ಕೊಡಗಿನ ತಲಕಾವೇರಿಯಲ್ಲಿ ತೀರ್ಥೋದ್ಭವಕ್ಕೆ ಕ್ಷಣಗಣನೆ: ಪೊಲೀಸರಿಂದ ಭಾರೀ ಬಂದೋಬಸ್ತ್

ಈ ಬಾರಿ ಸಂಜೆ ವೇಳೆ ತೀರ್ಥೋದ್ಭವವಾಗುವುದರಿಂದ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ನಿರೀಕ್ಷೆ ಇದೆ. ಹಾಗಾಗಿ ಬೆಳಗ್ಗೆಯಿಂದಲೇ ನಿತ್ಯ ಪೂಜಾಕರ್ಮಗಳು ನಡೆಯುತ್ತದೆ.

ಕೊಡಗಿನ ತಲಕಾವೇರಿಯಲ್ಲಿ ತೀರ್ಥೋದ್ಭವಕ್ಕೆ ಕ್ಷಣಗಣನೆ: ಪೊಲೀಸರಿಂದ ಭಾರೀ ಬಂದೋಬಸ್ತ್
Follow us
TV9 Web
| Updated By: ಆಯೇಷಾ ಬಾನು

Updated on:Oct 17, 2022 | 7:38 AM

ದಕ್ಷಿಣ ಭಾರತದ ಪ್ರಸಿದ್ಧ ಪುಣ್ಯ ಕ್ಷೇತ್ರ ಕೊಡಗಿನ ತಲಕಾವೇರಿಯಲ್ಲಿ ತೀರ್ಥೋದ್ಭವಕ್ಕೆ( Talacauvery Theerthodbhava) ಕ್ಷಣಗಣನೆ ಶುರುವಾಗಿದೆ. ಸೋಮವಾರ(ಅ.17) ಸಂಜೆ 7 ಗಂಟೆ 21 ನಿಮಿಷಕ್ಕೆ ಮೇಷ ಲಗ್ನದಲ್ಲಿ ಕಾವೇರಿ, ತೀರ್ಥರೂಪಿಣಿಯಾಗಿ ಕಾಣಿಸಿಕೊಳ್ಳಲಿದ್ದಾಳೆ. ಜೀವ ನದಿಯನ್ನ ಕಣ್ತುಂಬಿಸಿಕೊಳ್ಳಲು ಸಹಸ್ರಾರು ಮಂದಿ ಆಗಮಿಸುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದ್ದಾಳೆ. ತುಲಾ ಮಾಸದ ಮೊದಲ ದಿನ ಅಂದರೆ ತುಲಾ ಸಂಕ್ರಮಣದ ದಿನ ಪ್ರತಿ ವರ್ಷ ಕಾವೇರಿ ಕೊಡಗಿನ ಮಡಿಕೇರಿ ತಾಲ್ಲೂಕಿನ ತಲಕಾವೇರಿಯ ಭ್ರಹ್ಮಕುಂಡಿಕೆಯಲ್ಲಿ ತೀರ್ಥರೂಪಿಣಿಯಾಗಿ ಆವಿರ್ಭವಿಸಿ ಭಕ್ತರಿಗೆ ದರ್ಶನ ನೀಡುತ್ತಾಳೆ. ಈ ಪವಿತ್ರ ಘಳಿಗೆಯನ್ನು ಕಣ್ತುಂಬಿಕೊಳ್ಳಲು ದೇಶದ ಮೂಲೆ ಮೂಲೆಯಿಂದ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ. ಇಂದು ಸಂಜೆ 7 ಗಂಟೆ 21 ನಿಮಿಷಕ್ಕೆ ತುಲಾ ಲಘ್ನದಲ್ಲಿ ಕಾವೇರಿ ತೀರ್ಥೋದ್ಭವವಾಗಲಿದೆ. ಪ್ರಧಾನ ಅರ್ಚಕ ಗುರುರಾಜ್ ಆಚಾರ್ ನೇತೃತ್ವದಲ್ಲಿ ಪೂಜಾ ಕಾರ್ಯಕ್ರಮಗಳು ನಡೆಯಲಿವೆ.

ಈ ಬಾರಿ ಸಂಜೆ ವೇಳೆ ತೀರ್ಥೋದ್ಭವವಾಗುವುದರಿಂದ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ನಿರೀಕ್ಷೆ ಇದೆ. ಹಾಗಾಗಿ ಬೆಳಗ್ಗೆಯಿಂದಲೇ ನಿತ್ಯ ಪೂಜಾಕರ್ಮಗಳು ನಡೆಯುತ್ತದೆ. ಆದ್ರೆ ಸಂಜೆ 4 ಗಂಟೆಯ ಬಳಿಕ ಬ್ರಹ್ಮ ಕುಂಡಿಕೆ ಬಳಿಗೆ ಭಕ್ತರಿಗೆ ಪ್ರವೇಶ ನಿರಾಕರಿಸಲಾಗಿದೆ. ಕಲ್ಯಾಣಿಯ ಮೇಲ್ಭಾಗದಲ್ಲಿ ಭಕ್ತರಿಗೆ ಪವಿತ್ರ ತೀರ್ಥ ಹಂಚಲು ವ್ಯವಸ್ಥೆ ಮಾಡಲಾಗಿದೆ. ಸಂಜೆ 4 ಗಂಟೆಯ ಬಳಿಕ ಭಾಗಮಂಡಲದಿಂದ ತಲಕಾವೇರಿಗೆ ವಾಹನಗಳ ಪ್ರವೇಶ ನಿಷೇಧಿಸಲಾಗಿದೆ. ಆದ್ರೆ ಭಕ್ತರ ಪ್ರಯಾಣಕ್ಕೆ ಕೆಎಸ್​ಆರ್​ಟಿಸಿ ಬಸ್​ಗಳ ವ್ಯವಸ್ಥೆ ಮಾಡಲಾಗಿದೆ. ಇದನ್ನೂ ಓದಿ: ವಿಶ್ವದ ಅತ್ಯಂತ ಪುರಾತನ ದೇವಾಲಯಗಳು ಇಲ್ಲಿವೆ ನೋಡಿ

ತಲಕಾವೇರಿಯಲ್ಲಿ ಪೊಲೀಸ್ ಬಂದೂಬಸ್ತ್

ಭಕ್ತರ ಸ್ವಾಗತಕ್ಕೆ ಜಿಲ್ಲಾಡಳಿತ ಸಕಲ ಸಿದ್ಧತೆ ಕೈಗೊಂಡಿದೆ. ದೇವಸ್ಥಾನದ ಆವರಣದಲ್ಲಿ ಭಕ್ತರ ನಿಯಂತ್ರಣಕ್ಕೆ ಬ್ಯಾರಿಕೇಡ್​ಗಳನ್ನ ಹಾಕಲಾಗಿದೆ. ಅಲ್ಲಲ್ಲಿ ಸಿಸಿ ಕ್ಯಾಮರಾ ಅಳವಡಿಸಲಾಗಿದ್ದು ಕಟ್ಟೆಚ್ಚರವಹಿಸಲಾಗುತ್ತದೆ. ಭದ್ರತೆಗಾಗಿ ಕೆಎಸ್​ಆರ್​ಪಿ ಮತ್ತು ಡಿಎಆರ್​ ಪೊಲೀಸರನ್ನ ನಿಯೋಜಿಸಲಾಗಿದೆ. ತಲಕಾವೇರಿಗೆ ಎಲ್ಲರಿಗೂ ಮುಕ್ತ ಪ್ರವೇಶ ಕಲ್ಪಿಸಲಾಗಿದೆ. ಭಕ್ತರಿಗೆ ಊಟದ ವ್ಯವಸ್ಥೆಯನ್ನೂ ಮಾಡಲಾಗಿದೆ. ಜಿಲ್ಲಾಡಳಿತ, ಪೊಲೀಸ್​ ಇಲಾಖೆ ಮತ್ತು ದೇವಸ್ಥಾನ ಸಮಿತಿ ಒಟ್ಟಾಗಿ ಕಾವೇರಿ ಜಾತ್ರೆಯನ್ನು ಯಶಸ್ಸುಗೊಳಿಸಲು ಸಜ್ಜಾಗಿದೆ. ಆದ್ರೆ ಕಳೆದೆರಡು ದಿನಗಳಿಂದ ಮಧ್ಯಾಹ್ನದ ವೇಳೆ ತಲಕಾವೇರಿಯಲ್ಲಿ ಮಳೆ ಅಬ್ಬರಿಸುತ್ತಿದೆ. ಹಾಗಾಗಿ ತೀರ್ಥೋದ್ಭವದ ವೇಳೆ ಮಳೆ ಬಂದರೆ ಸ್ವಲ್ಪ ಸಮಸ್ಯೆಯಾಗುವ ಸಾಧ್ಯತೆ ಇದೆ. ಜೀವನದಿ ತೀರ್ಥ ರೂಪದಲ್ಲಿ ದರ್ಶನ ನೀಡುವ ಈ ವಿಸ್ಮಯ ವೀಕ್ಷಿಸಲು ಜಿಲ್ಲಾ ಉಸ್ತುವಾರಿ ಸಚಿವ ಬಿಸಿ ನಾಗೇಶ್, ಕಾವೇರಿಕೊಳ್ಳದ ಶಾಸಕರು ಸಂಸದರು ಸೇರಿದಂತೆ ಹಲವು ಗಣ್ಯರು ಭಾಗವಹಿಸುವ ನಿರೀಕ್ಷೆ ಇದೆ.

Published On - 7:38 am, Mon, 17 October 22

ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ