AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kodagu News: ಬೈಕ್​ ಅಪಘಾತದಲ್ಲಿ ಕಾಲೇಜು ವಿದ್ಯಾರ್ಥಿನಿ ದುರ್ಮರಣ

ಬೈಕ್​ ಅಪಘಾತದಲ್ಲಿ ಎಫ್ಎಂಸಿ(FMC)ಕಾಲೇಜು ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಕುಶಾಲನಗರ ಪಟ್ಟಣದಲ್ಲಿ ನಡೆದಿದೆ. ಮಡಿಕೇರಿಯ ಭಾವನಾ(21) ಮೃತ ವಿದ್ಯಾರ್ಥಿನಿ.

Kodagu News: ಬೈಕ್​ ಅಪಘಾತದಲ್ಲಿ ಕಾಲೇಜು ವಿದ್ಯಾರ್ಥಿನಿ ದುರ್ಮರಣ
ಮೃತ ವಿದ್ಯಾರ್ಥಿನಿ
ಕಿರಣ್ ಹನುಮಂತ್​ ಮಾದಾರ್
|

Updated on: Jun 16, 2023 | 11:17 AM

Share

ಕೊಡಗು: ಬೈಕ್​ ಅಪಘಾತ(Accident)ದಲ್ಲಿ ಎಫ್ಎಂಸಿ(FMC)ಕಾಲೇಜು ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಕುಶಾಲನಗರ(Kushalnagar) ಪಟ್ಟಣದಲ್ಲಿ ನಡೆದಿದೆ. ಮಡಿಕೇರಿ(Madikeri)ಯ ಭಾವನಾ(21) ಮೃತ ವಿದ್ಯಾರ್ಥಿನಿ. ಭಾವನಾ ಸ್ಕೂಟಿಯಲ್ಲಿ ಹೋಗುತ್ತಿದ್ದಾಗ ಬುಲೆಟ್ ಬೈಕ್​ ಸ್ಕೂಟಿಗೆ ಅಪ್ಪಳಿಸಿದೆ. ಈ ವೇಳೆ ವಿದ್ಯಾರ್ಥಿನಿ ಮೃತಳಾಗಿದ್ದು, ಕುಶಾಲನಗರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೈಕ್​ಗೆ ಬಸ್​ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು

ಉತ್ತರ ಕನ್ನಡ: ಜಿಲ್ಲೆಯ ಶಿರಸಿಯ ಸಾಮ್ರಾಟ ಹೋಟೆಲ್ ಮುಂಭಾಗದಲ್ಲಿ ಬೈಕ್​ಗೆ ಬಸ್​ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮೃತ ಸವಾರನನ್ನು ಗಣೇಶ ನಗರದ ನಿವಾಸಿ ಮಹೇಶ್ ಬೋವಿವಡ್ಡರ್ ಎಂದು ಗುರುತಿಸಲಾಗಿದೆ. ಈ ಕುರಿತು ಶಿರಸಿ ಶಹರ ಪೊಲೀಸ್​​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಬೈಕ್​ ಅಪಘಾತದಲ್ಲಿ ಗಾಯಗೊಂಡಿದ್ದ ವೃದ್ಧನನ್ನ ಆಸ್ಪತ್ರೆಗೆ ಸೇರಿಸಲು ಸಹಾಯ: ಮಾನವೀಯತೆ ಮೆರೆದ ಶಾಸಕ ರಾಜುಗೌಡ

ಸರಗಳ್ಳತನದಲ್ಲಿ ತೊಡಗಿದ್ದ ಇಬ್ಬರು ಆರೋಪಿಗಳ ಬಂಧನ; 6.5 ಲಕ್ಷ ಮೌಲ್ಯದ 150 ಗ್ರಾಂ ಚಿನ್ನಾಭರಣ ವಶಕ್ಕೆ

ಬೆಂಗಳೂರು: ಸರಗಳ್ಳತನದಲ್ಲಿ ತೊಡಗಿದ್ದ ಇಬ್ಬರು ಆರೋಪಿಗಳನ್ನು ಬ್ಯಾಡರಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 6.5 ಲಕ್ಷ ಮೌಲ್ಯದ 150 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ. ಮೇ 24ರಂದು ಬ್ಯಾಡರಹಳ್ಳಿಯಲ್ಲಿ ಸರಗಳ್ಳತನ ಮಾಡಿದ್ದರು. ಇದು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿತ್ತು. ಅದನ್ನು ಆಧರಿಸಿ ತನಿಖೆ ಆರಂಭಿಸಿದ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.

ತಮಿಳುನಾಡಿನಲ್ಲಿ ಭೀಕರ ಕಾರು ಅಪಘಾತ; ಮೈಸೂರು ಮೂಲದ ವ್ಯಕ್ತಿ ಸಾವು

ಮೈಸೂರು: ತಮಿಳುನಾಡಿನ ಬಣ್ಣಾರಿ ಹೆದ್ದಾರಿಯಲ್ಲಿ ಮರಕ್ಕೆ ಕಾರು ಡಿಕ್ಕಿಯಾಗಿ ಮೈಸೂರಿನ ಹುಣಸೂರು ತಾಲೂಕಿನ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ರತ್ನಪುರಿಯ ನಾಸೀರ್(46) ಮೃತ ವ್ಯಕ್ತಿ. ಇನ್ನು ಕಾರಿನಲ್ಲಿದ್ದ ಸಿಕಂದರ್, ಮುಜೀಬ್‌ಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಮೂವರು ಕೆಲಸದ ನಿಮಿತ್ತ ಕೊಯಮತ್ತೂರಿಗೆ ತೆರಳಿದ್ದರು. ಈ ವೇಳೆ ವಾಪಾಸ್​ ಬರುವಾಗ ಈ ಅಪಘಾತ ಸಂಭವಿಸಿದೆ.

ಇನ್ನಷ್ಟು ಅಪಘಾತ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ