AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಡಗಿನಲ್ಲಿ ಮುಂದಿನ ಎರಡು ದಿನಗಳ‌ ಕಾಲ ರೆಡ್ ಅಲರ್ಟ್; ಬೆಟ್ಟ-ಗುಡ್ಡ, ನದಿ ಪಾತ್ರದ ಜನರಿಗೆ ಎಚ್ಚರಿಕೆಯಿಂದಿರಲು ಸೂಚನೆ

ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಬೆಳಗಾವಿ ಸೇರಿದಂತೆ ಕರ್ನಾಟಕದ ಹಲವೆಡೆ ವರಾಣಾರ್ಭಟ ಹೆಚ್ಚಿದ್ದು, ಗುಡ್ಡ ಕುಸಿತ ಸೇರಿದಂತೆ ಅವಘಡಗಳನ್ನ ಸೃಷ್ಟಿ ಮಾಡಿದೆ. ಇದರಿಂದ ಎಚ್ಚೆತ್ತ ಕೊಡಗು ಜಿಲ್ಲಾಡಳಿತ, ಮುಂದಿನ ಎರಡು ದಿನಗಳ ಕಾಲ ಕೊಡಗು ಜಿಲ್ಲೆಗೆ ರೆಡ್​ ಅಲರ್ಟ್​ ಘೋಷಣೆ ಮಾಡಿ, ಜನರಿಗೆ ಎಚ್ಚರಿಕೆಯಿಂದ ಇರಲು ಸೂಚಿಸಿದೆ. ಅದರಲ್ಲೂ ಕಳೆದೆರಡು ವರ್ಷಗಳ ಹಿಂದೆ ಜಿಲ್ಲೆಯಲ್ಲಿ ಗುಡ್ಡ ಕುಸಿದು ದೊಡ್ಡ ಅನಾಹುತವೊಂದು ಸೃಷ್ಟಿಯಾಗಿತ್ತು. ಈ ಹಿನ್ನಲೆ ಈ ಬಾರಿ ಅನಾಹುತವಾಗುವ ಮೊದಲೇ ಕಟ್ಟುನಿಟ್ಟಿನ ಕ್ರಮಕ್ಕೆ ಜಿಲ್ಲಾಡಳಿತ ಮುಂದಾಗಿದೆ.

ಕೊಡಗಿನಲ್ಲಿ ಮುಂದಿನ ಎರಡು ದಿನಗಳ‌ ಕಾಲ ರೆಡ್ ಅಲರ್ಟ್; ಬೆಟ್ಟ-ಗುಡ್ಡ, ನದಿ ಪಾತ್ರದ ಜನರಿಗೆ ಎಚ್ಚರಿಕೆಯಿಂದಿರಲು ಸೂಚನೆ
ಕೊಡಗಿನಲ್ಲಿ ಮುಂದಿನ ಎರಡು ದಿನಗಳ‌ ಕಾಲ ರೆಡ್ ಅಲರ್ಟ್
Gopal AS
| Updated By: ಕಿರಣ್ ಹನುಮಂತ್​ ಮಾದಾರ್|

Updated on: Jul 30, 2024 | 3:03 PM

Share

ಕೊಡಗು, ಜು.30: ಕರ್ನಾಟಕದ ಹಲವೆಡೆ ಭಾರೀ ಮಳೆ ಆಗುತ್ತಿದ್ದು, ಉತ್ತರ ಕನ್ನಡ, ಚಿಕ್ಕಮಗಳೂರು ಜಿಲ್ಲೆಗಳು ಸೇರಿದಂತೆ ಕೆಲವೆಡೆ ಗುಡ್ಡ ಕುಸಿತ ಆಗಿ, ಅವಘಡಗಳು ಸಂಭವಿಸಿವೆ. ಈ ಹಿನ್ನಲೆ ಎಚ್ಚೆತ್ತ ಕೊಡಗು(Kodagu) ಜಿಲ್ಲಾಡಳಿತ ಮುಂದಿನ ಎರಡು ದಿನಗಳ ಕಾಲ ಕೊಡಗು ಜಿಲ್ಲೆಗೆ ರೆಡ್​ ಅಲರ್ಟ್​ ಘೋಷಣೆ ಮಾಡಿ, ಗುಡ್ಡ, ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರಲು ಸೂಚನೆ ನೀಡಿದೆ. ಇದರಿಂದ ಸಧ್ಯ ಕೊಡಗು ಜಿಲ್ಲೆಯ ಜನ ಆತಂಕದಲ್ಲಿದ್ದಾರೆ.

ಕಾವೇರಿ ಹಿನ್ನೀರಿನಲ್ಲಿ ಸಿಲುಕಿದ್ದ 6 ಜನರು & ಜಾನುವಾರು ರಕ್ಷಣೆ

ಜಿಲ್ಲೆಯ ವಿರಾಜಪೇಟೆ ತಾಲೂಕಿನ ಬೇತ್ರಿ ಗ್ರಾಮದಲ್ಲಿ ಭಾರೀ ಮಳೆಗೆ ಕಾವೇರಿ ಹಿನ್ನೀರಿನಲ್ಲಿ ಸಿಲುಕಿದ್ದ 6 ಜನರು ಸೇರಿದಂತೆ  ಜಾನುವಾರುಗಳನ್ನು ರಕ್ಷಣೆ ಮಾಡಲಾಗಿದೆ. ಹೌದು, ಮನೆಯಲ್ಲಿದ್ದ 6 ಜನರು, 2 ಜಾನುವಾರು ಮತ್ತು 2 ನಾಯಿಗಳನ್ನು ಮಡಿಕೇರಿ ಅಗ್ನಿಶಾಮಕ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಪ್ರವಾಹದಿಂದ ದ್ವೀಪದಂತಾಗಿದ್ದ ಗ್ರಾಮದಲ್ಲಿ ನಿವಾಸಿಗಳು ಸಿಲುಕಿದ್ದರು. ಕೂಡಲೇ ಅಗ್ನಿಶಾಮಕ ಸಿಬ್ಬಂದಿ ಅವರನ್ನು ರಕ್ಷಿಸಿ, ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ.

ಇದನ್ನೂ ಓದಿ:ಕೇರಳದ ವಯನಾಡಿನಲ್ಲಿ ಗುಡ್ಡ ಕುಸಿತ, ಐವರು ಸಾವು, 100ಕ್ಕೂ ಹೆಚ್ಚು ಮಂದಿ ಸಿಲುಕಿರುವ ಶಂಕೆ

ವಿದ್ಯುತ್ ತಂತಿ ಸ್ಪರ್ಷಿಸಿ 6 ಜಾನುವಾರು ಸಾವು

ಇನ್ನು ವರುಣಾರ್ಭಟಕ್ಕೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು 6 ಜಾನುವಾರುಗಳು ಸಾವನ್ನಪ್ಪಿದ ಘಟನೆ ಪೊನ್ನಂಪೇಟೆ ತಾಲೂಕಿನ ತೆರಾಲು ಗ್ರಾಮದಲ್ಲಿ ನಡೆದಿದೆ. ಮೃತ ಹಸುಗಳು ಬೊಜ್ಜಂಗಡ ನಟರಾಜ್ ಎಂಬುವರಿಗೆ ಸೇರಿದ್ದು, ರೈತ ಕಂಗಾಲಾಗಿದ್ದಾನೆ. ಜೊತೆಗೆ ಮಡಿಕೇರಿ ತಾಲೂಕಿನ ಪೆರಾಜೆ ಬಳಿಯ ಮಜಿಕೊಡಿ ಹೊಸಗದ್ದೆ ಯಲ್ಲಿ ಏಕಾಏಕಿ ಗುಡ್ಡ ಕುಸಿದುಬಿದ್ದಿದ್ದು, ಅಡಕೆ ತೋಟಗಳಿಗೆ ಹಾನಿಯಾಗಿದೆ. ಯಾವುದೇ ಮನೆಗಳು ಇರದೇ ಇರುವುದರಿಂದ ಅನಾಹುತ ತಪ್ಪಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ