ಬೆಂಗಳೂರು, ಆಗಸ್ಟ್ 3: ತಿರುಪತಿ ತಿರುಮಲ ಲಡ್ಡು ಪ್ರಸಾದಕ್ಕೆ ನಂದಿನಿ ತುಪ್ಪ (Nandini Ghee) ಪೂರೈಕೆ ಮಾಡುವುದಿಲ್ಲ ಎಂಬ ವಿಚಾರದ ಬೆನ್ನಲ್ಲೇ, ಟಿಟಿಡಿಗೆ (TTD) ಪತ್ರ ಬರೆದ ಕೆಎಂಎಫ್ (KMF), ನಾವು ನಿಮಗೆ ತುಪ್ಪ ಪೂರೈಕೆ ಮಾಡಲು ತುಂಬಾ ಉತ್ಸುಕರಾಗಿದ್ದೇವೆ. ಆದರೆ ನಮ್ಮ ಜೊತೆ ಸಭೆ ನಡೆಸಿ ದರದ ಬಗ್ಗೆ ಚರ್ಚಿಸುವಂತೆ ಸಲಹೆ ನೀಡಿಡಿದೆ.
ಟಿಟಿಡಿಯ ಕಾರ್ಯನಿರ್ವಾಹಕ ಅಧಿಕಾರಿಗೆ ಬರೆದ ಪತ್ರದಲ್ಲಿ, “ನಾವು ಪ್ರತಿ ವರ್ಷ 30 ಸಾವಿರ ಮೆಟ್ರಿಕ್ ಟನ್ ತುಪ್ಪ ಉತ್ಪಾದನೆ ಮಾಡುತ್ತೇವೆ. ನಾವು ನಿಮಗೆ ತುಪ್ಪ ಪೂರೈಕೆ ಮಾಡಲು ತುಂಬಾ ಉತ್ಸುಕರಾಗಿದ್ದೇವೆ. ಒಂದು ಸಭೆಯನ್ನು ನಮ್ಮ ಜೊತೆ ಆಯೋಜನೆ ಮಾಡಿ ದರದ ಬಗ್ಗೆ ಚರ್ಚೆ ಮಾಡೋಣ” ಎಂದು ಹೇಳಲಾಗಿದೆ.
ಇದನ್ನೂ ಓದಿ: Nandini Milk: ಟಾಪ್ 10 ಬ್ರ್ಯಾಂಡ್ ರ‍್ಯಾಂಕಿಂಗ್‌ನಲ್ಲಿ ಮೇಲಕ್ಕೇರಿದ ನಮ್ಮ ಕರ್ನಾಟಕದ ಹೆಮ್ಮೆಯ ನಂದಿನಿ
ನಮ್ಮದು ಸಹಕಾರ ಸಂಸ್ಥೆ ಯಾಗಿದ್ದು, ಟೆಂಡರ್ನಲ್ಲಿ ಭಾಗಿಯಾಗಿಲ್ಲ. ತುಂಬಾ ಗುಣಮಟ್ಟದ ತುಪ್ಪವನ್ನು ನಂದಿನಿ ಗ್ರಾಹಕರಿಗೆ ತಲುಪಿಸುತ್ತಾ ಬಂದಿದೆ. ಹೀಗಾಗಿ ಟಿಟಿಡಿಗೂ ಕೂಡ ತುಪ್ಪ ನೀಡಲು ನಾವು ಖುಷಿಯಿಂದ ಕಾತರರಾಗಿದ್ದೇವೆ. ಒಂದು ಸಭೆಯನ್ನು ಆಯೋಜನೆ ಮಾಡಿ ದರದ ಬಗ್ಗೆ ಚರ್ಚಿಸೋಣ ಎಂದು ಹೇಳಿದೆ.
ಇಷ್ಟು ದಿನ ತಿರುಪತಿ ಲಡ್ಡು ತಯಾರಿಕೆಗಾಗಿ ಸರಬರಾಜು ಆಗುತ್ತಿದ್ದ ತುಪ್ಪವನ್ನು ಇನ್ನುಮುಂದೆ ಕಳುಹಿಸಿಕೊಡಲಾಗುವುದಿಲ್ಲ ಎಂದು ಕೆಎಂಎಫ್ ಅಧ್ಯಕ್ಷ ಭೀಮಾ ನಾಯಕ್ ಹೇಳಿದ್ದರು. ಇಷ್ಟು ದೇವಸ್ಥಾನಕ್ಕೆಂದು ರಿಯಾಯಿತಿ ದರದಲ್ಲಿ ತುಪ್ಪ ಪೂರೈಕೆ ಮಾಡಲಾಗುತ್ತಿತ್ತು. ತಿರುಪತಿಗೆ 6 ತಿಂಗಳಿಗೆ 14 ಲಕ್ಷ ಕೆಜಿಯಷ್ಟು ತುಪ್ಪ ನೀಡಬೇಕು. ಆದರೆ ಈ ಬಾರಿ ರಿಯಾಯಿತಿ ದರದಲ್ಲಿ ನಂದಿನಿ ತುಪ್ಪ ನೀಡುವ ಟೆಂಡರ್ ಕೈಬಿಟ್ಟಿದ್ದು, ಕಡಿಮೆ ಬೆಲೆಗೆ ತುಪ್ಪ ಪೂರೈಕೆ ಮಾಡಲು ಸಾಧ್ಯವಿಲ್ಲ ಎಂದು ಕೆಎಂಎಫ್ ಹೇಳಿತ್ತು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 3:48 pm, Thu, 3 August 23