KMF Nandini Products: ಇಂದಿನಿಂದ ದೆಹಲಿಯಲ್ಲೂ ನಂದಿನಿ ಉತ್ಪನ್ನಗಳ ಮಾರಾಟ, ಸಿಎಂ ಸಿದ್ದರಾಮಯ್ಯ ಚಾಲನೆ

KMF Nandini Products in Delhi: ಕೊನೆಗೂ ಕರ್ನಾಟಕದ ಕೆಎಂಎಫ್​​ ಸಂಸ್ಥೆಯ ನಂದಿನಿ ಬ್ರ್ಯಾಂಡ್​​ ಉತ್ಪನ್ನಗಳ ಅಧಿಕೃತ ಮಾರಾಟ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಆರಂಭಗೊಂಡಿದೆ. ನಂದಿನಿ ಉತ್ಪನ್ನಗಳನ್ನು ಬಿಡುಗಡೆ ಮಾಡುವ ಮೂಲಕ ಸಿಎಂ ಸಿದ್ದರಾಮಯ್ಯ, ದೆಹಲಿಯಲ್ಲಿ ಕೆಎಂಎಫ್​​​ ಉತ್ಪನ್ನಗಳ ಮಾರಾಟಕ್ಕೆ ಚಾಲನೆ ನೀಡಿದರು.

KMF Nandini Products: ಇಂದಿನಿಂದ ದೆಹಲಿಯಲ್ಲೂ ನಂದಿನಿ ಉತ್ಪನ್ನಗಳ ಮಾರಾಟ, ಸಿಎಂ ಸಿದ್ದರಾಮಯ್ಯ ಚಾಲನೆ
ಸಿಎಂ ಸಿದ್ದರಾಮಯ್ಯ
Edited By:

Updated on: Nov 21, 2024 | 2:24 PM

ನವದೆಹಲಿ, ನವೆಂಬರ್ 21: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಕರ್ನಾಟಕ ಹಾಲು ಒಕ್ಕೂಟದ (KMF) ನಂದಿನಿ ಬ್ರ್ಯಾಂಡ್ ಉತ್ಪನ್ನಗಳ ಅಧಿಕೃತ ಮಾರಾಟಕ್ಕೆ ಸಿಎಂ ಸಿದ್ದರಾಮಯ್ಯ ಗುರುವಾರ ಚಾಲನೆ ನೀಡಿದರು. ಇದರೊಂದಿಗೆ, ದೇಶದ ರಾಜಧಾನಿಯಲ್ಲೂ ನಂದಿನಿ ಉತ್ಪನ್ನಗಳ ಹವಾ ಆರಂಭವಾಗಲಿದೆ. ಈ ಮೂಲಕ ಅಮುಲ್‌ ಮತ್ತು ಮದರ್‌ ಡೇರಿಯಂತಹ ಪ್ರಮುಖ ಬ್ರ್ಯಾಂಡ್​ಗಳ ಜತೆ ಕರ್ನಾಟಕದ ನಂದಿನಿ ಕೂಡ ಪೈಪೋಟಿ ಒಡ್ಡಲಿದೆ.

ದೆಹಲಿಯ ಅಶೋಕ ಹೊಟೇಲ್​​ನಲ್ಲಿ ನಂದಿನಿ ಬ್ರ್ಯಾಂಡ್ ಉತ್ಪನ್ನಗಳ ಬಿಡುಗಡೆ ಮಾಡುವ ಮೂಲಕ ಅಧಿಕೃತ ಮಾರಾಟಕ್ಕೆ ಚಾಲನೆ ನೀಡಲಾಯಿತು. ಇದಕ್ಕೂ ಮುನ್ನ ದೆಹಲಿಯ ಅಶೋಕ್ ಹೊಟೇಲ್​ಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯಗೆ ಕನ್ನಡಿಗರಿಂದ ಪೂರ್ಣಕುಂಭ ಸ್ವಾಗತ ದೊರೆಯಿತು.
Nandini Procucts Launch in Delhi: ನವದೆಹಲಿಯಲ್ಲಿ ನಂದಿನ ಉತ್ಪನ್ನಗಳನ್ನ ಬಿಡುಗಡೆ ಮಾಡಿದ ಸಿದ್ದರಾಮಯ್ಯ| #TV9D
ಸಚಿವರಾದ ಭೈರತಿ ಸುರೇಶ್, ವೆಂಕಟೇಶ್, ಚಲುವರಾಯಸ್ವಾಮಿ ಕಾರ್ಯಕ್ರಮದಲ್ಲಿ ಭಾಗಿಯಾಗಿ ಸಿಎಂಗೆ ಸಾಥ್ ನೀಡಿದರು.

3-4 ಲಕ್ಷ ಲೀಟರ್ ಹಾಲು ಮಾರಾಟ ಗುರಿ

ದೆಹಲಿಯಲ್ಲಿ 3 ರಿಂದ 4 ಲಕ್ಷ ಲೀಟರ್ ಹಾಲನ್ನು ಮಾರಾಟ ಮಾಡಬೇಕು ಎಂಬ ಗುರಿ ಹಾಕಿಕೊಂಡಿದ್ದೇವೆ. ಇನ್ನು ಮುಂದೆ ದೆಹಲಿಯಲ್ಲಿ ಶೇ 100 ರಷ್ಟು ಪರಿಶುದ್ಧ ಹಾಲು ಸಿಗಲಿದೆ. ಶುದ್ಧ ಹಸುವಿನ ಹಾಲನ್ನು ದೆಹಲಿ ಜನರಿಗೆ ನೀಡುತ್ತೇವೆ ಎಂದು ಕೆಎಂಎಫ್ ಅಧ್ಯಕ್ಷ ಭೀಮಾನಾಯಕ್ ಹೇಳಿದರು.

ವಿಶ್ವಮಟ್ಟದಲ್ಲಿ ನಂದಿನಿ ಹವಾ

ಕೆಲವು ತಿಂಗಳ ಹಿಂದೆ ಅಮೆರಿಕ ಹಾಗೂ ವೆಸ್ಟ್ ಇಂಡೀಸ್​​ನಲ್ಲಿ ನಡೆದಿದ್ದ ಟಿ20 ವಿಶ್ವಕಪ್ ವೇಳೆ ಸ್ಕಾಟ್ಲೆಂಡ್ ಮತ್ತು ಐರ್ಲೆಂಡ್ ತಂಡಗಳ ಪ್ರಾಯೋಜಕತ್ವವನ್ನು ಕೆಎಂಎಫ್​ ವಹಿಸಿತ್ತು. ಸ್ಕಾಟ್ಲೆಂಡ್ ಮತ್ತು ಐರ್ಲೆಂಡ್ ತಂಡಗಳ ಜೆರ್ಸಿ ಮೇಲೆ ಪ್ರಾಯೋಜಕರಾಗಿ ‘ನಂದಿನಿ’ ಬ್ರ್ಯಾಂಡ್ ಹೆಸರು ನಮೂದಿಸಲಾಗಿತ್ತು. ಅಷ್ಟೇ ಅಲ್ಲದೆ, ವಿಶ್ವಕಪ್ ವೇಳೆ ನಂದಿನಿ ಉತ್ಪನ್ನಗಳನ್ನೂ ಪೂರೈಸಲಾಗಿತ್ತು. ಆ ಮೂಲಕ ವಿಶ್ವಮಟ್ಟದಲ್ಲಿ ನಂದಿನಿ ಬ್ರ್ಯಾಂಡ್ ಉತ್ಪನ್ನಗಳು ಗಮನ ಸೆಳೆದಿದ್ದವು.

ವಿಶ್ವಕಪ್ ವೇಳೆ ನಂದಿನಿ ಬ್ರ್ಯಾಂಡ್​ನ ಫ್ರೋಝನ್ ಸಿಹಿತಿಂಡಿಗಳು, ಹಾಲಿನಿಂದ ಕೂಡಿದ ಎನರ್ಜಿ ಡ್ರಿಂಕ್ ನಂದಿನಿ ಸ್ಪ್ಲಾಶ್​ ಅನ್ನು ಕೆಎಂಎಫ್​​ ಅಮೆರಿಕಕ್ಕೆ ಪೂರೈಕೆ ಮಾಡಿತ್ತು.

ಇದನ್ನೂ ಓದಿ: ಅಮುಲ್‌, ಮದರ್‌ ಡೈರಿಗೆ ಪೈಪೋಟಿ ನೀಡಲು ದೆಹಲಿ ಮಾರುಕಟ್ಟೆಗೂ ಲಗ್ಗೆಯಿಡಲಿದೆ ಕರ್ನಾಟಕದ ಹೆಮ್ಮೆಯ ನಂದಿನಿ ಉತ್ಪನ್ನ

ಕರ್ನಾಟಕ ಹಾಲು ಒಕ್ಕೂಟ ಕೆಎಂಎಫ್​ ಈಗ 50 ವರ್ಷದ ಮೈಲಿಗಲ್ಲು ಸಾಧಿಸಿದ್ದು, ಈ ಸಂದರ್ಭದಲ್ಲೇ ಸಂಸ್ಥೆಯ ಉತ್ಪನ್ನಗಳು ದೇಶ ವಿದೇಶಗಳಲ್ಲಿ ಸದ್ದು ಮಾಡುತ್ತಿವೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿಯೂ ಉತ್ಪನ್ನಗಳ ಅಧಿಕೃತ ಮಾರಾಟ ಆರಂಭವಾಗಿದೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:23 pm, Thu, 21 November 24

ಹರೀಶ್ ಜಿ.ಆರ್​.

ಹರೀಶ್ ಜಿ.ಆರ್ ಮೂಲತಃ ಚಿಕ್ಕಮಗಳೂರಿನವರಾಗಿದ್ದು, ಪೌಢ ಶಿಕ್ಷಣವನ್ನು ಉಜಿರೆಯ ಎಸ್ ಡಿಎಂ ಸಂಸ್ಥೆಯಲ್ಲಿ ಹಾಗೂ ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ದಲ್ಲಿ ಬಿ.ಎ ಪದವಿಯನ್ನು, ಮಾನಸ ಗಂಗೋತ್ರಿಯ EMMRC ಸಂಸ್ಥೆಯ ಎಲೆಕ್ಟ್ರಾನಿಕ್ ಮೀಡಿಯಾ ವಿಷಯದಲ್ಲಿ ಎಂಎಸ್ಸಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಸಧ್ಯ ಪತ್ರಿಕೋದ್ಯಮದಲ್ಲಿ 14 ವರ್ಷದ ಅನುಭವ ಹೊಂದಿರುವ ಇವರು, ದೆಹಲಿಯಲ್ಲಿಯೇ 10 ವರ್ಷಗಳ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದಾರೆ. ರಾಜ್ಯ, ರಾಜಕೀಯ, ರಾಷ್ಟ್ರೀಯ, ಅಂತರರಾಷ್ಟ್ರೀಯ, ಸುಪ್ರೀಂಕೋರ್ಟ್ ವರದಿಗಾರಿಕೆಯಲ್ಲಿ ಅಪಾರ ಅನುಭವ ಹೊಂದಿದ್ದಾರೆ. ಅಯೋಧ್ಯೆ ರಾಮಮಂದಿರದ ತೀರ್ಪು ನಿಂದ ಹಿಡಿದು ಮಂದಿರ ಉದ್ಘಾಟನೆವರೆಗೂ ವರದಿ ಮಾಡಿದ ಅನುಭವ ಹೊಂದಿದ್ದಾರೆ. ಪುಲ್ವಾಮ ಉಗ್ರರ ದಾಳಿ, ಪಹಲ್ಗಾಂ ಉಗ್ರರ ದಾಳಿ, ಆದಾದ ನಂತರದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಗಳನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಗ್ರೌಂಡ್ ರಿಪೋರ್ಟ್ ಮಾಡಿರುವ ಅನುಭವ ಹೊಂದಿದ್ದಾರೆ.. ಉತ್ತರಖಂಡದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪಗಳನ್ನು ಗ್ರೌಂಡ್ ರಿಪೋರ್ಟ್ ಮಾಡಿದ್ದಾರೆ. 2019‌ ಹಾಗೂ 2024ರ ಲೋಕಸಭಾ ಚುನಾವಣೆಯಲ್ಲಿ ವಿವಿಧ ರಾಜ್ಯಗಳನ್ನು ಸುತ್ತಿ ಜನರ ರಾಜಕೀಯ ನಾಡಿಮಿಡಿತದ ವರದಿ ಮಾಡಿದ್ದಾರೆ.. ಸಧ್ಯ ಇವರು ಬೆಂಗಳೂರಿನಲ್ಲಿ ರಾಜಕೀಯ ವರದಿಗಾರರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.

Read More
Loading...
Unable to load recommendations.
Follow Us