ಮಂಗಳೂರು: ಮಂಗಳೂರಿನ ಕೊಂಕನಾಡಿ ಬಳಿ ಆಟೋದಲ್ಲಿ (mangaluru Auto Blast) ಸಂಭವಿಸಿದ ನಿಗೂಢ ಸ್ಫೋಟ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಉಗ್ರರ ಲಿಂಕ್ ಇರುವ ಶಂಕೆಗಳು ವ್ಯಕ್ತವಾಗುತ್ತಿವೆ. ಈ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲೆಡೆ ಪೊಲೀಸರು ಕಟ್ಟೆಚ್ಚರವಹಿಸಿದ್ದಾರೆ. ಅದರಂತೆ ಮಡಿಕೇರಿ ನಗರದ ಪ್ರಮುಖ ಪ್ರದೇಶಗಳಲ್ಲಿ ಬಾಂಬ್ ಪತ್ತೆ ದಳ, ಶ್ವಾನದಳದ ಸಿಬ್ಬಂದಿಯಿಂದ ತಪಾಸಣೆ ನಡೆಸಿದೆ.
ಮಂಗಳೂರಿನಲ್ಲಿ ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಫೋಟ ಬೆನ್ನಲ್ಲೇ ಕೊಡಗು ಜಿಲ್ಲೆಯಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದ್ದು, ಮಡಿಕೇರಿ ನಗರದ ಪ್ರಮುಖ ಪ್ರದೇಶಗಳಲ್ಲಿ ಬಾಂಬ್ ಪತ್ತೆ ದಳ, ಶ್ವಾನದಳದ ಸಿಬ್ಬಂದಿ ಪರಿಶೀಲನೆ ನಡೆಸಿದ್ದಾರೆ.
ಮಡಿಕೇರಿಯ ಕೆಎಸ್ಆರ್ಟಿಸಿ ಬಸ್ ನಿಲ್ದಾಣ, ಡಿಸಿ ಕಚೇರಿ, ಕೋರ್ಟ್ ಆವರಣ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ಬಾಂಬ್ ಪತ್ತೆ ದಳ, ಶ್ವಾನದಳದ ತಪಾಸಣೆ ನಡೆಸಿದೆ.
ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ