AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶರಣ್ಯ ನಾಪತ್ತೆ ಕೇಸ್​​: 24ಗಂಟೆ ಕಳೆದರೂ ಸಿಗದ ಸುಳಿವು; ಹರಕೆ ಹೊತ್ತ ಕುಡಿಯ ಜನಾಂಗ

ಕೊಡಗು ಜಿಲ್ಲೆಯ ಮಡಿಕೇರಿಯ ತಡಿಯಂಡಮೋಳ್ ಬೆಟ್ಟದಲ್ಲಿ ಟ್ರೆಕ್ಕಿಂಗ್‌ಗೆ ತೆರಳಿದ್ದ ಕೇರಳದ ಶರಣ್ಯ 24 ಗಂಟೆಗಳಿಂದ ನಾಪತ್ತೆಯಾಗಿದ್ದಾರೆ. ಪೊಲೀಸ್ ಮತ್ತು ಅರಣ್ಯ ಇಲಾಖೆಯ 60ಕ್ಕೂ ಅಧಿಕ ಸಿಬ್ಬಂದಿ ವ್ಯಾಪಕ ಶೋಧ ಕಾರ್ಯ ನಡೆಸುತ್ತಿದ್ದಾರೆ. ಸ್ಥಳೀಯ ಕುಡಿಯ ಜನಾಂಗ ಯುವತಿ ಸುರಕ್ಷಿತವಾಗಿ ಮರಳಲು ದೇವರಲ್ಲಿ ಹರಕೆ ಹೊತ್ತಿದ್ದಾರೆ.

ಶರಣ್ಯ ನಾಪತ್ತೆ ಕೇಸ್​​: 24ಗಂಟೆ ಕಳೆದರೂ ಸಿಗದ ಸುಳಿವು; ಹರಕೆ ಹೊತ್ತ ಕುಡಿಯ ಜನಾಂಗ
ಶೋಧ ಕಾರ್ಯ, ನಾಪತ್ತೆಯಾದ ಶರಣ್ಯImage Credit source: tv9 kannada
Gopal AS
| Edited By: |

Updated on: Apr 03, 2026 | 7:10 PM

Share

ಕೊಡಗು, ಏಪ್ರಿಲ್​ 03: ಚಾರಣಕ್ಕೆ ತೆರಳಿದ್ದ ಯುವತಿ ಶರಣ್ಯ (35) ನಾಪತ್ತೆ ಪ್ರಕರಣಕ್ಕೆ (Missing Case)  ಸಂಬಂಧಿಸಿದಂತೆ 24 ಗಂಟೆ ಕಳೆದರು ಇನ್ನೂ ಪತ್ತೆಯಾಗಿಲ್ಲ. ಪೊಲೀಸ್ ಶ್ವಾನಕ್ಕೂ ಯಾವುದೇ ಸುಳಿವು ಸಿಕ್ಕಿಲ್ಲ. ಅರಣ್ಯ ಇಲಾಖೆಯ 60ಕ್ಕೂ ಅಧಿಕ‌ ಸಿಬ್ಬಂದಿ ಸೇರಿದಂತೆ ಪೊಲೀಸರು ತಡಿಯಂಡ ಬೆಟ್ಟ ಪ್ರದೇಶದಲ್ಲಿ ವ್ಯಾಪಕ‌ ಶೋಧ ನಡೆಸಿದ್ದಾರೆ. ದಾರಿ ತಪ್ಪುವಂತಹ ಮಾರ್ಗವಲ್ಲ ಎಂದು ಸ್ಥಳೀಯರು ಹೇಳುತ್ತಿದ್ದಾರೆ. ಸದ್ಯ ಪ್ರಕರಣ ಅರಣ್ಯ ಇಲಾಖೆ ಮತ್ತು ಪೊಲೀಸರಿಗೆ ತಲೆನೋವಾಗಿದೆ.

ಕೇರಳದ ಕೋಯಿಕ್ಕೋಡ್ ನಿವಾಸಿ ಶರಣ್ಯ ನಿನ್ನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಕಕ್ಕಬ್ಬೆ ಗ್ರಾಮದಲ್ಲಿ ಟ್ರೆಕ್ಕಿಂಗ್​ಗೆ ತೆರಳಿದ್ದರು. ಮನೆಯಲ್ಲಿ ಹೇಳದೆಯೇ ಟ್ರೆಕ್ಕಿಂಗ್ ಬಂದಿದ್ದರು. 9 ಜನರ ಜೊತೆಗೆ ಚಾರಣ ತೆರಳುದ್ದರು. ಆದರೆ ನಾಯಿಗಳ‌ ಜೊತೆ ಆಟವಾಡುತ್ತಾ ಹಿಂದೆ ಉಳಿದಿದ್ದಾರೆ.

ಇದನ್ನೂ ಓದಿ: ಟ್ರೆಕ್ಕಿಂಗ್​ಗೆ ತೆರಳಿದ್ದ ಕೇರಳದ ಯುವತಿ ಮಡಿಕೇರಿಯಲ್ಲಿ ನಾಪತ್ತೆ: 4 ತಂಡಗಳಿಂದ ಶೋಧ ಕಾರ್ಯ

ನಿನ್ನೆ ಸಂಜೆ ದಾರಿ ತಪ್ಪಿರುವುದಾಗಿ ತಾನು ತಂಗಿದ್ದ ಹೋಂ ಸ್ಟೇ ಮಾಲೀಕರಿಗೆ ಕರೆ ಮಾಡಿ ಮಾಹಿತಿ ನಿಡಿದ್ದಾರೆ. ಅದಾದ ಬಳಿಕ ಶರಣ್ಯ ಮೊಬೈಲ್‌ ನಾಟ್ ರೀಚೇಬಲ್​ ಆಗಿದೆ. ಟ್ರೆಕ್ಕಿಂಗ್​ಗೆ ತೆರಳಿರುವ ಪ್ರದೇಶದಲ್ಲಿ ವಿಪರೀತ ಕಾಡಾನೆ ಕಾಟ ಇದೆ ಎನ್ನಲಾಗುತ್ತಿದೆ. ಕಳೆದ‌ ರಾತ್ರಿ 3 ಗಂಟೆಯವರೆಗೂ ಶೋಧ ಮಾಡಲಾಗಿದ್ದು, ಇದುವರೆಗೂ ಯುವತಿಯ ಬಗ್ಗೆ ಯಾವುದೇ ಸುಳಿವಿಲ್ಲ.

ದೇವರಿಗೆ ಹರಿಕೆ ಹೊತ್ತ ಕುಡಿಯ ಜನಾಂಗ

ಸದ್ಯ  ಶರಣ್ಯಳ ಪತ್ತೆಗೆ ಅರಣ್ಯ ಮತ್ತು ಪೊಲೀಸ್ ಇಲಾಖೆಯ ನಾಲ್ಕು ತಂಡದಿಂದ‌ ಶೋಧ ಮುಂದುವರೆದಿದೆ.  ಆದರೆ ಯಾವುದೇ ಸುಳಿವು ಸಿಗದೆ ನಿರಾಶೆ ಮೂಡಿದೆ. ಹೀಗಿರುವಾಗ ಟ್ರೆಕ್ಕಿಂಗ್​ಗೆ ತೆರಳಿರುವ ಶರಣ್ಯ ಸುರಕ್ಷಿತವಾಗಿ‌ ಮರಳಿ ಬರಲೆಂದು ಬೆಟ್ಟ ಪ್ರದೇಶದಲ್ಲಿ ವಾಸಿಸುವ ಕುಡಿಯ ಜನಾಂಗ ಮಲೆ‌ ತಮ್ಮಚ್ಚ ದೇವರಿಗೆ ಹರಕೆ ಹೊತ್ತಿದ್ದಾರೆ. ಇನ್ನು ತಡಿಯಂಡಮೋಳ್‌ ಬೆಟ್ಟದಲ್ಲಿ ದಟ್ಟ ಮಳೆ‌ ಮೋಡ ಕವಿದಿದ್ದು, ಆತಂಕ ಮನೆಮಾಡಿದೆ.

ಸ್ಥಳೀಯರು ಹೇಳುವುದೇನು?

ಶರಣ್ಯ ನಾಪತ್ತೆ ಪ್ರಕರಣದ ಬಗ್ಗೆ ಸ್ಥಳೀಯರು ಮಾತನಾಡಿದ್ದು, ದಾರಿ ತಪ್ಪುವುದಕ್ಕೆ ಸಾಧ್ಯವೇ ಇಲ್ಲ. ಏಕೆಂದರೆ ದಾರಿ ತಪ್ಪುವಂತಹ ದುರ್ಗಮ‌ ಹಾದಿ‌ ಏನು ಅಲ್ಲ ಎಂದು ಹೇಳುತ್ತಿದ್ದಾರೆ. ಸದ್ಯ ಶೋಧ ಕಾರ್ಯಕ್ಕೆ ಯವಕಪಾಡಿ ಗ್ರಾಮಸ್ಥರು ಸಾಥ್​ ನೀಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us