Nandini Milk Price Hike: ಮತ್ತೆ ನಂದಿನಿ ಹಾಲಿನ ದರ ಏರಿಕೆ ಸಾಧ್ಯತೆ: 5 ರೂ. ಹೆಚ್ಚಿಸುವಂತೆ ರೈತರಿಂದ ಮನವಿ
ಕರ್ನಾಟಕ ಹಾಲು ಒಕ್ಕೂಟ (ಕೆಎಂಎಫ್) ನಂದಿನಿ ಹಾಲಿನ ದರ ಮತ್ತೆ ಏರಿಕೆಯಾಗುವ ಸಾಧ್ಯತೆ ಇದೆ. ರೈತರು ಹಾಗೂ ಹಾಲು ಉತ್ಪಾದಕರು ಲೀಟರ್‌ಗೆ 5 ರೂಪಾಯಿ ಏರಿಕೆಗೆ ಒತ್ತಾಯಿಸಿದ್ದಾರೆ. ಕೆಎಂಎಫ್ ಅಧ್ಯಕ್ಷರು ಚಳಿಗಾಲದ ಅಧಿವೇಶನದ ನಂತರ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುವುದಾಗಿ ತಿಳಿಸಿದ್ದಾರೆ.
ಬೆಂಗಳೂರು, ಡಿಸೆಂಬರ್ 07: ದರ ಏರಿಕೆಯಿಂದ ಕಂಗೆಟ್ಟಿರುವ ಜನರಿಗೆ ಕರ್ನಾಟಕ ಸರ್ಕಾರ (Karnataka Government) ಮತ್ತೊಂದು ಶಾಕ್ ನೀಡುವ ಸಾಧ್ಯತೆ ಇದೆ. ಹೌದು, ಕರ್ನಾಟಕ ಹಾಲು ಒಕ್ಕೂಟ (KMF) ನಂದಿನಿ ಹಾಲಿನ (Nandini Milk) ದರ ಮತ್ತೆ ಏರಿಯಾಗುವ ಸಾಧ್ಯತೆ ಇದೆ. ಈ ಹಿಂದೆ ಪ್ರತಿ ಲೀಟರ್ನಲ್ಲಿ ಹೆಚ್ಚುವರಿಯಾಗಿ 50 ಎಂಎಲ್ ನೀಡಿ 2 ರೂಪಾಯಿ ಏರಿಕೆ ಮಾಡಿತ್ತು. ಇದೀಗ, ಮತ್ತೆ ಕೆಎಂಎಫ್ ಹಾಲಿನ ದರ ಏರಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಇದಕ್ಕೆ ಪುಷ್ಠಿ ನೀಡುವಂತೆ ರೈತರು ಹಾಗೂ ಹಾಲು ಒಕ್ಕೂಟಗಳು ಪ್ರತಿ ಲೀಟರ್ ನಂದಿನಿ ಹಾಲಿನ ದರ 5 ರೂಪಾಯಿ ಏರಿಕೆ ಮಾಡುವಂತೆ ಕೆಎಂಎಫ್ಗೆ ಮನವಿ ಮಾಡಿವೆ. ಈ ಬಗ್ಗೆ ಚಳಿಗಾಲದ ಅಧಿವೇಶನದ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ತಿಳಿಸಿದ್ದಾರೆ.
“ಆದರೆ, ಕೆಲ ದಿನಗಳ ಹಿಂದೆ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯಿಸಿದ್ದ ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ಹಾಲಿನ ದರ ಏರಿಕೆಯ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಹೇಳಿದ್ದರು”. ಆದರೆ, ಇದೀಗ ಭೀಮಾ ನಾಯ್ಕ್ ಅವರ ಈ ಹೇಳಿಕೆ ಹಲವು ಪ್ರಶ್ನೆಗಳನ್ನು ಹುಟ್ಟು ಹಾಕಿದೆ.
ಇದನ್ನೂ ಓದಿ: ಫೆಂಗಲ್ ಎಫೆಕ್ಟ್: 2-3 ದಿನಗಳಲ್ಲಿ ಕೆಎಂಎಫ್ ಹಾಲು ಉತ್ಪಾದನೆಯಲ್ಲಿ ಗಣನೀಯ ಇಳಿಕೆ
ಈ ಹಿಂದೆ ಎಷ್ಟು ಏರಿಕೆ?
ಕೆಎಂಎಫ್ ಈ ಹಿಂದೆ ಪ್ರತಿ ಲೀಟರ್ನಲ್ಲಿ ಹೆಚ್ಚುವರಿಯಾಗಿ 50 ಎಂಎಲ್ ನೀಡಿ 2 ರೂಪಾಯಿ ಏರಿಕೆ ಮಾಡಿತ್ತು. ಇದರಿಂದ ಅರ್ಧ ಲೀಟರ್ ಹಾಲಿನ ಪ್ಯಾಕೆಟ್ ದರ 22ರಿಂದ 24 ರೂ.ಗೆ ಏರಿಕೆಯಾಗಿತ್ತು. ಒಂದು ಲೀಟರ್ ಹಾಲಿನ ದರ ಏರಿಕೆ 42 ರಿಂದ 44 ರೂ.ಗೆ ಏರಿಕೆಯಾಗಿತ್ತು. ಮೊಸರು, ಇನ್ನಿತರ ಯಾವುದೇ ಹಾಲಿನ ಉತ್ಪನ್ನದ ದರ ಏರಿಕೆ ಮಾಡಿರಲಿಲ್ಲ.
ಖರೀದಿ ದರ ಇಳಿಕೆ ಮಾಡಿದ್ದ ಕಾಂಗ್ರೆಸ್ ಸರ್ಕಾರ
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಎರಡು ಬಾರಿ ಹಾಲಿನ ದರ ಏರಿಕೆ ಮಾಡಿ, ಎರಡು ಬಾರಿ ರೈತರಿಂದ ಹಾಲಿನ ಖರೀದಿ ದರವನ್ನು ಇಳಿಕೆ ಮಾಡಿತ್ತು. ಹಾಲಿನ ಖರೀದಿ ದರ ಇಳಿಕೆ ಮಾಡುವ ಮೊದಲು ರೈತರಿಗೆ ಲೀಟರ್ ಹಾಲಿಗೆ 34 ರೂಪಾಯಿ ಸಿಗುತ್ತಿತ್ತು. ಆದರೆ ಹಾಲು ಖರೀದಿ ದರ ಎರಡು ಬಾರಿ ಇಳಿಕೆ ಮಾಡಿದ ನಂತರ ಈಗ ಲೀಟರ್ ಹಾಲಿಗೆ ರೈತರಿಗೆ ಸಿಗುತ್ತಿರುವುದು ಕೇವಲ 30 ರೂಪಾಯಿ 15 ಪೈಸೆ ಮಾತ್ರ.
ಆದರೆ, ಹಾಲು ದರ ಏರಿಕೆ ಮಾಡಿ ಸರ್ಕಾರ ಗ್ರಾಹಕರಿಗೆ ಮಾರಾಟ ಮಾಡುತ್ತಿರುವುದು ಮಾತ್ರ 60 ರೂಪಾಯಿಗೆ! ಈಗ ಹಾಲಿನ ದರ 5 ರೂಪಾಯಿ ಏರಿಕೆ ಮಾಡಿ ಏರಿಕೆ ಮಾಡಿದ ದರವನ್ನು ನೇರವಾಗಿ ರೈತರಿಗೆ ಕೊಟ್ಟರೂ ರೈತರಿಗೆ ಲೀಟರ್ ಹಾಲಿಗೆ ಸಿಗುವುದು ಕೇವಲ 35 ರೂಪಾಯಿ.ಆದರೆ, ಗ್ರಾಹಕರಿಗೆ ಮಾರಾಟ ಮಾಡುವುದು 65 ರೂ.ಗೆ. ಹಾಗಾಗಿ ಸರ್ಕಾರ ಒಂದು ಲೀಟರ್ ಹಾಲಿನ ಮೇಲೆ 30 ರೂ. ಲಾಭ ಪಡೆಯುತ್ತಿದೆ ಎಂಬುದು ಹಾಲು ಉತ್ಪಾದಕರ ಮಾತಾಗಿತ್ತು.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 1:57 pm, Sat, 7 December 24