AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮ್ಮನ ಮಡಿಲು ಸೇರಲು ಒದ್ದಾಡಿದ ಕಂದಮ್ಮ: ಕಾಫಿ ತೋಟದಲ್ಲಿ ನವಜಾತ ಶಿಶು ಪತ್ತೆ!

ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಬೇತ್ರಿ ಗ್ರಾಮದ ಕಾಫಿ ತೋಟದಲ್ಲಿ ಅಡಿಕೆ ಹಾಳೆಯಲ್ಲಿ ಸುತ್ತಿಡಲಾಗಿದ್ದ ನವಜಾತ ಹೆಣ್ಣು ಶಿಶುವನ್ನು ಸ್ಥಳೀಯರು ಮತ್ತು ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿ ರಕ್ಷಿಸಿದ್ದಾರೆ. ಅಸ್ವಸ್ಥಗೊಂಡಿದ್ದ ಮಗುವಿಗೆ ಮಡಿಕೇರಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಅಪಾಯದಿಂದ ಪಾರಾಗಿದೆ. ಮಡಿಕೇರಿ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಮಗುವನ್ನು ಬಿಟ್ಟು ಹೋದ ಪೋಷಕರಿಗಾಗಿ ತನಿಖೆ ನಡೆಸುತ್ತಿದ್ದಾರೆ.

ಅಮ್ಮನ ಮಡಿಲು ಸೇರಲು ಒದ್ದಾಡಿದ ಕಂದಮ್ಮ: ಕಾಫಿ ತೋಟದಲ್ಲಿ ನವಜಾತ ಶಿಶು ಪತ್ತೆ!
ನವಜಾತ ಶಿಶು ಪತ್ತೆ
ಗೋಪಾಲ್​ ಸೋಮಯ್ಯ
| Edited By: |

Updated on: Apr 11, 2026 | 5:50 PM

Share

ಮಡಿಕೇರಿ, ಏ.11: ಜನ್ಮ ನೀಡಿದ ಹೆತ್ತವರೇ ಮಗುವನ್ನು ಅನಾಥವಾಗಿ ಬಿಟ್ಟು ಹೋಗಿರುವ ಕರುಣಾಜನಕ ಘಟನೆಯೊಂದು ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಬೇತ್ರಿ ಗ್ರಾಮದಲ್ಲಿ ನಡೆದಿದೆ. ಕಾಫಿ ತೋಟವೊಂದರಲ್ಲಿ ಅಡಿಕೆ ಹಾಳೆಯಲ್ಲಿ ಸುತ್ತಿ ಮಲಗಿಸಲಾಗಿದ್ದ ನವಜಾತ ಹೆಣ್ಣು ಶಿಶುವನ್ನು ಸ್ಥಳೀಯರು ಮತ್ತು ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿ ರಕ್ಷಿಸಿದ್ದಾರೆ.

ಇಂದು (ಏಪ್ರಿಲ್ 11) ಬೇತ್ರಿ ಗ್ರಾಮದ ಕಾಫಿ ತೋಟದಲ್ಲಿ ಮಗುವಿನ ಅಳುವಿನ ಶಬ್ದ ಕೇಳಿದ ಸ್ಥಳೀಯರು ಹೋಗಿ ನೋಡಿದಾಗ, ಅಡಿಕೆ ಹಾಳೆಯಲ್ಲಿ ಸುತ್ತಿ ಮಲಗಿಸಲಾಗಿದ್ದ ನವಜಾತ ಶಿಶು ಕಂಡುಬಂದಿದೆ. ತಕ್ಷಣವೇ ಎಚ್ಚೆತ್ತ ಗ್ರಾಮಸ್ಥರು ಮಕ್ಕಳ ರಕ್ಷಣಾ ಘಟಕಕ್ಕೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಘಟಕದ ಸಿಬ್ಬಂದಿ ಮಗುವನ್ನು ಸುರಕ್ಷಿತವಾಗಿ ರಕ್ಷಿಸಿದ್ದಾರೆ. ಮಗುವು ಸ್ವಲ್ಪ ಅಸ್ವಸ್ಥಗೊಂಡಿದ್ದರಿಂದ ತಕ್ಷಣವೇ ಮಡಿಕೇರಿಯ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಮಗುವಿಗೆ ವೈದ್ಯರಿಂದ ಚಿಕಿತ್ಸೆ ಮತ್ತು ಆರೈಕೆ ನೀಡಲಾಗುತ್ತಿದ್ದು, ಶಿಶುವು ಪ್ರಾಣಾಪಾಯದಿಂದ ಪಾರಾಗಿದೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ಕೊಪ್ಪಳದಲ್ಲೂ ಲವ್ ಜಿಹಾದ್: ಯುವತಿಯರ ಅಶ್ಲೀಲ ವಿಡಿಯೋಗಳು ಪತ್ತೆ; ಸಿಡಿದೆದ್ದ ಹಿಂದೂ ಯುವಕರು

ಈ ಸಂಬಂಧ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನವಜಾತ ಶಿಶುವನ್ನು ಕಾಫಿ ತೋಟದಲ್ಲಿ ಬಿಟ್ಟು ಹೋದ ಪಾಪಿ ಪೋಷಕರು ಯಾರು? ಎಂಬ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಸುತ್ತಮುತ್ತಲಿನ ಆಸ್ಪತ್ರೆಗಳಲ್ಲಿ ಇತ್ತೀಚೆಗೆ ಹೆರಿಗೆಯಾದವರ ಮಾಹಿತಿ ಹಾಗೂ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗೋಪಾಲ್​ ಸೋಮಯ್ಯ
ಗೋಪಾಲ್​ ಸೋಮಯ್ಯ
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ
ಡೀಸೆಲ್​ ಟ್ಯಾಂಕರ್​​ನಲ್ಲಿ ತಾಂತ್ರಿಕ ದೋಷ, ಬಸ್​ ಸಂಚಾರ ಸ್ಥಗಿತ
ಡೀಸೆಲ್​ ಟ್ಯಾಂಕರ್​​ನಲ್ಲಿ ತಾಂತ್ರಿಕ ದೋಷ, ಬಸ್​ ಸಂಚಾರ ಸ್ಥಗಿತ
ಮಂತ್ರಿಗಳ ಮೇಲೆ ರಹಸ್ಯ ಕ್ಯಾಮೆರಾ ಕಣ್ಣು: ಸಚಿವರನ್ನ ಎಚ್ಚರಿಸಿದ ಡಿಕೆಶಿ
ಮಂತ್ರಿಗಳ ಮೇಲೆ ರಹಸ್ಯ ಕ್ಯಾಮೆರಾ ಕಣ್ಣು: ಸಚಿವರನ್ನ ಎಚ್ಚರಿಸಿದ ಡಿಕೆಶಿ
'ಸಿಎಂ ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್ ಮಾಡಿದ್ದರು'
'ಸಿಎಂ ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್ ಮಾಡಿದ್ದರು'