AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಲು, ಮೊಸರಿನಂತೆ ಮಾರುಕಟ್ಟೆಗೆ ನಂದಿನಿ ಇಡ್ಲಿ, ದೋಸೆ ಹಿಟ್ಟು ಲಗ್ಗೆ, ಬೆಲೆ ಎಷ್ಟು?

ಕರ್ನಾಟಕದ ನಂದಿನಿ ಬ್ರ್ಯಾಂಡ್​ನ ನಾನಾ ಉತ್ಪನ್ನಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗುತ್ತಿದ್ದು, ಕನ್ನಡಿಗರ ಬ್ರ್ಯಾಂಡ್‌ ಹೆಮ್ಮರವಾಗಿ ಬೆಳೆಯುತ್ತಿದೆ. ಇದರ ಮಧ್ಯೆ ನಾಗರಿಕರ ಬಹುದಿನಗಳ ಅಪೇಕ್ಷೆಯಂತೆ ಇದೀಗ ನಂದಿನಿ ಉತ್ಪನ್ನಗಳಿಗೆ ಹೊಸ ಸೇರ್ಪಡೆಯಾಗಿ ದೋಸೆ ಹಾಗೂ ಇಡ್ಲಿ ಹಿಟ್ಟು ಮಾರುಕಟ್ಟೆಗೆ ಬಂದಿದೆ. ನಂದಿನಿ ಬ್ರ್ಯಾಂಡ್‌ನ ಪ್ರಿಯರಿಗೆ ಇಂದಿನಿಂದಲೇ ನಂದಿನಿ ಇಡ್ಲಿ, ದೋಸೆ ಹಿಟ್ಟು ಲಭ್ಯವಾಗಲಿದೆ. ಹಾಗಾದ್ರೆ, ಈ ಹಿಟ್ಟಿನ ದರ ಎಷ್ಟು ಎನ್ನುವ ವಿವರ ಇಲ್ಲಿದೆ.

ಹಾಲು, ಮೊಸರಿನಂತೆ ಮಾರುಕಟ್ಟೆಗೆ ನಂದಿನಿ ಇಡ್ಲಿ, ದೋಸೆ ಹಿಟ್ಟು ಲಗ್ಗೆ, ಬೆಲೆ ಎಷ್ಟು?
ನಂದಿನಿ ಇಡ್ಲಿ ಮತ್ತು ದೋಸೆ ಹಿಟ್ಟು ಬಿಡುಗಡೆ
ರಮೇಶ್ ಬಿ. ಜವಳಗೇರಾ
|

Updated on: Dec 25, 2024 | 8:45 PM

Share

ಬೆಂಗಳೂರು,(ಡಿಸೆಂಬರ್ 25): ನಾಗರಿಕರ ಬಹುದಿನಗಳ ಅಪೇಕ್ಷೆಯಂತೆ ಕೊನೆಗೂ ನಂದಿನಿ ಉತ್ಪನ್ನಗಳಿಗೆ ದೋಸೆ ಹಾಗೂ ಇಡ್ಲಿ ಹಿಟ್ಟು ಹೊಸ ಸೇರ್ಪಡೆಯಾಗಿದ್ದು, ರೆಡಿಮೇಡ್ ದೋಸೆ ಹಾಗೂ ಇಡ್ಲಿ ಹಿಟ್ಟು ಇಂದಿನಿಂದ ಮಾರುಕಟ್ಟೆಗೆ ಲಗ್ಗೆಯಿಟ್ಟಿದೆ. ಹೌದು…ಕರ್ನಾಟಕ ಹಾಲು ಒಕ್ಕೂಟವು ನಂದಿನಿ ಬ್ರ್ಯಾಂಡ್‌ ಅಡಿಯಲ್ಲಿ ಇಡ್ಲಿ ಮತ್ತು ದೋಸೆ ಹಿಟ್ಟನ್ನು ಬಿಡುಗಡೆ ಮಾಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಂದು (ಡಿಸೆಂಬರ್ 25) ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಬಿಡುಗಡೆ ಮಾಡಿದ್ದು, ಹಾಲು, ಮೊಸರಿನಂತೆ ಇನ್ಮುಂದೆ ಗಾಹಕರಿಗೆ ನಂದಿನಿ ವೇ ಪ್ರೋಟಿನ್ ಆಧಾರಿತ ಇಡ್ಲಿ ಮತ್ತು ದೋಸೆ ಹಿಟ್ಟು ದೊರೆಯಲಿದೆ.

ತಿಂಡಿ ಬಗ್ಗೆ ಚಿಂತೆ ಮಾಡುವ ಅಗತ್ಯವಿಲ್ಲ

ನಂದಿನಿ ಬ್ರ್ಯಾಂಡ್‌ನ ಪ್ರಿಯರಿಗೆ ಇಂದಿನಿಂದಲೇ ನಂದಿನಿ ಇಡ್ಲಿ, ದೋಸೆ ಹಿಟ್ಟು ಲಭ್ಯವಾಗಲಿದೆ. ಕರ್ನಾಟಕ ರಾಜ್ಯದ ಜನತೆಗೆ ಈವರೆಗೆ ಮನೆ ಬಾಗಿಲಿಗೆ ನಂದಿನಿ ಬ್ರ್ಯಾಂಡ್‌ನ ಹಾಲು ಮೊಸರು ಬರುತ್ತಿದ್ದ ಮಾದರಿಯಲ್ಲಿಯೇ ಇನ್ನು ಮುಂದೆ ಇಡ್ಲಿ, ದೋಸೆ ಹಿಟ್ಟು ಕೂಡ ಬರಲಿದೆ. ಹೀಗಾಗಿ, ರಾಜ್ಯದ ಎಲ್ಲ ನಗರ, ಪಟ್ಟಣಗಳ ಜನರು ಬೆಳಗ್ಗಿನ ತಿಂಡಿ ಬಗ್ಗೆ ಚಿಂತೆ ಮಾಡುವ ಅಗತ್ಯವೇ ಇರುವುದಿಲ್ಲ. ಬೆಳಗ್ಗೆ ಇಡ್ಲಿ ಮಾಡಬೇಕೆಂದರೆ ಹಿಂದಿನ ದಿನದ ರಾತ್ರಿ ಎಲ್ಲಾ ರೆಡಿ ಮಾಡಿಕೊಳ್ಳಬೇಕು. ಆದ್ರೆ, ಇದೀಗ ರೆಡಿಮೆಡ್​ ಬರುತ್ತಿರುವುದರಿಂದ ಯಾವುದೇ ಚಿಂತಿಸುವ ಅವಶ್ಯವೇ ಇಲ್ಲ.  ಹಾಲು, ಮೊಸರಿನಂತೆ ಓಡಿ ಹೋಗಿ ಇಟ್ಟು ಖರೀದಿಸಿ ತಂದು ದೋಸೆ, ಇಡ್ಲಿ ಮಾಡಿಕೊಳ್ಳಬಹುದು.

ನಂದಿನಿ ಇಡ್ಲಿ-ದೋಸೆ ಹಿಟ್ಟಿನ ದರ ಎಷ್ಟು?

ಪ್ರಯೋಗಿಕವಾಗಿ ಬೆಂಗಳೂರು ನಗರದಲ್ಲಿ ಈ ದೋಸೆ, ಇಡ್ಲಿ ಹಿಟ್ಟು ಮಾರುಕಟ್ಟೆಗೆ ಪರಿಚಯಿಸಲಾಗುತ್ತಿದ್ದು, ಗ್ರಾಹಕರಿಗೆ ಕೈಗೆಟುವ ದರದಲ್ಲಿ ನೀಡಲಾಗುತ್ತಿದೆ. ದೋಸೆ ಮತ್ತು ಇಡ್ಲಿ ಹಿಟ್ಟಿನ 450 ಗ್ರಾಂ ಪ್ಯಾಕ್​ಗೆ 40 ರೂ. ಹಾಗೂ 900 ಗ್ರಾಂ ಪ್ಯಾಕೇಟ್​ಗೆ 80 ರೂಪಾಯಿ ದರ ನಿಗದಿ ಮಾಡಲಾಗಿದೆ.

ಆರಂಭದಲ್ಲಿ ಮಾರುಕಟ್ಟೆಗಳು ಹಾಗೂ ನಂದಿನಿ ಹಾಲಿನ ಕೇಂದ್ರಗಳಲ್ಲಿ ಇದೀಗ ಲಭ್ಯವಿದ್ದು, ಮುಂದಿನ ದಿನಗಳಲ್ಲಿ ಮನೆ, ಮೆನೆಗೆ ಹಾಲನ್ನು ತಲುಪಿಸುವ ಮಾದರಿಯಲ್ಲಿಯೇ ಇಡ್ಲಿ ಅಥವಾ ದೋಸೆ ಹಿಟ್ಟುಗಳನ್ನು ಕೂಡ ಸರಬರಾಜು ಮಾಡುವುದಕ್ಕೆ ಚಿಂತನೆ ಮಾಡಲಾಗಿದೆ. ಇನ್ನು ಕೆಎಂಎಫ್ ಬಿಡುಗಡೆ ಮಾಡಿರುವ ಈ ಇಡ್ಲಿ, ದೋಸೆ ಹಿಟ್ಟು ವೇ ಪ್ರೋಟೀನ್ ಆಧಾರಿತವಾಗಿದೆ. ಆರೋಗ್ಯಕ್ಕೂ ಉತ್ತಮ ಎಂದು ಹೇಳಲಾಗುತ್ತಿದೆ. ಇನ್ನು ರುಚಿ ಹಾಗೂ ಸ್ವಾದದ ಬಗ್ಗೆ ಇನ್ನುಮುಂದೆ ಜನರ ಬಳಕೆಯಿಂದ ರೇಟಿಂಗ್ಸ್ ಬರಬೇಕಿದೆ.

ನಂದಿನಿ ಬ್ರ್ಯಾಂಡ್ ಬಗ್ಗೆ ಸಿಎಂ ಟ್ವೀಟ್

ರೆಡಿಮೇಡ್ ದೋಸೆ ಹಾಗೂ ಇಡ್ಲಿ ಹಿಟ್ಟಿನ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಟ್ವೀಟ್ ಮಾಡಿದ್ದು,ಕನ್ನಡಿಗರ ಹೆಮ್ಮೆಯ ಬ್ರ್ಯಾಂಡ್‌ ಕೆಎಂಎಫ್‌ನ ನಂದಿನಿ ಉತ್ಪನ್ನಗಳು ದೇಶವ್ಯಾಪಿ ಮಾರುಕಟ್ಟೆಯನ್ನು ಸೃಷ್ಟಿಸಿಕೊಂಡಿದೆ. ರಾಷ್ಟ್ರ ರಾಜಧಾನಿ ದೆಹಲಿಗೂ ನಂದಿನಿ ಹಾಲು ತಲುಪುತ್ತಿದೆ. ದೂರದ ರಾಜಸ್ಥಾನ, ಮಧ್ಯಪ್ರದೇಶ ರಾಜ್ಯಗಳ ಪ್ರಮುಖ ನಗರಗಳಲ್ಲೂ ನಂದಿನಿ ಹಾಲಿಗೆ ಬೇಡಿಕೆ ಬರುತ್ತಿದೆ. ದೇಶದ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ತಿರುಪತಿಯ ಸುಪ್ರಸಿದ್ಧ ಲಡ್ಡು ಪ್ರಸಾದವನ್ನು ನಂದಿನಿ ತುಪ್ಪದಿಂದ ಸಿದ್ಧಪಡಿಸಲಾಗುತ್ತಿದೆ. ಹೀಗೆ ನಂದಿನಿಯ ನಾನಾ ಉತ್ಪನ್ನಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗುತ್ತಿದ್ದು, ಕನ್ನಡಿಗರ ಬ್ರ್ಯಾಂಡ್‌ ಹೆಮ್ಮರವಾಗಿ ಬೆಳೆಯುತ್ತಿದೆ ಎಂದು ಬರೆದುಕೊಂಡಿದ್ದಾರೆ.

ನಾಗರಿಕರ ಬಹುದಿನಗಳ ಅಪೇಕ್ಷೆಯಂತೆ ಇದೀಗ ನಂದಿನಿ ಉತ್ಪನ್ನಗಳಿಗೆ ಹೊಸ ಸೇರ್ಪಡೆಯಾಗಿ ದೋಸೆ ಹಾಗೂ ಇಡ್ಲಿ ಹಿಟ್ಟು ಮಾರುಕಟ್ಟೆಗೆ ಲಗ್ಗೆಯಿಟ್ಟಿದೆ. ವೇ ಪ್ರೋಟೀನ್ ಆಧಾರಿತ ಉತ್ಕೃಷ್ಟ ಗುಣಮಟ್ಟದ ಹಿಟ್ಟು ಕೈಗೆಟುಕುವ ದರದಲ್ಲಿ ಗ್ರಾಹಕರಿಗೆ ಲಭ್ಯವಿದ್ದು, ಬೆಳಗ್ಗಿನ ಉಪಾಹಾರವು ಗರಿಗರಿ ದೋಸೆ, ಸವಿಸವಿ ಇಡ್ಲಿಯೊಂದಿಗೆ ರುಚಿ ಮತ್ತು ಆರೋಗ್ಯವನ್ನು ವೃದ್ಧಿಗೊಳಿಸಲಿದೆ ಎಂದು ಸಿಎಂ ಟ್ವೀಟ್ ಮಾಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಸಂಜಯ್ ರಾವತ್ ಮನೆ ಮುಂದೆ ಬಾಂಬ್ ಬೆದರಿಕೆ ಸಂದೇಶವಿರುವ ಕಾರು ಪತ್ತೆ
ಸಂಜಯ್ ರಾವತ್ ಮನೆ ಮುಂದೆ ಬಾಂಬ್ ಬೆದರಿಕೆ ಸಂದೇಶವಿರುವ ಕಾರು ಪತ್ತೆ
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ
ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ
ನ್ಯೂ ಇಯರ್​​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​
ನ್ಯೂ ಇಯರ್​​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​
ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು
ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು
New Year 2026: ಹೊಸವರ್ಷಕ್ಕೆ ಅದ್ಧೂರಿ ಸ್ವಾಗತ; ಕುಣಿದು ಕುಪ್ಪಳಿಸಿದ ಜನರು
New Year 2026: ಹೊಸವರ್ಷಕ್ಕೆ ಅದ್ಧೂರಿ ಸ್ವಾಗತ; ಕುಣಿದು ಕುಪ್ಪಳಿಸಿದ ಜನರು
ನ್ಯೂಇಯರ್​ ಸಂಭ್ರಮದ ಮಧ್ಯೆ ಪುಂಡಾಟ: ಮಹಿಳಾ ಪೊಲೀಸರ ಜತೆ ಅನುಚಿತ ವರ್ತನೆ
ನ್ಯೂಇಯರ್​ ಸಂಭ್ರಮದ ಮಧ್ಯೆ ಪುಂಡಾಟ: ಮಹಿಳಾ ಪೊಲೀಸರ ಜತೆ ಅನುಚಿತ ವರ್ತನೆ
ಕಾಲೇಜಲ್ಲಿ ಬುರ್ಖಾ ಧರಿಸಿ ಅಸಭ್ಯವಾಗಿ ಡ್ಯಾನ್ಸ್ ಮಾಡಿದ ಯುವಕರು
ಕಾಲೇಜಲ್ಲಿ ಬುರ್ಖಾ ಧರಿಸಿ ಅಸಭ್ಯವಾಗಿ ಡ್ಯಾನ್ಸ್ ಮಾಡಿದ ಯುವಕರು
ಕುಡಿದು ಟೈಟ್ ಆದವರಿಗೆ ಉಚಿತವಾಗಿ ಮನೆಗೆ ತಲುಪಿಸುವ ವ್ಯವಸ್ಥೆ
ಕುಡಿದು ಟೈಟ್ ಆದವರಿಗೆ ಉಚಿತವಾಗಿ ಮನೆಗೆ ತಲುಪಿಸುವ ವ್ಯವಸ್ಥೆ
ಮಾಧ್ಯಮದ ಕ್ಯಾಮೆರಾ​​​ ನೋಡುತ್ತಿದ್ದಂತೆ ಮುಖ ಮುಚ್ಚಿಕೊಂಡ ಯುವತಿ
ಮಾಧ್ಯಮದ ಕ್ಯಾಮೆರಾ​​​ ನೋಡುತ್ತಿದ್ದಂತೆ ಮುಖ ಮುಚ್ಚಿಕೊಂಡ ಯುವತಿ