ಅಪಹರಣ ಪ್ರಕರಣ: ಭವಾನಿ ರೇವಣ್ಣಗೆ ಸುಪ್ರೀಂಕೋರ್ಟ್​ ನೋಟಿಸ್​

ಹಾಸನ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಪ್ರಜ್ವಲ್​ ರೇವಣ್ಣ ಅವರಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತೆಯನ್ನು ಅಪರಹರಿಸಿದ್ದ ಪ್ರಕರಣದಲ್ಲಿ ಭವಾನಿ ರೇವಣ್ಣ ಅವರಿಗೆ ಹೈಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನು ಪ್ರಶ್ನಿಸಿ ಎಸ್​ಐಟಿ ಸುಪ್ರಿಂಕೋರ್ಟ್​ ಮೆಟ್ಟಿಲೇರಿದೆ. ಸುಪ್ರಿಂಕೋರ್ಟ್​ ಅರ್ಜಿ ವಿಚಾರಣೆ ನಡೆಸಿತು.

ಅಪಹರಣ ಪ್ರಕರಣ: ಭವಾನಿ ರೇವಣ್ಣಗೆ ಸುಪ್ರೀಂಕೋರ್ಟ್​ ನೋಟಿಸ್​
ಭವಾನಿ ರೇವಣ್ಣ
Follow us
ಹರೀಶ್ ಜಿ.ಆರ್​. ನವದೆಹಲಿ
| Updated By: ವಿವೇಕ ಬಿರಾದಾರ

Updated on:Jul 10, 2024 | 3:22 PM

ನವದೆಹಲಿ, ಬೆಂಗಳೂರು, ಜುಲೈ​ 10: ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತೆಯನ್ನು ಅಪರಹರಿಸಿದ ಪ್ರಕರಣದಲ್ಲಿ (Kidnap Case) ಸುಪ್ರಿಂಕೋರ್ಟ್​ (Supreme Court) ಭವಾನಿ ರೇವಣ್ಣ (Bhavani Revanna) ಅವರಿಗೆ ನೋಟಿಸ್​ ಜಾರಿ ಮಾಡಿದೆ. ಭವಾನಿ ರೇವಣ್ಣ ಅವರಿಗೆ ಕರ್ನಾಟಕ ಹೈಕೋರ್ಟ್​ ನೀಡಿದ ನಿರೀಕ್ಷಣಾ ಜಾಮೀನು ಪ್ರಶ್ನಿಸಿ ಎಸ್​​ಐಟಿ ಸುಪ್ರೀಂಕೋರ್ಟ್​ನಲ್ಲಿ ಮೇಲ್ಮನವಿ ಸಲ್ಲಿಸಿದೆ. ನ್ಯಾ. ಸೂರ್ಯಕಾಂತ್, ಉಜ್ಜಲ್ ಭುಯಾನ್ ಅವರಿದ್ದ ದ್ವಿ ಸದಸ್ಯ ಪೀಠ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿತು. ಎಸ್​ಐಟಿ ಪರ ವಾದ ಮಂಡಿಸಿದ ವಕೀಲ ಕಪಿಲ್ ಸಿಬಲ್ ವಾದ ಮಂಡಿಸಿದರು.

ನ್ಯಾ: ಭವಾನಿ ರೇವಣ್ಣರ ಮಗನ ಮೇಲೆ ಗಂಭೀರ ಆರೋಪಗಳಿವೆ. ಆದರೆ, ಮಗ ಮಾಡಿದ ತಪ್ಪಿಗೆ ತಾಯಿಯ ಪಾತ್ರವೇನು?

ಸಿಬಲ್: ಮಗನ ಅಪರಾಧದಲ್ಲಿ ತಾಯಿಯ ಪಾತ್ರವಿಲ್ಲ. ಆದರೆ ಸಂತ್ರಸ್ತೆಯ ಅಪಹರಣದ ಬಗೆಗಿನ ಪ್ರಕರಣ ಇದು.  ಸಂತ್ರಸ್ತೆಯನ್ನು ಕಿಡ್ನಾಪ್ ಮಾಡಲು ಭವಾನಿ ರೇವಣ್ಣ ನಿರ್ದೇಶನ ನೀಡಿದ್ದರು. ಮ್ಯಾಜಿಸ್ಟ್ರೇಟ್ ಮುಂದೆ ನೀಡಿದ ಹೇಳಿಕೆಯಲ್ಲಿ ದಾಖಲಾಗಿದೆ. ಆಕೆ ಆರೋಪದಿಂದ ಮುಕ್ತ ಎನ್ನುವಂತಿಲ್ಲ, ವಿಚಾರಣೆ ಎದುರಿಸಬೇಕು. ಆಕೆಯನ್ನ ಬಂಧನದಿಂದ ರಕ್ಷಿಸಲು ಹೈಕೋರ್ಟ್ ಕಾರಣ ನೀಡಿದೆ. ವಿಚಾರಣಾ ನ್ಯಾಯಾಲಯವೂ ನಿರೀಕ್ಷಣಾ ಜಾಮೀನು ತಿರಸ್ಕರಸಿದೆ. ಆದರೆ, ಜಾಮೀನು ಏಕೆ ತಿರಸ್ಕಾರವಾಯಿತೆಂದು ಹೈಕೋರ್ಟ್ ಪರಿಗಣಿಸಿಲ್ಲ ಎಂದು ಅಪಹರಣ  ಕುರಿತಾದ ಪ್ರಕರಣವಿದು ಅಂತ ಕಪಿಲ್ ಸಿಬಲ್ ನ್ಯಾಯಪೀಠಕ್ಕೆ ಮನವರಿಕೆ ಮಾಡಿದರು.

ಮೇಲ್ಮನವಿ ಅರ್ಜಿಯ ವಾದ ಆಲಿಸಿದ ಸುಪ್ರೀಂಕೋರ್ಟ್, ಭವಾನಿ ರೇವಣ್ಣಗೆ ನೋಟಿಸ್​​ ಜಾರಿ ಮಾಡಿದೆ. ವಿಚಾರಣೆ ಮುಂದೂಡಿದೆ. ಹೀಗಾಗಿ ಭವಾನಿ ರೇವಣ್ಣ ಕಿಡ್ನ್ಯಾಪ್ ಕೇಸ್‌ನಲ್ಲಿ ಸಂಕಷ್ಟ ಎದುರಾಗಿದೆ.

ಇದನ್ನೂ ಓದಿ: ಪ್ರಜ್ವಲ್ ರೇವಣ್ಣಗೆ ಮತ್ತೊಂದು ಬಿಗ್ ಶಾಕ್, ಮಾಜಿ ಸಂಸದಗೆ ಮತ್ತಷ್ಟು ದಿನ ಜೈಲೇ ಗತಿ

ಏನಿದು ಪ್ರಕರಣ?

ಪ್ರಜ್ವಲ್​ ರೇವಣ್ಣ ಅವರದ್ದು ಅಂತ ಬಿಡುಗಡೆಯಾಗಿರುವ ಅಶ್ಲೀಲ ವಿಡಿಯೋದಲ್ಲಿನ ಸಂತ್ರಸ್ತೆಯನ್ನು ಅಪಹರಿಸಲಾಗಿದೆ ಎಂದು ಮೈಸೂರಿನ ಕೆಆರ್​​ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ. ಹೆಚ್​ಡಿ ರೇವಣ್ಣ, ಭವಾನಿ ರೇವಣ್ಣ ಮತ್ತು ಭವಾನಿ ರೇವಣ್ಣ ಸಂಬಂಧಿ ಬಾಬು ವಿರುದ್ಧ ದೂರು ದಾಖಲಾಗಿದೆ. ಪ್ರಕರಣದ ತನಿಖೆ ನಡೆಸುತ್ತಿರುವ ಎಸ್​ಐಟಿ ಅಧಿಕಾರಿಗಳು ಈಗಾಗಲೆ ಆರೋಪಿ ಬಾಬು ಅನ್ನು ಬಂಧಿಸಿದ್ದಾರೆ.

ಪ್ರಕರಣದಲ್ಲಿ ಭವಾನಿ ರೇವಣ್ಣ ಅವರೂ ಕೂಡ ಎಸ್​ಐಟಿ ಅಧಿಕಾರಿಗಳ ವಿಚಾರಣೆಗೆ ಹಾಜರಾಗಬೇಕು. ಈ ಸಂಬಂಧ ಎಸ್​ಐಟಿ ಭವಾನಿ ರೇವಣ್ಣ ಅವರಿಗೆ ಎರಡೆರಡು ನೋಟಿಸ್​ ಕೊಟ್ಟಿತ್ತು. ನೋಟಿಸ್​ ನೀಡುತ್ತಿದ್ದಂತೆ ಭವಾನಿ ರೇವಣ್ಣ ಅವರು ವಿಚಾರಣಾ ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದರು. ಆದರೆ ನ್ಯಾಯಾಲಯ ನೀರಿಕ್ಷಣಾ ಜಾಮೀನು ಅರ್ಜಿ ತಿರಸ್ಕತಿಸಿತ್ತು.

ಹೀಗಾಗಿ ಭವಾನಿ ರೇವಣ್ಣ ಹೈಕೋರ್ಟ್ ಮೆಟ್ಟಿಲೇರಿದ್ದರು. ಹೈಕೋರ್ಟ್​​ ಭವಾನಿ ರೇವಣ್ಣ ಅವರಿಗೆ ನಿರೀಕ್ಷಣಾ ಜಾಮೀನು ನೀಡಿತ್ತು. ಈ ಜಾಮೀನು ಪ್ರಶ್ನಿಸಿ ಎಸ್​ಐಟಿ ಸುಪ್ರಿಂಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:15 pm, Wed, 10 July 24

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ