ಪರಪ್ಪನ ಅಗ್ರಹಾರ ಜೈಲಿನಲ್ಲಿ ಒಂದು ರಾತ್ರಿ ಕಳೆದ ರೇವಣ್ಣ: ಹೀಗಿದೆ ಐಷಾರಾಮಿ ರಾಜಕಾರಣಿಯ ಸೆರೆವಾಸ!

ಕೆ.ಆರ್.ನಗರದ ಮಹಿಳೆಯೊಬ್ಬರ ಕಿಡ್ನ್ಯಾಪ್ ಪ್ರಕರಣದಲ್ಲಿ ಹೆಚ್​.ಡಿ.ರೇವಣ್ಣ, ಈಗಾಗಲೇ ಅರೆಸ್ಟ್ ಆಗಿದ್ದಾರೆ. ನಾಲ್ಕು ದಿನಗಳ ಕಾಲ ಎಸ್​ಐಟಿ ಅಧಿಕಾರಿಗಳ ಗ್ರಿಲ್ ನಡೆಸಿದ್ದರು. ಇದೀಗ ನಿನ್ನೆ ಎಸ್​ಐಟಿ ಕಸ್ಟಡಿ ಅವಧಿ ಅಂತ್ಯವಾಗಿದ್ದು, ಹೆಚ್​ಡಿ.ರೇವಣ್ಣ ಜೈಲಿಗೆ ಶಿಫ್ಟ್ ಮಾಡಲಾಗಿತ್ತು. ಐಷಾರಾಮಿ ಜೀವನ ನಡೆಸಿದ್ದ ರೇವಣ್ಣ ಇದೀಗ ಪರಪ್ಪನ ಅಗ್ರಹಾರ ಜೈಲಿನಲ್ಲಿ ಸಾಮಾನ್ಯ ಕೈದಿಗಳಂತೆ ರೇವಣ್ಣ ಸೆರೆವಾಸ ಅನುಭವಿಸುತ್ತಿದ್ದಾರೆ.

ಪರಪ್ಪನ ಅಗ್ರಹಾರ ಜೈಲಿನಲ್ಲಿ ಒಂದು ರಾತ್ರಿ ಕಳೆದ ರೇವಣ್ಣ: ಹೀಗಿದೆ ಐಷಾರಾಮಿ ರಾಜಕಾರಣಿಯ ಸೆರೆವಾಸ!
ಪರಪ್ಪನ ಅಗ್ರಹಾರ ಜೈಲಿನಲ್ಲಿ ಒಂದು ರಾತ್ರಿ ಕಳೆದ HD ರೇವಣ್ಣ: ಹೀಗಿದೆ ಐಷಾರಾಮಿ ರಾಜಕಾರಣಿಯ ಸೆರೆವಾಸ!
Follow us
ರಾಮು, ಆನೇಕಲ್​
| Updated By: ಗಂಗಾಧರ​ ಬ. ಸಾಬೋಜಿ

Updated on: May 09, 2024 | 8:11 AM

ಬೆಂಗಳೂರು, ಮೇ 09: ಕೆ.ಆರ್.ನಗರದ ಮಹಿಳೆಯೊಬ್ಬರ ಕಿಡ್ನ್ಯಾಪ್ ಪ್ರಕರಣದಲ್ಲಿ ಹಾಸನ ಜಿಲ್ಲೆ ಹೊಳೆನರಸೀಪುರ ಕ್ಷೇತ್ರದ ಜೆಡಿಎಸ್ ಶಾಸಕ ಹೆಚ್​​ಡಿ ರೇವಣ್ಣ (HD Revanna) ಈಗಾಗಲೇ ಜೈಲುಪಾಲಾಗಿದ್ದು, ಕಂಬಿ ಏಣಿಸುವಂತಾಗಿದೆ. ನಿನ್ನೆ ಎಸ್​ಐಟಿ ಕಸ್ಟಡಿ ಅವಧಿ ಅಂತ್ಯ ಬಳಿಕ ಕೋರ್ಟ್​, ನ್ಯಾಯಾಂಗ ಬಂಧನ ವಿಧಿಸಿತ್ತು. ಬಿಗಿ ಬಂದೋಬಸ್ತ್​​​​ನಲ್ಲಿ ಎಸ್​​ಐಟಿ ಅಧಿಕಾರಿಗಳು ರೇವಣ್ಣರನ್ನು ಪರಪ್ಪನ ಅಗ್ರಹಾರ ಜೈಲಿಗೆ ಕರೆದುಕೊಂಡು ಹೋದರು. ಪರಪ್ಪನ ಅಗ್ರಹಾರ (Parappana Agrahara) ಜೈಲಿನಲ್ಲಿ ಸಾಮಾನ್ಯ ಕೈದಿಗಳಂತೆ ರೇವಣ್ಣ ಸೆರೆವಾಸ ಅನುಭವಿಸುತ್ತಿದ್ದಾರೆ.

ಪರಪ್ಪನ ಅಗ್ರಹಾರ ಜೈಲಿನಲ್ಲಿ ಒಂದು ರಾತ್ರಿ ಕಳೆದ H.D.ರೇವಣ್ಣ

ರಾಜಕಾರಣಿಯಾಗಿ, ಶಾಸಕರಾಗಿ ಐಷಾರಾಮಿ ಜೀವನ ನಡೆಸಿದ್ದ ರೇವಣ್ಣ, ಸೆಂಟ್ರಲ್ ಜೈಲಿನ ಕ್ವಾರಂಟೈನ್ ಸೆಲ್​ನಲ್ಲಿ 1 ರಾತ್ರಿ ಕಾಲ ಕಳೆದಿದ್ದಾರೆ. ರಾತ್ರಿ ನೀಡಿದ್ದ ಮುದ್ದೆ, ಚಪಾತಿ, ರೈಸ್, ಸಾಂಬಾರ್ ತಡವಾಗಿ ಸೇವಿಸಿದ್ದಾರೆ. ಇತರೆ ಕೈದಿಗಳಂತೆ ಜೈಲಿನಲ್ಲಿ ನೀಡುವ ಊಟವನ್ನೇ ಅವರು ಸೇವಿಸಿದ್ದಾರೆ. ಮನೆಯವರು ತಂದು ಕೊಟ್ಟಿರುವ ಬಟ್ಟೆಯನ್ನು ಪಡೆದಿದ್ದಾರೆ.

ಇದನ್ನೂ ಓದಿ: ಪರಪ್ಪನ ಅಗ್ರಹಾರ ಜೈಲು ಪಾಲಾದ ರೇವಣ್ಣ ವಿಚಾರಣಾಧೀನ ಕೈದಿ ನಂಬರ್ 4567

ರಾತ್ರಿ ತಡವಾಗಿ ಊಟ ಮಾಡಿ ಮೌನಕ್ಕೆ ಜಾರಿದ್ದಾರೆ. ರಾತ್ರಿ 1 ಗಂಟೆಯವರೆಗೆ ನಿದ್ರೆ ಮಾಡದೆ ಯೋಚಿಸುತ್ತಿದ್ದರು. ಬಳಿಕ ಜೈಲಿನ ಕೊಠಡಿಯಲ್ಲಿ ನಿದ್ರೆಗೆ ಜಾರಿದ್ದಾರೆ. ಇನ್ನು ಹೆಚ್​.ಡಿ.ರೇವಣ್ಣ ಆರೋಗ್ಯ ಸರಿ‌ ಇಲ್ಲದ ಕಾರಣ ನಿನ್ನೆ ರಾತ್ರಿ ಜೈಲಾಧಿಕಾರಿಗಳು ಅವರ ಮೇಲೆ ಹೆಚ್ಚು ನಿಗಾ ಇಟ್ಟಿದ್ದರು. ರೇವಣ್ಣ ಇದ್ದ ಕೊಠಡಿ ಬಳಿ ಓರ್ವ ಸಿಬ್ಬಂದಿ ನಿಯೋಜನೆ ಮಾಡಲಾಗಿತ್ತು. ಇಂದು ಬೆಳಗ್ಗೆ 5.30ಕ್ಕೆ ನಿದ್ರೆಯಿಂದ ಎದಿದ್ದಾರೆ.

ಎಸ್​ಐಟಿ ಕಸ್ಟಡಿ ಅವಧಿ ಅಂತ್ಯವಾಗಿದ್ದರಿಂದ 17ನೇ ACMMಗೆ ರೇವಣ್ಣರನ್ನು ನಿನ್ನೆ ಹಾಜರು ಪಡಿಸಲಾಗಿತ್ತು. ಕೋರ್ಟ್​ಗೆ ರಿಮಾಂಡ್ ಅರ್ಜಿ ಸಲ್ಲಿಸಿದ ಎಸ್‌ಐಟಿ ಅಧಿಕಾರಿಗಳು ನ್ಯಾಯಾಂಗ ಬಂಧನಕ್ಕೆ ವಹಿಸುವಂತೆ ಮನವಿ ಮಾಡಿದ್ದರು. ಪ್ರಕರಣದಲ್ಲಿ ಎರಡು ಕಡೆಯ ವಾದ ಆಲಿಸಿ, ವಿಚಾರಣೆ ನಡೆಸಿದ ನ್ಯಾಯಾಧೀಶರು ಮಾರ್ಚ್ 14 ರವರೆಗೆ ಹೆಚ್.ಡಿ.ರೇವಣ್ಣರನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಿದ್ದರು.

ಇದೇ ವೇಳೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ನಲ್ಲಿ ಹೆಚ್.ಡಿ.ರೇವಣ್ಣ ಜಾಮೀನು ಅರ್ಜಿಯ ವಿಚಾರಣೆ ಮಾಡಲಾಗಿತ್ತು. ಆಕ್ಷೇಪಣೆ ಸಲ್ಲಿಸಲು ಎಸ್‌ಐಟಿ ಕಾಲಾವಕಾಶ ಕೇಳಿದ ಹಿನ್ನೆಲೆಯಲ್ಲಿ ವಿಚಾರಣೆಯನ್ನು ಕೋರ್ಟ್ ನಾಳೆಗೆ ಮುಂದೂಡಿದೆ.

ಇದನ್ನೂ ಓದಿ: HD Revanna Kidnap Case: ಎಚ್​ಡಿ ರೇವಣ್ಣ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ, ಜೈಲಿಗೆ ಶಿಫ್ಟ್

ನ್ಯಾಯಾಂಗ ಬಂಧನಕ್ಕೆ ಒಪ್ಪಿಸುತ್ತಿದ್ದಂತೆ ರೇವಣ್ಣ ಆಘಾತಕ್ಕೆ ಒಳಗಾಗಿದ್ದರು. ಕೋರ್ಟ್​​​ ಹಾಲ್​​​ನಿಂದ ಹೊರಬರುವಾಗ ರೇವಣ್ಣ ಕಣ್ಣೀರು ಹಾಕಿದ್ದರು. ಬಿಗಿ ಬಂದೋಬಸ್ತ್​​​​ನಲ್ಲಿ ಎಸ್​​ಐಟಿ ಅಧಿಕಾರಿಗಳು ರೇವಣ್ಣರನ್ನ ಪರಪ್ಪನ ಅಗ್ರಹಾರ ಜೈಲಿಗೆ ಕರೆದೊಯ್ದರು.

ಪರಪ್ಪನ ಅಗ್ರಹಾರ ಜೈಲು ಸೇರಿದ ರೇವಣ್ಣಗೆ, ವಿಚಾರಣಾಧೀನ ಕೈದಿ ಸಂಖ್ಯೆ 4567 ನೀಡಲಾಗಿದೆ. ಕಳೆದ ಮೂರು ದಿನಗಳಿಂದ ನಿದ್ದೆಯಿಲ್ಲದೇ ಎಸ್ಐಟಿ ವಿಚಾರಣೆ ಎದುರಿಸಿದ್ದ ರೇವಣ್ಣ, ಜೈಲು ಹಕ್ಕಿಯಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ವಿಚಾರಣಾಧೀನ ಕೈದಿಯಾಗಿದ್ದಾರೆ. ಇಂದು ಜನಪ್ರತಿನಿಧಿಗಳ ವಿಶೇಷ ಕೋರ್ಟ್​ನಲ್ಲಿ ಜಾಮೀನು ಅರ್ಜಿ ವಿಚಾರಣೆ ಮುಂದುವರೆಯಲಿದ್ದು, ಹೆಚ್.ಡಿ.ರೇವಣ್ಣ ಜಾಮೀನು ಸಿಗುತ್ತಾ ಅನ್ನೋದನ್ನ ಕಾದುನೋಡಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ