Apply Now: ಕೊಡಗು ಜಿಲ್ಲಾ ಪಂಚಾಯತ್‌ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ; ಸಂಪೂರ್ಣ ಮಾಹಿತಿ ಇಲ್ಲಿದೆ

ಕೊಡಗು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ 13 ಗುತ್ತಿಗೆ ಆಧಾರಿತ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಜುಲೈ 20 ರೊಳಗೆ ಮಡಿಕೇರಿಯಲ್ಲಿರುವ ಕಚೇರಿಗೆ ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಬಹುದು. ನೇರ ಸಂದರ್ಶನದ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಆಸಕ್ತರು ಶೈಕ್ಷಣಿಕ ಅರ್ಹತೆ, ವೇತನ ಹಾಗೂ ಇತರೆ ಮಾಹಿತಿಗಾಗಿ ಅಧಿಕೃತ ಪ್ರಕಟಣೆ ಪರಿಶೀಲಿಸಬೇಕೆಂದು ಸೂಚಿಸಲಾಗಿದೆ.

Apply Now: ಕೊಡಗು ಜಿಲ್ಲಾ ಪಂಚಾಯತ್‌ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ; ಸಂಪೂರ್ಣ ಮಾಹಿತಿ ಇಲ್ಲಿದೆ
ಉದ್ಯೋಗವಕಾಶ
Image Credit source: Getty Images

Updated on: Jul 08, 2026 | 9:43 AM

ಮುಖ್ಯಾಂಶಗಳು

  • ಕೊಡಗು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ನೇಮಕಾತಿ.
  • 13 ಗುತ್ತಿಗೆ ಆಧಾರಿತ ಹುದ್ದೆಗಳಿಗೆ ಅರ್ಜಿ ಆಹ್ವಾನ
  • ಜು. 20 ರೊಳಗೆ ಮಡಿಕೇರಿಯಲ್ಲಿರುವ ಕಚೇರಿಗೆ ಭರ್ತಿ ಮಾಡಿದ ಅರ್ಜಿ ಸಲ್ಲಿಸಿ.

ಉದ್ಯೋಗಾಕಾಂಕ್ಷಿಗಳಿಗೆ ಉತ್ತಮ ಅವಕಾಶವೊಂದು ಇಲ್ಲಿದೆ. ಕೊಡಗು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ವತಿಯಿಂದ ವಿವಿಧ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ಅಧಿಸೂಚನೆಯ ಪ್ರಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ, ಕೊಡಗು ವ್ಯಾಪ್ತಿಯ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ ಒಟ್ಟು 13 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗಿದೆ. ಈ ಹುದ್ದೆಗಳು ಗುತ್ತಿಗೆ (Contract) ಆಧಾರದ ಮೇಲೆ ಭರ್ತಿ ಮಾಡಲಾಗುತ್ತಿದ್ದು, ಅರ್ಹ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಭಾಗವಹಿಸುವ ಮೂಲಕ ಆಯ್ಕೆಯಾಗಲಿದ್ದಾರೆ.

ಅಭ್ಯರ್ಥಿಗಳು ಜುಲೈ 2ರಿಂದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯಿಂದ ಅರ್ಜಿ ನಮೂನೆ ಪಡೆಯಬಹುದು. ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಜುಲೈ 20ರ ಬೆಳಿಗ್ಗೆ 11.00 ಗಂಟೆಯೊಳಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ, ಕೊಡಗು ಜಿಲ್ಲೆ, ಮಡಿಕೇರಿಗೆ ಸಲ್ಲಿಸಬೇಕು. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ನೇರ ಸಂದರ್ಶನ ನಡೆಸಿ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವೇತನ ಹಾಗೂ ಇತರೆ ಮಾಹಿತಿಗಾಗಿ ಅಧಿಕೃತ ಪ್ರಕಟಣೆಯನ್ನು ಪರಿಶೀಲಿಸುವಂತೆ ಸೂಚಿಸಲಾಗಿದೆ.

ಇದನ್ನೂ ಓದಿ: ನೀಟ್ ಇಲ್ಲದೆಯೂ ವೈದ್ಯಕೀಯ ಲೋಕಕ್ಕೆ ಎಂಟ್ರಿ; 12ನೇ ತರಗತಿ ಅಂಕಗಳ ಆಧಾರದ ಮೇಲೆ ಸಿಗಲಿದೆ ಅಡ್ಮಿಷನ್!

ಪ್ರಮುಖ ಮಾಹಿತಿ:

  • ಸಂಸ್ಥೆ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ, ಕೊಡಗು
  • ನೇಮಕಾತಿ ವಿಧಾನ: ಗುತ್ತಿಗೆ ಆಧಾರ
  • ಒಟ್ಟು ಹುದ್ದೆಗಳು: 13
  • ಅರ್ಜಿ ಸಲ್ಲಿಸಲು ಕೊನೆಯ ದಿನ: 20 ಜುಲೈ 2026 (ಬೆಳಿಗ್ಗೆ 11.00 ಗಂಟೆ)
  • ಅರ್ಜಿ ಸಲ್ಲಿಸುವ ಸ್ಥಳ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ, ಮಡಿಕೇರಿ, ಕೊಡಗು

ಸೂಚನೆ: ಅರ್ಜಿ ಸಲ್ಲಿಸುವ ಮೊದಲು ಅಧಿಕೃತ ಪ್ರಕಟಣೆಯಲ್ಲಿರುವ ಶೈಕ್ಷಣಿಕ ಅರ್ಹತೆ, ವಯೋಮಿತಿ, ಅನುಭವ ಹಾಗೂ ಇತರೆ ಷರತ್ತುಗಳನ್ನು ಕಡ್ಡಾಯವಾಗಿ ಪರಿಶೀಲಿಸಿ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಉದ್ಯೋಗಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 4:50 pm, Tue, 7 July 26

Loading...
Unable to load recommendations.
Follow Us