ಕೊಡಗು: ಒಡಹುಟ್ಟಿದ ಅಣ್ಣನನ್ನೇ ಗುಂಡಿಕ್ಕಿ ಕೊಂದ ತಮ್ಮ, ಆಗಿದ್ದೇನು?
ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ವಣಚಲು ಗ್ರಾಮದಲ್ಲಿ ನಾಡಬಂದೂಕಿನಿಂದ ಅಣ್ಣನನ್ನು ತಮ್ಮ ಕೊಲೆ ಮಾಡಿದ ಘಟನೆ ನಡೆದಿದೆ. ಪ್ರತ್ತು ಎಂಬಾತ ತನ್ನ ಅಣ್ಣ ಧರ್ಮನನ್ನು ಕೊಲೆ ಮಾಡಿದ್ದಾನೆ. ಕೊಲೆಯ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ಘಟನೆಯಿಂದ ಸ್ಥಳೀಯರಲ್ಲಿ ಆತಂಕ ಮೂಡಿದೆ.
ಕೊಡಗು, ಡಿಸೆಂಬರ್ 16: ನಾಡ ಬಂದೂಕಿನಿಂದ ಗುಂಡು ಹೊಡೆದು ತಮ್ಮನಿಂದಲೇ ಅಣ್ಣನನ್ನು ಕೊಲೆ (kill) ಮಾಡಿರುವಂತಹ ಘಟನೆ ಮಡಿಕೇರಿ ತಾಲೂಕಿನ ಗಾಳಿಬೀಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಣಚಲು ಗ್ರಾಮದಲ್ಲಿ ನಡೆದಿದೆ. ಅಣ್ಣ ಧರ್ಮನನ್ನು ಸಹೋದರ ಪ್ರತ್ತು ಕೊಲೆ ಮಾಡಿದ್ದಾರೆ. ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಮಡಿಕೇರಿ ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
ಕಾಲು ಜಾರಿ ಸಮುದ್ರಕ್ಕೆ ಬಿದ್ದ ಮಹಿಳೆ ಮುಳುಗಿ ಸಾವು
ಮತ್ತೊಂದು ಪ್ರಕರಣದಲ್ಲಿ ಕಾಲು ಜಾರಿ ಸಮುದ್ರಕ್ಕೆ ಬಿದ್ದ ಮಹಿಳೆ ಮುಳುಗಿ ಸಾವನ್ನಪ್ಪಿರುವಂತಹ ಘಟನೆ ಮಂಗಳೂರು ಹೊರವಲಯದ ಸೋಮೇಶ್ವರ ಕಡಲ ತೀರದಲ್ಲಿ ನಡೆದಿದೆ. ದೇರೆಬೈಲ್ ನಿವಾಸಿ ಉಷಾ (72) ಮೃತ ಮಹಿಳೆ.
ಇದನ್ನೂ ಓದಿ: ಬೆಳಗಾವಿಯಲ್ಲಿ ಅಮಾನವೀಯ ಘಟನೆ: 2 ತಿಂಗಳ ಹೆಣ್ಣು ಹಸುಗೂಸನ್ನೇ ಕೆರೆಗೆ ಎಸೆದ ತಾಯಿ
ಇತ್ತೀಚೆಗೆ ನಿಧನರಾಗಿದ್ದ ತಂಗಿ ನಿಶಾ ಭಂಡಾರಿ ಅವರ ಪತಿ ಕರುಣಾಕರ ಭಂಡಾರಿ ಪಿಂಡ ಪ್ರಧಾನ ವಿಧಿಯಲ್ಲಿ ಉಷಾ ಭಾಗವಹಿಸಿದ್ದರು. ಈ ವೇಳೆ ಪುರೋಹಿತರು ಸಮುದ್ರ ತೀರದಲ್ಲಿ ಪಿಂಡ ಪ್ರದಾನ ನೆರವೇರಿಸಿದ ಬಳಿಕ ಸಮುದ್ರಕ್ಕೆ ಇಳಿದಿದ್ದರು.
ಈ ವೇಳೆ ಮುಳಗುತ್ತಿದ್ದ ಉಷಾ ಅವರ ರಕ್ಷಣೆಗೆ ಸ್ಥಳೀಯರು ಮತ್ತು ನಾಡದೋಣಿ ಮೀನುಗಾರರು ಮುಂದಾಗಿದ್ದರು. ಆದರೆ ಅಷ್ಟರಲ್ಲಾಗಲೇ ಸಮುದ್ರದಲ್ಲಿ ಮುಳುಗಿ ಉಷಾ ಮೃತಪಟ್ಟಿದ್ದಾರೆ. ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಾಪತ್ತೆಯಾಗಿದ್ದ ಬಾಲಕ ಕೃಷಿಹೊಂಡದಲ್ಲಿ ಶವವಾಗಿ ಪತ್ತೆ
ಮೂರು ದಿನದಿಂದ ನಾಪತ್ತೆಯಾಗಿದ್ದ ಬಾಲಕ ಕೃಷಿಹೊಂಡದಲ್ಲಿ ಶವವಾಗಿ ಪತ್ತೆಯಾದಂತಹ ಘಟನೆ ಗದಗ ನಗರದ ಗಂಗಿಮಡಿ ಬಳಿಯ ಜಮೀನೊಂದರಲ್ಲಿ ನಡೆದಿದೆ. ಶಿವಾಜಿ ವಡ್ಡೇಪಲ್ಲಿ (14) ಮೃತ ಬಾಲಕ. ಮೂರು ದಿನಗಳ ಹಿಂದೆ ಮನೆಯಿಂದ ಕಾಣೆಯಾಗಿದ್ದ. ಪೋಷಕರು ಗದಗ ಗ್ರಾಮಾಂತರ ಠಾಣೆಯಲ್ಲಿ ಕಾಣೆಯಾಗಿರುವ ಬಗ್ಗೆ ದೂರು ನೀಡಿದ್ದರು.
ಇದನ್ನೂ ಓದಿ: ಸೊಸೆಯನ್ನ ಮಂಚಕ್ಕೆ ಕರೆದ ಮಾವ : ಬರಲೊಪ್ಪದಕ್ಕೆ ಆಕೆಯ ಜೀವವನ್ನೇ ತೆಗೆದ!
ಕೃಷಿ ಹೊಂಡದಲ್ಲಿ ಒಳ ಉಡುಪಿನ ಮೇಲೆ ಶವವಾಗಿ ಬಾಲಕ ಪತ್ತೆಯಾಗಿದ್ದಾನೆ. ಈಜಲು ಹೋಗಿ ಮೃತಪಟ್ಟಿರುವ ಬಗ್ಗೆ ಶಂಕೆ ವ್ಯಕ್ತವಾಗಿತ್ತು. ಮಗನ ಕಳೆದುಕೊಂಡು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಗದಗ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡದಿತ್ತು.
ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.