Nandini Milk Price Hike: ನಂದಿನಿ ಹಾಲಿನ ದರ ಹೆಚ್ಚಳ; ಕೆಎಂಎಫ್​ನಿಂದ ಬೆಲೆ ಏರಿಕೆ ಬರೆ

KMF Increased Nandini Milk Price: ಕರ್ನಾಟಕ ಹಾಲು ಮಹಾಮಂಡಳ ಕೆಎಂಎಫ್ ರಾಜ್ಯದ ಜನತೆಗೆ ದರ ಏರಿಕೆಯ ಬಿಸಿ ಮುಟ್ಟಿಸಿದೆ. ನಾಳೆಯಿಂದಲೇ (ಜೂನ್ 26) ನಂದಿನಿ ಹಾಲಿನ ದರ ಹೆಚ್ಚಳವಾಗಲಿದೆ ಎಂದು ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ತಿಳಿಸಿದ್ದಾರೆ. ನಂದಿನಿ ಹಾಲಿನ ದರ ಎಷ್ಟು ಹೆಚ್ಚಾಗಲಿದೆ ಎಂಬ ಮಾಹಿತಿ ಇಲ್ಲಿದೆ.

Nandini Milk Price Hike: ನಂದಿನಿ ಹಾಲಿನ ದರ ಹೆಚ್ಚಳ; ಕೆಎಂಎಫ್​ನಿಂದ ಬೆಲೆ ಏರಿಕೆ ಬರೆ
ರಾಜ್ಯದ ಜನತೆಗೆ ಕೆಎಂಎಫ್​ ಹಾಲಿನ ದರ ಏರಿಕೆ ಬಿಸಿ
Follow us
| Updated By: ವಿವೇಕ ಬಿರಾದಾರ

Updated on:Jun 25, 2024 | 12:09 PM

ಬೆಂಗಳೂರು, ಜೂನ್ 25: ನಂದಿನಿ ಹಾಲಿನ ದರ ಹೆಚ್ಚಿಸಿ ಕರ್ನಾಟಕ ಹಾಲು ಮಹಾಮಂಡಳ ಕೆಎಂಎಫ್ (KMF) ಮಹತ್ವದ ನಿರ್ಧಾರ ಪ್ರಕಟಿಸಿದೆ. ಕೆಎಂಎಫ್ ಮುಖ್ಯ ಕಚೇರಿಯಲ್ಲಿ ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ಸುದ್ದಿಗೋಷ್ಠಿ ನಡೆಸಿ ದರ ಹೆಚ್ಚಳದ ಬಗ್ಗೆ ಮಾಹಿತಿ ನೀಡಿದರು. ಒಂದು ಲೀಟರ್ ನಂದಿನಿ ಹಾಲಿನ (Nandini Milk) ಪ್ಯಾಕೆಟ್​​ಗೆ 50 ಎಂಎಲ್​​ ಹಾಲು ಹೆಚ್ಚುವರಿಯಾಗಿ ಸೇರಿಸಲಾಗುವುದು. ಸದ್ಯ ಲೀಟರ್ ಹಾಲಿಗೆ ಇರುವ 42 ರೂಪಾಯಿ ಇರುವ (Nandini Milk Price) ದರವನ್ನು 2 ರೂಪಾಯಿ ಹೆಚ್ಚಳ ಮಾಡಲಾಗುವುದು. ನಾಳೆಯಿಂದ ಈ ದರ ನಾಳೆಯಿಂದ ಅನ್ವಯವಾಗಲಿದೆ ಎಂದು ಭೀಮಾನಾಯ್ಕ್ ತಿಳಿಸಿದರು. ಕೆಎಂಎಫ್​ ಎಂಡಿ ಎಂಕೆ ಜಗದೀಶ್, ಆಡಳಿತ ಮಂಡಳಿ ಸದಸ್ಯರು ಸಹ ಸುದ್ದಿಗೋಷ್ಠಿಯಲ್ಲಿ ಭಾಗಿಯಾಗಿದ್ದಾರೆ.

ಅರ್ಧ ಲೀಟರ್ ಹಾಲಿನ ಪ್ಯಾಕೆಟ್​ ದರ 22ರಿಂದ 24 ರೂ.ಗೆ ಏರಿಕೆಯಾಗಲಿದೆ. ಮೊಸರು, ಇನ್ನಿತರ ಯಾವುದೇ ಹಾಲಿನ ಉತ್ಪನ್ನದ ದರ ಏರಿಕೆ ಮಾಡಲ್ಲ. ಕೇರಳದಲ್ಲಿ ಒಂದು ಲೀಟರ್ ಹಾಲಿನ ಬೆಲೆ 52 ರುಪಾಯಿ ಇದೆ. ಗುಜರಾತ್​​​​ನಲ್ಲಿ ಅಮುಲ್ ಒಂದು ಲೀಟರ್​ಗೆ 56 ರೂ. ಮಹಾರಾಷ್ಟ್ರದಲ್ಲಿ 56 ರೂ. ದೆಹಲಿ ಮದರ್ ಡೈರಿಯ ಹಾಲಿನ ಬೆಲೆ 54 ರೂ. ಇದೆ ಎಂದು ಎಂದು ಭೀಮಾನಾಯ್ಕ್ ಹೇಳಿದರು.

ಇದನ್ನೂ ಓದಿ: ಅಜ್ಜವಾರ: ಹಾಲಿಗೆ ನೀರು ಸೇರಿಸಿ ಕೆಎಂಎಫ್​​ಗೆ ಭಾರೀ ವಂಚನೆ, ಹಾಲಿನ ಡೈರಿ ಗುಮಾಸ್ತ-ಕಾರ್ಯದರ್ಶಿ ಸಸ್ಪೆಂಡ್​

ರಾಜ್ಯದಲ್ಲಿ ಸದ್ಯಕ್ಕೆ ನಂದಿನಿ ಹಾಲಿನ ದರ ಏರಿಕೆ ಮಾಡುವ ಯಾವುದೇ ಚಿಂತನೆ ಸರ್ಕಾರದ ಮುಂದೆ ಇಲ್ಲ ಎಂದು ಪಶುಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ. ವೆಂಕಟೇಶ್ ಕೆಲವು ತಿಂಗಳ ಹಿಂದೆ ಹೇಳಿದ್ದರು. ಆದರೆ, ಇದೀಗ ಲೋಕಸಭೆ ಚುನಾವಣೆ ಮುಗಿಯುತ್ತಿದ್ದಂತೆ ಹಾಲಿನ ದರ ಏರಿಕೆ ಮಾಡಲಾಗಿದೆ. ಇದು ಸಹಜವಾಗಿ ಮಧ್ಯಮ ವರ್ಗದ ಜನರ ಆಕ್ರೋಶಕ್ಕೆ ಕಾರಣವಾಗಿದೆ.

ಲೋಕಸಭೆ ಚುನಾವಣೆ ಫಲಿತಾಂಶಕ್ಕೂ ಮುನ್ನ ಗುಜರಾತ್​ನ ಅಮುಲ್​ ಕಂಪನಿ ತನ್ನ ಎಲ್ಲ ರೀತಿಯ ಹಾಲಿನ ಬೆಲೆಯನ್ನು ಲೀಟರ್​​ಗೆ 2 ರೂ. ಹೆಚ್ಚಿಸಿತ್ತು. ಉತ್ಪಾದನೆಯ ಒಟ್ಟಾರೆ ವೆಚ್ಚದ ಹೆಚ್ಚಳದಿಂದಾಗಿ ಅಮುಲ್​ ಹಾಲಿನ ಬೆಲೆಯನ್ನು ಹೆಚ್ಚಿಸಲಾಗಿದೆ ಎಂದು ಗುಜರಾತ್​​ ಸಹಕಾರಿ ಹಾಕು ಮಾರುಕಟ್ಟೆ ಒಕ್ಕೂಟ ತಿಳಿಸಿತ್ತು.

ಅಮುಲ್​ ಕಂಪನಿಯ ಹಾಲಿನ ದರ ಏರಿಕೆ ರಾಜ್ಯದ ಜನರಿಗೆ ಅಷ್ಟೊಂದು ಪರಿಣಾಮ ಬೀರಿಲ್ಲ. ಆದರೆ ಕೆಎಂಎಫ್​​ನ ನಂದಿನಿ ಹಾಲಿನ ದರ ಏರಿಕೆ ರಾಜ್ಯದ ಜನರಿಗೆ ಬಿಸಿ ತುಪ್ಪವಾಗಿದೆ. ಇತ್ತೀಚಿಗಷ್ಟೆ ಪೆಟ್ರೋಲ್​ ಮತ್ತು ಡೀಸೆಲ್​ ಬೆಲೆ ಏರಿಸಿದ್ದ ರಾಜ್ಯ ಸರ್ಕಾರ ಇದೀಗ, ಹಾಲಿನ ದರ ಏರಿಸಿದ್ದು,ರಾಜ್ಯದ ಜನರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:45 am, Tue, 25 June 24

ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!