Kodagu: ಕಾಫಿತೋಟದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕನ ಮೇಲೆ ಕಾಡಾನೆ ದಾಳಿ: ಆಸ್ಪತ್ರೆಗೆ ದಾಖಲು

ಕಾಡಾನೆ ದಾಳಿಯಿಂದ ಕಾರ್ಮಿಕ ಗಂಭೀರ ಗಾಯಗೊಂಡಿರುವಂತಹ ಘಟನೆ ವಿರಾಜಪೇಟೆ ತಾಲೂಕಿನ ಪಾಲಿಬೆಟ್ಟ ಗ್ರಾಮದ ಮಸ್ಕಲ್ ಕಾಫಿತೋಟದಲ್ಲಿ ಘಟನೆ ನಡೆದಿದೆ.

Kodagu: ಕಾಫಿತೋಟದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕನ ಮೇಲೆ ಕಾಡಾನೆ ದಾಳಿ: ಆಸ್ಪತ್ರೆಗೆ ದಾಖಲು
ಕಾಡಾನೆ (ಸಂಗ್ರಹ ಚಿತ್ರ)
Follow us
ಗಂಗಾಧರ​ ಬ. ಸಾಬೋಜಿ
|

Updated on:May 16, 2023 | 4:12 PM

ಕೊಡಗು: ಕಾಡಾನೆ ದಾಳಿಯಿಂದ (Elephant Attack) ಕಾರ್ಮಿಕ ಗಂಭೀರ ಗಾಯಗೊಂಡಿರುವಂತಹ ಘಟನೆ ವಿರಾಜಪೇಟೆ ತಾಲೂಕಿನ ಪಾಲಿಬೆಟ್ಟ ಗ್ರಾಮದ ಮಸ್ಕಲ್ ಕಾಫಿತೋಟದಲ್ಲಿ ಘಟನೆ ನಡೆದಿದೆ. ಬಾಬಿ(40) ಗಾಯಗೊಂಡ ಕಾರ್ಮಿಕ. ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ಕಾಡಾನೆ ದಾಳಿ ಮಾಡಿದೆ. ಅಮ್ಮತ್ತಿ ಆಸ್ಪತ್ರೆಯಲ್ಲಿ ಗಾಯಾಳು ಬಾಬಿಗೆ ಪ್ರಾಥಮಿಕ ಚಿಕಿತ್ಸೆ ನೀಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿಗೆ ರವಾನೆ ಮಾಡಲಾಗಿದೆ. ಮಲೆನಾಡು ಭಾಗದಲ್ಲಿ ಕಾಡಾನೆಗಳ ಉಪಟಳ ಕೂಡ ಮುಂದುವರೆದಿದ್ದು, ಸಕಲೇಶಪುರ ತಾಲ್ಲೂಕಿನ ಗುಳಗಳಲೆ ಹಾಗೂ ಹೆಬ್ಬನಹಳ್ಳಿ ಗ್ರಾಮದಲ್ಲಿ ಭಾನುವಾರ ನಡೆದ ಕಾಡಾನೆ ದಾಳಿಯಲ್ಲಿ ಇಬ್ಬರು ಗಂಭೀರ ಗಾಯಗೊಂಡಿದ್ದರು.

ಈ ಘಟನೆಯ ಬೆನ್ನಲ್ಲೇ ಹೆಬ್ಬನಹಳ್ಳಿ ಗ್ರಾಮದಲ್ಲಿ ಯುವಕನ ಮೇಲೆ ಒಂಟಿಸಲಗ ದಾಳಿ ಮಾಡಿತ್ತು. ಅಸ್ಸಾಂ ಮೂಲದ ಕಾರ್ಮಿಕ ಹಬೀದ್ (26) ಮೇಲೆ ಏಕಾಏಕಿ ಸಲಗ ದಾಳಿ ಮಾಡಿದ್ದು, ಅವರಿಗೆ ಗಂಭೀರ ಸ್ವರೂಪದ ಗಾಯಗೊಂಡಿದ್ದರು. ಅವರಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು.

ಇದನ್ನೂ ಓದಿ: ಹಾಸನ: ಸಕಲೇಶಪುರದ ಗುಳಗಳಲೆಯಲ್ಲಿ ಕಾಡಾನೆ ದಾಳಿ, ಇಬ್ಬರಿಗೆ ಗಾಯ

ರೇಡಿಯೋ ಕಾಲರ್​ ಅಳವಡಿಕೆ

ಕಾಡಾನೆಗಳನ್ನು ಸೆರೆಹಿಡಿಯಲು ಅರಣ್ಯ ಇಲಾಖೆ ಹನಿ ಟ್ಯ್ರಾಪ್​​ ಮೊರೆ ಹೋಗಿದೆ. ಮೂರು ಹೆಣ್ಣಾನೆಗಳಿಗೆ ರೇಡಿಯೋ ಕಾಲರ್​ ಅಳವಡಿಸಲು ಅರಣ್ಯ ಇಲಾಖೆ ಮುಂದಾಗಿದೆ. ಹೆಣ್ಣಾನೆ ಮೋಹಕ್ಕೆ ಬಿದ್ದು, ಕಾಡಾನೆಗಳು ಸೆರೆ ಸಿಗುವ ಸಾಧ್ಯತೆ ಇದೆ. ಹೀಗಾಗಿ ಇಂದಿನಿಂದ ಮೇ.25 ರವರೆಗೆ ಸಕಲೇಶಪುರ, ಬೇಲೂರು ವಲಯಗಳಲ್ಲಿ ರೇಡಿಯೋ ಕಾಲರ್ ಅಳವಡಿಕೆ ಕಾರ್ಯಾಚರಣೆ ನಡೆಯಲಿದೆ.

ರೇಡಿಯೋ ಕಾಲರ್ ಅಳವಡಿಕೆಗೆ ಸಾಕಾನೆಗಳನ್ನು ಬಳಸಿಕೊಳ್ಳಲಾಗಿದ್ದು, ಮತ್ತಿಗೋಡು ಆನೆ ಶಿಬಿರದಿಂದ ಅಭಿಮನ್ಯು ಮತ್ತು ಮಹೇಂದ್ರ ಹಾಗೂ ದುಬಾರೆ ಆನೆ ಶಿಬಿರದಿಂದ ಅಜ್ಜಯ್ಯ, ಪ್ರಶಾಂತ ಮತ್ತು ವಿಕ್ರಮ ಆನೆಗಳನ್ನು ಕರೆಸಿಕೊಳ್ಳಲಾಗಿದೆ.

ಇದನ್ನೂ ಓದಿ: ಹನಿ ಟ್ಯ್ರಾಪ್ ಮೂಲಕ​ ಕಾಡಾನೆಗಳ ಸೆರೆಗೆ ಮುಂದಾದ ಅರಣ್ಯ ಇಲಾಖೆ: ಹೆಣ್ಣಾನೆಗಳಿಗೆ ರೇಡಿಯೋ ಕಾಲರ್ ಅವಳವಡಿಕೆ

ಈ ಆನೆಗಳನ್ನು ತಾತ್ಕಾಲಿಕವಾಗಿ ಸ್ಥಾಪಿಸಿರುವ ಬೇಲೂರು ವಲಯದ, ಬಿಕ್ಕೋಡು ಸಸ್ಯಕ್ಷೇತ್ರದ ಕ್ಯಾಂಪ್‌ನಲ್ಲಿ ಇರಿಸಲಾಗಿದೆ. ಈ ಕಾರ್ಯಾಚರಣೆಗೆ ಅರಣ್ಯ ಇಲಾಖೆ ಸೂಚನೆಗಳನ್ನು ಪಾಲಿಸಿ ಸಾರ್ವಜನಿಕರು ಸಹಕರಿಸುವಂತೆ ಅರಣ್ಯ ಇಲಾಖೆ ಅಧಿಕಾರಿಗಳು ಮನವಿ ಮಾಡಿದ್ದರು.

ಮನೆಯ ಹೊರ ಆವರಣದಲ್ಲಿ ಅಡಗಿ ಕುಳಿತಿದ್ದ ಬೃಹತ್ ಗಾತ್ರದ ಕಾಳಿಂಗ ಸರ್ಪ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಕೆಂದಗೆ ಗ್ರಾಮದ ಬಳಿ ದೇವರಾಯ ಗೌಡ ಎಂಬುವರ ಮನೆ ಆವರಣದಲ್ಲಿ ಬೃಹತ್ ಗಾತ್ರದ ಕಾಳಿಂಗ ಸರ್ಪ ಕಾಣಿಸಿಕೊಂಡಿದೆ. ಅರಣ್ಯ ಸಿಬ್ಬಂದಿಯೊಂದಿಗೆ ಉರಗ ಪ್ರೇಮಿ ಮಹೇಶ ನಾಯ್ಕ ಕಾಡಿಗೆ ಬಿಟ್ಟುಬಂದಿದ್ದಾರೆ. ಅಂಕೋಲಾ ಅರಣ್ಯ ವ್ಯಾಪ್ತಿಯಲ್ಲಿ ನಡೆದ ಘಟನೆ ಕಂಡುಬಂದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:05 pm, Tue, 16 May 23

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ