ಕೊಡಗು ಜಿಲ್ಲೆಯಲ್ಲೂ ಶಾಸಕರ ವಿರುದ್ಧ ಗುತ್ತಿಗೆದಾರರ ಆರೋಪ: ಶಾಸಕ ಬೋಪಯ್ಯ ವಿರುದ್ಧ ರವಿ ಚಂಗಪ್ಪ‌ ಗಂಭೀರ ಆರೋಪ

ಸಸ್ಪೆಂಡ್​​ ಆದ ಇಂಜಿನಿಯರ್​​ ಮರು ನೇಮಕಕ್ಕೆ 2.5 ಕೋಟಿ ಲಂಚ ಪಡೆಯಲಾಗಿದೆ ಎಂದು ವಿರಾಜಪೇಟೆ ಬಿಜೆಪಿ ಶಾಸಕ ಕೆ.ಜಿ.ಬೋಪಯ್ಯ ವಿರುದ್ಧ ಕೊಡಗು ಜಿಲ್ಲಾ ಗುತ್ತಿಗೆದಾರರ ಸಂಘದ ಅಧ್ಯಕ್ಷ ರವಿ ಚಂಗಪ್ಪ ಆರೋಪ ಮಾಡಿದರು.

ಕೊಡಗು ಜಿಲ್ಲೆಯಲ್ಲೂ ಶಾಸಕರ ವಿರುದ್ಧ ಗುತ್ತಿಗೆದಾರರ ಆರೋಪ: ಶಾಸಕ ಬೋಪಯ್ಯ ವಿರುದ್ಧ ರವಿ ಚಂಗಪ್ಪ‌ ಗಂಭೀರ ಆರೋಪ
ಶಾಸಕ ಕೆ.ಜಿ.ಬೋಪಯ್ಯ, ರವಿ ಚಂಗಪ್ಪ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Aug 25, 2022 | 11:51 AM

ಮಡಿಕೇರಿ: ಸಸ್ಪೆಂಡ್​​ ಆದ ಇಂಜಿನಿಯರ್​​ ಮರು ನೇಮಕಕ್ಕೆ 2.5 ಕೋಟಿ ಲಂಚ ಪಡೆಯಲಾಗಿದೆ ಎಂದು ವಿರಾಜಪೇಟೆ ಬಿಜೆಪಿ ಶಾಸಕ ಕೆ.ಜಿ.ಬೋಪಯ್ಯ ವಿರುದ್ಧ ಕೊಡಗು ಜಿಲ್ಲಾ ಗುತ್ತಿಗೆದಾರರ ಸಂಘದ ಅಧ್ಯಕ್ಷ ರವಿ ಚಂಗಪ್ಪ ಆರೋಪ ಮಾಡಿದರು. ಭ್ರಷ್ಟಾಚಾರ ಆರೋಪದಡಿ ಸಸ್ಪೆಂಡ್ ಆಗಿದ್ದವ ಮತ್ತೆ ಜಿಲ್ಲೆಗೆ ಬಂದಿದ್ದು, ಇಂಜಿನಿಯರ್ ಶ್ರೀಕಂಠಯ್ಯ 18 ದಿನಗಳ ಕಾಲ ಜೈಲಲ್ಲಿ ಇದ್ದ ಅಧಿಕಾರಿ. ಶ್ರೀಕಂಠಯ್ಯ ಮರು ನೇಮಕಕ್ಕೆ ಸಚಿವರಾಗಿದ್ದಾಗ K.S.ಈಶ್ವರಪ್ಪಗೆ ಬೋಪಯ್ಯ ಪತ್ರ ಬರೆದಿದ್ದರು. ಗುತ್ತಿಗೆದಾರರಿಂದ ಶ್ರೀಕಂಠಯ್ಯ ಲಂಚ ಸ್ವೀಕರಿಸುವಾಗ ರೇಡ್​ ಹ್ಯಾಂಡ್​ ಆಗಿ ಸಿಕ್ಕಿಕೊಂಡಿದ್ದರು. ಎಸಿಬಿ ಅಧಿಕಾರಿಗಳ ದಾಳಿ ಬಳಿಕ ಶ್ರೀಕಂಠಯ್ಯ ಅಮಾನತು ಮಾಡಲಾಗಿತ್ತು. 2012ರ ಅಕ್ಟೊಬರ್18 ರಂದು ಎಸಿಬಿ ರೇಡ್ ನಡೆದಿದ್ದು, ಶ್ರೀಕಂಠಯ್ಯ, ಕೊಡಗು ಪಂಚಾಯತ್ ರಾಜ್ ಇಲಾಖೆ ಎಕ್ಸಿಕ್ಯುಟಿವ್ ಎಂಜಿನಿಯರ್ ಆಗಿದ್ದರು.

ಇದನ್ನೂ ಓದಿ: ಕೊಡಗು ಜಿಲ್ಲೆಯಲ್ಲೂ ಕಮಿಷನ್ ದಂಧೆ: ಶಾಸಕರ ವಿರುದ್ಧ ಗುತ್ತಿಗೆದಾರರ ಗಂಭೀರ ಆರೋಪ

ಇನ್ನೂ ಜಿಲ್ಲೆಯಲ್ಲಿ ಪ್ರತಿ ಕಾಮಗಾರಿಗೆ ಶೇ 40ರ ಕಮಿಷನ್ ಪಡೆದುಕೊಳ್ಳುತ್ತಿದ್ದಾರೆ. ಜಿಲ್ಲೆಯಲ್ಲಿ ಕಮಿಷನ್ ದಂದೆ ಅವ್ಯಾಹತವಾಗಿ ನಡೆಯುತ್ತಿದೆ ಎಂದು ಶಾಸಕ ಕೆ.ಜಿ.ಬೋಪಯ್ಯ ವಿರುದ್ಧ ಗುತ್ತಿಗೆದಾರರ ಸಂಘದ ಅಧ್ಯಕ್ಷ ರವಿ ಚಂಗಪ್ಪ ಗಂಭೀರ ಆರೋಪ ಈ ಹಿಂದೆ ಮಾಡಿದ್ದರು. ಶಾಸಕರು ಕಮಿಷನ್ ಇಲ್ಲದೆ ನಮಗೆ ರಾಜ್ಯ ಹಣಕಾಸು ಸಚಿವರಿಂದ‌ ಬಾಕಿ ಹಣ ಬಿಡುಗಡೆ ಮಾಡಿಸಲಿ. ಜಿಲ್ಲೆಯಲ್ಲಿ ಕಮಿಷನ್ ನೀಡದ ಕಾರಣ ನಮಗೆ ಹಣ ಬಿಡುಗಡೆ ಆಗುತ್ತಿಲ್ಲ. ವಿವಿಧ ಹಂತಗಳಲ್ಲಿ ಭಾರಿ ಮೊತ್ತದ ಕಮಿಷನ್ ನೀಡಬೇಕಿದೆ.

ಇದನ್ನೂ ಓದಿ: ಬಿಜೆಪಿ ಶಾಸಕ ಕೆ.ಜಿ.ಬೋಪಯ್ಯಗೆ ಬ್ಲ್ಯಾಕ್‌ಮೇಲ್ ಪ್ರಕರಣ: ಬೆಂಗಳೂರಿನ ರೈಲ್ವೆ ನಿಲ್ದಾಣದಲ್ಲಿ ಆರೋಪಿ ಅರೆಸ್ಟ್

ಪಂಚಾಯತ್ ರಾಜ್ ಇಲಾಖೆಯಿಂದ ₹49 ಕೋಟಿ ಬರಬೇಕು. ಸೋಮವಾರ ಬೆಳಗ್ಗೆ 11 ಗಂಟೆಗೆ ಶಾಸಕರು ಪಂಚಾಯತ್ ರಾಜ್ ಇಲಾಖೆಯ ಕಚೇರಿಗೆ ಬಂದು ಹಣ ಬಿಡುಗಡೆ ಮಾಡಿಸಲಿ, ನಮ್ಮ ಗುತ್ತಿಗೆದಾರರೂ ಅಲ್ಲಿಗೆ ಬಂದಿರುತ್ತಾರೆ. ಯಾವುದೇ ಕಮಿಷನ್ ಪಡೆಯದೇ ಬಾಕಿ ಮೊತ್ತ ಬಿಡುಗಡೆ ಮಾಡಲಿ ಎಂದು ಒತ್ತಾಯಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್