ಕಿಡ್ನ್ಯಾಪ್​ ಕೇಸ್​​: ಭವಾನಿ ರೇವಣ್ಣಗೆ ಮಧ್ಯಂತರ ನಿರೀಕ್ಷಣಾ ಜಾಮೀನು

ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತೆಯನ್ನು ಅಪಹರಿಸಿದ ಪ್ರಕರಣದಲ್ಲಿ ಭವಾನಿ ರೇವಣ್ಣ ಅವರಿಗೆ ಹೈಕೋರ್ಟ್ ಏಕಸದಸ್ಯ ಪೀಠ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ವಿಚಾರಣೆಗೆ ಹಾಜರಾಗುವಂತೆ ನ್ಯಾಯಾಲಯ ಸೂಚನೆ ನೀಡಿದೆ.

ಕಿಡ್ನ್ಯಾಪ್​ ಕೇಸ್​​: ಭವಾನಿ ರೇವಣ್ಣಗೆ ಮಧ್ಯಂತರ ನಿರೀಕ್ಷಣಾ ಜಾಮೀನು
ಭವಾನಿ ರೇವಣ್ಣ, ಹೆಚ್​ಡಿ ರೇವಣ್ಣ
Follow us
| Updated By: ವಿವೇಕ ಬಿರಾದಾರ

Updated on:Jun 07, 2024 | 11:53 AM

ಬೆಂಗಳೂರು, ಜೂನ್​ 07: ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತೆಯನ್ನು ಅಪಹರಿಸಿದ (Kidnap) ಪ್ರಕರಣದಲ್ಲಿ ಭವಾನಿ ರೇವಣ್ಣ (Bhavani Revanna) ಅವರಿಗೆ ಹೈಕೋರ್ಟ್ (High Court) ಏಕಸದಸ್ಯ ಪೀಠ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ವಿಚಾರಣೆಗೆ ಹಾಜರಾಗುವಂತೆ ನ್ಯಾಯಾಲಯ ಸೂಚನೆ ನೀಡಿದೆ.

ಏನಿದು ಪ್ರಕರಣ?

ಪ್ರಜ್ವಲ್​ ರೇವಣ್ಣ ಅವರದ್ದು ಅಂತ ಬಿಡುಗಡೆಯಾಗಿರುವ ಅಶ್ಲೀಲ ವಿಡಿಯೋದಲ್ಲಿ ನನ್ನ ತಾಯಿಯ ಚಿತ್ರವೂ ಇದ್ದು, ಇದೀಗ ಅವರು ಕಣ್ಮರೆಯಾಗಿದ್ದಾರೆ ಎಂದು ಮೇ 2ರ ತಡರಾತ್ರಿ ಮೈಸೂರಿನ ಕೆಆರ್​​ ನಗರ ಠಾಣೆಯಲ್ಲಿ ಸಂತ್ರಸ್ತೆ ಪುತ್ರ ದೂರು ನೀಡಿದ್ದರು. ಪ್ರಕರಣ ಸಂಬಂಧ ರೇವಣ್ಣ ಪತ್ನಿ ಭವಾನಿಯವರ ಸಂಬಂಧಿಯೂ ಆಗಿರುವ ಸತೀಶ್ ಬಾಬು ಎಂಬವರನ್ನು ಈಗಾಗಲೇ ಎಸ್​ಐಟಿ ಬಂಧಿಸಿದೆ. ಇವರನ್ನು ಆರೋಪಿ ಸಂಖ್ಯೆ 2 ಎಂದು ಎಸ್​ಐಟಿ ಗುರುತಿಸಿದೆ. ಹೆಚ್​ಡಿ ರೇವಣ್ಣ ಮೊದಲ ಆರೋಪಿಯಾಗಿದ್ದಾರೆ.  ಇದೇ ಕೇಸ್ ಈಗ ಭವಾನಿ ರೇವಣ್ಣಗೆ ಉರುಳಾಗಿ ಪರಿಣಮಿಸಿದೆ.

ಇದನ್ನೂ ಓದಿ: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಬೇಕಾ? ಸಾಮಾಜಿಕ ಜಾಲತಾಣದಲ್ಲಿ ಶುರುವಾಯ್ತು ದಂಧೆ

ವಿಚಾರಣೆಗೆ ಹಾಜರಾಗದ ಭವಾನಿ ರೇವಣ್ಣ

ಭವಾನಿ ರೇವಣ್ಣಗೆ ಎಸ್​ಐಟಿ ಎರಡೆರಡು ನೋಟಿಸ್ ಕೊಟ್ಟಿತ್ತು. ಮನೆಯಲ್ಲೇ ವಿಚಾರಣೆಗೆ ಹಾಜರಾಗುವುದಾಗಿ ಭವಾನಿ ಪತ್ರ ಬರೆದಿದ್ದರು. ಪತ್ರದಂತೆ ಎಸ್​ಐಟಿ ಅಧಿಕಾರಿಗಳು ಹೊಳೆನರಸೀಪುರದಲ್ಲಿರುವ ನಿವಾಸಕ್ಕೆ ಬಂದಿದ್ದರು. ಆದರೆ, ಮನೆಯೊಳಗೆ ಹೋದ ಎಸ್​ಐಟಿ ಅಧಿಕಾರಿಗಳಿಗೆ ಶಾಕ್ ಕಾದಿತ್ತು. ಭವಾನಿ ರೇವಣ್ಣ ಮನೆಯಲ್ಲಿ ಇರಲಿಲ್ಲ. ಇದರಿಂದ ಎಸ್​ಐಟಿ ಅಧಿಕಾರಿಗಳು ಸಂಜೆಯ ವರೆಗು ಕಾದು ನಿರಾಸೆಯಿಂದ ತೆರಳಿದ್ದಾರೆ.

15 ದಿನಗಳ ಹಿಂದೆಯೇ ಮನೆ ತೊರೆದಿರುವ ಭವಾನಿ ರೇವಣ್ಣ

ಹೊಳೆನರಸೀಪುರದಲ್ಲಿರುವ ಭವಾನಿ ರೇವಣ್ಣ ನಿವಾಸ ಖಾಲಿಯಾಗಿದೆ. ಬಂಧನದ ಭೀತಿಯಿಂದ ಭವಾನಿ 15 ದಿನಗಳ ಹಿಂದೆಯೇ ಮನೆ ತೊರೆದಿದ್ದಾರೆ. ಭದ್ರತಾ ಸಿಬ್ಬಂದಿ ಹಾಗೂ ಕೆಲಸದವರು ಮಾತ್ರ ಇದ್ದಾರೆ. ಹೀಗಾಗಿ ಭವಾನಿ ಮೊಬೈಲ್ ಲೊಕೇಶನ್ ಮೇಲೆ ಎಸ್​ಐಟಿ ಕಣ್ಣಿಟ್ಟಿದೆ. ಚಿಕಿತ್ಸೆ ನೀಡುತ್ತಿರುವ ವೈದ್ಯರನ್ನ ಸಂಪರ್ಕಿಸಲು ಯತ್ನಿಸುತ್ತಿದೆ.

ಭವಾನಿ ಕಾರು ಚಾಲಕ ಅಜಿತ್​ಗಾಗಿ ಹುಡುಕಾಟ

ಕಿಡ್ನ್ಯಾಪ್ ಆಗಿದ್ದ ಮಹಿಳೆ ಅಪಹರಣದ ಬಳಿಕ ವಿಡಿಯೋ ಹೇಳಿಕೆ ಹೊರಬಂದಿತ್ತು. ಭವಾನಿ ಕಾರು ಚಾಲಕ ಅಜಿತ್ ಬೆದರಿಸಿ ವಿಡಿಯೋ ಮಾಡಿಸಿದ್ದ ಆರೋಪ ಕೇಳಿಬಂದಿತ್ತು. ಇದೀಗ ಅಜಿತ್ ನಾಪತ್ತೆಯಾಗಿದ್ದು, ರಾಜ್ಯದ ಮೂಲೆ ಮೂಲೆಯಲ್ಲೂ ಎಸ್​ಐಟಿ ಶೋಧ ನಡೆಸಿದೆ. ಚಿಕ್ಕಮಗಳೂರಿನ ಕಲ್ಯಾಣನಗರದಲ್ಲಿರೋ ಅವರ ಮಾವನ ಮನೆಯಲ್ಲೂ ತಲಾಶ್ ನಡೆಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:26 am, Fri, 7 June 24

ತಾಜಾ ಸುದ್ದಿ