನ ಮೇಲೆ ಹೊರಗಡೆ ಇದ್ದಾರೆ. ಇದೇ ಪ್ರಕರಣದಲ್ಲಿ ಭವಾನಿ ರೇವಣ್ಣ ಅವರೂ ಕೂಡ ಎಸ್​ಐಟಿ ಅಧಿಕಾರಿಗಳ ವಿಚಾರಣೆಗೆ ಹಾಜರಾಗಬೇಕು. ಈ ಸಂಬಂಧ ಎಸ್​ಐಟಿ ಭವಾನಿ ರೇವಣ್ಣ ಅವರಿಗೆ ಎರಡೆರಡು ನೋಟಿಸ್​ ಕೊಟ್ಟಿತ್ತು. ನೋಟಿಸ್​ ನೀಡುತ್ತಿದ್ದಂತೆ ಭವಾನಿ ರೇವಣ್ಣ ಜಾಮೀನು ಅರ್ಜಿ ಸಲ್ಲಿಸಿದ್ದರು. ಆದರೆ ನ್ಯಾಯಾಲಯ ಜಾಮೀನು ಅರ್ಜಿ ತಿರಸ್ಕತಿಸಿತ್ತು.

ಇದನ್ನೂ ಓದಿ: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಬೇಕಾ? ಸಾಮಾಜಿಕ ಜಾಲತಾಣದಲ್ಲಿ ಶುರುವಾಯ್ತು ದಂಧೆ, ಕಣ್ಮುಚ್ಚಿ ಕುಳಿತಿದೆಯಾ ಎಸ್​ಐಟಿ

ಅರ್ಜಿ ತಿರಸ್ಕೃತಗೊಳ್ಳುತ್ತಿದ್ದಂತೆ ಎಸ್​ಐಟಿ ಅಧಿಕಾರಿಗಳು ಭವಾನಿ ರೇವಣ್ಣ ಅವರನ್ನು ವಿಚಾರಣೆಗೆ ಒಳಪಡಿಸಲು ತಯಾರಿ ನಡೆಸಿದರು. ಇದೇ ವೇಳೆ ಭವಾನಿ ರೇವಣ್ಣ ಕೂಡ ಎಸ್​ಐಟಿಗೆ “ಮನೆಯಲ್ಲೇ ವಿಚಾರಣೆಗೆ ಹಾಜರಾಗುವುದಾಗಿ” ಪತ್ರ ಬರೆದಿದ್ದರು. ಪತ್ರದಂತೆ ಎಸ್​ಐಟಿ ಅಧಿಕಾರಿಗಳು ಹೊಳೆನರಸೀಪುರದಲ್ಲಿರುವ ನಿವಾಸಕ್ಕೆ ತೆರಳಿದ್ದರು. ಆದರೆ, ಮನೆಯೊಳಗೆ ಹೋದ ಎಸ್​ಐಟಿ ಅಧಿಕಾರಿಗಳಿಗೆ ಶಾಕ್ ಕಾದಿತ್ತು. ಭವಾನಿ ರೇವಣ್ಣ ಮನೆಯಲ್ಲಿ ಇರಲಿಲ್ಲ. ಇದರಿಂದ ಎಸ್​ಐಟಿ ಅಧಿಕಾರಿಗಳು ಸಂಜೆಯ ವರೆಗು ಕಾದು ನಿರಾಸೆಯಿಂದ ತೆರಳಿದ್ದರು. ಇದೀಗ ಜಾಮೀನು ಸಿಕ್ಕ ಬೆನ್ನಲ್ಲೇ ಭವಾನಿ ರೇವಣ್ಣ ವಿಚಾರಣೆಗೆ ಎಸ್​ಐಟಿ ಎದುರು ಹಾಜರಾಗಿದ್ದಾರೆ.

 ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:05 pm, Fri, 7 June 24

Follow Us
ವಿವೇಕ ಬಿರಾದಾರ
ವಿವೇಕ ಬಿರಾದಾರ

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

ಇಂದು ನವರಾತ್ರಿಯ ಎರಡನೇ ದಿನ; ಬ್ರಹ್ಮಚಾರಿಣಿ ದೇವಿಯ ಪೂಜೆಯಿಂದ ಶುಭಫಲ
ಇಂದು ನವರಾತ್ರಿಯ ಎರಡನೇ ದಿನ; ಬ್ರಹ್ಮಚಾರಿಣಿ ದೇವಿಯ ಪೂಜೆಯಿಂದ ಶುಭಫಲ
ದಸರಾ ಅಂದವನ್ನು ಇಮ್ಮಡಿಗೊಳಿಸಿದ ಗೋಲ್ಡನ್‌ ಟೆಂಪಲ್‌ ಮಂಟಪ!
ದಸರಾ ಅಂದವನ್ನು ಇಮ್ಮಡಿಗೊಳಿಸಿದ ಗೋಲ್ಡನ್‌ ಟೆಂಪಲ್‌ ಮಂಟಪ!
ಉತ್ತರ ಪ್ರದೇಶ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ ಮೇಲೆ ಶೂ ಅಟ್ಯಾಕ್
ಉತ್ತರ ಪ್ರದೇಶ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ ಮೇಲೆ ಶೂ ಅಟ್ಯಾಕ್
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ