AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಡಗು ಜಿಲ್ಲಾ ಆಯುಷ್ ಇಲಾಖೆಯಲ್ಲಿ ಉದ್ಯೋಗವಕಾಶ; ತಿಂಗಳಿಗೆ 40,000 ರೂ. ವರೆಗೆ ವೇತನ!

ಕೊಡಗು ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಜಿಲ್ಲಾ ಆಯುಷ್ ಇಲಾಖೆಯಲ್ಲಿ ಖಾಲಿ ಇರುವ CHO ಮತ್ತು ಮಲ್ಟಿಪರ್ಪಸ್ ವರ್ಕರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ತಾತ್ಕಾಲಿಕ ಗುತ್ತಿಗೆ ಆಧಾರದ ಮೇಲೆ ಅರ್ಜಿ ಆಹ್ವಾನಿಸಿದೆ. CHO ಹುದ್ದೆಗೆ BAMS, MPW ಹುದ್ದೆಗೆ SSLC ವಿದ್ಯಾರ್ಹತೆ ಇರಬೇಕು. ಅರ್ಜಿ ಸಲ್ಲಿಸಲು ಅಂತಿಮ ದಿನಾಂಕ ಅಕ್ಟೋಬರ್​​ 12. ಆರೋಗ್ಯ ಮತ್ತು ವೈದ್ಯಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಲು ಬಯಸುವ ಕೊಡಗು ಜಿಲ್ಲೆಯ ಹಾಗೂ ಸುತ್ತಮುತ್ತಲಿನ ಅರ್ಹ ಅಭ್ಯರ್ಥಿಗಳಿಗೆ ಇದೊಂದು ಉತ್ತಮ ಅವಕಾಶವಾಗಿದೆ.

ಕೊಡಗು ಜಿಲ್ಲಾ ಆಯುಷ್ ಇಲಾಖೆಯಲ್ಲಿ ಉದ್ಯೋಗವಕಾಶ; ತಿಂಗಳಿಗೆ 40,000 ರೂ. ವರೆಗೆ ವೇತನ!
ಕೊಡಗು ಜಿಲ್ಲಾ ಆಯುಷ್ ಇಲಾಖೆಯಲ್ಲಿ ಉದ್ಯೋಗವಕಾಶImage Credit source: Getty Images
ಅಕ್ಷತಾ ವರ್ಕಾಡಿ
|

Updated on: Sep 30, 2026 | 2:38 PM

Share

ಕರ್ನಾಟಕ ಸರ್ಕಾರದ ಕೊಡಗು ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಜಿಲ್ಲಾ ಆಯುಷ್ ಅಧಿಕಾರಿಗಳ ಕಾರ್ಯಾಲಯ (ಮಡಿಕೇರಿ) ರಾಷ್ಟ್ರೀಯ ಆಯುಷ್ ಅಭಿಯಾನ ಯೋಜನೆಯಡಿ ಕಾರ್ಯನಿರ್ವಹಿಸಲು ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿಯು ಸಂಪೂರ್ಣವಾಗಿ ತಾತ್ಕಾಲಿಕ ಗುತ್ತಿಗೆ ಆಧಾರದಲ್ಲಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಸ್ವೀಕರಿಸಲಾಗುತ್ತಿದೆ. ಆರೋಗ್ಯ ಮತ್ತು ವೈದ್ಯಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಲು ಬಯಸುವ ಕೊಡಗು ಜಿಲ್ಲೆಯ ಹಾಗೂ ಸುತ್ತಮುತ್ತಲಿನ ಅರ್ಹ ಅಭ್ಯರ್ಥಿಗಳಿಗೆ ಇದೊಂದು ಉತ್ತಮ ಅವಕಾಶವಾಗಿದೆ.

ಕಮ್ಯುನಿಟಿ ಹೆಲ್ತ್ ಆಫೀಸರ್ (CHO) ಹುದ್ದೆಯ ವಿವರ:

ಶ್ರೀಮಂಗಲದ ಆಯುಷ್ಮಾನ್ ಆರೋಗ್ಯ ಕೇಂದ್ರದಲ್ಲಿ ಖಾಲಿ ಇರುವ 01 ಕಮ್ಯುನಿಟಿ ಹೆಲ್ತ್ ಆಫೀಸರ್ (CHO) ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗೆ ಬಿಎಎಂಎಸ್ (BAMS) ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಆಯ್ಕೆಯಾಗುವ ಅಭ್ಯರ್ಥಿಗೆ ಮಾಸಿಕ ವೇತನವಾಗಿ 25,000 ರೂ. ಸಂಚಿತ ವೇತನ ಹಾಗೂ 15,000ರೂ. ಪಿಎಲ್‌ಪಿ (PLP) ಸೇರಿದಂತೆ ಒಟ್ಟು 40,000ರೂ. ರವರೆಗೆ ಗೌರವಧನ ಲಭ್ಯವಿರುತ್ತದೆ. ಈ ಹುದ್ದೆಯು ಸಾಮಾನ್ಯ ಅಭ್ಯರ್ಥಿಗಳಿಗೆ ಮೀಸಲಾಗಿದೆ.

ಇದನ್ನೂ ಓದಿ: ಎಸ್‌ಬಿಐ ನೇಮಕಾತಿ: ವಾರ್ಷಿಕ 97 ಲಕ್ಷ ರೂ.ವರೆಗೆ ವೇತನ; 207 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಮಲ್ಟಿಪರ್ಪಸ್ ವರ್ಕರ್ (MPW) ಹುದ್ದೆಯ ವಿವರ:

ವಿರಾಜಪೇಟೆಯ ಸರ್ಕಾರಿ ಆಯುರ್ವೇದ ಆಸ್ಪತ್ರೆಯಲ್ಲಿ ಖಾಲಿ ಇರುವ 01 ಮಲ್ಟಿಪರ್ಪಸ್ ವರ್ಕರ್ (Multipurpose Worker) ಹುದ್ದೆಯನ್ನು ಭರ್ತಿ ಮಾಡಲಾಗುತ್ತಿದೆ. ಈ ಹುದ್ದೆಗೆ ಕನಿಷ್ಠ 10ನೇ ತರಗತಿ (SSLC) ತೇರ್ಗಡೆಯಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗೆ ಮಾಸಿಕ ಸಂಚಿತ ವೇತನವಾಗಿ 16,900ರೂ. ನಿಗದಿಪಡಿಸಲಾಗಿದೆ. ಈ ಹುದ್ದೆಯು ಸಾಮಾನ್ಯ ಅಭ್ಯರ್ಥಿ / ಯೋಜನಾ ನಿರಾಶ್ರಿತ ಅಭ್ಯರ್ಥಿಗಳಿಗೆ ಮೀಸಲಾಗಿರುತ್ತದೆ.

ಅರ್ಜಿ ಸಲ್ಲಿಕೆ ಮತ್ತು ಪ್ರಮುಖ ದಿನಾಂಕ:

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ (ವಿದ್ಯಾರ್ಹತೆ, ಮೀಸಲಾತಿ ಪ್ರಮಾಣಪತ್ರ ಇತ್ಯಾದಿ) ಮಡಿಕೇರಿಯ ಜಿಲ್ಲಾ ಆಯುಷ್ ಕಚೇರಿಗೆ ನೇರವಾಗಿ ಅಥವಾ ಅಂಚೆ ಮೂಲಕ ತಲುಪಿಸಬೇಕಾಗಿದೆ. ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ 12-10-2026 ಆಗಿದೆ. ಈ ನೇಮಕಾತಿಯು ರಾಷ್ಟ್ರೀಯ ಆಯುಷ್ ಅಭಿಯಾನದ ಸುತ್ತೋಲೆ ಮತ್ತು ಪ್ರಚಲಿತ ಮಾರ್ಗದರ್ಶನ ಸೂತ್ರಗಳಿಗೆ ಒಳಪಟ್ಟಿರುತ್ತದೆ.

ಕಚೇರಿ ವಿಳಾಸ ಮತ್ತು ಸಂಪರ್ಕ ಮಾಹಿತಿ:

  • ಹೆಚ್ಚಿನ ವಿವರಗಳಿಗಾಗಿ ಮತ್ತು ಸಂದೇಹಗಳ ನಿವಾರಣೆಗೆ ಅಭ್ಯರ್ಥಿಗಳು ಜಿಲ್ಲಾ ಆಯುಷ್ ಅಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದು. ಅರ್ಜಿ ಸಲ್ಲಿಸಬೇಕಾದ ವಿಳಾಸ: ಜಿಲ್ಲಾ ಆಯುಷ್ ಅಧಿಕಾರಿಗಳ ಕಾರ್ಯಾಲಯ, ಮಹದೇವಪೇಟೆ, ಮಡಿಕೇರಿ – 571201, ಕೊಡಗು ಜಿಲ್ಲೆ.
  • ದೂರವಾಣಿ ಸಂಖ್ಯೆ: (08272) 295128
  • ಇ-ಮೇಲ್ ವಿಳಾಸ: dao.madikeri09@gmail.com

ಉದ್ಯೋಗಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಅಕ್ಷತಾ ವರ್ಕಾಡಿ
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ಟಾಸ್ಕ್​ ವಿಷಯಕ್ಕೆ ತಮ್ಮ ತಂಡದ ವೈರತ್ವ ಕಟ್ಟಿಕೊಂಡ ಗಾನವಿ; ಸುಸ್ತು?
ಟಾಸ್ಕ್​ ವಿಷಯಕ್ಕೆ ತಮ್ಮ ತಂಡದ ವೈರತ್ವ ಕಟ್ಟಿಕೊಂಡ ಗಾನವಿ; ಸುಸ್ತು?
ಬೆಂಗಳೂರಿನಲ್ಲಿ ಭಾರಿ ಮಳೆ, ಕೆಆರ್ ಮಾರುಕಟ್ಟೆಯಲ್ಲಿ ಭಾರಿ ಅವಾಂತರ
ಬೆಂಗಳೂರಿನಲ್ಲಿ ಭಾರಿ ಮಳೆ, ಕೆಆರ್ ಮಾರುಕಟ್ಟೆಯಲ್ಲಿ ಭಾರಿ ಅವಾಂತರ
ಮಳೆಗೆ ಕೆಸರು ಗದ್ದೆಯಂತಾದ ಶಿಡ್ಲಘಟ್ಟದ ರಸ್ತೆ: ಜನರ ಪರದಾಟ
ಮಳೆಗೆ ಕೆಸರು ಗದ್ದೆಯಂತಾದ ಶಿಡ್ಲಘಟ್ಟದ ರಸ್ತೆ: ಜನರ ಪರದಾಟ