ಏಕಲವ್ಯ ಪ್ರಶಸ್ತಿ ವಿಜೇತೆ, ಕೊಡಗಿನ ಸ್ಟಾರ್​ ಬಾಸ್ಕೆಟ್​​ಬಲ್ ಆಟಗಾರ್ತಿ ನವನೀತಾ ಏಷ್ಯಾ ಕಪ್ ಟೂರ್ನಮೆಂಟ್​ಗೆ ಆಯ್ಕೆ

ಸುಂಟಿಕೊಪ್ಪ ನಿವಾಸಿ ಪಟ್ಟೆಮನೆ ನವನೀತಾ ರಾಷ್ಟ್ರೀಯ ಬಾಸ್ಕೆಟ್ ಬಾಲ್ ತಂಡಕ್ಕೆ ಆಯ್ಕೆಯಾಗಿದ್ದು ಏಷ್ಯಾ ಕಪ್ ಟೂರ್ನಮೆಂಟ್​ನಲ್ಲಿ ಪಾಲ್ಗೊಳ್ಳಲಿದ್ದಾರೆ.

ಏಕಲವ್ಯ ಪ್ರಶಸ್ತಿ ವಿಜೇತೆ, ಕೊಡಗಿನ ಸ್ಟಾರ್​ ಬಾಸ್ಕೆಟ್​​ಬಲ್ ಆಟಗಾರ್ತಿ ನವನೀತಾ ಏಷ್ಯಾ ಕಪ್ ಟೂರ್ನಮೆಂಟ್​ಗೆ ಆಯ್ಕೆ
ಕೊಡಗಿನ ಸ್ಟಾರ್​ ಬಾಸ್ಕೆಟ್​​ಬಲ್ ಆಟಗಾರ್ತಿ ನವನೀತಾ
Follow us
TV9 Web
| Updated By: ಆಯೇಷಾ ಬಾನು

Updated on:Sep 16, 2021 | 10:40 AM

ಮಡಿಕೇರಿ: ರಾಷ್ಟ್ರೀಯ ಕ್ರೀಡಾ ಕ್ಷೇತ್ರಕ್ಕೆ ಕೊಡಗಿನ ಕೊಡುಗೆ ಅಪಾರ. ಇದೀಗ ಇವರ ಸಾಲಿಗೆ ಕೊಡಗಿನ ಮತ್ತೊಬ್ಬ ಕ್ರೀಡಾಪಟು ಸೇರ್ಪಡೆಯಾಗಿದ್ದಾರೆ. ಸುಂಟಿಕೊಪ್ಪ ನಿವಾಸಿ ಪಟ್ಟೆಮನೆ ನವನೀತಾ ರಾಷ್ಟ್ರೀಯ ಬಾಸ್ಕೆಟ್ ಬಾಲ್ ತಂಡಕ್ಕೆ ಆಯ್ಕೆಯಾಗಿದ್ದು ಏಷ್ಯಾ ಕಪ್ ಟೂರ್ನಮೆಂಟ್​ನಲ್ಲಿ ಪಾಲ್ಗೊಳ್ಳಲಿದ್ದಾರೆ.

ಇದೇ 27 ರಿಂದ ಅಕ್ಟೋಬರ್ 3 ರವರೆಗೆ ಜೋರ್ಡಾನ್​ನ ಅಮನ್​ನಲ್ಲಿ ಏಷ್ಯಾಕಪ್​ ಪಂದ್ಯಾವಳಿ ನಡೆಯಲಿದೆ. ಭಾರತ ಕೊರಿಯಾ ಜಪಾನ್ ಮತ್ತು ನ್ಯೂಜಿಲ್ಯಾಂಡ್ ತಂಡಗಳು ಎ ಗುಂಪಿನಲ್ಲಿವೆ. ಭಾರತ ತಂಡ ತನ್ನ ಮೊದಲ ಪಂದ್ಯವನ್ನು ತಾ. 27 ರಂದು ಜಪಾನ್ ವಿರುದ್ಧ ಸೆಣಸಲಿದೆ. ಮಡಿಕೇರಿ ತಾಲೂಕಿನ ಸುಂಟಿಕೊಪ್ಪ ಬಳಿಯ ಗದ್ದೆಹಳ್ಳ ನಿವಾಸಿಯಾಗಿರೋ ಪಟ್ಟೆಮನೆ ಉದಯ್​ಕುಮಾರ್​ ಗಿರಿಜಾ ದಂಪತಿಯ ಪುತ್ರಿಯಾಗಿರೋ ನವನೀತಾ ಸದ್ಯ ರೈಲ್ವೇ ಇಲಾಖೆಯಲ್ಲಿ ಉದ್ಯೋಗಿಯಾಗಿದ್ದಾರೆ.

ಇವರು ಪ್ರತಿಷ್ಠಿತ ಏಕಲವ್ಯ ಪ್ರಶಸ್ತಿಗೂ ಭಾಜನರಾಗಿದ್ದಾರೆ. ಇದೇ ಸುಂಟಿಕೊಪ್ಪ ಊರಿನ ಅಂಕಿತಾ ಸುರೇಶ್​ ಟೋಕಿಯೋ ಒಲಿಂಪಿಕ್ಸ್​ನಲ್ಲಿ ಭಾರತ ಹಾಕಿ ತಂಡದ ಸಹಾಯಕ ಕೋಚ್ ಆಗಿ ಕಾರ್ಯನಿರ್ವಹಿಸಿದ್ದರು.

ಇದನ್ನೂ ಓದಿ: ತೊಡೆಗೆ ಗಾಯವಾಗಿರದಿದ್ದರೆ ಟೊಕಿಯೋ ಒಲಂಪಿಕ್ಸ್​ನಲ್ಲಿ ಬಜರಂಗ್ ಪೂನಿಯಾ ಚಿನ್ನ ಗೆಲ್ಲುವುದನ್ನು ಯಾರೂ ತಡೆಯುತ್ತಿರಲಿಲ್ಲ!

Published On - 10:39 am, Thu, 16 September 21

ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ