AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

3 ಸಾವಿರ ಕೋಟಿ ವೆಚ್ಚದ ಕೊಚ್ಚಿ-ಮಂಗಳೂರು ನೈಸರ್ಗಿಕ ಅನಿಲ ಪೈಪ್​ಲೈನ್​ ನಾಳೆ ಲೋಕಾರ್ಪಣೆ

ಕೈಗಾರಿಕಾ ಮತ್ತು ಜನಸಾಮಾನ್ಯರಿಗೆ ಅಗ್ಗದ ಮತ್ತು ಉತ್ತಮ ಇಂಧನವನ್ನು ಒದಗಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. 

3 ಸಾವಿರ ಕೋಟಿ ವೆಚ್ಚದ ಕೊಚ್ಚಿ-ಮಂಗಳೂರು ನೈಸರ್ಗಿಕ ಅನಿಲ ಪೈಪ್​ಲೈನ್​ ನಾಳೆ ಲೋಕಾರ್ಪಣೆ
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
| Edited By: |

Updated on: Jan 04, 2021 | 9:45 PM

Share

ಬೆಂಗಳೂರು: ಕೊಚ್ಚಿ-ಮಂಗಳೂರು ನಡುವಣ ನೈಸರ್ಗಿಕ ಅನಿಲ ಕೊಳವೆ ಮಾರ್ಗವನ್ನು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ವಿಡಿಯೋ ಕಾನ್ಫರೆನ್ಸ್​ ಮೂಲಕ ಉದ್ಘಾಟನೆ ಮಾಡಲಿದ್ದಾರೆ.

ನಾಳೆ ಬೆಳಿಗ್ಗೆ 11 ಗಂಟೆಗೆ ಪ್ರಧಾನಿ ಮೋದಿ ಅವರಿಂದ ಲೋಕಾರ್ಪಣೆ ಕಾರ್ಯಕ್ರಮ ನಡೆಯಲಿದೆ. ಒಂದು ರಾಷ್ಟ್ರ, ಒಂದು ಅನಿಲ ಗ್ರಿಡ್ ಸ್ಥಾಪನೆಗೆ ಈ ಯೋಜನೆ ಮೈಲಿಗಲ್ಲು ಎಂದು ಪ್ರಧಾನಿ ಕಾರ್ಯಾಲಯ ಅಭಿಪ್ರಾಯಪಟ್ಟಿದೆ. ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ, ಕೇರಳ ಸಿಎಂ ಪಿಣರಾಯಿ ವಿಜಯನ್​, ಎರಡೂ ರಾಜ್ಯಗಳ ರಾಜ್ಯಪಾಲರು, ಪೆಟ್ರೋಲಿಯಂ ಹಾಗೂ ನೈಸರ್ಗಿಕ ಅನಿಲ ಸಚಿವ ಧರ್ಮೇಂದ್ರ ಪ್ರಧಾನ್​ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಸಾಮರ್ಥ್ಯ ಎಷ್ಟು? 450 ಕಿ.ಮೀ ಉದ್ದದ ಪೈಪ್​ ಲೈನ್​ ಅನ್ನು ಗೈಲ್​ (ಇಂಡಿಯಾ) ನಿರ್ಮಾಣ ಮಾಡಿದೆ. ದಿನಕ್ಕೆ 12 ಮಿಲಿಯನ್ ಮೆಟ್ರಿಕ್ ಸ್ಟ್ಯಾಂಡರ್ಡ್ ಘನ ಮೀಟರ್ ತೈಲ ಕೊಂಡೊಯ್ಯುವ ಸಾಮರ್ಥ್ಯ ಇದಕ್ಕೆ ಇದೆ. ಕೊಚ್ಚಿಯಿಂದ ಮಂಗಳೂರಿಗೆ ಎಲ್​ಪಿಜಿಯನ್ನು ದ್ರವ ರೂಪದಲ್ಲಿ ಸಾಗಿಸಲಾಗುತ್ತದೆ. ಈ ಪೈಪ್​ಲೈನ್ ಎರ್ನಾಕುಲಂ, ತ್ರಿಶೂರ್, ಪಾಲಕ್ಕಾಡ್, ಮಲಪ್ಪುರಂ, ಕೋಳಿಕ್ಕೋಡ್, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳ ಮೂಲ ಹಾದು ಹೋಗಿ ಮಂಗಳೂರನ್ನು ತಲುಪುತ್ತದೆ.

ವೆಚ್ಚ ಎಷ್ಟು? ಈ ಬೃಹತ್​ ಯೋಜನೆಗೆ ಕೇಂದ್ರ ಸರ್ಕಾರ ಬರೋಬ್ಬರಿ 3 ಸಾವಿರ ಕೋಟಿ ರೂಪಾಯಿ ವೆಚ್ಚ ಮಾಡಿದೆ. 12 ಲಕ್ಷ ಮಾನವ ದಿನಗಳ ಕೆಲಸ ಬಳಕೆ ಆಗಿದೆ. ಕೈಗಾರಿಕಾ ಮತ್ತು ಜನಸಾಮಾನ್ಯರಿಗೆ ಅಗ್ಗದ ಮತ್ತು ಉತ್ತಮ ಇಂಧನವನ್ನು ಒದಗಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ.

7 ವರ್ಷ ವಿಳಂಬ 2009ರಲ್ಲಿ ಈ ಯೋಜನೆಗೆ ಅಂದಿನ ಪ್ರಧಾನಿ ಮನಮೋಹನ್​ ಸಿಂಗ್​ ಸರ್ಕಾರ ಒಪ್ಪಿಗೆ ನೀಡಿತ್ತು. 2014ರಲ್ಲಿ ಯೋಜನೆ ಪೂರ್ಣಗೊಳ್ಳಬೇಕಿತ್ತು. ಆದರೆ, ಆರು ವರ್ಷ ತಡವಾಗಿ ಯೋಜನೆ ಅಂತ್ಯಗೊಂಡಿದೆ. ಪೈಪ್​ಲೈನ್ ನಿರ್ಮಾಣದ ವೇಳೆ ಸಾಕಷ್ಟು ಅಡೆ-ತಡೆ ಎದುರಾಗಿದ್ದು ಇದಕ್ಕೆ ಮುಖ್ಯ ಕಾರಣ. ಇನ್ನು, ಯೋಜನೆಯ ವೆಚ್ಚ ಅಂದುಕೊಂಡಿದ್ದಕ್ಕಿಂತ 85 ಕೋಟಿ ಹೆಚ್ಚುವರಿಯಾಗಿ ಖರ್ಚಾಗಿದೆ.

ಮಂಗಳೂರು-ಬೆಂಗಳೂರು ಶಿರಾಡಿ ಸುರಂಗ ಮಾರ್ಗಕ್ಕೆ ಯೋಜನೆ ಸಿದ್ಧ: ನಿತಿನ್ ಗಡ್ಕರಿ

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ