AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಡಗು ಜಿಲ್ಲೆಯಲ್ಲಿ ಮತ್ತೆ ಕಂಪಿಸಿದ ಭೂಮಿ, ಒಂದೇ ವಾರದಲ್ಲಿ 6 ಬಾರಿ ಕಂಪಿಸಿದ ಭೂಮಿ

ಕೊಡಗು ಜಿಲ್ಲೆಯ ಚೆಂಬು ಗ್ರಾಮದಲ್ಲಿ ಮಧ್ಯಾಹ್ನ 1.24ರ ಸುಮಾರಿಗೆ ಮತ್ತೆ ಭೂಕಂಪನ ಸಂಭವಿಸಿದೆ. ಕಳೆದ ಒಂದು ವಾರದಲ್ಲಿ 6 ಬಾರಿ ಭೂಮಿ ಕಂಪಿಸಿತ್ತು.

ಕೊಡಗು ಜಿಲ್ಲೆಯಲ್ಲಿ ಮತ್ತೆ ಕಂಪಿಸಿದ ಭೂಮಿ, ಒಂದೇ ವಾರದಲ್ಲಿ 6 ಬಾರಿ ಕಂಪಿಸಿದ ಭೂಮಿ
ಪ್ರಾತಿನಿಧಿಕ ಚಿತ್ರ
TV9 Web
| Edited By: ವಿವೇಕ ಬಿರಾದಾರ|

Updated on:Jul 02, 2022 | 2:26 PM

Share

ಕೊಡಗು: ಜಿಲ್ಲೆಯ ಚೆಂಬು ಗ್ರಾಮದಲ್ಲಿ ಮಧ್ಯಾಹ್ನ 1.24ರ ಸುಮಾರಿಗೆ ಮತ್ತೆ ಭೂಕಂಪನ (Earthquake) ಸಂಭವಿಸಿದೆ. ಕಳೆದ ಒಂದು ವಾರದಲ್ಲಿ 6 ಬಾರಿ ಭೂಮಿ ಕಂಪಿಸಿತ್ತು.  ಮಡಿಕೇರಿ (Madikeri) ತಾಲ್ಲೂಕಿನ ಸಂಪಾಜೆ, ಚೆಂಬು, ದಕ್ಷಿಣ ಕನ್ನಡ (Dakshina kannada) ಜಿಲ್ಲೆಯ ಸುಳ್ಯ ತಾಲೂಕಿನ ಕಲ್ಲುಗುಂಡಿ, ಗೂನಡ್ಕ ಭಾಗದಲ್ಲಿ ಕೂಡ ಭೂಮಿ ಕಂಪಿಸಿದ ಅನುಭವವಾಗಿದೆ.ಜಿಲ್ಲೆಯಲ್ಲಿ ನಿರಂತರವಾಗಿ ಭೂಕಂಪನ ಆಗುತ್ತಿದ್ದು, ಜನರಿಗೆ ಆತಂಕ ಹೆಚ್ಚಾಗುತ್ತಿದೆ.

ಇದನ್ನು ಓದಿ: ಕೊಡಗು ಭೂಕಂಪನದ ದೃಶ್ಯ ಸಿಸಿಟಿವಿಯಲ್ಲಿ ಸೆರೆ; ವಿಡಿಯೋ ಇಲ್ಲಿದೆ

2018ರಲ್ಲಿ ಜಿಲ್ಲೆಯಲ್ಲಿ ಇದೇ ರೀತಿ ಭೂಕಂಪನ ಆಗಿತ್ತು. ಅದೇ ವರ್ಷ ಪ್ರಾಕೃತಿಕ ವಿಕೋಪ ಸಂಭವಿಸಿತ್ತು. ಈ ಬಾರಿಯೂ ಪ್ರಾಕೃತಿಕ ವಿಕೋಪ ಸಂಭವಿಸುವ ಬಗ್ಗೆ ಜನರಿಗೆ ಭಯ ಶುರುವಾಗಿದೆ. ಜೂನ್ 28ರಂದು ಬೆಳಗ್ಗೆ 7.45ರ ಸುಮಾರಿಗೆ ಮಡಿಕೇರಿ ತಾಲೂಕಿನ ಕರಿಕೆ, ಪೆರಾಜೆ ಭಾಗಮಂಡಲ ಹಾಗೂ ಸಂಪಾಜೆ ಕರ್ಣಂಗೇರಿ ಸೇರಿ ಹಲವೆಡೆ ಭೂಕಂಪನ ಅನುಭವವಾಗಿದೆ.

ಇದಕ್ಕೂ ಮೊದಲು ಅಂದರೆ ವಾರದ ಹಿಂದೆ ಜಿಲ್ಲೆಯಲ್ಲಿ ಆಗಿದ್ದ ಭೂಕಂಪನ ದೃಢವಾಗಿದೆ. ಈ ಬಗ್ಗೆ ರಾಜ್ಯ ವಿಪತ್ತು ನಿರ್ವಹಣಾ ಕೋಶ ದೃಢಪಡಿಸಿದ್ದು, ರಿಕ್ಟರ್ ಮಾಪಕದಲ್ಲಿ 2.7ರಷ್ಟು ತೀವ್ರತೆ ದಾಖಲಾಗಿದೆ. ಭೂಕಂಪನದಿಂದಾಗಿ ಕೊಡಗು-ದಕ್ಷಿಣ ಕನ್ನಡ ಜಿಲ್ಲೆ ಗಡಿಭಾಗವಾದ ಸಂಪಾಜೆಯಲ್ಲಿ ಮನೆ ಗೋಡೆಗಳು ಬಿರುಕು ಬಿಟ್ಟಿದ್ದವು. ಜೂನ್ 28 ರ ಬೆಳಗ್ಗೆ 7.45 ಕ್ಕೆ ಭೂಮಿ ಕಂಪಿಸಿತ್ತು. ಕಂಪನದ ತೀವ್ರತೆಗೆ ಮನೆಯ ಕಂಬಗಳು ಅಲುಗಾಡಿವೆ. ಜೂನ್ 28 ರಂದು ಮಡಿಕೇರಿ ಲೂಕಿನ ಕರಿಕೆ, ಪೆರಾಜೆ ಭಾಗಮಂಡಲ ಹಾಗೂ ಸಂಪಾಜೆ ಕರ್ಣಂಗೇರಿ ಸೇರಿ ಹಲವೆಡೆ ಭೂಕಂಪನ ಅನುಭವಾಗಿದೆ. ಇನ್ನು ಮಡಿಕೇರಿ ನಗರದಲ್ಲೂ ಲಘು ಭೂಕಂಪನ ಆಗಿತ್ತು

ಇದನ್ನು ಓದಿ: ಕೊಡಗಿನಲ್ಲಿ ಹಲವೆಡೆ ಮತ್ತೆ ಭೂಕಂಪನ ಅನುಭವ! ಪ್ರಕೃತಿ ವಿಕೋಪ ಆತಂಕದಲ್ಲಿ ಜನರು

ಜೂನ್ 23ಕ್ಕೆ ಮಂಡ್ಯ ಜಿಲ್ಲೆಯ ಕೆಲವೆಡೆಯೂ ಜನರಿಗೆ ಮುಂಜಾನೆ 4.40ರ ಸುಮಾರಿಗೆ ಲಘು ಭೂಕಂಪನದ ಅನುಭವವಾಗಿತ್ತು. ಕೆ.ಆರ್.ಪೇಟೆ ತಾಲೂಕಿನ ಐಕನಹಳ್ಳಿ, ಚಿನ್ನೇನಹಳ್ಳಿ, ಮಾದಾಪುರ, ಗೊಂದಿಹಳ್ಳಿ, ಬಿದರಹಳ್ಳಿ, ಗೊಡೇಹೊಸಹಳ್ಳಿಯ ಗ್ರಾಮಗಳ ಜನರು ಭೂಕಂಪದಿಂದ ಆತಂಕಗೊಂಡಿದ್ದರು. ಹಾಸನ ಜಿಲ್ಲೆಯ, ಅರಕಲಗೂಡು, ಹೊಳೆನರಸೀಪುರ ತಾಲೂಕಿನ ಹಲವು ಗ್ರಾಮಗಳಲ್ಲಿ ನಸುಕಿನ 4.30ರಿಂದ 5 ಗಂಟೆಯ ಅವಧಿಯಲ್ಲಿ ಭೂಮಿಯು ಕಂಪಿಸಿತ್ತು

Published On - 2:17 pm, Sat, 2 July 22

Follow Us
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ