ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ ವೈದ್ಯರ ಕಳ್ಳಾಟ ಪ್ರಕರಣ; ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಕೆ

ಟಿವಿ 9 ರಹಸ್ಯ ಕಾರ್ಯಾಚರಣೆಯಲ್ಲಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯ ವೈದ್ಯರ ಕಳ್ಳಾಟ ಬಯಲಾಗಿತ್ತು. ವೈದ್ಯರು ಬೆಳಿಗ್ಗೆ ಆಸ್ಪತ್ರೆಗೆ ಬಂದು ಪಂಚ್ ಮಾಡಿ, ಆ ನಂತರ ಖಾಸಗಿ ಆಸ್ಪತ್ರೆಗೆ ಹೋಗಿ ಕೆಲಸ ಮಾಡುತ್ತಿದ್ದರು. ಇದು ಟಿವಿ9 ಕ್ಯಾಮಾರಾದಲ್ಲಿ ಸೆರೆಯಾಗಿತ್ತು.

ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ ವೈದ್ಯರ ಕಳ್ಳಾಟ ಪ್ರಕರಣ; ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಕೆ
ಹುಬ್ಬಳಿಯ ಕಿಮ್ಸ್​ ಆಸ್ಪತ್ರೆ
Follow us
TV9 Web
| Updated By: sandhya thejappa

Updated on: Jun 09, 2021 | 12:13 PM

ಹುಬ್ಬಳ್ಳಿ: ಕಿಮ್ಸ್ ಆಸ್ಪತ್ರೆಯಲ್ಲಿ ವೈದ್ಯರ ಕಳ್ಳಾಟ ಪ್ರಕರಣಕ್ಕೆ ಸಂಬಂಧಿಸಿ ವರದಿಯನ್ನು ರಾಜ್ಯ ಸರ್ಕಾರಕ್ಕೆ ನಿನ್ನೆಯೇ (ಜೂನ್ 8) ಸಲ್ಲಿಕೆ ಮಾಡಿದ್ದೇನೆ ಎಂದು ಟಿವಿ9ಗೆ ಕಿಮ್ಸ್ ನಿರ್ದೇಶಕ ಡಾ.ರಾಮಲಿಂಗಪ್ಪ ಮಾಹಿತಿ ನೀಡಿದ್ದಾರೆ. 11 ವೈದ್ಯರ ಒಂದು ವರ್ಷದ ಹಾಜರಾತಿ ಬಗ್ಗೆ ವರದಿಯನ್ನು ಸರ್ಕಾರಕ್ಕೆ ಕಳುಹಿಸಿದ್ದು, ಧಾರವಾಡ ಜಿಲ್ಲಾಧಿಕಾರಿಗೂ ಕಳುಹಿಸುತ್ತೇನೆ ಎಂದು ತಿಳಿಸಿದ್ದಾರೆ. ವೈದ್ಯರು ವಿರುದ್ಧ ಕ್ರಮ ಕೈಗೊಳ್ಳುವುದು ಸರ್ಕಾರಕ್ಕೆ ಬಿಟ್ಟಿದ್ದು ಎಂದು ಕಿಮ್ಸ್ ನಿರ್ದೇಶಕ ಅಭಿಪ್ರಾಯಪಟ್ಟರು.

ಟಿವಿ 9 ರಹಸ್ಯ ಕಾರ್ಯಾಚರಣೆಯಲ್ಲಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯ ವೈದ್ಯರ ಕಳ್ಳಾಟ ಬಯಲಾಗಿತ್ತು. ವೈದ್ಯರು ಬೆಳಿಗ್ಗೆ ಆಸ್ಪತ್ರೆಗೆ ಬಂದು ಪಂಚ್ ಮಾಡಿ, ಆ ನಂತರ ಖಾಸಗಿ ಆಸ್ಪತ್ರೆಗೆ ಹೋಗಿ ಕೆಲಸ ಮಾಡುತ್ತಿದ್ದರು. ಇದು ಟಿವಿ9 ಕ್ಯಾಮಾರಾದಲ್ಲಿ ಸೆರೆಯಾಗಿತ್ತು. ಸೆರೆಯಾದ ದೃಶ್ಯವನ್ನು ಪ್ರಸಾರ ಮಾಡಲಾಗಿತ್ತು. ಟಿವಿ9 ವರದಿಯಿಂದ ಎಚ್ಚೆತ್ತುಕೊಂಡ ಸರ್ಕಾರ ವೈದ್ಯರ ಬಗ್ಗೆ ವರದಿ ನೀಡಲು ಸೂಚನೆಯನ್ನು ನೀಡಿತ್ತು.

ಇನ್ನೂ ಡಿಸಿ ಕಚೇರಿ ತಲುಪದ ಕಿಮ್ಸ್ ನಿರ್ದೇಶಕರ ವರದಿ 11 ವೈದ್ಯರ ಬಗ್ಗೆ ವರದಿ ಜಿಲ್ಲಾಧಿಕಾರಿ ಕಚೇರಿಗೆ ಬಂದಿಲ್ಲ ಎಂದು ಧಾರವಾಡ ಡಿಸಿ ನಿತೇಶ್ ಪಾಟೀಲ್ ಮಾಹಿತಿ ನೀಡಿದ್ದಾರೆ. ನಿನ್ನೆ ಸಂಜೆಯೇ ವರದಿ ನೀಡಲು ಹೇಳಿದ್ದೆ. ಆದರೆ ಇಲ್ಲಿಯವರೆಗೂ ಕಿಮ್ಸ್ನಿಂದ ವರದಿ ಬಂದಿಲ್ಲ ಎಂದು ತಿಳಿಸಿದ್ದಾರೆ. ಎಲ್ಲಾ 11 ವೈದ್ಯರ ವಿರುದ್ಧವೂ ಕೂಲಂಕಷವಾಗಿ ಪರಿಶೀಲಿಸಿ ವರದಿ ನೀಡಲು ಸೂಚಿಸಿದ್ದೆ. ವರದಿ ಬಂದ ತಕ್ಷಣ ಜಿಲ್ಲಾಡಳಿತದಿಂದ ಆರೋಗ್ಯ ಇಲಾಖೆ ಶಿಫಾರಸು ಮಾಡುತ್ತೇವೆ ಎಂದು ಜಿಲ್ಲಾಧಿಕಾರಿ ಹೇಳಿದರು.

ಇದನ್ನೂ ಓದಿ

ಕಿಮ್ಸ್‌ನ ನಿರ್ದೇಶಕರ ಶೋಕಾಸ್ ನೋಟಿಸ್ಗೆ ಉತ್ತರಿಸಿದ್ದು 9 ವೈದ್ಯರು, ಇನ್ನು ಇಬ್ಬರು ಬಾಕಿ

ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ ಪ್ರಕರಣ; ಟಿವಿ9 ವರದಿಗೆ ಮೆಚ್ಚುಗೆ ವ್ಯಕ್ತಪಡಿಸಿದ ಡಾ.ಕೆ.ಸುಧಾಕರ್

(KIMS hospital Director Dr Ramalingappa has submitted a report to the State Government regarding KIMS Hospital Doctors)

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್