AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಮಾರಾಮಾರಿ: ಇಬ್ಬರು ಕಾಂಗ್ರೆಸ್ ಕಾರ್ಯಕರ್ತರ ಮೇಲೆ‌ ಕತ್ತಿಯಿಂದ‌ ಹಲ್ಲೆ!

ರಾಜಕೀಯ ದ್ವೇಷದ ಹಿನ್ನೆಲೆ ಸೋದರರು ಕತ್ತಿಯಿಂದ ಹಲ್ಲೆ ನಡೆಸಿದ್ದಾರೆ. ಸದ್ಯ ಮೂವರು ಸಹೋದರರಿಗಾಗಿ ಹುಡುಕಾಟ ನಡೆಸಿದ್ದು ತಲೆಮರೆಸಿಕೊಂಡಿದ್ದಾರೆ.

ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಮಾರಾಮಾರಿ: ಇಬ್ಬರು ಕಾಂಗ್ರೆಸ್ ಕಾರ್ಯಕರ್ತರ ಮೇಲೆ‌ ಕತ್ತಿಯಿಂದ‌ ಹಲ್ಲೆ!
ಹಲ್ಲೆಗೊಳಗಾದ ಕಾಂಗ್ರೆಸ್ ಕಾರ್ಯಕರ್ತ
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on: Sep 28, 2022 | 1:24 PM

Share

ಕೊಡಗು: ಬಿಜೆಪಿ ಕಾರ್ಯಕರ್ತರಿಂದ ಇಬ್ಬರು ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಕತ್ತಿಯಿಂದ ಹಲ್ಲೆ ಮಾಡಿರುವಂತಹ ಘಟನೆ ಜಿಲ್ಲೆಯ ಮಡಿಕೇರಿ ತಾಲೂಕಿನ ಹೊಸ್ಕೇರಿ ಗ್ರಾಮದಲ್ಲಿ ನಡೆದಿದೆ. ಜಿಲ್ಲಾ ಕಾಂಗ್ರೆಸ್​ ಘಟಕದ ಪ್ರಧಾನ ಕಾರ್ಯದರ್ಶಿ ಯಶ್ ದೋಲ್ಪಾಡಿ, ಖಜಾಂಚಿ ಚಂದನ್​ಗೆ ಗಂಭೀರ ಗಾಯವಾಗಿದ್ದು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಸೋದರರಾದ ಹೊಸ್ಕೇರಿ ಗ್ರಾ.ಪಂ. ಅಧ್ಯಕ್ಷ, ಬಿಜೆಪಿ ಕಾರ್ಯಕರ್ತ ಪ್ರಭುಶೇಖರ, ಆನಂದ್ ರಘು, ತಾಲೂಕು ಪಂಚಾಯಿತಿ ಮಾಜಿ ಸದಸ್ಯ ರವೀಂದ್ರರಿಂದ ಹಲ್ಲೆ ಮಾಡಲಾಗಿದೆ ಎನ್ನಲಾಗುತ್ತಿದೆ. ರಾಜಕೀಯ ದ್ವೇಷದ ಹಿನ್ನೆಲೆ ಸೋದರರು ಕತ್ತಿಯಿಂದ ಹಲ್ಲೆ ನಡೆಸಿದ್ದಾರೆ. ಸದ್ಯ ಮೂವರು ಸಹೋದರರಿಗಾಗಿ ಹುಡುಕಾಟ ನಡೆಸಿದ್ದು ತಲೆಮರೆಸಿಕೊಂಡಿದ್ದಾರೆ. ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಜಿಮ್​​ಗೆ ತೆರಳುತ್ತಿದ್ದಾಗ ಹೃದಯಾಘಾತವಾಗಿ ಯುವಕ ಸಾವು

ಧಾರವಾಡ: ಜಿಮ್‌ಗೆ ತೆರಳುತ್ತಿದ್ದಾಗ ತೀವ್ರ ಹೃದಯಾಘಾತದಿಂದ ಯುವಕ ಸಾವನ್ನಪ್ಪಿರುವಂತಹ ಘಟನೆ ನಗರದ ಸವದತ್ತಿ ರಸ್ತೆಯ ಪಾಟೀಲ್ ಜಿಮ್ ಎದುರಿಗೆ ನಡೆದಿದೆ. ರಸ್ತೆಯಲ್ಲಿ ಬೀಳುತ್ತಿರೋ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಧಾರವಾಡ ತಾಲೂಕಿನ ಗರಗ್ ಗ್ರಾಮದ ಸಂಗಪ್ಪ ಬಳಿಗೇರ (28) ಮೃತ ಯುವಕ. ಜ್ಯೋತಿ ತಾಲೀಮಿನ ಸಂಗಪ್ಪ ಪೈಲ್ವಾನ್ ಆಗಿದ್ದ. ಇಂದು ಜಿಮ್‌ಗೆ ಬರುವಾಗ ತೀವ್ರ ಹೃದಯಾಘಾತವಾಗಿ ಒಮ್ಮೆಲೇ ರಸ್ತೆಯಲ್ಲಿ ಬಿದಿದ್ದು, ಸ್ಥಳದಲ್ಲಿಯೇ ಸಂಗಪ್ಪ ಮೃತಪಟ್ಟಿದ್ದಾರೆ. ಉಪನಗರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮಕ್ಕಳ ಕಳ್ಳರ ಎಂದು ತಿಳಿದು ಮಾನಸಿಕ‌ ಅಸ್ವಸ್ಥತನನ್ನು ಥಳಿಸಿದ ಜನ

ಹಾಸನ: ಹಾಸನ ಜಿಲ್ಲೆಗೂ ಮಕ್ಕಳ ಕಳ್ಳರ ವದಂತಿ ಕಾಲಿಟ್ಟಿದ್ದು ಜನರಲ್ಲಿ ಆತಂಕ ಸೃಷ್ಟಿಯಾಗಿದೆ. ಮಕ್ಕಳ‌‌ ಕಳ್ಳ‌ ಎಂದು ಭಾವಿಸಿ ಮಾನಸಿಕ ಅಸ್ವಸ್ಥತನ‌‌ ಮೇಲೆ ಹಲ್ಲೆ ಮಾಡಿರುವಂತಹ ಘಟನೆ ಹಾಸನ ತಾಲ್ಲೂಕಿನ, ಅವ್ವೇರಹಳ್ಳಿಕೊಪ್ಪಲು ಗ್ರಾಮದಲ್ಲಿ ನಡೆದಿದೆ. ಕಳೆದ ಮೂರು ದಿನಗಳ ಹಿಂದೆ ನಡೆದಿರುವ ಘಟನೆಯ ವಿಡಿಯೋ ವೈರಲ್ ಆಗಿದೆ. ಸಕಲೇಶಪುರ ಪಟ್ಟಣದಲ್ಲಿ ಹಲವು ತಿಂಗಳುಗಳಿಂದ ರಸ್ತೆ ಬದಿಯಲ್ಲಿ ಮಾನಸಿಕ ಅಸ್ವಸ್ಥ ವಾಸಿಸುತ್ತಿದ್ದ. ಮಕ್ಕಳ ಕಳ್ಳ ಎಂದು ಆತಂಕಗೊಂಡು ಮಾತು ಬಾರದ ಮಾನಸಿಕ‌ ಅಸ್ವಸ್ಥತನನ್ನು ಹಿಡಿದು ಜನ ಥಳಿಸಿದ್ದಾರೆ. ಹಲ್ಲೆ ಮಾಡಿದವರಿಗೆ ಪೊಲೀಸರು ಎಚ್ಚರಿಕೆ ನೀಡಿ ಕಳುಹಿಸಿದ್ದಾರೆ. ಗೊರೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ.

ಪೆಟ್ರೋಲ್ ಕದಿಯುತ್ತಿದ್ದ ಕಳ್ಳನಿಂದ ವೃದ್ಧನ ಮೇಲೆ ಹಲ್ಲೆ

ಚಿತ್ರದುರ್ಗ: ಪೆಟ್ರೋಲ್ ಕಳ್ಳತನ ಕಂಡು ಕೂಗಿದ ವೃದ್ಧನ ಮೇಲೆ ಕಳ್ಳನಿಂದ ಹಲ್ಲೆ ಮಾಡಿರುವಂತಹ ಘಟನೆ ತಾಲೂಕಿನ ಹಳೇರಂಗಾಪುರದಲ್ಲಿ ನಡೆದಿದೆ. ಓಬಣ್ಣ ಹಲ್ಲೆಗೊಳಗಾದ ವೃದ್ಧ. ದಾವಣಗೆರೆ ಜಿಲ್ಲೆ ಮಾಯಕೊಂಡ ಗ್ರಾಮದ ಆರೋಪಿ ವಸಂತ್ ನಾಯ್ಕ್ ಚಾಕು ಇರಿದಿದ್ದಾನೆ. ಆರೋಪಿಯನ್ನು ಥಳಿಸಿ ಸ್ಥಳೀಯರು ಪೊಲೀಸರಿಗೆ ಒಪ್ಪಿಸಿದ್ದಾರೆ. ಗಾಯಾಳು ಓಬಣ್ಣ ಚಿತ್ರದುರ್ಗ ನಗರದಲ್ಲಿನ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಭರಮಸಾಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಜೆಡಿಎಸ್ ಹಾಗೂ ಬಿಜೆಪಿ ಕಾರ್ಯಕರ್ತರ ಮದ್ಯೆ ಮಾರಾಮಾರಿ ಕೇಸ್!

ಯಾದಗಿರಿ: ಜೆಡಿಎಸ್ ಹಾಗೂ ಬಿಜೆಪಿ ಕಾರ್ಯಕರ್ತರ ಮದ್ಯೆ ಮಾರಾಮಾರಿ ನಡೆದಿದ್ದು, ಎರಡು ಪಕ್ಷದ ಕಾರ್ಯಕರ್ತರ ಮೇಲೆ ಕೇಸ್ ದಾಖಲು ಮಾಡಲಾಗಿದೆ. ಯಾದಗಿರಿ ತಾಲೂಕಿನ ಸಾವೂರು ಗ್ರಾಮದಲ್ಲಿ ಅಡಿಗಲ್ಲು ಸಮಾರಂಭದಲ್ಲಿ ಬ್ಯಾನರ್ ವಿಚಾರಕ್ಕೆ ಘಟನೆ ನಡೆದಿದೆ. ಜೆಡಿಎಸ್ ಶಾಸಕ ನಾಗನಗೌಡ ಕಂದಕೂರ್ ಹಾಗೂ ಪರಿಷತ್ ಸದಸ್ಯ ಬಾಬುರಾವ್ ಚಿಂಚನಸೂರ್ ಸಮ್ಮುಖದಲ್ಲಿ ನಡೆದಿದ್ದ ಘಟನೆ ನಡೆದಿದೆ ಎನ್ನಲಾಗುತ್ತಿದೆ. ಸೈದಾಪುರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲು ಮಾಡಲಾಗಿದೆ. ಜೆಡಿಎಸ್​ನ ಬಂದಪ್ಪಗೌಡ ಹಾಗೂ ಬಿಜೆಪಿಯ ಶಿವರಾಜ್ ಸೇರಿ ಇತರರ ಮೇಲೆ ಕೇಸ್ ಹಾಕಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!