ಕಾರ್ಯಪ್ಪ, ತಿಮ್ಮಯ್ಯಗೆ ಅವಮಾನಿಸಿ ಪೋಸ್ಟ್: ಪೊಲೀಸ್ ವರಿಷ್ಠಾಧಿಕಾರಿಗೆ ದೂರು

| Updated By: ಗಂಗಾಧರ​ ಬ. ಸಾಬೋಜಿ

Updated on: Nov 22, 2024 | 3:22 PM

ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಮತ್ತು ಜನರಲ್ ತಿಮ್ಮಯ್ಯ ಅವರನ್ನು ಅಪಮಾನಿಸಿದ ಘಟನೆ ಕೊಡಗು ಜಿಲ್ಲೆಯಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಶ್ರೀವತ್ಸ ಭಟ್ ಎಂಬಾತ ವಾಟ್ಸಾಪ್ ಗ್ರೂಪ್‌ನಲ್ಲಿ ಅವಮಾನಕರ ಪೋಸ್ಟ್ ಹಾಕಿದ್ದಾರೆ. ಕೊಡವ ಸಂಘಟನೆಗಳು ಪೊಲೀಸರಿಗೆ ದೂರು ನೀಡಿ, ಆರೋಪಿಯನ್ನು ಬಂಧಿಸುವಂತೆ ಒತ್ತಾಯಿಸಿವೆ.

ಕಾರ್ಯಪ್ಪ, ತಿಮ್ಮಯ್ಯಗೆ ಅವಮಾನಿಸಿ ಪೋಸ್ಟ್: ಪೊಲೀಸ್ ವರಿಷ್ಠಾಧಿಕಾರಿಗೆ ದೂರು
ಕಾರ್ಯಪ್ಪ, ತಿಮ್ಮಯ್ಯಗೆ ಅವಮಾನಿಸಿ ಪೋಸ್ಟ್: ಪೊಲೀಸ್ ವರಿಷ್ಠಾಧಿಕಾರಿಗೆ ದೂರು
Follow us on

ಮಡಿಕೇರಿ ನವೆಂಬರ್​ 22: ದೇಶಕಂಡ ಮಹಾ ಸೇನಾನಿಗಳಾದ ಫೀಲ್ಡ್ ಮಾರ್ಷಲ್ ಕೆಎಂ ಕಾರ್ಯಪ್ಪ (KM Cariappa) ಮತ್ತು ಜನರಲ್ ತಿಮ್ಮಯ್ಯ ಅವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ತುಚ್ಛವಾಗಿ ಅಪಮಾನ ಮಾಡಿರುವ ಪ್ರಕರಣವೊಂದು ನಡೆದಿದೆ. ಸದ್ಯ ಇದು ಜಿಲ್ಲೆಯಲ್ಲಿ ವ್ಯಾಪಕ ವಿರೋಧಕ್ಕೆ ಕಾರಣವಾಗಿದೆ. ಶ್ರಿವತ್ಸ ಭಟ್ ಎಂಬುವವರು ಫೀಲ್ಡ್ ಮಾರ್ಷಲ್ ಕೆಎಂ ಕಾರ್ಯಪ್ಪ ಮತ್ತು ಜನರಲ್ ತಿಮ್ಮಯ್ಯ ಅವರ ಬಗ್ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ.

ಆರೋಪಿ ಬಂಧನಕ್ಕೆ ಆಗ್ರಹ

ಜಿಲ್ಲೆಯ ಸಪ್ತ ಸಾಗರ ಎಂಬ ವಾಟ್ಸ್​ಆ್ಯಪ್​ ಗ್ರೂಪ್​ನಲ್ಲಿ ಶ್ರಿವತ್ಸ ಭಟ್ ಎಂಬುವವರು ಫೀಲ್ಡ್ ಮಾರ್ಷಲ್ ಕೆಎಂ ಕಾರ್ಯಪ್ಪ ಹಾಗೂ ಜನರಲ್ ತಿಮ್ಮಯ್ಯ ಅವರ ಬಗ್ಗೆ ನಿಂದಿಸಿ ಪೋಸ್ಟ್ ಮಾಡಿದ್ದರು. ಬಳಿಕ ಇದರ ಸ್ಕ್ರೀನ್ ಶಾಟ್​ ಎಲ್ಲಾ ಕಡೆ ವೈರಲ್ ಆಗಿದ್ದು, ಅವರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶ್ರಿವತ್ಸ ಭಟ್​ರನ್ನು ಬಂಧನ ಹಾಗೂ ಕಾನೂನು ಕ್ರಮಕ್ಕೆ ಒತ್ತಾಯಿಸಿ ಜಿಲ್ಲೆಯ ವಿವಿಧ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ. ಅಲ್ಲದೆ ಕೊಡಗು ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿಗೂ ಲಿಖಿತ ದೂರು ನೀಡಲಾಗಿದ್ದು, ಆರೋಪಿಯನ್ನ ತಕ್ಷಣ ಬಂಧಿಸುವಂತೆ ಆಗ್ರಹಿಸಿದ್ದಾರೆ.

ಇದನ್ನೂ ಓದಿ: 4 ಮಕ್ಕಳು ಹೆತ್ತರೆ 1 ಲಕ್ಷ ರೂ ಬಹುಮಾನ: ಕೊಡವ ಜನಾಂಗಕ್ಕೆ ಕೊಡವ ಸಮಾಜದ ವಿಶಿಷ್ಟ ಆಫರ್

ಟಿವಿ9 ಜೊತೆ ಮಾತನಾಡಿದ ಕೊಡವಾಮೆರ ಕೊಂಡಾಟ ಸಂಘಟನೆಯ ಅಧ್ಯಕ್ಷ ಚಾಮೆರ ದಿನೇಶ್, ಇಡೀ ವಿಶ್ವವೇ ಮನ್ನಣೆ ನೀಡಿರುವಂತಹ ವೀರ ಸೇನಾನಿಗಳಿಗೆ ಅವಮಾನ ಮಾಡಿದ್ದು, ಅಲ್ಲದೆ ಕೊಡವ ಜನಾಂಗವನ್ನೂ ನಿಂದಿಸಿರುವುದು ಸರಿಯಲ್ಲ. ಇಂತಹವರ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕೆ ಒತ್ತಾಯಿಸಿ ಪೊಲೀಸ್​ ದೂರು ನೀಡಿರುವುದಾಗಿ ತಿಳಿಸಿದ್ದಾರೆ.

ಇದನ್ನೂ ಓದಿ: ಕಾವೇರಿಯಲ್ಲಿ ತೀರ್ಥೋದ್ಭವ ಆಗುತ್ತಿದ್ದಂತೆ ಮತ್ತೊಮ್ಮೆ ಗರಿಷ್ಠ ಮಟ್ಟ ತಲುಪಿದ ಕೆಆರ್​ಎಸ್

ವಿವಿಧ ಕೊಡವ ಸಮಾಜಗಳು ಕೂಡ ಆರೋಪಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿ, ವಿವಿಧ ಕಡೆಗಳಲ್ಲಿ ಪೊಲೀಸ್​ ದೂರು ನೀಡಲಾಗಿದೆ ಸದ್ಯ ಆರೋಪಿಯ ಮೊಬೈಲ್ ಸ್ವಿಚ್​ ಆಫ್​ ಆಗಿದ್ದು, ಆತನನ್ನು ಶೀಘ್ರವೇ ಬಂಧಿಸುವುದಾಗಿ ಪೊಲೀಸರು ದೂರುದಾರರಿಗೆ ಭರವಸೆ ನೀಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.