Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತ್ಯೇಕ ಪ್ರಕರಣ: ಮಂಡ್ಯ, ಮೈಸೂರಲ್ಲಿ ಕಾಡಾನೆಗಳ ಉಪಟಳ; ಕೊಡಗಿನಲ್ಲಿ ವಿದ್ಯುತ್ ತಂತಿ​ ತಗುಲಿ ಗಜರಾಜ ಸಾವು ಶಂಕೆ

ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಕಂಬಿಬಾಣೆ ಗ್ರಾಮದ ಕಾಫಿ ತೋಟವೊಂದಕ್ಕೆ ಹಾಕಲಾಗಿದ್ದ ವಿದ್ಯುತ್​​ ತಗುಲಿ ಆನೆ ಸಾವನ್ನಪ್ಪಿದೆ.

ಪ್ರತ್ಯೇಕ ಪ್ರಕರಣ: ಮಂಡ್ಯ, ಮೈಸೂರಲ್ಲಿ ಕಾಡಾನೆಗಳ ಉಪಟಳ; ಕೊಡಗಿನಲ್ಲಿ ವಿದ್ಯುತ್ ತಂತಿ​ ತಗುಲಿ ಗಜರಾಜ ಸಾವು ಶಂಕೆ
ಮೃತ ಆನೆ
Follow us
Gopal AS
| Updated By: ವಿವೇಕ ಬಿರಾದಾರ

Updated on:Jul 30, 2023 | 12:59 PM

ಕೊಡಗು ಜು.30: ಜಿಲ್ಲೆಯಲ್ಲಿ ವಿದ್ಯುತ್​ ತಗುಲಿ ಆನೆಗಳು (Elephant) ಸಾವನ್ನಪ್ಪುತ್ತಿರುವ ಪ್ರಕರಣಗಳು ಮೇಲಿಂದ ಮೇಲೆ ವರದಿಯಾಗುತ್ತಿದ್ದು, ಈ ಬಗ್ಗೆ ಜಿಲ್ಲಾಡಳಿತ ಮತ್ತು ಅರಣ್ಯ ಇಲಾಖೆ (Forest Department) ಕ್ರಮ ಕೈಗೊಳ್ಳದೆ ಕಣ್ಮುಚ್ಚಿ ಕುಳಿತುಕೊಂಡಿದೆ ಎಂದು ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇದೀಗ ಮತ್ತೆ ಜಿಲ್ಲೆಯ ಕುಶಾಲನಗರ (Kushalnagar) ತಾಲೂಕಿನ ಕಂಬಿಬಾಣೆ ಗ್ರಾಮದ ಕಾಫಿ ತೋಟವೊಂದಕ್ಕೆ ಹಾಕಲಾಗಿದ್ದ ವಿದ್ಯುತ್​​ ತಂತಿ ತಗುಲಿ ಆನೆ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಉದಯ್ ಎಂಬುವವರ ಕಾಫಿ ತೋಟದಲ್ಲಿ ಅಂದಾಜು 16 ವರ್ಷದ ಗಂಡಾನೆ ಶವ ಪತ್ತೆಯಾಗಿದ್ದು, ಎರಡು ದಿನಗಳ ಹಿಂದೆಯೇ ಆನೆ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಅರಣ್ಯ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಜಮೀನಿನಲ್ಲಿ ಬೀಡು ಬಿಟ್ಟ ಕಾಡಾನೆಗಳು

 ಮಂಡ್ಯ: ಶ್ರೀರಂಗಪಟ್ಟಣ ತಾಲೂಕಿನ ಹಲವು ಗ್ರಾಮಗಳಲ್ಲಿ ಕಾಡಾನೆಗಳ ಉಪಟಳ ಜಾಸ್ತಿಯಾಗಿದೆ. ಸದ್ಯ 10 ಕಾಡಾನೆಗಳು ಹಂಪಾಪುರ ಗ್ರಾಮದ ಬಳಿಯ ಜಮೀನಿನಲ್ಲಿ ಕಳೆದ 15 ದಿನಗಳಿಂದ ಬೀಡು ಬಿಟ್ಟಿವೆ. ಈ ಆನೆಗಳು ಪ್ರತಿದಿನ ರಾತ್ರಿ ಊರಿಂದ ಊರಿಗೆ ತೆರಳುತ್ತಿರುವ ಹಿನ್ನೆಲೆ ಇವುಗಳನ್ನು ಕಾಡಿಗೆ ಅಟ್ಟಲು ಅರಣ್ಯ ಇಲಾಖೆ ಹರಸಾಹಸ ಪಡುತ್ತಿದೆ. ಇವುಗಳನ್ನು ಸೆರೆ ಹಿಡಿಯಲು ಹುಣಸೂರು ವಿಭಾಗದ ಎಲಿಫೆಂಟ್ ಟಾಸ್ಕ್ ಪೋರ್ಸ್​ ಕಾರ್ಯಾಚರಣೆ ನಡೆಸುತ್ತಿದೆ.

ಇದನ್ನೂ ಓದಿ: ಕೊಡಗು ಪೊಲೀಸರ ಭರ್ಜರಿ ಕಾರ್ಯಾಚರಣೆ: 36 ಮಂದಿ ಡ್ರಗ್ಸ್ ಪೆಡ್ಲರ್​ಗಳು, ಗಾಂಜಾ ವ್ಯಸನಿಗಳ ಬಂಧನ

ಇನ್ನು ಮದ್ದೂರಿನ ಶಿಂಷಾ ನದಿಯ ಬಳಿ ಕಾಡಾನೆ ಹಿಂಡು ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಈ ಕಾಡಾನೆಗಳನ್ನು ಹಿಮ್ಮೆಟ್ಟಿಸುವಂತೆ ಸ್ಥಳೀಯರ ಆಗ್ರಹಿಸುತ್ತಿದ್ದಾರೆ.

ಹಿಂಡಿನಿಂದ ಬೇರ್ಪಟ್ಟ ಮರಿಯಾನೆ ಪರದಾಟ

ಹಾಸನ: ಬೇಲೂರು ತಾಲೂಕಿನ ಕೋಗೋಡು ಗ್ರಾಮದ ರಸ್ತೆ ಹಾಗೂ ಕಾಫಿ ತೋಟಗಳಲ್ಲಿ ಮರಿಯಾನೆ ಏಕಾಂಗಿಯಾಗಿ ಓಡಾಡುತ್ತಿರುವ ದೃಶ್ಯ ಕ್ಯಾಮೆರಾ ಕಣ್ಣಿಗೆ ಸೆರೆಯಾಗಿದೆ. ಹಿಂಡಿನಿಂದ ಬೇರ್ಪಟ್ಟ ಮರಿಯಾನೆ ತನ್ನವರನ್ನು ಹುಡುಕುತ್ತಾ ಅಲೆದಾಡುತ್ತಿದೆ.

ಇನ್ನು ಇದರ ಜೊತೆಯಲ್ಲಿದ ಎಂಟು ಕಾಡಾನೆಗಳು  ಗಿರಿಯಪ್ಪಶೆಟ್ಟಿ ಎಂಬುವವರ ತೋಟದಲ್ಲಿ ಬೀಡುಬಿಟ್ಟಿವೆ. ಹೀಗಾಗಿ ಗ್ರಾಮಸ್ಥರು ಮರಿಯಾನೆಯನ್ನು ಕಾಡಾನೆಗಳ ಹಿಂಡಿನತ್ತ ಓಡಿಸುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:54 pm, Sun, 30 July 23

ರಶೀದ್ ಖಾನ್ ವಿರುದ್ಧ ಬೌಂಡರಿಗಳ ಮಳೆಗರೆದ ಲಿವಿಂಗ್‌ಸ್ಟೋನ್
ರಶೀದ್ ಖಾನ್ ವಿರುದ್ಧ ಬೌಂಡರಿಗಳ ಮಳೆಗರೆದ ಲಿವಿಂಗ್‌ಸ್ಟೋನ್
ರಸ್ತೆಯಲ್ಲಿ ಹೋಗುತ್ತಿದ್ದವರ ಮೇಲೆ ಗೂಳಿ ದಾಳಿ; ಶಾಕಿಂಗ್ ವಿಡಿಯೋ ಇಲ್ಲಿದೆ
ರಸ್ತೆಯಲ್ಲಿ ಹೋಗುತ್ತಿದ್ದವರ ಮೇಲೆ ಗೂಳಿ ದಾಳಿ; ಶಾಕಿಂಗ್ ವಿಡಿಯೋ ಇಲ್ಲಿದೆ
ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ಆರ್​ಸಿಬಿ
ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ಆರ್​ಸಿಬಿ
ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ
ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಡೀಸೆಲ್ ಬೆಲೆ ಹೆಚ್ಚಳದಿಂದ ಹಲವಾರು ವಸ್ತುಗಳ ಬೆಲೆ ಜಾಸ್ತಿಯಾಗುತ್ತದೆ: ಅಶೋಕ
ಡೀಸೆಲ್ ಬೆಲೆ ಹೆಚ್ಚಳದಿಂದ ಹಲವಾರು ವಸ್ತುಗಳ ಬೆಲೆ ಜಾಸ್ತಿಯಾಗುತ್ತದೆ: ಅಶೋಕ