Karnataka Dam Water Level: ಸೆ.07ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ

ಕರ್ನಾಟಕದ ಜಲಾಶಯಗಳ ಸೆಪ್ಟೆಂಬರ್​​​ 07ರ ನೀರಿನ ಮಟ್ಟ: ಕೆಆರ್​ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಪಾ ಸೇರಿದಂತೆ ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಮತ್ತು ಒಳ ಹರಿವು ಎಷ್ಟಿದೆ? ಯಾವ ಡ್ಯಾಂ ನಲ್ಲಿ ಎಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

Karnataka Dam Water Level: ಸೆ.07ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ
ಕಾರಂಜಾ ಡ್ಯಾಂ
Follow us
ಆಯೇಷಾ ಬಾನು
|

Updated on:Sep 07, 2023 | 7:46 AM

ಕರ್ನಾಟಕದಲ್ಲಿ ವಾಡಿಕೆಯಷ್ಟು ಮಳೆಯಾಗಿಲ್ಲ. ಮುಂಗಾರು ಮಳೆ(Monsoon) ಕೈಗೊಟ್ಟಿದೆ. ಆದರೆ ಕೆಲ ಜಿಲ್ಲೆಗಳಲ್ಲಿ ಸೆಪ್ಟೆಂಬರ್​ ಆರಂಭದಲ್ಲೇ ಮಳೆ ಶುರುವಾಗಿದೆ. ಇದರಿಂದ ಕೆಲವು ಪ್ರಮುಖ ಡ್ಯಾಂಗಳ ನೀರಿನ ಮಟ್ಟ ಏರಿಕೆಯಾಗಿದ್ದು ಮತ್ತೆ ಕೆಲವು ಡ್ಯಾಂಗಳ ನೀರಿನ ಮಟ್ಟ ಕುಸಿದಿದೆ. ಬೀದರ್​ನಲ್ಲಿ ಉತ್ತಮ ಮಳೆಯಾಗುತ್ತಿದ್ದು ಜಿಲ್ಲೆಯ ಭಾಲ್ಕಿ ತಾಲೂಕಿನ ಹಾಲಹಳ್ಳಿ ಬಳಿ ಇರುವ ಕಾರಂಜಾ ಡ್ಯಾಂ(Karanja Dam) ಬರ್ತಿಯಾಗಿದೆ. ಡ್ಯಾಂಗೆ ಒಳಹರಿವು ಜಾಸ್ತಿಯಾಗಿದ್ದು ಡ್ಯಾಂ ನ 6 ಗೇಟ್ ಗಳ ಪೈಕಿ 3 ಕ್ರಸ್ಟ್ ಗೇಟ್ ಗಳ ಮೂಲಕ 7954 ಕ್ಯೂಸೆಕ್ ನೀರನ್ನ ಹರಿಬಿಡಲಾಗುತ್ತಿದೆ. ಇನ್ನು ಮತ್ತೊಂದೆಡೆ ಕಳೆದ ಆರು ತಿಂಗಳನಿಂದ ಭದ್ರಾ ಡ್ಯಾಂ ನೀರು ಎಡ ಮತ್ತು ಬಲ ದಂಡೆ ಕಾಲುವೆಗಳಿಗೆ ನೀರು ಹರಿಸದಂತೆ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಮಲೆನಾಡಿನಲ್ಲಿ ಮುಂಗಾರು ಕೈಕೊಟ್ಟಿದೆ. ಈ ಹಿನ್ನಲೆಯಲ್ಲಿ ಡ್ಯಾಂ ಕಾಲುವೆಗೆ ನೀರು ಬಿಟ್ಟರೆ ಶಿವಮೊಗ್ಗ ಜಿಲ್ಲೆಯ ರೈತರು ಬೀದಿಗೆ ಬರುತ್ತಾರೆ. ನಾಲೆಗಳಿಗೆ ನೀರು ಬೀಡದಂತೆ ರೈತರು ಹೋರಾಟ ನಡೆಸುತ್ತಿದ್ದಾರೆ. ಸೆಪ್ಟೆಂಬರ್​​​ 07 ರಂದು ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಪ್ರಮಾಣ (Karnataka Dam Water Level) ಎಷ್ಟಿದೆ? ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟು ಇದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್​​) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.6 123.08 118.56 123.08 784 12908
ತುಂಗಭದ್ರಾ ಜಲಾಶಯ (Tungabhadra Dam) 497.71 105.79 72.76 104.34 1191 6613
ಮಲಪ್ರಭಾ ಜಲಾಶಯ (Malaprabha Dam) 633.80 37.73 21.68 37.73 0 760
ಕೆ.ಆರ್.ಎಸ್ (KRS Dam) 38.04 49.45 21.73 49.37 2432 6344
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 67.91 137.50 2415 4545
ಕಬಿನಿ ಜಲಾಶಯ (Kabini Dam) 696.13 19.52 13.55 19.28 788 500
ಭದ್ರಾ ಜಲಾಶಯ (Bhadra Dam) 657.73 71.54 45.52 70.49 434 3316
ಘಟಪ್ರಭಾ ಜಲಾಶಯ (Ghataprabha Dam) 662.91 51.00 41.53 51.00 445 167
ಹೇಮಾವತಿ ಜಲಾಶಯ (Hemavathi Dam) 890.58 37.10 22.21 37.10 700 5900
ವರಾಹಿ ಜಲಾಶಯ (Varahi Dam) 594.36 31.10 9.13 21.54 1164 369
ಹಾರಂಗಿ ಜಲಾಶಯ (Harangi Dam)​​ 871.38 8.50 7.17 7.68 1291 550
ಸೂಫಾ (Supa Dam) 564.00 145.33 77.06 94.55 1461 1118

ಇನ್ನು ತಮಿಳುನಾಡಿಗೆ KRS ಡ್ಯಾಂನಿಂದ ಕಾವೇರಿ ನೀರು ಹರಿಸಲಾಗುತ್ತಿದ್ದು ರೈತರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಕಳೆದ 8 ದಿನಗಳಿಂದ ಪ್ರತಿಭಟನೆ ನಡೆಸಲಾಗುತ್ತಿತ್ತು. ಸದ್ಯ ನಿನ್ನೆ ಅಹೋರಾತ್ರಿ ಧರಣಿ ತಾತ್ಕಾಲಿಕ ವಾಪಸ್ ಪಡೆಯಲಾಗಿದ್ದು ಇಂದು ರೈತ ಮುಖಂಡರು ಸಿಎಂ ಸಿದ್ದರಾಮಯ್ಯ ಭೇಟಿ ಮಾಡಲು ಮುಂದಾಗಿದ್ದಾರೆ. ವಾಸ್ತವ ಪರಿಸ್ಥಿತಿಯನ್ನ ಸಿಎಂಗೆ ಮನವರಿಕೆ ಮಾಡಿಕೊಡಲು ನಿರ್ಧಾರ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:39 am, Thu, 7 September 23

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ