ಕರ್ನಾಟಕದಲ್ಲಿ ವಾಡಿಕೆಯಷ್ಟು ಮಳೆಯಾಗಿಲ್ಲ. ಮುಂಗಾರು ಮಳೆ(Monsoon) ಕೈಗೊಟ್ಟಿದೆ. ಆದರೆ ಕೆಲ ಜಿಲ್ಲೆಗಳಲ್ಲಿ ಸೆಪ್ಟೆಂಬರ್ ಆರಂಭದಲ್ಲೇ ಮಳೆ ಶುರುವಾಗಿದೆ. ಇದರಿಂದ ಕೆಲವು ಪ್ರಮುಖ ಡ್ಯಾಂಗಳ ನೀರಿನ ಮಟ್ಟ ಏರಿಕೆಯಾಗಿದ್ದು ಮತ್ತೆ ಕೆಲವು ಡ್ಯಾಂಗಳ ನೀರಿನ ಮಟ್ಟ ಕುಸಿದಿದೆ. ಬೀದರ್ನಲ್ಲಿ ಉತ್ತಮ ಮಳೆಯಾಗುತ್ತಿದ್ದು ಜಿಲ್ಲೆಯ ಭಾಲ್ಕಿ ತಾಲೂಕಿನ ಹಾಲಹಳ್ಳಿ ಬಳಿ ಇರುವ ಕಾರಂಜಾ ಡ್ಯಾಂ(Karanja Dam) ಬರ್ತಿಯಾಗಿದೆ. ಡ್ಯಾಂಗೆ ಒಳಹರಿವು ಜಾಸ್ತಿಯಾಗಿದ್ದು ಡ್ಯಾಂ ನ 6 ಗೇಟ್ ಗಳ ಪೈಕಿ 3 ಕ್ರಸ್ಟ್ ಗೇಟ್ ಗಳ ಮೂಲಕ 7954 ಕ್ಯೂಸೆಕ್ ನೀರನ್ನ ಹರಿಬಿಡಲಾಗುತ್ತಿದೆ. ಇನ್ನು ಮತ್ತೊಂದೆಡೆ ಕಳೆದ ಆರು ತಿಂಗಳನಿಂದ ಭದ್ರಾ ಡ್ಯಾಂ ನೀರು ಎಡ ಮತ್ತು ಬಲ ದಂಡೆ ಕಾಲುವೆಗಳಿಗೆ ನೀರು ಹರಿಸದಂತೆ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಮಲೆನಾಡಿನಲ್ಲಿ ಮುಂಗಾರು ಕೈಕೊಟ್ಟಿದೆ. ಈ ಹಿನ್ನಲೆಯಲ್ಲಿ ಡ್ಯಾಂ ಕಾಲುವೆಗೆ ನೀರು ಬಿಟ್ಟರೆ ಶಿವಮೊಗ್ಗ ಜಿಲ್ಲೆಯ ರೈತರು ಬೀದಿಗೆ ಬರುತ್ತಾರೆ. ನಾಲೆಗಳಿಗೆ ನೀರು ಬೀಡದಂತೆ ರೈತರು ಹೋರಾಟ ನಡೆಸುತ್ತಿದ್ದಾರೆ. ಸೆಪ್ಟೆಂಬರ್ 07 ರಂದು ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಪ್ರಮಾಣ (Karnataka Dam Water Level) ಎಷ್ಟಿದೆ? ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟು ಇದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.
ಜಲಾಶಯಗಳ ನೀರಿನ ಮಟ್ಟ | ||||||
ಕರ್ನಾಟಕದ ಪ್ರಮುಖ ಜಲಾಶಯಗಳು (Dam) | ಗರಿಷ್ಠ ನೀರಿನ ಮಟ್ಟ (ಮೀ) | ಒಟ್ಟು ಸಾಮರ್ಥ್ಯ (ಟಿಎಂಸಿ) | ಇಂದಿನ ನೀರಿನ ಮಟ್ಟ (ಟಿಎಂಸಿ) | ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) | ಒಳಹರಿವು (ಕ್ಯೂಸೆಕ್ಸ್) | ಹೊರಹರಿವು (ಕ್ಯೂಸೆಕ್ಸ್) |
ಆಲಮಟ್ಟಿ ಜಲಾಶಯ (Almatti Dam) | 519.6 | 123.08 | 118.56 | 123.08 | 784 | 12908 |
ತುಂಗಭದ್ರಾ ಜಲಾಶಯ (Tungabhadra Dam) | 497.71 | 105.79 | 72.76 | 104.34 | 1191 | 6613 |
ಮಲಪ್ರಭಾ ಜಲಾಶಯ (Malaprabha Dam) | 633.80 | 37.73 | 21.68 | 37.73 | 0 | 760 |
ಕೆ.ಆರ್.ಎಸ್ (KRS Dam) | 38.04 | 49.45 | 21.73 | 49.37 | 2432 | 6344 |
ಲಿಂಗನಮಕ್ಕಿ ಜಲಾಶಯ (Linganamakki Dam) | 554.44 | 151.75 | 67.91 | 137.50 | 2415 | 4545 |
ಕಬಿನಿ ಜಲಾಶಯ (Kabini Dam) | 696.13 | 19.52 | 13.55 | 19.28 | 788 | 500 |
ಭದ್ರಾ ಜಲಾಶಯ (Bhadra Dam) | 657.73 | 71.54 | 45.52 | 70.49 | 434 | 3316 |
ಘಟಪ್ರಭಾ ಜಲಾಶಯ (Ghataprabha Dam) | 662.91 | 51.00 | 41.53 | 51.00 | 445 | 167 |
ಹೇಮಾವತಿ ಜಲಾಶಯ (Hemavathi Dam) | 890.58 | 37.10 | 22.21 | 37.10 | 700 | 5900 |
ವರಾಹಿ ಜಲಾಶಯ (Varahi Dam) | 594.36 | 31.10 | 9.13 | 21.54 | 1164 | 369 |
ಹಾರಂಗಿ ಜಲಾಶಯ (Harangi Dam) | 871.38 | 8.50 | 7.17 | 7.68 | 1291 | 550 |
ಸೂಫಾ (Supa Dam) | 564.00 | 145.33 | 77.06 | 94.55 | 1461 | 1118 |
ಇನ್ನು ತಮಿಳುನಾಡಿಗೆ KRS ಡ್ಯಾಂನಿಂದ ಕಾವೇರಿ ನೀರು ಹರಿಸಲಾಗುತ್ತಿದ್ದು ರೈತರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಕಳೆದ 8 ದಿನಗಳಿಂದ ಪ್ರತಿಭಟನೆ ನಡೆಸಲಾಗುತ್ತಿತ್ತು. ಸದ್ಯ ನಿನ್ನೆ ಅಹೋರಾತ್ರಿ ಧರಣಿ ತಾತ್ಕಾಲಿಕ ವಾಪಸ್ ಪಡೆಯಲಾಗಿದ್ದು ಇಂದು ರೈತ ಮುಖಂಡರು ಸಿಎಂ ಸಿದ್ದರಾಮಯ್ಯ ಭೇಟಿ ಮಾಡಲು ಮುಂದಾಗಿದ್ದಾರೆ. ವಾಸ್ತವ ಪರಿಸ್ಥಿತಿಯನ್ನ ಸಿಎಂಗೆ ಮನವರಿಕೆ ಮಾಡಿಕೊಡಲು ನಿರ್ಧಾರ ಮಾಡಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:39 am, Thu, 7 September 23