AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಡಾನೆ ದಾಳಿಗೆ ಕೊಡಗಲ್ಲಿ ಮತ್ತೊಂದು ಬಲಿ: ದಾರುಣವಾಗಿ ಮೃತಪಟ್ಟ ಕಾಫಿ ಬೆಳೆಗಾರ

ಕೊಡಗು ಜಿಲ್ಲೆಯಲ್ಲಿ ಕಾಡಾನೆಗಳ ಅಟ್ಟಹಾಸ ಮುಂದುವರಿದಿದ್ದು, ವಿರಾಜಪೇಟೆಯ ಸಿದ್ದಾಪುರದಲ್ಲಿ ಕಾಫಿ ಬೆಳೆಗಾರನೋರ್ವ ದಾಳಿಗೆ ಬಲಿಯಾಗಿದ್ದಾರೆ. ಇದು ಕೆಲವೇ ದಿನಗಳಲ್ಲಿ ನಡೆದ ಮೂರನೇ ಸಾವಾಗಿದ್ದು, ಪಿಯುಸಿ ವಿದ್ಯಾರ್ಥಿನಿ ಪೂಜ್ಯ ಹಾಗೂ ಮಾಜಿ ಪಂಚಾಯತ್ ಸದಸ್ಯೆ ಜಲಜಾಕ್ಷಿ ಕೂಡ ಆನೆ ದಾಳಿಗೆ ಬಲಿಯಾಗಿದ್ದರು. ಸಾಲು ಸಾಲು ಸಾವುಗಳಿಂದ ಜನರು ತೀವ್ರ ಆತಂಕಗೊಂಡಿದ್ದು, ಅರಣ್ಯ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಕಾಡಾನೆ ದಾಳಿಗೆ ಕೊಡಗಲ್ಲಿ ಮತ್ತೊಂದು ಬಲಿ:  ದಾರುಣವಾಗಿ ಮೃತಪಟ್ಟ ಕಾಫಿ ಬೆಳೆಗಾರ
ಸಾಂದರ್ಭಿಕ ಚಿತ್ರImage Credit source: Google
ಗೋಪಾಲ್​ ಸೋಮಯ್ಯ
| Edited By: |

Updated on: Mar 12, 2026 | 2:15 PM

Share

ಮಡಿಕೇರಿ, ಮಾರ್ಚ್​​ 12: ಕೊಡಗು ಜಿಲ್ಲೆಯಲ್ಲಿ ಕಾಡಾನೆಗಳ ಅಟ್ಟಹಾಸ ಮುಂದುವರಿದಿದ್ದು, ನಂಜರಾಯಪಟ್ಟಣ ಗ್ರಾಮ ಪಂಚಾಯತ್​​ ಮಾಜಿ ಸದಸ್ಯೆಯ ಸಾವು ಮಾಸುವ ಮುನ್ನವೇ ಮತ್ತೊಂದು ಬಲಿಯಾಗಿದೆ. ವಿರಾಜಪೇಟೆ ತಾಲೂಕಿನ ಸಿದ್ದಾಪುರ ಸಮೀಪ ಹೈಸ್ಕೂಲ್ ಪೈಸಾರಿಯಲ್ಲಿ ಕಾಫಿ ತೋಟಕ್ಕೆ ತೆರಳಿದ್ದ ಬೆಳೆಗಾರನ ಮೇಲೆ ಸಲಗ ಅಟ್ಯಾಕ್​​ ಮಾಡಿದ ಪರಿಣಾಮ ಗಣಪತಿ (49) ಮೃತಪಟ್ಟಿದ್ದಾರೆ. ಹಾಡಹಗಲೇ ಕಾಫಿ ತೋಟದಲ್ಲಿ ಕಾಡಾನೆ ಕಾಣಿಸಿಕೊಂಡ ಪರಿಣಾಮ ಸ್ಥಳಕ್ಕೆ ಪೊಲೀಸರು, ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸಾಲು ಸಾಲು ಸಾವು

ಕಾಡಾನೆ ದಾಳಿಗೆ ಕೊಡಗು ಜಿಲ್ಲೆಯಲ್ಲಿ ಮೇಲಿಂದ ಮೇಲೆ ಸಾವುಗಳಾಗ್ತಿರೋದು ಜನರ ನಿದ್ದೆಗೆಡಿಸಿದೆ. ಕಾಫಿ ತೋಟ, ರಸ್ತೆ ಬದಿ ಎಲ್ಲೆಂದರಲ್ಲಿ ಇವುಗಳು ಜನರ ಪ್ರಾಣ ಬಲಿ ಪಡೆಯುತ್ತಿರುವ ಕಾರಣ ಜನರು ಮನೆಯಿಂದ ಹೊರ ಬರಲೂ ಹೆದರಬೇಕಾದ ಪರಿಸ್ಥಿತಿ ಬಂದೊದಗಿದೆ. ಕೆಲ ದಿನಗಳ ಹಿಂದಷ್ಟೇ ಮಡಿಕೇರಿ ತಾಲೂಕಿನ ಗುಡ್ಡಗಾಡು ಗ್ರಾಮ ಬೆಟ್ಟತ್ತೂರಿನಲ್ಲಿ ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಪೂಜ್ಯ ಎಂಬಾಕೆ ದಾರುಣವಾಗಿ ಬಲಿಯಾಗಿದ್ದಳು. ಸಂಜೆ ತನ್ನ ತಂದೆ-ತಾಯಿ ಜೊತೆ ಬೈಕ್​ನಲ್ಲಿ ಬಂದ ಪೂಜ್ಯ, ಬೈಕ್​ನಿಂದ ಇಳಿದ ಕೆಲವೇ ಸೆಕೆಂಡುಗಳಲ್ಲಿ ಕತ್ತಲಿನಲ್ಲಿ ಹಿಂಬದಿಯಿಂದ ಬಂದ ಆನೆ ಭೀಕರ ದಾಳಿ ನಡೆಸಿತ್ತು. ಸಲಗದ ಕಾಲಡಿ ಸಿಲುಕಿದ್ದ ಪೂಜ್ಯ ಪ್ರಾಣ ಬಿಟ್ಟಿದ್ದರು.

ಇದನ್ನೂ ಓದಿ: 10 ದಿನಗಳ ಅವಧಿಯಲ್ಲಿ ಕಾಡಾನೆ ದಾಳಿಗೆ ಎರಡನೇ ಬಲಿ; ಗ್ರಾ.ಪಂ. ಮಾಜಿ ಸದಸ್ಯೆ ದಾರುಣ ಸಾವು

ಅದಾಗಿ 10 ದಿನಗಳು ಕಳೆಯುವುದರ ಒಳಗೆಯೇ ಕುಶಾಲನಗರ ತಾಲೂಕಿನ ವಾಲ್ನೂರಿನಲ್ಲಿ ನಂಜರಾಯಪಟ್ಟಣ ಗ್ರಾಮ ಪಂಚಾಯತ್​​ ಮಾಜಿ ಸದಸ್ಯೆ ಜಲಜಾಕ್ಷಿ ಎಂಬವರು ಆನೆ ದಾಳಿಯಿಂದ ಮೃತಪಟ್ಟಿದ್ದರು. ಜಲಜಾಕ್ಷಿ ಅವರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದ ಪರಿಣಾಮ ಗಂಭೀರ ಗಾಯಗೊಂಡಿದ್ದ ಅವರು ಸ್ಥಳದಲ್ಲೇ ಮೃತಪಟ್ಟಿದ್ದರು.  ಸಾಲು ಸಾಲು ಸಾವುಗಳ ಹಿನ್ನೆಲೆ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸಿದ್ದು, ಕಾಡಾನೆಗಳ ದಾಳಿ ನಿಯಂತ್ರಣಕ್ಕೆ ಆಗ್ರಹ ಕೇಳಿಬಂದಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಗೋಪಾಲ್​ ಸೋಮಯ್ಯ
ಗೋಪಾಲ್​ ಸೋಮಯ್ಯ
ಅಬ್ಬಾ, ಗೊತ್ತೇ ಇಲ್ಲದೆ ತಲೆದಿಂಬಿನಡಿ ಸೇರಿತ್ತು ಭಾರಿ ಗಾತ್ರದ ನಾಗರ ಹಾವು!
ಅಬ್ಬಾ, ಗೊತ್ತೇ ಇಲ್ಲದೆ ತಲೆದಿಂಬಿನಡಿ ಸೇರಿತ್ತು ಭಾರಿ ಗಾತ್ರದ ನಾಗರ ಹಾವು!
ಮೋದಿ ಭೇಟಿ ಬಳಿಕ ಬೆಂಗಳೂರಿಗೆ ಆಗಮಿಸಿದ ಪೋಲೆಂಡ್ ಪ್ರಧಾನಿ ಡೊನಾಲ್ಡ್ ಟಸ್ಕ್
ಮೋದಿ ಭೇಟಿ ಬಳಿಕ ಬೆಂಗಳೂರಿಗೆ ಆಗಮಿಸಿದ ಪೋಲೆಂಡ್ ಪ್ರಧಾನಿ ಡೊನಾಲ್ಡ್ ಟಸ್ಕ್
ಇಂದು ಈ ರಾಶಿಯವರು ವಿರೋಧಿಗಳೊಂದಿಗೆ ವಿವಾದಕ್ಕಿಳಿಯಬೇಡಿ
ಇಂದು ಈ ರಾಶಿಯವರು ವಿರೋಧಿಗಳೊಂದಿಗೆ ವಿವಾದಕ್ಕಿಳಿಯಬೇಡಿ
ಸರಸ್ವತಿ ದೇವಾಲಯದಲ್ಲಿ ಮಕ್ಕಳ ಕೈಹಿಡಿದು ವಿದ್ಯಾರಂಭ ಮಾಡಿಸಿದ ಶಶಿ ತರೂರ್
ಸರಸ್ವತಿ ದೇವಾಲಯದಲ್ಲಿ ಮಕ್ಕಳ ಕೈಹಿಡಿದು ವಿದ್ಯಾರಂಭ ಮಾಡಿಸಿದ ಶಶಿ ತರೂರ್
ಸಂಪುಟದಲ್ಲಿ ಮಹಿಳಾ ಮಂತ್ರಿ, ನಿಗಮ ಮಂಡಳಿ ನೇಮಕದ ಬಗ್ಗೆ ಸಿಎಂ ಮಾಹಿತಿ
ಸಂಪುಟದಲ್ಲಿ ಮಹಿಳಾ ಮಂತ್ರಿ, ನಿಗಮ ಮಂಡಳಿ ನೇಮಕದ ಬಗ್ಗೆ ಸಿಎಂ ಮಾಹಿತಿ
‘ಪ್ರೇಮದ ಊರಲಿ’ ಸಿನಿಮಾ 100 ಕೋಟಿ ರೂಪಾಯಿ ಕಲೆಕ್ಷನ್: ನಿರ್ಮಾಪಕರು ಖುಷ್
‘ಪ್ರೇಮದ ಊರಲಿ’ ಸಿನಿಮಾ 100 ಕೋಟಿ ರೂಪಾಯಿ ಕಲೆಕ್ಷನ್: ನಿರ್ಮಾಪಕರು ಖುಷ್
ಅಮಿತ್ ಶಾ ಭೇಟಿಗೆ ಟೈಮ್ ಫಿಕ್ಸ್: ಕುತೂಹಲ ಮೂಡಿಸಿದ ಆರ್ ಅಶೋಕ್ ನಡೆ
ಅಮಿತ್ ಶಾ ಭೇಟಿಗೆ ಟೈಮ್ ಫಿಕ್ಸ್: ಕುತೂಹಲ ಮೂಡಿಸಿದ ಆರ್ ಅಶೋಕ್ ನಡೆ
ಈ ಬಾರಿ ದಸರಾದಲ್ಲಿ ಸಾಲು ಸಾಲು ಅಭಾಸಗಳು:ಅಪಶಕುನದ ಬಗ್ಗೆ ಚರ್ಚೆ!
ಈ ಬಾರಿ ದಸರಾದಲ್ಲಿ ಸಾಲು ಸಾಲು ಅಭಾಸಗಳು:ಅಪಶಕುನದ ಬಗ್ಗೆ ಚರ್ಚೆ!
ದೆಹಲಿ ಮಹಾನಗರ ಪಾಲಿಕೆಯಲ್ಲಿ ಆಪ್- ಬಿಜೆಪಿ ಕೌನ್ಸಿಲರ್‌ಗಳ ನಡುವೆ ಸಂಘರ್ಷ
ದೆಹಲಿ ಮಹಾನಗರ ಪಾಲಿಕೆಯಲ್ಲಿ ಆಪ್- ಬಿಜೆಪಿ ಕೌನ್ಸಿಲರ್‌ಗಳ ನಡುವೆ ಸಂಘರ್ಷ
ವೆಬ್ ಸಿರೀಸ್ ಆಗಬೇಕಿದ್ದ ‘ಪ್ರೇಮದ ಊರಲಿ’ ಕಥೆ: ಇಲ್ಲಿದೆ ಅಚ್ಚರಿಯ ವಿಷಯ
ವೆಬ್ ಸಿರೀಸ್ ಆಗಬೇಕಿದ್ದ ‘ಪ್ರೇಮದ ಊರಲಿ’ ಕಥೆ: ಇಲ್ಲಿದೆ ಅಚ್ಚರಿಯ ವಿಷಯ