ಮಂಡ್ಯ ಮೂಲದ ಯುವ ಮಹಿಳಾ ಅರಣ್ಯಾಧಿಕಾರಿ ಮಡಿಕೇರಿಯಲ್ಲಿ ನೇಣಿಗೆ ಶರಣು

madikeri forest officer: ಕೊಡಗು ಜಿಲ್ಲೆ ಮಡಿಕೇರಿ ನಗರದ ಅರಣ್ಯ ಭವನ ಬಳಿ ಇರುವ ವಸತಿ ಗೃಹದಲ್ಲಿ ಯುವ ಮಹಿಳಾ ಅರಣ್ಯಾಧಿಕಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ರಶ್ಮಿ ಎರಡು ವರ್ಷಗಳಿಂದ ಕೊಡಗಿನಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಸ್ಥಳಕ್ಕೆ ಮಡಿಕೇರಿ ನಗರ ಪೊಲೀಸರು ಭೇಟಿ‌ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ. ಅರಣ್ಯ ಅಧಿಕಾರಿ ನಿನ್ನೆ ರಾತ್ರಿಯೇ ಆತ್ಮಹತ್ಯೆ‌ ಮಾಡಿಕೊಂಡಿರಬಹುದು ಎನ್ನಲಾಗಿದೆ.

ಮಂಡ್ಯ ಮೂಲದ ಯುವ ಮಹಿಳಾ ಅರಣ್ಯಾಧಿಕಾರಿ ಮಡಿಕೇರಿಯಲ್ಲಿ ನೇಣಿಗೆ ಶರಣು
ಯುವ ಮಹಿಳಾ ಅರಣ್ಯಾಧಿಕಾರಿ ಕೊಡಗಿನಲ್ಲಿ ನೇಣಿಗೆ ಶರಣು
Follow us
Gopal AS
| Updated By: ಸಾಧು ಶ್ರೀನಾಥ್​

Updated on:Aug 30, 2023 | 12:17 PM

ಕೊಡಗು, ಆಗಸ್ಟ್​ 30: ಮಡಿಕೇರಿಯ ಅರಣ್ಯ ಇಲಾಖೆ ವಸತಿಗೃಹದಲ್ಲಿ ಯುವ ಮಹಿಳಾ ಅರಣ್ಯಾಧಿಕಾರಿ (young woman forest officer) ನೇಣಿಗೆ ಶರಣಾಗಿದ್ದಾರೆ. ಮಂಡ್ಯ ಮೂಲದ ರಶ್ಮಿ (27) ಮೃತ ಅಧಿಕಾರಿ. ರಶ್ಮಿ ಅವರು ಅರಣ್ಯ ಇಲಾಖೆಯಲ್ಲಿ DRFO ಆಗಿದ್ದರು. ಕೊಡಗು ಜಿಲ್ಲೆ ಮಡಿಕೇರಿ ನಗರದ ಅರಣ್ಯ ಭವನ ಬಳಿ ಇರುವ ವಸತಿ ಗೃಹದಲ್ಲಿ ಘಟನೆ ನಡೆದಿದೆ.

ಆತ್ಮಹತ್ಯೆಗೆ (suicide hanging) ನಿಖರ ಕಾರಣ ತಿಳಿದು ಬಂದಿಲ್ಲ. ರಶ್ಮಿ ಕಳೆದ ಎರಡು ವರ್ಷಗಳಿಂದ ಕೊಡಗಿನಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಸ್ಥಳಕ್ಕೆ ಮಡಿಕೇರಿ ನಗರ (madikeri, Kodagu) ಪೊಲೀಸರು ಭೇಟಿ‌ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ. ಅರಣ್ಯ ಅಧಿಕಾರಿ ನಿನ್ನೆ ರಾತ್ರಿಯೇ ಆತ್ಮಹತ್ಯೆ‌ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ.

ಚಲಿಸುತ್ತಿದ್ದ ಬಸ್ಸಿನಿಂದ ಆಯ ತಪ್ಪಿ ಬಿದ್ದು ಯುವ ಬಸ್ ಕಂಡಕ್ಟರ್​​ ಸಾವು

ಮಂಗಳೂರು: ಚಲಿಸುತ್ತಿದ್ದ ಬಸ್ಸಿನ ಫುಟ್​​ ಬೋರ್ಡ್​​​ನಲ್ಲಿ ನಿಂತಿದ್ದ ಬಸ್ ನಿರ್ವಾಹಕ ಟರ್ನಿಂಗ್​​ನಲ್ಲಿ ಆಯ ತಪ್ಪಿ ರಸ್ತೆ ಮೇಲೆ ಬಿದ್ದು ಮೃತಪಟ್ಟಿದ್ದಾರೆ. ಮಂಗಳೂರು (Mangalore) ನಗರದ ನಂತೂರು ವೃತ್ತದಲ್ಲಿ ಈ ದುರದೃಷ್ಟ ಘಟನೆ ನಡೆದಿದೆ. ಬಾಗಲಕೋಟೆ ಮೂಲದ ಈರಯ್ಯ (23) ಸಾವನ್ನಪ್ಪಿದ (death) ಯುವ ಕಂಡಕ್ಟರ್ (bus conductor).​ ಪ್ರಸ್ತುತ ಈತ ಸುರತ್ಕಲ್ ತಡಂಬೈಲ್ ನಲ್ಲಿ ವಾಸವಾಗಿದ್ದರು. ಬಸ್ಸಿನ ಎದುರು ಬಾಗಿಲ ಬಳಿ ಈರಯ್ಯ ನಿಂತಿದ್ದ. ಸುರತ್ಕಲ್ ಕಡೆಯಿಂದ ಮಂಗಳೂರು ಕಡೆಗೆ ಬಸ್ ತೆರಳುವ ವೇಳೆ ಘಟನೆ ಸಂಭವಿಸಿದೆ.

Also Read: Gruha Lakshmi Launch Live: ಮೈಸೂರಿಗೆ ಆಗಮಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ

ಬಸ್ಸು ಸರ್ಕಲ್ ನಲ್ಲಿ ತಿರುವು ಪಡೆಯುವ ರಭಸಕ್ಕೆ ಕೈ ಜಾರಿ, ಈರಯ್ಯ ರಸ್ತೆಗೆ ಎಸೆಯಲ್ಪಟ್ಟಿದ್ದ. ತಕ್ಷಣ ಸ್ಥಳದಲ್ಲಿಯೆ ಇದ್ದ ಟ್ರಾಫಿಕ್ ಪೊಲೀಸರು ಮತ್ತು ಸ್ಥಳೀಯರು ಈರಯ್ಯನ್ನನ್ನು ಆಸ್ಪತ್ರೆಗೆ ದಾಖಲು ಮಾಡಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದೇ ಆಸ್ಪತ್ರೆಯಲ್ಲಿ ಈರಯ್ಯ ಕೊನೆಯುಸಿರೆಳೆದಿದ್ದಾನೆ. ಕದ್ರಿ ಟ್ರಾಫಿಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆಸಿದೆ. ಕಂಡಕ್ಟರ್ ರಸ್ತೆಗೆಸೆಯಲ್ಪಟ್ಟ ವಿಡಿಯೋ ಕಾರೊಂದರ ಡ್ಯಾಷ್ ಬೋರ್ಡ್ ಕ್ಯಾಮರಾದಲ್ಲಿ ಸೆರೆಯಾಗಿದೆ.

ಕೊಡಗು ಜಿಲ್ಲಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:41 am, Wed, 30 August 23

ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್
ಮುಡಾದಿಂದ 142 ಜನ ಬೇನಾಮಿಯಾಗಿ ಸೈಟು ಪಡೆದಿದ್ದಾರೆ: ಶಿವಲಿಂಗೇಗೌಡ
ಮುಡಾದಿಂದ 142 ಜನ ಬೇನಾಮಿಯಾಗಿ ಸೈಟು ಪಡೆದಿದ್ದಾರೆ: ಶಿವಲಿಂಗೇಗೌಡ
ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ
ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ