ಶ್ರಾವಣಕ್ಕೆ ಗ್ರಾಹಕರಿಗೆ ಕೆಎಂಎಫ್​ನಿಂದ ಸಿಹಿಸುದ್ದಿ; ಸದ್ಯ ಹಾಲಿನ ಬೆಲೆ ಏರಿಕೆಯಿಲ್ಲ; ಹೊಸ ಉತ್ಪನ್ನ ಬಿಡುಗಡೆ, ಇನ್ನಷ್ಟು ರಿಯಾಯಿತಿ

KMF Discounts: ಮುಂದಿನ ಕೆಲ ದಿನಗಳಲ್ಲಿ ಸಾಲು ಸಾಲು ಹಬ್ಬಗಳ ಆಚರಣೆಯಿರುವುದನ್ನು ಗಮನದಲ್ಲಿಟ್ಟುಕೊಂಡು ಈ ಬಾರಿ ನಂದಿನಿ ಸಿಹಿ ಉತ್ಸವಕ್ಕೆ ಚಾಲನೆ ನೀಡಲಿದೆ. ಇಂದಿನಿಂದ 15 ದಿನಗಳ ಕಾಲ ನಡೆಯುವ ಸಿಹಿ ಉತ್ಸವದಲ್ಲಿ ಕೆಎಂಎಫ್ ಉತ್ಪಾದಿಸುವ ಎಲ್ಲಾ ಸಿಹಿ ಉತ್ಪನ್ನಗಳ ಮೇಲೆ ಶೇಕಡಾ 10ರಷ್ಟು ರಿಯಾಯಿತಿ ದೊರೆಯಲಿದೆ.

ಶ್ರಾವಣಕ್ಕೆ ಗ್ರಾಹಕರಿಗೆ ಕೆಎಂಎಫ್​ನಿಂದ ಸಿಹಿಸುದ್ದಿ; ಸದ್ಯ ಹಾಲಿನ ಬೆಲೆ ಏರಿಕೆಯಿಲ್ಲ; ಹೊಸ ಉತ್ಪನ್ನ ಬಿಡುಗಡೆ, ಇನ್ನಷ್ಟು ರಿಯಾಯಿತಿ
ಸಾಂಕೇತಿಕ ಚಿತ್ರ
Follow us
TV9 Web
| Updated By: guruganesh bhat

Updated on: Aug 19, 2021 | 4:44 PM

ಬೆಂಗಳೂರು: ಹಾಲಿನ ದರ ಹೆಚ್ಚಳ ಮಾಡಲು ಬೆಂಗಳೂರು, ಕೋಲಾರ ಹಾಲು ಒಕ್ಕೂಟಗಳು ಮನವಿ ಮಾಡುತ್ತಿವೆ. ಆದರೆ, ಸದ್ಯಕ್ಕೆ ಕೆಎಂಎಫ್ ಹಾಲಿನ ದರ ಹೆಚ್ಚಳ ಮಾಡುವ ಪ್ರಶ್ನೆಯೇ ಇಲ್ಲ ಎಂದು ಬೆಂಗಳೂರಿನಲ್ಲಿ ಕೆಎಂಎಫ್ ಎಂಡಿ ಸತೀಶ್ ಸ್ಪಷ್ಟಪಡಿಸಿದರು. ಬೇರೆ ರಾಜ್ಯಗಳಲ್ಲಿ ನಂದಿನಿ ಹಾಲಿಗೆ ಹೆಚ್ಚಿನ ಬೇಡಿಕೆಯಿದೆ. ಶಾಲೆಗಳಲ್ಲಿ ಮಕ್ಕಳಿಗೆ ಹಾಲು ನೀಡುವ ಕ್ಷೀರಭಾಗ್ಯ ಯೋಜನೆ ಮುಂದುವರಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಅವರು ತಿಳಿಸಿದರು.

ಶ್ರಾವಣಕ್ಕೆ ಕೆಎಂಎಫ್ ನೀಡಲಿದೆ ಗ್ರಾಹಕರಿಗೆ ಸಿಹಿಸುದ್ದಿ ಮುಂದಿನ ಕೆಲ ದಿನಗಳಲ್ಲಿ ಸಾಲು ಸಾಲು ಹಬ್ಬಗಳ ಆಚರಣೆಯಿರುವುದನ್ನು ಗಮನದಲ್ಲಿಟ್ಟುಕೊಂಡು ಈ ಬಾರಿ ನಂದಿನಿ ಸಿಹಿ ಉತ್ಸವಕ್ಕೆ ಚಾಲನೆ ನೀಡಲಿದೆ. ಇಂದಿನಿಂದ 15 ದಿನಗಳ ಕಾಲ ನಡೆಯುವ ಸಿಹಿ ಉತ್ಸವದಲ್ಲಿ ಕೆಎಂಎಫ್ ಉತ್ಪಾದಿಸುವ ಎಲ್ಲಾ ಸಿಹಿ ಉತ್ಪನ್ನಗಳ ಮೇಲೆ ಶೇಕಡಾ 10ರಷ್ಟು ರಿಯಾಯಿತಿ ದೊರೆಯಲಿದೆ. ಜತೆಗೆ ನಂದಿನಿ ತುಪ್ಪ ಮತ್ತು ಬೆಣ್ಣೆ ಮೇಲಿನ ರಿಯಾಯಿತಿ ದರ ಇನ್ನೂ ಒಂದು ತಿಂಗಳು ಮುಂದುವರೆಯಲಿದೆ. ಅಷ್ಟೇ ಅಲ್ಲದೇ, ನಂದಿನಿ ಶ್ರೀಖಂಡ, ನಂದಿನಿ ಐಸ್ ಕ್ರೀಂ ಉತ್ಪನ್ನಗಳಿಗೆ ಒಂದು ಕೊಂಡರೆ ಮತ್ತೊಂದು ಉಚಿತ ಯೋಜನೆಗೂ ಚಾಲನೆ ನೀಡಲಾಗಿದೆ.

ಇದೇ ಸಂದರ್ಭದಲ್ಲಿ ಕೆಎಂಎಫ್ ಐದು ಶುಗರ್ ಫ್ರೀ ಉತ್ಪನ್ನಗಳನ್ನು ಬಿಡುಗಡೆಗೊಳಿಸಲಿದೆ. ನಂದಿನಿ ಸಕ್ಕರೆ ರಹಿತ ಪೇಡಾ, ನಂದಿನಿ ಸಕ್ಕರೆ ರಹಿತ ಕೇಸರ್ ಪೇಡಾ, ನಂದಿನಿ ಸಕ್ಕರೆ ರಹಿತ ಬೇಸನ್ ಲಡ್ಡು, ನಂದಿನಿ ಸಕ್ಕರೆ ರಹಿತ ಚಾಕೋಲೇಟ್ ಬರ್ಫಿ, ನಂದಿನಿ ಸಕ್ಕರೆ ರಹಿತ ಕೊಕೊನಟ್ ಬರ್ಫಿ ಬಿಡುಗಡೆಯಾಗಲಿದೆ. ಈ ಹೊಸ ಉತ್ಪನ್ನಗಳ ಮೇಲೆ ಶೇಕಡಾ 10ರಷ್ಟು ರಿಯಾಯಿತಿ ನೀಡಲು ಕೆಎಂಎಫ್ ತೀರ್ಮಾನಿಸಿದೆ.

ಇದನ್ನೂ ಓದಿ: 

ರೋಗ ನಿರೋಧಕ ಶಕ್ತಿ ಹೆಚ್ಚಿಸಲು ನಂದಿನಿ ಆಯುರ್ವೇದಿಕ್​ ಹಾಲು; ಕೆಎಂಎಫ್​ನಿಂದ ಹೊಸ ಉತ್ಪನ್ನಗಳ ಬಿಡುಗಡೆ

ರೈತರ ನೆರವಿಗೆ ನಿಂತ ಸರ್ಕಾರ, ಕೆಎಂಎಫ್ ಮಳಿಗೆಗಳಲ್ಲಿ ತರಕಾರಿ ಮಾರಾಟ

(KMF discounts in Shravana 2021 no price rise for milk New product launch and more discount)

ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು