ಕಿಡ್ನ್ಯಾಪ್ ಕೇಸ್: ರೇವಣ್ಣ ಬೆನ್ನಲ್ಲೇ ಭವಾನಿಗೂ ಬಂಧನದ ಭೀತಿ, ಕೋರ್ಟ್ ಮೊರೆ

ಮೈಸೂರಿನ ಕೆ ಆರ್ ನಗರ ಮಹಿಳೆಯ ಅಪಹರಣ ಪ್ರಕರಣದಲ್ಲಿ ಭವಾನಿ ರೇವಣ್ಣ ಅವರಿಗೂ ಬಂಧನ ಭೀತಿ ಶುರುವಾಗಿದೆ. ರೇವಣ್ಣ ಮೇಲೆ ಕೇಳಿ ಬಂದಿರುವ ಅಪಹರಣ ಪ್ರಕರಣದಲ್ಲಿಕುಮ್ಮಕ್ಕು ಕೊಟ್ಟ ಆರೋಪ ಭವಾನಿ ರೇವಣ್ಣ ಮೇಲೆ ಇದೆ.  ಹೀಗಾಗಿ ಭವಾನಿ ರೇವಣ್ಣ ಅವರು ನಿರೀಕ್ಷಣಾ ಜಾಮೀನು ಪಡೆಯಲು ಕೋರ್ಟ್​ ಮೆಟ್ಟಿಲೇರಿದ್ದಾರೆ.

ಕಿಡ್ನ್ಯಾಪ್ ಕೇಸ್: ರೇವಣ್ಣ ಬೆನ್ನಲ್ಲೇ ಭವಾನಿಗೂ ಬಂಧನದ ಭೀತಿ, ಕೋರ್ಟ್ ಮೊರೆ
ಭವಾನಿ ರೇವಣ್ಣ
Follow us
Ramesha M
| Updated By: ರಮೇಶ್ ಬಿ. ಜವಳಗೇರಾ

Updated on:May 27, 2024 | 6:13 PM

ಬೆಂಗಳೂರು, (ಮೇ 27): ಕೆ.ಆರ್.ನಗರ ಮಹಿಳೆಯ ಅಪಹರಣ ಪ್ರಕರಣದಲ್ಲಿ (kidnap case) ಈಗಾಗಲೇ ಜಾಮೀನನ ಮೇಲೆ ಶಾಸಕ ಎಚ್​ಡಿ ರೇವಣ್ಣ ಅವರು ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಇದರ ಬೆನ್ನಲ್ಲೇ ಇದೀಗ ಪತ್ನಿ ಭವಾನಿ ರೇವಣ್ಣ(Bhavani Revanna) ಅವರಿಗೂ ಬಂಧನ ಭೀತಿ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ಭವಾನಿ ರೇವಣ್ಣ ಅವರು ಮುಂಜಾಗ್ರತಾವಾಗಿ ಜಾಮೀನು ಕೋರಿ ಕೋರ್ಟ್​ ಮೆಟ್ಟಿಲೇರಿದ್ದಾರೆ. ಹೌದು… ಕೆ ಆರ್ ನಗರ ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರೀಕ್ಷಣಾ ಜಾಮೀನು ಕೋರಿ ಭವಾನಿ ರೇವಣ್ಣ ಅವರು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ಆದ್ರೆ, ಕೋರ್ಟ್​ ಜಾಮೀನು ಅರ್ಜಿ ವಿಚಾರಣೆಯನ್ನು ನಾಳೆಗೆ (ಮೇ 28) ಮುಂದೂಡಿದೆ.

ವಿಚಾರಣೆಗೆ ಹಾಜರಾಗುವಂತೆ ಭವಾನಿಗೆ ನೋಟಿಸ್ ನೀಡಲಾಗಿದೆ. ಯಾವ ನಿಯಮದಡಿ ನೋಟಿಸ್ ನೀಡಿದ್ದಾರೆಂದು ಎಸ್ಐಟಿ ತಿಳಿಸಿಲ್ಲ. ಹೀಗಾಗಿ ಭವಾನಿ ರೇವಣ್ಣಗೂ ಬಂಧನದ ಭೀತಿ ಇದೆ. ಈ ಹಿನ್ನೆಲೆಯಲ್ಲಿ ಮಧ್ಯಂತರ ಜಾಮೀನು ನೀಡುವಂತೆ ವಕೀಲರು ಮನವಿ ಮಾಡಿದರು. ಆದ್ರೆ, ಕೋರ್ಟ್, ಇದಕ್ಕೆ ಆಕ್ಷೇಪಣೆ ಸಲ್ಲಿಸುವಂತೆ SIT ಪೊಲೀಸರಿಗೆ ನೋಟಿಸ್ ನೀಡಿ ವಿಚಾರಣೆಯನ್ನು ನಾಳೆಗೆ ಮುಂದೂಡಿದೆ.

ಇದನ್ನೂ ಓದಿ: ಪೆನ್​ಡ್ರೈವ್​ ಪ್ರಕರಣ: ಕೊನೆಗೂ ಸಂಸದ ಪ್ರಜ್ವಲ್ ರೇವಣ್ಣ ಪ್ರತ್ಯಕ್ಷ, ತಂದೆ-ತಾಯಿ ಬಳಿ ಕ್ಷಮೆಯಾಚನೆ

ರೇವಣ್ಣ ಮೇಲೆ ಕೇಳಿ ಬಂದಿರುವ ಅಪಹರಣ ಪ್ರಕರಣದಲ್ಲಿಕುಮ್ಮಕ್ಕು ಕೊಟ್ಟ ಆರೋಪ ಭವಾನಿ ರೇವಣ್ಣ ಮೇಲೆ ಇದೆ.  ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಎರಡನೇ ಆರೋಪಿಯಾಗಿರುವ ಭವಾನಿ ರೇವಣ್ಣ ಅವರ ಸಂಬಂಧಿ ಸತೀಶ್ ಬಾಬು ಹೇಳಿಕೆ ದಾಖಲಿಸಿಕೊಂಡಿದ್ದ ಎಸ್​ಐಟಿ, ಆತನ ಮೊಬೈಲ್ ವಶಕ್ಕೆ ಪಡೆದು ಕಾಲ್ ಡೀಟೆಲ್ಸ್ ಸಹ ಪರಿಶೀಲನೆ ಮಾಡಿತ್ತು. ಈ ವೇಳೆ ಭವಾನಿ ರೇವಣ್ಣ ಮತ್ತು ಸತೀಶ್ ಬಾಬು ಕರೆ ಬಗ್ಗೆ ಮಾಹಿತಿ ಸಿಕ್ಕಿತ್ತು. ಈ ಆಧಾರದ ಮೇಲೆ ಎಸ್​ಐಟಿ ಭವಾನಿ ಅವರನ್ನು ವಿಚಾರಣೆ ನಡೆಸಲು ನೋಟಿಸ್ ಜಾರಿ ಮಾಡಿತ್ತು.

ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣ ಅವರಿಗೂ ಸಹ ಎಸ್​ಐಟಿ ಈಗಾಗಲೇ ನೋಟಿಸ್ ಜಾರಿ ಮಾಡಿತ್ತು.  ಹಾಜರಾಗುವಂತೆ ಎಸ್‌ಐಟಿ ನೋಟಿಸ್ ಜಾರಿ ಮಾಡಿತ್ತು. ಆದ್ರೆ, ಮೊದಲ ನೋಟಿಸ್​ಗೆ ಭವಾನಿ ರೇವಣ್ಣ ಅವರು ಕ್ಯಾರೇ ಎಂದಿಲ್ಲ. ಮೊದಲ ನೋಟಿಸ್ ಗೆ ಉತ್ತರಿಸದ ಹಿನ್ನೆಲೆಯಲ್ಲಿ ಎಸ್​ಐಟಿ ಎರಡನೇ ನೋಟಿಸ್ ಜಾರಿ ನೀಡಿತ್ತು.

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಸೆಕ್ಸ್ ಹಗರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಎಚ್‌.ಡಿ.ರೇವಣ್ಣ ಅವರವನ್ನು ಎಸ್​ಐಟಿ ಬಂಧಿಸಿ ಜೈಲಿಗೆ ಕಳುಹಿಸಿತ್ತು. ಬಳಿಕ ರೇವಣ್ಣ ಅವರು ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಇದೀಗ ಭವಾನಿ ಅವರಿಗೂ ಸಹ ಬಂಧನದ ಭೀತಿ ಶುರುವಾಗಿದ್ದರಿಂದ ಮುಂಜಾಗ್ರತವಾಗಿ ಜಾಮೀನು ಪಡೆಯಲು ಕೋರ್ಟ್​ ಮಟ್ಟಿಲೇರಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 5:37 pm, Mon, 27 May 24

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ