ಅಕ್ಟೋಬರ್ 17ರಂದು ಕಾವೇರಿ ತೀರ್ಥೋದ್ಭವ
ಜೀವನದಿಯಾದ ಕಾವೇರಿ ತೀರ್ಥೋದ್ಭವಕ್ಕೆ ಮುಹೂರ್ತ ನಿಗದಿಯಾಗಿದೆ. ಅಕ್ಟೋಬರ್ 17ರ ಬೆಳಗ್ಗೆ 7.40ಕ್ಕೆ ಕಾವೇರಿ ತೀರ್ಥೋದ್ಭವವಾಗಲಿದೆ. ತುಲಾ ಲಗ್ನದಲ್ಲಿ ಜೀವನದಿ ಕಾವೇರಿ ಆವರ್ಭವಿಸಲಿದ್ದಾಳೆ. ಭಾಗಮಂಡಲದಲ್ಲಿ ಶಾಸ್ತ್ರ ನೋಡುವ ಕಾರ್ಯಕ್ರಮದಲ್ಲಿ ಮುಹೂರ್ತ ನಿಗದಿಯಾಗಿದೆ.
ಮಡಿಕೇರಿ: ಕೊಡಗಿನಲ್ಲಿ ಕಾವೇರಿ ನದಿಯ ಉಗಮವಾಗುತ್ತದೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಕರ್ನಾಟಕದ ಜೀವನದಿಯಾದ ಕಾವೇರಿಯ ತೀರ್ಥೋದ್ಭವಕ್ಕೆ ಇದೀಗ ಮುಹೂರ್ತ ಫಿಕ್ಸ್ ಆಗಿದೆ. ಅಕ್ಟೋಬರ್ 17ರಂದು ಬೆಳಗ್ಗೆ 7.40ಕ್ಕೆ ತುಲಾ ಲಗ್ನದಲ್ಲಿ ಕಾವೇರಿ ತೀರ್ಥೋದ್ಭವವಾಗಲಿದೆ. ತಲಕಾವೇರಿ ಅರ್ಚಕರು ಹಾಗೂ ದೇವಸ್ಥಾನದ ಮುಖ್ಯಸ್ಥರು ಭಾಗಿಯಾಗಲಿದ್ದಾರೆ.
ಕೊಡಗಿನ ತಲಕಾವೇರಿಯಲ್ಲಿರುವ ತೀರ್ಥ ಕುಂಡಿಕೆಯಲ್ಲಿ ಅ. 17 ರಂದು ಕಾವೇರಿ ನೀರು ತೀರ್ಥ ರೂಪದಲ್ಲಿ ಉಗಮವಾಗಲಿದೆ. ಕಾವೇರಿಯ ಉಗಮ ಸ್ಥಳ ತಲಕಾವೇರಿಯ ಪವಿತ್ರ ಕುಂಡಿಕೆಯಲ್ಲಿ ಕಾವೇರಿ ತೀರ್ಥರೂಪಿಣಿಯಾಗಿ ಉಕ್ಕಿ ಬರುತ್ತಾಳೆಂಬ ನಂಬಿಕೆ ಬಹಳ ಹಿಂದಿನ ಕಾಲದಿಂದಲೂ ಇದೆ. ಅದರಂತೆ ಪ್ರತಿವರ್ಷ ತೀರ್ಥೋದ್ಭವದ ಸಮಯದಲ್ಲಿ ಸಾವಿರಾರು ಭಕ್ತರು ಇಲ್ಲಿಗೆ ಆಗಮಿಸುತ್ತಾರೆ.
ಇದನ್ನೂ ಓದಿ: ಕರ್ನಾಟಕದಲ್ಲಿ ಗಣೇಶನನ್ನೂ ಕಂಬಿ ಹಿಂದೆ ಹಾಕಲಾಗಿದೆ; ಕುರುಕ್ಷೇತ್ರದಲ್ಲಿ ಪ್ರಧಾನಿ ಮೋದಿ ವಾಗ್ದಾಳಿ
ಜೀವನದಿ ಕಾವೇರಿ ಉಗಮ ಸ್ಥಾನ ತಲಕಾವೇರಿಯ ಬ್ರಹ್ಮಕುಂಡಿಕೆಯಲ್ಲಿ ಮಾತೆ ಕಾವೇರಿ ಜಲರೂಪದಲ್ಲಿ ದರ್ಶನ ಕೊಡುತ್ತಾಳೆ ಎಂದು ನಂಬಲಾಗುವ ಪವಿತ್ರ ತೀರ್ಥೋದ್ಭವಕ್ಕೆ ಈಗಾಗಲೇ ಸಿದ್ಧತೆ ಕಾರ್ಯಗಳ ಚರ್ಚೆ ನಡೆಸಲಾಗುತ್ತಿದೆ. ಸೆಪ್ಟೆಂಬರ್ 26ರಿಂದಲೇ ತೀರ್ಥೋದ್ಭವಕ್ಕೆ ಸಿದ್ಧತೆಗಳು ಶುರುವಾಗಲಿವೆ.
ಸೆಪ್ಟೆಂಬರ್ 26ರಂದು ಬೆಳಗ್ಗೆ 8.35ಕ್ಕೆ ಪತ್ತಾಯಕ್ಕೆ ಅಕ್ಕಿ ಹಾಕುವ ಕಾರ್ಯಕ್ರಮ ನೆರವೇರಲಿದೆ. ಅಕ್ಟೋಬರ್ 4ರಂದು ಆಜ್ಞಾ ನೆರವೇರಲಿದೆ. ಅಕ್ಟೋಬರ್ 14ರಂದು ಅಕ್ಷಯ ಪಾತ್ರೆಯನ್ನು ಇರಿಸಲಾಗುವುದು. ಅದೇ ದಿನ ಸಂಜೆ ಕಾಣಿಕೆ ಡಬ್ಬಿಯನ್ನು ಇರಿಸಲಾಗುವುದು.
ಇನ್ನಷ್ಟು ಕರ್ನಾಟಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ