Corruption: ಕೆಎಂಎಫ್ ನೌಕರ ಕೂಡಾ ಭ್ರಷ್ಟಾಚಾರ ತಡೆ ಕಾಯ್ದೆ ವ್ಯಾಪ್ತಿಗೆ, ನಂದಿನಿ ಜನರಲ್ ಮ್ಯಾನೇಜರ್ ಪ್ರಕರಣದಲ್ಲಿ ಹೈಕೋರ್ಟ್ ತೀರ್ಪು ಏನು?

KMF: ಕೆಎಂಎಫ್ ನೌಕರ ಕೂಡಾ ಭ್ರಷ್ಟಾಚಾರ ತಡೆ ಕಾಯ್ದೆಗೆ ಒಳಪಡುತ್ತಾರೆ. ಅರ್ಜಿದಾರನ ಮೇಲೆ ಆದಾಯ ಮೀರಿ ಆಸ್ತಿ ಗಳಿಸಿದ ಆರೋಪವಿದೆ. ಉತ್ತಮ ಆಡಳಿತಕ್ಕಾಗಿ ಭ್ರಷ್ಟಾಚಾರಕ್ಕೆ ಶೂನ್ಯ ಸಹಿಷ್ಣುತೆ ಅನಿವಾರ್ಯ ಎಂದು ನ್ಯಾ. ಎಂ. ನಾಗಪ್ರಸನ್ನ ಅವರ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ನೀಡಿದೆ.

Corruption: ಕೆಎಂಎಫ್ ನೌಕರ ಕೂಡಾ ಭ್ರಷ್ಟಾಚಾರ ತಡೆ ಕಾಯ್ದೆ ವ್ಯಾಪ್ತಿಗೆ, ನಂದಿನಿ ಜನರಲ್ ಮ್ಯಾನೇಜರ್ ಪ್ರಕರಣದಲ್ಲಿ ಹೈಕೋರ್ಟ್ ತೀರ್ಪು ಏನು?
ಕೆಎಂಎಫ್ ನೌಕರ ಕೂಡಾ ಭ್ರಷ್ಟಾಚಾರ ತಡೆ ಕಾಯ್ದೆ ವ್ಯಾಪ್ತಿಗೆ, ನಂದಿನಿ ಜನರಲ್ ಮ್ಯಾನೇಜರ್ ಪ್ರಕರಣದಲ್ಲಿ ಹೈಕೋರ್ಟ್ ತೀರ್ಪು ಏನು?
Follow us
TV9 Web
| Updated By: ಸಾಧು ಶ್ರೀನಾಥ್​

Updated on:Aug 09, 2022 | 7:48 PM

ಬೆಂಗಳೂರು: ಕರ್ನಾಟಕ ಹಾಲು ಮಹಾಮಂಡಳ (ಕೆಎಂಎಫ್) ಉದ್ಯೋಗಿಗಳು (KMF employee) ಕೂಡಾ ಭ್ರಷ್ಟಾಚಾರ ತಡೆ ಕಾಯ್ದೆ ವ್ಯಾಪ್ತಿಗೆ ಒಳಪಡುತ್ತಾರೆ ಎಂದು ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ನೀಡಿದೆ. ತನ್ಮೂಲಕ ನಂದಿನಿ ಮಿಲ್ಕ್ ಜನರಲ್ ಮ್ಯಾನೇಜರ್ ವಿ. ಕೃಷ್ಣಾರೆಡ್ಡಿ ಅರ್ಜಿಯನ್ನು ವಜಾಗೊಳಿಸಿದೆ. 2021 ನವೆಂಬರ್ 20 ರಂದು.. ಎಸಿಬಿ (ACB) ದಾಳಿ ನಡೆಸಿ ಕೇಸ್ ದಾಖಲಿಸಿತ್ತು. ಆದಾಯ ಮೀರಿ (Corruption) ಶೇ. 107 % ಆಸ್ತಿ ಹೊಂದಿದ ಆರೋಪ ಹೊರಿಸಲಾಗಿತ್ತು. ಆದರೆ ಪ್ರಕರಣ ರದ್ದು ಕೋರಿ ವಿ. ಕೃಷ್ಣಾರೆಡ್ಡಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಕೆಎಂಎಫ್ ಸಿಬ್ಬಂದಿ ಸರ್ಕಾರಿ ನೌಕರರಲ್ಲವೆಂದು ವಾದಿಸಿದ್ದರು. ಹೀಗಾಗಿ ಭ್ರಷ್ಟಾಚಾರ ತಡೆ ಕಾಯ್ದೆ ವ್ಯಾಪ್ತಿಗೆ ಬರುವುದಿಲ್ಲವೆಂದು ವಾದಿಸಿದ್ದರು. ಆದರೆ ಅರ್ಜಿದಾರರ ವಾದವನ್ನು ಹೈಕೋರ್ಟ್ ತಳ್ಳಿಹಾಕಿದೆ.

ಕೆಎಂಎಫ್ ನೌಕರ ಕೂಡಾ ಭ್ರಷ್ಟಾಚಾರ ತಡೆ ಕಾಯ್ದೆಗೆ ಒಳಪಡುತ್ತಾರೆ. ಅರ್ಜಿದಾರನ ಮೇಲೆ ಆದಾಯ ಮೀರಿ ಆಸ್ತಿ ಗಳಿಸಿದ ಆರೋಪವಿದೆ. ಭ್ರಷ್ಟಾಚಾರ ದೇಶದ ಜನಜೀವನವನ್ನು ಆವರಿಸಿದೆ. ಸಂವಿಧಾನದ ಆಡಳಿತಕ್ಕೆ ಭ್ರಷ್ಟಾಚಾರ ಅಪಾಯಕಾರಿ. ಬೇರೆ ಬೇರೆ ಸ್ವರೂಪಗಳಲ್ಲಿ ಲಂಚಗುಳಿತನ ವ್ಯಾಪಿಸಿದೆ. ಉತ್ತಮ ಆಡಳಿತಕ್ಕಾಗಿ ಭ್ರಷ್ಟಾಚಾರಕ್ಕೆ ಶೂನ್ಯ ಸಹಿಷ್ಣುತೆ ಅನಿವಾರ್ಯ ಎಂದು ನ್ಯಾ. ಎಂ. ನಾಗಪ್ರಸನ್ನ ಅವರ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ನೀಡಿದೆ.

ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಗಲಭೆ ಕೇಸ್‌; ಪೊಲೀಸ್ ಠಾಣೆ ಮೇಲಿನ ದಾಳಿ ಭಯೋತ್ಪಾದನಾ ಕೃತ್ಯ ಎಂದು ಸಾರಿದ ಹೈಕೋರ್ಟ್

ಬೆಂಗಳೂರು: ಡಿ.ಜೆ. ಹಳ್ಳಿ ಮತ್ತು ಕೆ.ಜಿ. ಹಳ್ಳಿ ಠಾಣಾ ವಾಪ್ತಿಗಳಲ್ಲಿ ನಡೆದ ಗಲಭೆ ಪ್ರಕರಣದಲ್ಲಿ ಆಯಾ ಪೊಲೀಸ್ ಠಾಣೆಗಳ ಮೇಲಿನ ದಾಳಿಯು ಭಯೋತ್ಪಾದನಾ ಕೃತ್ಯ ಎಂದು ರಾಜ್ಯ ಹೈಕೋರ್ಟ್​ ಸಾರಿದೆ. ಪ್ರಕರಣದಲ್ಲಿ ಅತೀಕ್ ಅಹ್ಮದ್ ಸೇರಿ ಐವರ ಜಾಮೀನು ಅರ್ಜಿಗಳನ್ನು ಹೈಕೋರ್ಟ್​ ವಜಾಮಾಡಿದೆ. ಹೈಕೋರ್ಟ್‌ ನ್ಯಾಯಮೂರ್ತಿಗಳಾದ ಕೆ.ಸೋಮಶೇಖರ್ ಮತ್ತು ನ್ಯಾ. ಶಿವಶಂಕರ್ ಅಮರಣ್ಣನವರ್‌ ಅವರ ನ್ಯಾಯಪೀಠ ಈ ಆದೇಶ ನೀಡಿದೆ. ಎರಡೂ ಠಾಣಾ ವ್ಯಾಪ್ತಿಗಳು ನಡುರಾತ್ರಿ ಧಗಧಗನೆ ಹೊತ್ತಿ ಉರಿದು ನಾಳಿದ್ದು ಗುರುವಾರಕ್ಕೆ 2 ವರ್ಷವಾಗುತ್ತದೆ.

ಠಾಣೆಯ ಮೇಲೆ ದಾಳಿಗೆ ಪೆಟ್ರೋಲ್ ಬಾಟಲ್ ಬಳಸಿದ್ದಾರೆ. ಪೊಲೀಸರ ಮೇಲೆ ರಾಡ್ ಮತ್ತು ದೊಣ್ಣೆಗಳಿಂದ ದಾಳಿ ಮಾಡಿದ್ದಾರೆ. ಜನರನ್ನು ಭೀತರಾಗಿಸಲು ಕೃತ್ಯ ಎಸಗಿದ್ದಾರೆ ಎಂದು ಆರೋಪಿಗಳ ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್‌ ವಿಭಾಗೀಯ ಪೀಠ ಅಭಿಪ್ರಾಯಪಟ್ಟಿದೆ. 2020ರ ಆಗಸ್ಟ್​ 11ರಂದು ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ವ್ಯಾಪ್ತಿಯಲ್ಲಿ ಗಲಭೆ ನಡೆದು, ಶಾಸಕ ಅಖಂಡ ಶ್ರೀನಿವಾಸ್ ನಿವಾಸಕ್ಕೂ ಬೆಂಕಿ ಹಚ್ಚಲಾಗಿತ್ತು.

Published On - 6:46 pm, Tue, 9 August 22

ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ