ಮಳೆಗಾಲ ಆರಂಭಕ್ಕೂ ಮುನ್ನವೇ ಅಪಾಯಕಾರಿ ಸ್ಥಳಗಳ ಗುರುತಿಸುವ ಪ್ರಕ್ರಿಯೆ ನಡೆದಿದೆ: ಡಿಸಿ ಚಾರುಲತಾ ಸೋಮಲ್

ತೌಕ್ತೆ ಚಂಡ ಮಾರುತ ಅಪಾಯ ತಂದೊಡ್ಡಬಹುದು ಎನ್ನುವ ಕಾರಣಕ್ಕೆ ಮುಂಜಾಗೃತಾ ಕ್ರಮವಾಗಿ ಮೊದಲೇ ಎನ್​ಡಿಆರ್​ಎಫ್ ತಂಡ ಮಡಿಕೇರಿಗೆ ಬಂದಿಳಿದಿದ್ದು, ವಿಜಯವಾಡದ 20 ಸದಸ್ಯರ ತಂಡ ಮಡಿಕೇರಿಯಲ್ಲಿ ಬೀಡುಬಿಟ್ಟಿದೆ.

ಮಳೆಗಾಲ ಆರಂಭಕ್ಕೂ ಮುನ್ನವೇ ಅಪಾಯಕಾರಿ ಸ್ಥಳಗಳ ಗುರುತಿಸುವ ಪ್ರಕ್ರಿಯೆ ನಡೆದಿದೆ: ಡಿಸಿ ಚಾರುಲತಾ ಸೋಮಲ್
ಎನ್​ಡಿಆರ್​ಎಫ್ ತಂಡದ ಕಾರ್ಯಾಚರಣೆ
Follow us
preethi shettigar
|

Updated on:May 17, 2021 | 4:33 PM

ಕೊಡಗು: ಕೊರೊನಾ ಸಂಕಷ್ಟದಲ್ಲಿ ಇಡೀ ದೇಶವೇ ನಲುಗಿದ್ದು, ಕೊಡಗು ಕೂಡ ಇದರಿಂದ ಹೊರತಾಗಿಲ್ಲ. ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಹೀಗಿರುವಾಗ ಕೊಡಗು ಜಿಲ್ಲೆಗೆ ಮಳೆಯ ಆತಂಕ ಸೃಷ್ಟಿಯಾಗಿದೆ. ಈ ಹಿಂದೆ ಕೊಡಗು ಜಿಲ್ಲೆಗೆ ಮಳೆಯೇ ಜೀವಾಳವಾಗಿತ್ತು. ಆದರೆ ಇದೀಗ ಅದೇ ಮಳೆ ಜಿಲ್ಲೆಯ ಜನತೆ ಪಾಲಿಗೆ ಕಂಟಕವಾಗಿದೆ. ಕಳೆದ ಮೂರು ವರ್ಷಗಳಲ್ಲಿ ಜಿಲ್ಲೆಯಲ್ಲಿ ಮಳೆ ಸೃಷ್ಟಿಸಿರುವ ಅನಾಹುತಕ್ಕೆ ಜನ ಜೀವನ ತತ್ತರಿಸಿಹೋಗಿದೆ. ಇದೀಗ ನಾಲ್ಕನೇ ವರ್ಷದ ಮಳೆಗಾಲ ಆರಂಭವಾಗಿದ್ದು, ಹಿಂದಿನ ನಷ್ಟ ಮತ್ತೆ ಜಿಲ್ಲೆಯಲ್ಲಿ ಸಂಭವಿಸದಂತೆ ಜಿಲ್ಲಾಡಳಿತ ಮುಂಜಾಗೃತಾ ಕ್ರಮವನ್ನು ತೆಗೆದುಕೊಂಡಿದೆ.

ಇನ್ನೇನು ಎರಡು ವಾರದಲ್ಲಿ ಮಳೆಗಾಲ ಆರಂಭವಾಗುತ್ತದೆ. ಇದೀಗ ಮೇ ಮೊದಲ ವಾರದಲ್ಲೇ ಮುಂಗಾರು ಶುರುವಾಗಿದ್ದು, ಜೂನ್​ನಿಂದ ಸೆಪ್ಟೆಂಬರ್ ಅಂತ್ಯದವರೆಗೂ ಭೀಕರ ಮಳೆಗಾಲದ ಅವಧಿ ಇರಲಿದೆ. ಹಾಗಾಗಿ ಜಿಲ್ಲಾಡಳಿತ ಈಗಲೇ ಅಗತ್ಯ ಮುಂಜಾಗೃತಾ ಕ್ರಮಗಳಿಗೆ ಮುಂದಾಗಿದೆ. ಮಳೆಗಾಲ ಆರಂಭಕ್ಕೂ ಮುನ್ನವೇ ಜಿಲ್ಲೆಯಲ್ಲಿ ಅಪಾಯಕಾರಿ ಸ್ಥಳಗಳ ಗುರುತಿಸುವ ಪ್ರಕ್ರಿಯೆ ನಡೆದಿದೆ. ಸ್ಥಳಗಳನ್ನು ಗುರುತಿಸಿದ ಬಳಿಕ ಅಲ್ಲಿಂದ ಜನರನ್ನ ಸ್ಥಳಾಂತರ ಮಾಡುವ ಕಾರ್ಯಕ್ಕೆ ಚಾಲನೆ ನೀಡಲಾಗುತ್ತದೆ. ಒಂದು ವೇಳೆ ಅನಾಹುತಗಳು ಸಂಭವಿಸಿದರೆ ಅದನ್ನ ನಿಭಾಯಿಸಲು ರಕ್ಷಣಾ ಪಡೆಗಳನ್ನ ಕರೆಸುವುದಕ್ಕೂ ಜಿಲ್ಲಾಡಳಿತ ಸಜ್ಜಾಗಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ತಿಳಿಸಿದ್ದಾರೆ.

ಈ ಮಧ್ಯೆ ಜಿಲ್ಲೆಯಲ್ಲಿ ತೌಕ್ತೆ ಚಂಡ ಮಾರುತ ಅಪಾಯ ತಂದೊಡ್ಡಬಹುದು ಎನ್ನುವ ಕಾರಣಕ್ಕೆ ಮುಂಜಾಗೃತಾ ಕ್ರಮವಾಗಿ ಮೊದಲೇ ಎನ್​ಡಿಆರ್​ಎಫ್ ತಂಡ ಮಡಿಕೇರಿಗೆ ಬಂದಿಳಿದಿದ್ದು, ವಿಜಯವಾಡದ 20 ಸದಸ್ಯರ ತಂಡ ಮಡಿಕೇರಿಯಲ್ಲಿ ಬೀಡುಬಿಟ್ಟಿದೆ. ಕಳೆದ ವರ್ಷ ದುರ್ಘಟನೆ ಸಂಭವಿಸಿದ ಸ್ಥಳಗಳಿಗೆ ತೆರಳಿ ಪರಿಶೀಲನೆ ನಡೆಸಲಿದೆ. ಮಾತ್ರವಲ್ಲ ಅಲ್ಲಿ ಅಣಕು ಕಾರ್ಯಾಚರಣೆ ನಡೆಸಿ ಪೂರ್ವಸಿದ್ಧತೆ ನಡೆಸಲು ಸಜ್ಜಾಗಿದೆ.

ಮಳೆಗಾಲ ಆರಂಭವಾಗುತ್ತಲೇ ಎನ್​ಡಿಆರ್​ಎಫ್​ನ ಹೆಚ್ಚುವರಿ ಪಡೆಗಳು ಮತ್ತು ಇತರ ರಕ್ಷಣಾ ಪಡೆಗಳು ಕೂಡ ಜಿಲ್ಲೆಗೆ ಆಗಮಿಸಲಿವೆ. ಇವೆಲ್ಲದರ ಮಧ್ಯೆ ಜಿಲ್ಲೆಯ ಜನರು ಆತಂಕದಿಂದಲೇ ದಿನ ದೂಡುತ್ತಿದ್ದಾರೆ. ಆದರೆ ಜಿಲ್ಲಾಡಳಿತದ ಈ ಮುಂಜಾಗೃತ ಕ್ರಮ ಸದ್ಯ ಜನರ ಮೆಚ್ಚುಗೆಗೆ ಪಾತ್ರವಾಗಿದೆ.

ಇದನ್ನೂ ಓದಿ:

ತೌಕ್ತೆ ಚಂಡಮಾರುತದ ಪ್ರಭಾವ ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಿಗೂ ವ್ಯಾಪಿಸುವ ಸಾಧ್ಯತೆ: ಗೃಹ ಸಚಿವ ಬಸವರಾಜ್ ಬೊಮ್ಮಾಯಿ

ಹೆಚ್ಚುತ್ತಿರುವ ಕೊರೊನಾ ಸೋಂಕು; ಕೊಡಗು ಜಿಲ್ಲೆಯಲ್ಲಿ ಮತ್ತಷ್ಟು ಕಠಿಣ ನಿಯಮ ಜಾರಿಗೊಳಿಸಿದ ಜಿಲ್ಲಾಧಿಕಾರಿ

Published On - 4:29 pm, Mon, 17 May 21

ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?