Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಪ್ಪಳ: ರೆಮ್​ಡಿಸಿವಿರ್ ಕಾಳಸಂತೆಯಲ್ಲಿ ಮಾರಾಟ ಪ್ರಕರಣ; ಬೆಳಕಿಗೆ ಬಂದ 3 ಲಕ್ಷ ವ್ಯವಹಾರ

ರೆಮ್​ಡಿಸಿವಿರ್  ಮಾರಾಟ ವಿಚಾರಕ್ಕೆ ಸಂಬಂಧಿಸಿ ಐವರನ್ನು ಬಂಧಿಸಲಾಗಿದೆ. ರಾಧಾಕೃಷ್ಣ, ಅಭಿಷೇಕ್, ಮಣಿಕಂಠ, ಶಂಕರ್ ಮತ್ತು ಅಕ್ಷಯ್​ನ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳ ವಿಚಾರಣೆ ವೇಳೆ ಕೆ.ಎಸ್.ಆಸ್ಪತ್ರೆಯ ಪವನ್ ಕಿಂಗ್ಪಿನ್ ಬಗ್ಗೆ ಮಾಹಿತಿ ತಿಳಿದುಬಂದಿದೆ.

ಕೊಪ್ಪಳ: ರೆಮ್​ಡಿಸಿವಿರ್ ಕಾಳಸಂತೆಯಲ್ಲಿ ಮಾರಾಟ ಪ್ರಕರಣ; ಬೆಳಕಿಗೆ ಬಂದ 3 ಲಕ್ಷ ವ್ಯವಹಾರ
ರೆಮ್​ಡಿಸಿವಿರ್​​
Follow us
sandhya thejappa
|

Updated on: May 10, 2021 | 4:36 PM

ಕೊಪ್ಪಳ: ಜಿಲ್ಲೆಯಲ್ಲಿ ರೆಮ್​ಡಿಸಿವಿರ್ ಕಾಳಸಂತೆಯಲ್ಲಿ ಮಾರಾಟ ಪ್ರಕರಣಕ್ಕೆ ಸಂಬಂಧಿಸಿ ಮಾಹಿತಿಯೊಂದು ಬೆಳಕಿಗೆ ಬಂದಿದೆ. ಸುಮಾರು 3 ಲಕ್ಷ ವ್ಯವಹಾರ ನಡೆದಿರುವುದು ಟಿವಿ9ಗೆ ಕೊಪ್ಪಳ ಜಿಲ್ಲಾಡಳಿತ ಮೂಲಗಳಿಂದ ಮಾಹಿತಿ ತಿಳಿದುಬಂದಿದೆ. ಜಿಲ್ಲೆಯ ಗಂಗಾವತಿಯ ಎರಡು ಆಸ್ಪತ್ರೆ ಮೇಲೆ ಅಧಿಕಾರಿಗಳು ದಾಳಿ ಮಾಡಿದ್ದರು. ಗಂಗಾವತಿಯ ಸಿ.ಟಿ.ಆಸ್ಪತ್ರೆ ಮತ್ತು ಚಂದ್ರಪ್ಪ ಆಸ್ಪತ್ರೆ ಮೇಲೆ ಪೊಲೀಸರು ಮತ್ತು ಆರೋಗ್ಯ ಅಧಿಕಾರಿಗಳು ದಾಳಿ ಮಾಡಿದ್ದರು. ದಾಳಿ ವೇಳೆ ರೆಮ್​ಡಿಸಿವಿರ್ ಕಾಳ ಸಂತೆಯಲ್ಲಿ ಮಾರಾಟವಾಗುತ್ತಿದ್ದ ಮಾಹಿತಿ ಬಯಲಾಗಿತ್ತು.

ರೆಮ್​ಡಿಸಿವಿರ್  ಮಾರಾಟ ವಿಚಾರಕ್ಕೆ ಸಂಬಂಧಿಸಿ ಐವರನ್ನು ಬಂಧಿಸಲಾಗಿದೆ. ರಾಧಾಕೃಷ್ಣ, ಅಭಿಷೇಕ್, ಮಣಿಕಂಠ, ಶಂಕರ್ ಮತ್ತು ಅಕ್ಷಯ್​ನ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳ ವಿಚಾರಣೆ ವೇಳೆ ಕೆ.ಎಸ್.ಆಸ್ಪತ್ರೆಯ ಪವನ್ ಕಿಂಗ್ಪಿನ್ ಬಗ್ಗೆ ಮಾಹಿತಿ ತಿಳಿದುಬಂದಿದೆ. ಪವನ್ ಫೋನ್ ಪರಿಶೀಲನೆ ವೇಳೆ ಸುಮಾರು 3 ಲಕ್ಷ ರೂ. ಹಣದ ವ್ಯವಹಾರ ಬಯಲಾಗಿದೆ. ಆರು ಜನರ ನಡುವೆ ಫೋನ್ ಪೇ, ಗೂಗಲ್ ಪೇ ಮೂಲಕ ಮೂರು ಲಕ್ಷದ ವ್ಯವಹಾರ ನಡೆದಿರುವುದು ಜಿಲ್ಲಾಡಳಿತದ ಉನ್ನತ ಮೂಲಗಳಿಂದ ಮಾಹಿತಿ ತಿಳಿದುಬಂದಿದೆ.

ರೆಮ್​ಡಿಸಿವಿರ್​ ಅಕ್ರಮ ಮಾರಾಟ; ಆರೋಪಿಗಳು ಅರೆಸ್ಟ್ ಬೆಂಗಳೂರು: ರೆಮ್​ಡಿಸಿವಿರ್ ಅನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಅರೋಪಿಗಳನ್ನು ಬೆಂಗಳೂರಿನ ಹೆಣ್ಣೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಮಾಲ್ತೇಶ್, ಷಣ್ಮುಖಯ್ಯ ಸ್ವಾಮಿ ಬಂಧಿತ ಆರೋಪಿಗಳು. ಹೆಣ್ಣೂರು ಬಳಿ ಅಧಿಕ ಬೆಲೆಗೆ ಮಾರಾಟ ಮಾಡುವಾಗ ಆರೋಪಿಗಳು ಪೊಲೀಸರ ಬಲೆಗೆ ಬಿದ್ದಿದ್ದಾರೆ. ಸದ್ಯ ಈ ಪ್ರಕರಣ ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ಪೊಲೀಸರು ಅರೋಪಿಗಳಿಂದ ಹದಿನೇಳು ರೆಮ್​ಡಿಸಿವಿರ್ ಡೋಸ್​ನ ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ

ಕೊವಿಡ್ ನಿರ್ವಹಣೆ: ತಾಂತ್ರಿಕ ಸಮಸ್ಯೆಯಿಂದಾಗಿ ವಿಚಾರಣೆ ಮೇ 13ಕ್ಕೆ ಮುಂದೂಡಿದ ಸುಪ್ರೀಂಕೋರ್ಟ್

ರೆಮ್​ಡಿಸಿವಿರ್ ಕೊರತೆ ನೀಗಿಸಿಲ್ಲ ನಿಜ, ಇನ್ನು ಮುಂದೆ ನಿತ್ಯ 35 ಸಾವಿರ ರೆಮ್​ಡಿಸಿವಿರ್ ಒದಗಿಸುತ್ತೇವೆ: ಅಶ್ವತ್ಥ್ ನಾರಾಯಣ ಹೇಳಿಕೆ

(known from the district administration sources that there is a sale of Remdesivir in 3 lakhs business at koppal)

ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು