ರೈತರ ನೆರವಿಗೆ ನಿಂತ ಸರ್ಕಾರ, ಕೆಎಂಎಫ್ ಮಳಿಗೆಗಳಲ್ಲಿ ತರಕಾರಿ ಮಾರಾಟ

|

Updated on: Apr 26, 2020 | 1:46 PM

ಬೆಂಗಳೂರು: ಕೊರೊನಾ ಲಾಕ್​ಡೌನ್​ನಿಂದ ತಾವು ಬೆಳೆದ ಬೆಲೆಯನ್ನು ಮಾರಾಟ ಮಾಡಲಾಗದೆ ಸಂಕಷ್ಟದಲ್ಲಿರುವ ರೈತರಿಗೆ ನೆರವಾಗಲು ಕೆಎಂಎಫ್ ಮಹತ್ವದ ಯೋಜನೆಗೆ ಮುಂದಾಗಿದೆ. ತೋಟಗಾರಿಗೆ ಇಲಾಖೆಯ ಮನವಿಗೆ ಸ್ಪಂದಿಸಿದ ಕೆಎಂಎಫ್, ತನ್ನ ಮಳಿಗೆಗಳಲ್ಲಿ ತರಕಾರಿ ಮಾರಾಟಕ್ಕೆ ರೈತರಿಗೆ ಅವಕಾಶ ನೀಡಿದೆ. ರಾಜ್ಯದಲ್ಲಿ 1,500ಕ್ಕೂ ಹೆಚ್ಚು ಮಳಿಗೆಗಳಲ್ಲಿ ಮಾರಾಟಕ್ಕೆ ವ್ಯವಸ್ಥೆ ಮಾಡಲಾಗುತ್ತಿದ್ದು, ಬೆಳಗ್ಗೆ 6 ಗಂಟೆಯಿಂದ ರಾತ್ರಿ 8 ಗಂಟೆವರೆಗೆ ಮಾರಾಟಕ್ಕೆ ಅವಕಾಶ ನೀಡಲಾಗಿದೆ. ತರಕಾರಿ ಮಾರುವ ರೈತರಿಗೆ ಕೆಎಂಎಫ್‌ನಿಂದ ಅಗತ್ಯ ನೆರವು: ಇಲ್ಲಿ ರೈತರೇ ನೇರವಾಗಿ ತರಕಾರಿಯನ್ನು ಮಾರಾಟ ಮಾಡಬಹುದಾಗಿದೆ. […]

ರೈತರ ನೆರವಿಗೆ ನಿಂತ ಸರ್ಕಾರ, ಕೆಎಂಎಫ್ ಮಳಿಗೆಗಳಲ್ಲಿ ತರಕಾರಿ ಮಾರಾಟ
Follow us on

ಬೆಂಗಳೂರು: ಕೊರೊನಾ ಲಾಕ್​ಡೌನ್​ನಿಂದ ತಾವು ಬೆಳೆದ ಬೆಲೆಯನ್ನು ಮಾರಾಟ ಮಾಡಲಾಗದೆ ಸಂಕಷ್ಟದಲ್ಲಿರುವ ರೈತರಿಗೆ ನೆರವಾಗಲು ಕೆಎಂಎಫ್ ಮಹತ್ವದ ಯೋಜನೆಗೆ ಮುಂದಾಗಿದೆ. ತೋಟಗಾರಿಗೆ ಇಲಾಖೆಯ ಮನವಿಗೆ ಸ್ಪಂದಿಸಿದ ಕೆಎಂಎಫ್, ತನ್ನ ಮಳಿಗೆಗಳಲ್ಲಿ ತರಕಾರಿ ಮಾರಾಟಕ್ಕೆ ರೈತರಿಗೆ ಅವಕಾಶ ನೀಡಿದೆ.

ರಾಜ್ಯದಲ್ಲಿ 1,500ಕ್ಕೂ ಹೆಚ್ಚು ಮಳಿಗೆಗಳಲ್ಲಿ ಮಾರಾಟಕ್ಕೆ ವ್ಯವಸ್ಥೆ ಮಾಡಲಾಗುತ್ತಿದ್ದು, ಬೆಳಗ್ಗೆ 6 ಗಂಟೆಯಿಂದ ರಾತ್ರಿ 8 ಗಂಟೆವರೆಗೆ ಮಾರಾಟಕ್ಕೆ ಅವಕಾಶ ನೀಡಲಾಗಿದೆ.

ತರಕಾರಿ ಮಾರುವ ರೈತರಿಗೆ ಕೆಎಂಎಫ್‌ನಿಂದ ಅಗತ್ಯ ನೆರವು:
ಇಲ್ಲಿ ರೈತರೇ ನೇರವಾಗಿ ತರಕಾರಿಯನ್ನು ಮಾರಾಟ ಮಾಡಬಹುದಾಗಿದೆ. ತೂಕದ ಯಂತ್ರ ಸೇರಿದಂತೆ ಹಣ್ಣು, ತರಕಾರಿ ಮಾರಾಟಕ್ಕೆ ಬೇಕಾದ ಇತರೆ ಸಾಮಗ್ರಿಗಳನ್ನು ರೈತರೇ ತರಬೇಕು. ಕೆಎಂಎಫ್‌ನಿಂದ ರೈತರಿಗೆ ಉಚಿತವಾಗಿ ನೀರು, ಮಜ್ಜಿಗೆ, ಸ್ಯಾನಿಟೈಸರ್, ಗ್ಲೌಸ್, ಮಾಸ್ಕ್ ನೀಡುವುದಕ್ಕೆ ನಿರ್ಧರಿಸಲಾಗಿದೆ.

ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲು10 ಗ್ರಾಮಗಳಿಗೆ ಒಬ್ಬರಂತೆ ಮೇಲ್ವಿಚಾರಕರ ನೇಮಕ ಮಾಡಲು ನಿರ್ಧರಿಸಲಾಗಿದೆ.

Published On - 1:43 pm, Sun, 26 April 20