AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಸ್ಐಟಿ ಅರ್ಜಿ ವಜಾಗೊಳಿಸಿದ ಹೈಕೋರ್ಟ್, ಎಚ್​​ಡಿ ರೇವಣ್ಣಗೆ ಬಿಗ್​ ರಿಲೀಫ್

ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್​ ಶಾಸಕ ಎಚ್​ಡಿ ರೇವಣ್ಣಗೆ ನೀಡಿರುವ ಜಾಮೀನು ರದ್ದು ಕೋರಿ ಎಸ್​​ಐಟಿ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್​ ವಜಾ ಮಾಡಿದೆ. ಇದರಿಂದ ರೇವಣ್ಣಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.

ಎಸ್ಐಟಿ ಅರ್ಜಿ ವಜಾಗೊಳಿಸಿದ ಹೈಕೋರ್ಟ್, ಎಚ್​​ಡಿ ರೇವಣ್ಣಗೆ ಬಿಗ್​ ರಿಲೀಫ್
ಹೆಚ್​ಡಿ ರೇವಣ್ಣ
Follow us
Ramesha M
| Updated By: ರಮೇಶ್ ಬಿ. ಜವಳಗೇರಾ

Updated on:Aug 28, 2024 | 3:23 PM

ಬೆಂಗಳೂರು, (ಆಗಸ್ಟ್​ 28): ಮೈಸೂರು ಜಿಲ್ಲೆ ಕೆ.ಆರ್.‌ನಗರ ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಶಾಸಕ ಎಚ್​ಡಿ ರೇವಣ್ಣ ನೀಡಿರುವ ಜಾಮೀನು ರದ್ದು ಕೋರಿ SIT ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಪ್ರಜ್ವಲ್ ರೇವಣ್ಣ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಅಪಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ರೇವಣ್ಣ ಅವರಿಗೆ ಜನಪ್ರತಿನಿಧಿಗಳ ಕೋರ್ಟ್​ ನೀಡಿದ್ದ ಜಾಮೀನು ರದ್ದುಗೊಳಿಸುವಂತೆ ಎಸ್​​ಐಟಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿತ್ತು. ಆದ್ರೆ, ಹೈಕೋರ್ಟ್​ ಇಂದು (ಆಗಸ್ಟ್ 28) ಎಸ್​ಐಟಿ ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದೆ. ಇದರಿಂದ ಎಚ್​ಡಿ ರೇವಣ್ಣಗೆ ಮತ್ತಷ್ಟು ಬಿಗ್ ರಿಲೀಫ್ ಸಿಕ್ಕಂತಾಗಿದೆ.

ಇನ್ನು ಇದೇ ಪ್ರಕರಣದ ಎಲ್ಲಾ ಆರೋಪಿಗಳಿಗೂ ಜಾಮೀನು ಮಂಜೂರು ಮಾಡಿದೆ. ಸತೀಶ್ ಬಾಬು, ಮಧುಗೌಡ, ಕೆ.ಎ.ರಾಜಗೋಪಾಲ್, ಹೆಚ್.ಕೆ.ಸುಜಯ್, ಹೆಚ್.ಎನ್.ಮಧು, ಎಸ್.ಟಿ.ಕೀರ್ತಿಗೆ ಜಾಮೀನು ನೀಡಿ ನ್ಯಾಯಮೂರ್ತಿ ಎಂ.ನಾಗಪ್ರಸನ್ನರಿದ್ದ ಪೀಠ ಆದೇಶ ಹೊರಡಿಸಿದೆ. ಇದೇ ಪ್ರಕರಣದಲ್ಲಿ ಆರೋಪಿಯಾಗಿರುವ ರೇವಣ್ಣ ಪತ್ನಿ ಭವಾನಿ ಕೂಡ  ಈಗಾಗಲೇಜಾಮೀನು ಪಡೆದುಕೊಂಡಿದ್ದಾರೆ.

ಇದನ್ನೂ ಓದಿ: ಅಪಹರಣ ಪ್ರಕರಣ: ಭವಾನಿ ರೇವಣ್ಣಗೆ ನಿರೀಕ್ಷಣಾ ಜಾಮೀನು ನೀಡಿದ ಕೋರ್ಟ್​​

ಸಂತ್ರಸ್ತೆ ಮಹಿಳೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ರೇವಣ್ಣ ಅವರಿಗೆ ಮೇ 13ರಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಷರತ್ತುಬದ್ಧ ಜಾಮೀನು ನೀಡಿತ್ತು. ಬಳಿಕ ಎಸ್​​ಐಟಿ ವಿಶೇಷ ಕೋರ್ಟ್​ನ ಜಾಮೀನು ಆದೇಶ ಪ್ರಶ್ನಿಸಿ ಹೈಕೋರ್ಟ್​ ಮೆಟ್ಟಿಲೇರಿದ್ದು, ರೇವಣ್ಣ ಅವರಿಗೆ ನೀಡಲಾಗಿರುವ ಜಾಮೀನು ರದ್ದು ಮಾಡುವಂತೆ ಮನವಿ ಮಾಡಿತ್ತು. ಆದ್ರೆ, ಕೋರ್ಟ್​ ಜಾಮೀನು ರದ್ದಗೊಳಿಸಲು ನಿರಾಕರಿಸಿದೆ.

ಮೈಸೂರು ಜಿಲ್ಲೆಯ ಕೆ. ಆರ್. ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅಪಹರಣ ಪ್ರಕರಣದಲ್ಲಿ ಎಸ್‌ಐಟಿ ಮಾಜಿ ಸಚಿವ ಎಚ್. ಡಿ. ರೇವಣ್ಣ ಅವರನ್ನು ಬಂಧಿಸಲಾಗಿತ್ತು. ಬಳಿಕ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಎಚ್. ಡಿ. ರೇವಣ್ಣ ಈ ಪ್ರಕರಣದಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಜಾಮೀನು ಪಡೆದಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 3:00 pm, Wed, 28 August 24

ಬುಮ್ರಾ ಬೌಲಿಂಗ್​ನಲ್ಲಿ ಸಿಕ್ಸರ್ ಬಾರಿಸಿದ ರವಿ ಬಿಷ್ಣೋಯ್; ವಿಡಿಯೋ
ಬುಮ್ರಾ ಬೌಲಿಂಗ್​ನಲ್ಲಿ ಸಿಕ್ಸರ್ ಬಾರಿಸಿದ ರವಿ ಬಿಷ್ಣೋಯ್; ವಿಡಿಯೋ
ಆಪರೇಷನ್ ಆಗಿದೆ, ಆರೋಗ್ಯ ಸರಿಯಿಲ್ಲ: ವಿನೋದ್ ರಾಜ್​
ಆಪರೇಷನ್ ಆಗಿದೆ, ಆರೋಗ್ಯ ಸರಿಯಿಲ್ಲ: ವಿನೋದ್ ರಾಜ್​
ಭಾರತ-ಪಾಕ್​ ಗಡಿಯಿಂದ Tv9 ಗ್ರೌಂಡ್​ ರಿಪೋರ್ಟ್​: ಸನ್ನದ್ಧವಾಗಿರುವ BSF ಯೋಧ
ಭಾರತ-ಪಾಕ್​ ಗಡಿಯಿಂದ Tv9 ಗ್ರೌಂಡ್​ ರಿಪೋರ್ಟ್​: ಸನ್ನದ್ಧವಾಗಿರುವ BSF ಯೋಧ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
ಕೆಲವರು ಚಿಲ್ಲರೆ ಹೇಳಿಕೆ ಕೊಡುತ್ತಿದ್ದಾರೆ: ಮತ್ತೆ ಗುಡುಗಿದ ಡಿಕೆಶಿ
ಕೆಲವರು ಚಿಲ್ಲರೆ ಹೇಳಿಕೆ ಕೊಡುತ್ತಿದ್ದಾರೆ: ಮತ್ತೆ ಗುಡುಗಿದ ಡಿಕೆಶಿ