AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಡಗು ಜಿಲ್ಲಾ ನ್ಯಾಯಾಲಯದಲ್ಲಿ ಭರ್ಜರಿ ನೇಮಕಾತಿ; ಹತ್ತನೇ ತರಗತಿ ಪಾಸಾಗಿದ್ರೆ ಸಾಕು

ಕೊಡಗು ಜಿಲ್ಲಾ ನ್ಯಾಯಾಲಯವು 39 ವಿವಿಧ ಹುದ್ದೆಗಳ ಭರ್ತಿಗೆ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಿದೆ. ಟೈಪಿಸ್ಟ್, ಚಾಲಕ, ಪ್ರೊಸೆಸ್ ಸರ್ವರ್, ಪಿಯೋನ್ ಹುದ್ದೆಗಳಿಗೆ ಎಸ್‌ಎಸ್‌ಎಲ್‌ಸಿ ಅಥವಾ ಪಿಯುಸಿ ಉತ್ತೀರ್ಣರಾದವರು ಅಕ್ಟೋಬರ್ 03ರೊಳಗೆ ಅರ್ಜಿ ಸಲ್ಲಿಸಬಹುದು. ಕರ್ನಾಟಕ ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ಇದೊಂದು ಉತ್ತಮ ಅವಕಾಶವಾಗಿದ್ದು, ಮಾಸಿಕ 27,000 ರೂ.ನಿಂದ 67,600 ರೂ.ವರೆಗೆ ವೇತನ ಪಡೆಯಬಹುದು.

ಕೊಡಗು ಜಿಲ್ಲಾ ನ್ಯಾಯಾಲಯದಲ್ಲಿ ಭರ್ಜರಿ ನೇಮಕಾತಿ; ಹತ್ತನೇ ತರಗತಿ ಪಾಸಾಗಿದ್ರೆ ಸಾಕು
ಕೊಡಗು ನ್ಯಾಯಾಲಯದಲ್ಲಿ ನೇಮಕಾತಿ
ಅಕ್ಷತಾ ವರ್ಕಾಡಿ
|

Updated on:Sep 03, 2026 | 2:53 PM

Share

ಕೊಡಗು ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿದ್ದ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಕೊಡಗು ಜಿಲ್ಲೆಯಲ್ಲಿ ವೃತ್ತಿಜೀವನವನ್ನು ರೂಪಿಸಿಕೊಳ್ಳಲು ಬಯಸುವ ಅಭ್ಯರ್ಥಿಗಳು ಅಕ್ಟೋಬರ್ 03 ರೊಳಗೆ ಅಧಿಕೃತ ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ಹುದ್ದೆಗಳ ವಿವರ ಮತ್ತು ವೇತನ ಶ್ರೇಣಿ:

ಕೊಡಗು ಜಿಲ್ಲಾ ನ್ಯಾಯಾಲಯದಲ್ಲಿ ಒಟ್ಟು 39 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಹುದ್ದೆಗೆ ಅನುಗುಣವಾಗಿ ಮಾಸಿಕ 27,000 ದಿಂದ 67,600 ರೂ. ವರೆಗೆ ವೇತನ ನೀಡಲಾಗುತ್ತದೆ. ಇದರಲ್ಲಿ 8 ಟೈಪಿಸ್ಟ್ (ಮಾಸಿಕ ವೇತನ ರೂ. 34,100 – 67,600), 2 ಚಾಲಕ (ಮಾಸಿಕ ವೇತನ ರೂ. 34,100 – 67,600), 6 ಪ್ರೊಸೆಸ್ ಸರ್ವರ್ (ಮಾಸಿಕ ವೇತನ ರೂ. 31,775 – 61,300) ಮತ್ತು 23 ಪಿಯೋನ್/ಅಟೆಂಡರ್ (ಮಾಸಿಕ ವೇತನ ರೂ. 27,000 – 46,675) ಹುದ್ದೆಗಳು ಖಾಲಿಯಿವೆ.

ಶೈಕ್ಷಣಿಕ ಅರ್ಹತೆ ಮತ್ತು ವಯೋಮಿತಿ ನಿಬಂಧನೆಗಳು:

ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಹುದ್ದೆಗೆ ಸೂಕ್ತವಾದ ಶೈಕ್ಷಣಿಕ ಅರ್ಹತೆ ಹೊಂದಿರಬೇಕು. ಟೈಪಿಸ್ಟ್ ಹುದ್ದೆಗೆ ಪಿಯುಸಿ (PUC) ಅಥವಾ ಡಿಪ್ಲೊಮಾ ಪೂರ್ಣಗೊಳಿಸಿರಬೇಕು. ಚಾಲಕ, ಪ್ರೊಸೆಸ್ ಸರ್ವರ್ ಮತ್ತು ಪಿಯೋನ್/ಅಟೆಂಡರ್ ಹುದ್ದೆಗಳಿಗೆ 10 ನೇ ತರಗತಿ (SSLC) ಉತ್ತೀರ್ಣರಾಗಿರಬೇಕು. ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ವಯಸ್ಸಾಗಿರಬೇಕು ಹಾಗೂ ಗರಿಷ್ಠ ವಯೋಮಿತಿ 40 ವರ್ಷ. ನಿಯಮಾವಳಿಗಳ ಪ್ರಕಾರ SC/ST/ಪ್ರವರ್ಗ-1 ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಪ್ರವರ್ಗ 2A, 2B, 3A, 3B ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ಇರುತ್ತದೆ.

ಇದನ್ನೂ ಓದಿ: 15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ; ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ

ಅರ್ಜಿ ಶುಲ್ಕ ಮತ್ತು ಪಾವತಿ ವಿಧಾನ:

ಅರ್ಜಿ ಸಲ್ಲಿಸುವ ಆಸಕ್ತ ಅಭ್ಯರ್ಥಿಗಳು ತಮ್ಮ ವರ್ಗಕ್ಕೆ ಅನುಗುಣವಾಗಿ ಆನ್‌ಲೈನ್ ಮೂಲಕ ಅರ್ಜಿ ಶುಲ್ಕ ಪಾವತಿಸಬೇಕು. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 300 ರೂ. ಮತ್ತು ಪ್ರವರ್ಗ 2A, 2B, 3A, 3B ಗೆ ಸೇರಿದ ಅಭ್ಯರ್ಥಿಗಳಿಗೆ 150 ರೂ. ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ಅಭ್ಯರ್ಥಿಗಳು ನೆಟ್ ಬ್ಯಾಂಕಿಂಗ್, ಡೆಬಿಟ್ ಅಥವಾ ಕ್ರೆಡಿಟ್ ಕಾರ್ಡ್ ಬಳಸಿ ಶುಲ್ಕ ಪಾವತಿಸಬಹುದಾಗಿದೆ.

ಆಯ್ಕೆ ಪ್ರಕ್ರಿಯೆ ಮತ್ತು ಅರ್ಜಿ ಸಲ್ಲಿಸುವ ಹಂತಗಳು:

ಅಭ್ಯರ್ಥಿಗಳ ಆಯ್ಕೆಯನ್ನು ಹುದ್ದೆಗೆ ತಕ್ಕಂತೆ ಕಂಪ್ಯೂಟರ್ ಟೈಪಿಂಗ್ ಕೌಶಲ್ಯ ಪರೀಕ್ಷೆ (Computer Typewriting Skill Test), ಚಾಲನಾ ಪರೀಕ್ಷೆ (Driving Test) ಮತ್ತು ನೆರವು ಇಂಟರ್ವ್ಯೂ (Interview) ಆಧಾರದ ಮೇಲೆ ನಡೆಸಲಾಗುತ್ತದೆ. ಅರ್ಜಿ ಸಲ್ಲಿಸುವ ಮುನ್ನ ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಪರಿಶೀಲಿಸಿ. ಬಳಿಕ ಅಗತ್ಯ ಶೈಕ್ಷಣಿಕ ದಾಖಲೆಗಳು, ಭಾವಚಿತ್ರ ಮತ್ತು ಸಹಿಯನ್ನು ಸ್ಕ್ಯಾನ್ ಮಾಡಿ ಅಪ್‌ಲೋಡ್ ಮಾಡಿದ ನಂತರ, ಅರ್ಜಿಯನ್ನು ಸಬ್ಮಿಟ್ ಮಾಡಿ ಭವಿಷ್ಯದ ಉಲ್ಲೇಖಕ್ಕಾಗಿ ಅಪ್ಲಿಕೇಶನ್ ಸಂಖ್ಯೆಯನ್ನು (Application Number) ಕಾಯ್ದಿರಿಸಿಕೊಳ್ಳಿ.

ಉದ್ಯೋಗಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 2:51 pm, Thu, 3 September 26

Follow Us