AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Earthquake: ಕೊಡಗು ಜಿಲ್ಲೆಯ ಹಲವೆಡೆ ಮತ್ತೆ ಕಂಪಿಸಿದ ಭೂಮಿ: ಚೆಂಬು ಗ್ರಾಮದಲ್ಲಿ ಭೂಮಿಯೊಳಗೆ ಭಾರೀ ಶಬ್ಧ

ಜಿಲ್ಲೆಯಲ್ಲಿ ಈ ಹಿಂದೆ ಕೂಡ ಹಲವು ಭಾರೀ ಭೂಮಿ ಕಂಪಿಸಿದ್ದು, ನಿರಂತರ ಭೂಕಂಪನವಾಗುತ್ತಿರುವ ಹಿನ್ನೆಲೆ  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜಿಲ್ಲೆಗೆ ಭೇಟಿ ನೀಡಿದ್ದರು.

Earthquake: ಕೊಡಗು ಜಿಲ್ಲೆಯ ಹಲವೆಡೆ ಮತ್ತೆ ಕಂಪಿಸಿದ ಭೂಮಿ: ಚೆಂಬು ಗ್ರಾಮದಲ್ಲಿ ಭೂಮಿಯೊಳಗೆ ಭಾರೀ ಶಬ್ಧ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Jul 15, 2022 | 12:19 PM

Share

ಕೊಡಗು: ಜಿಲ್ಲೆಯ ಹಲವೆಡೆ ಮತ್ತೆ ಭೂಮಿ ಕಂಪಿಸಿದೆ. ಜಿಲ್ಲೆಯ ಮಡಿಕೇರಿ ತಾಲೂಕಿನ ಗ್ರಾಮಗಳಾದ ಚೆಂಬು, ಪೆರಾಜೆ ಗೂನಡ್ಕ ವ್ಯಾಪ್ತಿಯಲ್ಲಿ ಬೆಳಗ್ಗೆ 10.10ಕ್ಕೆ ಭೂಮಿಯೊಳಗೆ ಭಾರೀ ಶಬ್ಧವಾಗಿದ್ದು, ಭೂಮಿ ಕಂಪಿಸಿರುವ (Earthquake) ಅನುಭವ ಉಂಟಾಗಿದೆ. ಇದು ಈ ಭಾಗದಲ್ಲಿ ನಡೆಯುತ್ತಿರುವ 10ನೇ ಕಂಪನವಾಗಿದೆ. ದೊಡ್ಡ ಸದ್ದಿನೊಂದಿಗೆ ಭೂಮಿ ಕಂಪಿಸಿದ್ದು, ಮನೆಯಲ್ಲಿದ್ದವರು ಭಯದಿಂದ ಹೊರಗೋಡಿ ಬಂದರು ಎಂದು ತಿಳಿದುಬಂದಿದೆ.

ವಿಜ್ಞಾನಿಗಳ ವರದಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು -ಸಿಎಂ ಬೊಮ್ಮಾಯಿ

ಜಿಲ್ಲೆಯಲ್ಲಿ ಈ ಹಿಂದೆ ಕೂಡ ಹಲವು ಭಾರೀ ಭೂಮಿ ಕಂಪಿಸಿದ್ದು, ನಿರಂತರ ಭೂಕಂಪನವಾಗುತ್ತಿರುವ ಹಿನ್ನೆಲೆ  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜಿಲ್ಲೆಗೆ ಭೇಟಿ ನೀಡಿ ಭೂಕಂಪನ  ಅಧ್ಯಯನಕ್ಕೆ ಭೌಗೋಳಿಕ ರಾಷ್ಟ್ರೀಯ ಸಂಸ್ಥೆಗೆ (National Institute of Geographical) ಪತ್ರ ಬರೆದಿದ್ದೇನೆ. ಭೂಕಂಪನದ ವಿಸ್ತೃತ ಅಧ್ಯಯನಕ್ಕೆ ಮನವಿ ಮಾಡಿದ್ದೇನೆ. ವಿಜ್ಞಾನಿಗಳ ಅಧ್ಯಯನ ವರದಿ ಆಧರಿಸಿ ಮುಂದಿನ ಕ್ರಮಕೈಗೊಳ್ಳಲಾಗುವುದು ಎಂದು ಹೇಳಿದ್ದರು.

ಇದನ್ನೂ ಓದಿ: Karnataka Rain: ಭಾರೀ ಮಳೆಯಿಂದಾಗಿ ನೂರಾರು ಎಕರೆ ಭತ್ತದ ಗದ್ದೆಗೆ ನುಗ್ಗಿದ ನೀರು: ಬೆಳಗಾವಿ ಜಿಲ್ಲೆಯಲ್ಲಿ ಮಳೆ ಅವಾಂತರ

ಭೂಕುಸಿತ ತಡೆಯಲು ಹಲವು ತಂತ್ರಜ್ಞಾನ ಬಳಕೆಗೆ ಚಿಂತನೆ ಮಾಡಲಾಗುತ್ತಿದೆ. ಭೂಕುಸಿತ ತಡೆ ಸಂಬಂಧ ಅಮೃತ್ ವಿಶ್ವವಿದ್ಯಾಲಯ ಸಲಹೆ ನೀಡಲಿದೆ. ಗ್ರಾಮಾಂತರ ಪ್ರದೇಶದಲ್ಲಿ ಟಾಸ್ಕ್​​ ಫೋರ್ಸ್​ ಮಾಡಲಾಗಿದೆ. ವಿದ್ಯುತ್ ನಿರ್ವಹಣೆಗೆ ವಿಶೇಷ ಕಂಟ್ರೋಲ್ ರೂಂ ಸ್ಥಾಪಿಸಲಾಗಿದೆ ಎಂದರು.

ಅಗತ್ಯಬಿದ್ದರೆ ಜಿಲ್ಲಾಧಿಕಾರಿಗೆ ಹೆಚ್ಚುವರಿ ಹಣ ನೀಡಲಾಗುವುದು. ಕಾಳಜಿ ಕೇಂದ್ರಗಳಲ್ಲಿ ಇರುವ ಸಂತ್ರಸ್ತರಿಗೆ ಅಗತ್ಯ ಸೌಲಭ್ಯ ನೀಡಿ. ಸಂಬಂಧಿಕರ ಮನೆಯಲ್ಲಿರುವ ಸಂತ್ರಸ್ತರಿಗೂ ಪಡಿತರ ವಿತರಿಸುತ್ತೇವೆ. ಕಾಳಜಿ ಕೇಂದ್ರದಿಂದ ಮನೆಗೆ ಮರಳುವಾಗಲೂ ಪಡಿತರ ನೀಡಬೇಕು ಎಂದು ಅಧಿಕಾರಿಗಳಿಗೆ ಅವರು ಸೂಚಿಸಿದರು.

ಇದನ್ನೂ ಓದಿ: Rain Updates: ವ್ಯಾಪಕ ಮಳೆಯಿಂದ ಮಹಾರಾಷ್ಟ್ರ, ಗುಜರಾತ್​ನಲ್ಲಿ ರೆಡ್ ಅಲರ್ಟ್​ ಘೋಷಣೆ; ಕರ್ನಾಟಕದಲ್ಲೂ ಪ್ರವಾಹ ಭೀತಿ

ಮಳೆ ಅವಾಂತರ: ಧರೆಗುರುಳಿದ ವಿದ್ಯುತ್​ ಕಂಬಗಳು

ಜಿಲ್ಲೆಯಾದ್ಯಂತ ವರುಣಾರ್ಭಟ ಹಿನ್ನೆಲೆ ವಿದ್ಯುತ್ ಸಂಪರ್ಕ ಕಡಿತವಾಗಿದ್ದು, ಕೆಲ ಪಟ್ಟಣ, ಹಳ್ಳಿಗಳಲ್ಲಿ ಕರೆಂಟ್​ ಇಲ್ಲದೇ ಜನರು ಪರದಾಡುವಂತ್ತಾಗಿದೆ. 15 ದಿನಗಳಲ್ಲಿ 650 ವಿದ್ಯುತ್ ಕಂಬಗಳು ಮಳೆಯಿಂದಾಗಿ ಧರೆಗುರುಳಿವೆ. ಇನ್ನೂ ಅಂಗನವಾಡಿ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ಇಂದು ರಜೆ ಘೋಷಿಸಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಭಾರೀ ಮಳೆಗೆ ಜಿಲ್ಲೆಯಾದ್ಯಂತ ವಿದ್ಯುತ್ ವ್ಯತ್ಯಯ ಉಂಟಾಗಿದ್ದು, ವಿದ್ಯುತ್ ಇಲ್ಲದೆ ಗ್ರಾಮೀಣ ಕೊಡಗು ಭಾಗದಲ್ಲಿ ಜನರು ಪರದಾಡುತ್ತಿದ್ದಾರೆ. ವಿದ್ಯುತ್ ವ್ಯವಸ್ಥೆ ಮರುಸ್ಥಾಪನೆಗೆ ಚೆಸ್ಕಾಂ ಹರಸಾಹಸ ಪಡುತ್ತಿದೆ. ಜಿಲ್ಲೆಯ ಭಾಗಮಂಡಲ ವ್ಯಾಪ್ತಿಯಲ್ಲಿ ವರ್ಷಧಾರೆ ಹಿನ್ನೆಲೆ, ಭಾಗಮಂಡಲದಲ್ಲಿ ಕಾವೇರಿ ನದಿ ಉಕ್ಕಿ ಹರಿಯುತ್ತಿದೆ. ಭಾಗಮಂಡಲ-ನಾಪೋಕ್ಲು ರಸ್ತೆ ಸಂಪರ್ಕ‌ಕಡಿತವಾಗಿದ್ದು, ಭಾಗಮಂಡಲ-ತಲಕಾವೇರಿ ರಸ್ತೆಗೆ ಎರಡು ಮರಗಳು ಉರುಳಿವೆ.

Published On - 12:16 pm, Fri, 15 July 22

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್