ಮಡಿಕೇರಿ: ಕೊಡಗಿನ ಕೋಟೆಅಬ್ಬಿ ಜಲಪಾತದಲ್ಲಿ ಮುಳುಗಿ ಮೂವರು ನೀರುಪಾಲಾಗಿದ್ದಾರೆ. ಕೊಡಗು (Kodagu) ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಕೋಟೆಅಬ್ಬಿ ಜಲಪಾತದಲ್ಲಿ ಈ ಘಟನೆ ನಡೆದಿದೆ. ಕೊಡಗಿಗೆ ಪ್ರವಾಸಕ್ಕೆ ಬಂದಿದ್ದ ತೆಲಂಗಾಣದ ಮೂವರು ನೀರುಪಾಲಾಗಿದ್ದಾರೆ. ಕೋಟೆಅಬ್ಬಿ ಜಲಪಾತದಲ್ಲಿ ಸ್ನಾನಕ್ಕಿಳಿದಿದ್ದಾಗ ಕಾಲು ಜಾರಿ ಮುಳುಗಿ ಅವರು ಸಾವನ್ನಪ್ಪಿದ್ದಾರೆ.
ಸೋಮವಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಕೋಟೆಅಬ್ಬಿ ಜಲಪಾತದಲ್ಲಿ ಮುಳುಗಿ ಮೃತಪಟ್ಟವರನ್ನು ಶ್ಯಾಮ (36), ಶಹೀಂದ್ರ (16), ಶ್ರೀಹರ್ಷ (18) ಎಂದು ಗುರುತಿಸಲಾಗಿದೆ.
ಕೊಟ್ಟಿಗೆಹಾರದಲ್ಲಿ ವಾಹನ ಪಲ್ಟಿ:
ಚಾಲಕನ ನಿಯಂತ್ರಣ ತಪ್ಪಿ ವಾಹನ ಪಲ್ಟಿಯಾದ್ದರಿಂದ 13 ಜನರಿಗೆ ಗಾಯವಾಗಿದೆ. ಕೊಟ್ಟಿಗೆಹಾರದ ಬಳಿ ನಿಯಂತ್ರಣ ತಪ್ಪಿ ತೂಫಾನ್ ವಾಹನ ಪಲ್ಟಿಯಾಗಿದೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದಲ್ಲಿ ಈ ಘಟನೆ ನಡೆದಿದೆ. ತೂಫಾನ್ ವಾಹನಲ್ಲಿದ್ದ 13 ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಇಬ್ಬರ ಕೈ ಮುರಿತವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಘಟನೆಯಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.
ಇನ್ನಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ