ಕೊಡಗು: ಶನಿವಾರಸಂತೆ ಸಮೀಪ ಎಳನೀರುಗುಂಡಿಯಲ್ಲಿ ನೀರಿನ ಗುಂಡಿಗೆ ಬಿದ್ದು ಮರಿಯಾನೆ ಸಾವು

| Updated By: ಆಯೇಷಾ ಬಾನು

Updated on: Feb 18, 2023 | 12:24 PM

ಎಳನೀರುಗುಂಡಿಯಲ್ಲಿ ಗುಂಡಿಗೆ ಮರಿಯಾನೆ ಬಿದ್ದು ಮೃತಪಟ್ಟಿದೆ. ಚಂದ್ರಶೇಖರ್ ಎಂಬುವರಿಗೆ ಸೇರಿದ ತೋಟದಲ್ಲಿ ಘಟನೆ ನಡೆದಿದ್ದು ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕೊಡಗು: ಶನಿವಾರಸಂತೆ ಸಮೀಪ ಎಳನೀರುಗುಂಡಿಯಲ್ಲಿ ನೀರಿನ ಗುಂಡಿಗೆ ಬಿದ್ದು ಮರಿಯಾನೆ ಸಾವು
ಸಾಂದರ್ಭಿಕ ಚಿತ್ರ
Follow us on

ಕೊಡಗು: ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಶನಿವಾರಸಂತೆ ಸಮೀಪದ‌ ಎಳನೀರುಗುಂಡಿಯಲ್ಲಿ ಗುಂಡಿಗೆ ಮರಿಯಾನೆ ಬಿದ್ದು ಮೃತಪಟ್ಟಿದೆ. ಚಂದ್ರಶೇಖರ್ ಎಂಬುವರಿಗೆ ಸೇರಿದ ತೋಟದಲ್ಲಿ ಘಟನೆ ನಡೆದಿದ್ದು ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನೀರಿನ ಟ್ಯಾಂಕ್‌ ನಿರ್ಮಿಸಲು ಗುಂಡಿ ತೆಗೆಯಲಾಗಿತ್ತು. ಆನೆ ಕಳೇಬರ‌ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

ದೇವರಾಯ ಸುತ್ತಮುತ್ತ ಚಿರತೆ ಪ್ರತ್ಯಕ್ಷ

ತುಮಕೂರು ತಾಲೂಕಿನ ದೇವರಾಯ ಸುತ್ತಮುತ್ತ ಚಿರತೆ ಪ್ರತ್ಯಕ್ಷವಾಗಿದೆ. ಚಿರತೆ ಓಡಾಟ ಕಂಡು ಸ್ಥಳೀಯರು ಭಯಭೀತರಾಗಿದ್ದು ಆಚೆ ಓಡಾಡಲು ಹಿಂಜರಿಯುತ್ತಿದ್ದಾರೆ. ಚಿರತೆ ಓಡಾಡುತ್ತಿರುವ ದೃಶ್ಯ ಶಿವಪ್ರಕಾಶ್ ಎನ್ನುವವರ ನಿವಾಸದ ಸಿಸಿಕ್ಯಾಮರಾದಲ್ಲಿ ಸೆರೆಯಾಗಿದೆ. ಈ ಚಿರತೆ ಕಳೆದೊಂದು ತಿಂಗಳಲ್ಲಿ 5 ಬೀದಿನಾಯಿ ಬಲಿ ಪಡೆದಿದೆ.

ಇದನ್ನೂ ಓದಿ: ತುಮಕೂರು: ಅರಣ್ಯ ಇಲಾಖೆ ಅಧಿಕಾರಿಗಳು ಇಟ್ಟಿದ್ದ ಬೋನಿಗೆ ಬಿದ್ದ ಹೆಣ್ಣು ಚಿರತೆ; ಕೊಂಚ ನಿರಾಳರಾದ ಗ್ರಾಮಸ್ಥರು

ವಿದ್ಯುತ್‌ ಸ್ಪರ್ಶಿಸಿ ಅಸ್ವಸ್ಥಗೊಂಡಿದ್ದ ಕಾಡಾನೆ ರಕ್ಷಣೆ: ಬಂಡೀಪುರ ಅರಣ್ಯ ಸಿಬ್ಬಂದಿ, ವೈದ್ಯರ ಕಾರ್ಯಕ್ಕೆ ಪ್ರಧಾನಿ ಮೋದಿಯಿಂದ ಮೆಚ್ಚುಗೆ

ಚಾಮರಾಜನಗರ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ(Bandipur Tiger Reserve And National Park) ಓಂಕಾರ ವನ್ಯಜೀವಿ ವಲಯದ ವ್ಯಾಪ್ತಿಗೆ ಬರುವ ಬರಗಿ ಗ್ರಾಮದಲ್ಲಿ ಜಮೀನಿಗೆ ಅಳವಡಿಸಲಾಗಿದ್ದ ಅಕ್ರಮ ವಿದ್ಯುತ್‌ ತಂತಿ ಬೇಲಿಯನ್ನು ಸ್ಪ‍ರ್ಶಿಸಿ ಹೆಣ್ಣು ಕಾಡಾನೆ ತೀವ್ರವಾಗಿ ಅಸ್ವಸ್ಥಗೊಂಡಿತ್ತು. ಸದ್ಯ ಅರಣ್ಯ ಅಧಿಕಾರಿಗಳು ಹಾಗೂ ಪಶುವೈದ್ಯರು ಯಶಸ್ವಿಯಾಗಿ ಹೆಣ್ಣು ಕಾಡಾನೆಯನ್ನು(Elephant Rescue) ರಕ್ಷಿಸಿದ್ದಾರೆ. ಬಂಡೀಪುರ ಅರಣ್ಯ ಸಿಬ್ಬಂದಿ, ವೈದ್ಯರ ಕಾರ್ಯಕ್ಕೆ ಟ್ವೀಟ್ ಮಾಡವ ಮೂಲಕ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 12:24 pm, Sat, 18 February 23