ಶೌಚಗುಂಡಿಗೆ ಬಿದ್ದು ಮೇಲೆ ಬರಲಾಗದೆ ಆನೆ ಮರಿ ನರಳಾಟ; ರಕ್ಷಣೆಗೆ ಮುಂದಾಗಿರುವ ಗ್ರಾಮಸ್ಥರು

ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕಿನ ಭದ್ರಗೊಳ ಗ್ರಾಮದ ಸುಬ್ರಮಣಿ ಎಂಬುವರಿಗೆ ಸೇರಿದ ತೋಟದಲ್ಲಿ ಮರಿ ಆನೆಯೊಂದು ಸಿಲುಕಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಅಲ್ಲದೇ ಆನೆ ಮರಿಯನ್ನು ಮೇಲೆತ್ತುವುದಕ್ಕೆ ಸ್ಥಳೀಯರು ಪ್ರಯತ್ನಿಸುತ್ತಿದ್ದಾರೆ.

ಶೌಚಗುಂಡಿಗೆ ಬಿದ್ದು ಮೇಲೆ ಬರಲಾಗದೆ ಆನೆ ಮರಿ ನರಳಾಟ; ರಕ್ಷಣೆಗೆ ಮುಂದಾಗಿರುವ ಗ್ರಾಮಸ್ಥರು
ಶೌಚಗುಂಡಿಗೆ ಬಿದ್ದು ಮೇಲೆ ಬರಲಾಗದೆ ಆನೆ ಮರಿ ನರಳಾಟ
Follow us
TV9 Web
| Updated By: preethi shettigar

Updated on: Jul 27, 2021 | 9:25 AM

ಕೊಡಗು: ಇತ್ತೀಚಿನ ದಿನಗಳಲ್ಲಿ ಕಾಡು ಪ್ರಾಣಿಗಳು ನಾಡಿನ ಕಡೆಗೆ ಬಂದು ಹಾನಿ ಮಾಡುತ್ತಿರುವ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಒಂದೆಡೆ ಕಾಡಾನೆಗಳು ದಾಳಿ ಇಡುತ್ತವೆ. ಇನ್ನೊಂದೆಡೆ ಹುಲಿ, ಚಿರತೆಯಂತಹ ಪ್ರಾಣಿಗಳು ಗ್ರಾಮಸ್ಥರನ್ನು ಸಂಕಷ್ಟಕ್ಕೆ ಗುರಿ ಮಾಡಿದೆ. ಒಟ್ಟಾರೆ ಕಾಡಂಚಿನ ಜನರು ಭಯದಲ್ಲೇ ಜೀವನ ಸಾಗಿಸುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇನ್ನು ಕೊಡಗು ಜಿಲ್ಲೆಯಲ್ಲಿ ಕಾಡಾನೆಗಳ ಉಪಟಳ ಹೆಚ್ಚಾಗಿದ್ದು, ಒಂದೋ ಮಾನವರ ಮೇಲೆ ದಾಳಿ ಮಾಡುತ್ತವೆ. ಇಲ್ಲ ರೈತರ ತೋಟ ಮತ್ತು ಜಮೀನುಗಳಿಗೆ ನುಗ್ಗಿ ಬೆಳೆ ನಾಶ ಮಾಡುತ್ತಿವೆ. ಆದರೆ ಇಂದು ಕೊಡಗಿನ ಭದ್ರಗೊಳ ಗ್ರಾಮದಲ್ಲಿ ಶೌಚಗುಂಡಿಗೆ ಬಿದ್ದು, ಆನೆ ಮರಿಯೊಂದು ಮೇಲೆ ಬರಲಾಗದೆ ನರಳಾಡಿದೆ.

ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕಿನ ಭದ್ರಗೊಳ ಗ್ರಾಮದ ಸುಬ್ರಮಣಿ ಎಂಬುವರಿಗೆ ಸೇರಿದ ತೋಟದಲ್ಲಿ ಮರಿ ಆನೆಯೊಂದು ಸಿಲುಕಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಅಲ್ಲದೇ ಆನೆ ಮರಿಯನ್ನು ಮೇಲೆತ್ತುವುದಕ್ಕೆ ಸ್ಥಳೀಯರು ಪ್ರಯತ್ನಿಸುತ್ತಿದ್ದಾರೆ. ಅಂದಾಜು ಮೂರು ವರ್ಷದ ಗಂಡಾನೆ ಮರಿ ಶೌಚಗುಂಡಿಗೆ ಸಿಲುಕಿದ್ದು, ಅದರ ಕಷ್ಟ ನೋಡಲಾರದೆ ಸ್ಥಳೀಯರು ಸಹಾಯಕ್ಕೆ ಮುಂದಾಗಿದ್ದಾರೆ.

ಕಾಡಾನೆ ದಾಳಿಯಿಂದ ಕಾರ್ಮಿಕ ಸಾವು ಆನೆ ದಾಳಿಗೆ ಕಾರ್ಮಿಕರೊಬ್ಬರು ಮೃತಪಟ್ಟ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ನಂಜರಾಯಪಟ್ಟಣ ಪೈಸಾರಿಯಲ್ಲಿ ನಡೆದಿದೆ. ಕೂಲಿ ಕಾರ್ಮಿಕರಾದ ಉಲ್ಲಾಸ್​ (63) ಸಾವನ್ನಪ್ಪಿದ ದುರ್ದೈವಿ. ದನಗಳನ್ನು ಕರೆತರಲು ತೋಟಕ್ಕೆ ತೆರಳಿದ್ದಾಗ ಏಕಾಏಕಿ ಆನೆ ದಾಳಿ ಮಾಡಿದೆ ತೀವ್ರವಾಗಿ ಗಾಯಗೊಂಡ ಉಲ್ಲಾಸ್​ರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಉಲ್ಲಾಸ್​ ಮೃತಪಟ್ಟಿದ್ದಾರೆ. ಸದ್ಯ ಕುಶಾಲನಗರ ಗ್ರಾ‌ಮಾಂತರ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಕಾಫಿ ತೋಟಗಳಿಗೆ ಕಾಡಾನೆಗಳ ಲಗ್ಗೆ, ಬೆಳೆ ನಾಶ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಾಳೂರು ಗ್ರಾಮದಲ್ಲಿನ ತೋಟಗಳಿಗೆ ಕಾಡನೆ ದಾಳಿ ಮಾಡಿದ್ದು, ಬೆಳೆ ನಾಶವಾಗಿದೆ. ಬಾಲಕೃಷ್ಣ, ಶರಣು ಪಟೇಲ್ ಎಂಬುವರ ಕಾಫಿ ತೋಟಗಳಲ್ಲಿ ಕಾಡಾನೆಗಳು ಬೀಡುಬಿಟ್ಟಿದ್ದು, ಮೋಟಾರ್, ಪೈಪುಗಳು ಸೇರಿದಂತೆ ಕೃಷಿ ಸಲಕರಣೆಗಳನ್ನು ನಾಶ ಮಾಡಿವೆ. ಕಾಡಾನೆಗಳನ್ನು ಬೇರೆಡೆಗೆ ಸ್ಥಳಾಂತರ ಮಾಡುವಂತೆ ರೈತರು ಆಗ್ರಹಿಸಿದ್ದಾರೆ. ಆದರೆ ಕಾಡಾನೆಗಳನ್ನು ಓಡಿಸಲು ಅರಣ್ಯ ಇಲಾಖೆ ಸಿಬ್ಬಂದಿಗಳು ಹರಸಾಹಸ ಪಡುವಂತಾಗಿದೆ.

ಇದನ್ನೂ ಓದಿ: ಕೆಸರಿನಲ್ಲಿ ಸಿಲುಕಿದ್ದ ಕಾಡಾನೆ ರಕ್ಷಣೆ; ಬಂಡೀಪುರ ಅರಣ್ಯ ಮೊಳೆಯೂರು ವಲಯದಲ್ಲಿ ಘಟನೆ

ಮೈಸೂರಿನಲ್ಲಿ ಕಾಡಾನೆಗಳ ದಾಳಿ: ಜಮೀನಿನಲ್ಲಿದ್ದ ಬಾಳೆ ಫಸಲು ನಾಶ

ಪಾರ್ಕಿಂಗ್ ವಿಚಾರವಾಗಿ ಜಗಳ, ವ್ಯಕ್ತಿಗೆ ಮನಬಂದಂತೆ ಥಳಿಸಿದ ಗುಂಪು
ಪಾರ್ಕಿಂಗ್ ವಿಚಾರವಾಗಿ ಜಗಳ, ವ್ಯಕ್ತಿಗೆ ಮನಬಂದಂತೆ ಥಳಿಸಿದ ಗುಂಪು
ಜನಪ್ರತಿನಿಧಿಗಳ ನಿರ್ಲಕ್ಷ್ಯ ಜಲಾಶಯದಲ್ಲಿ ಸೋರುವಿಕೆಗೆ ಕಾರಣವಾಯಿತೆ?
ಜನಪ್ರತಿನಿಧಿಗಳ ನಿರ್ಲಕ್ಷ್ಯ ಜಲಾಶಯದಲ್ಲಿ ಸೋರುವಿಕೆಗೆ ಕಾರಣವಾಯಿತೆ?
ಮುಡಾ ಪ್ರಕರಣದಲ್ಲಿ ಲೋಕಾಯುಕ್ತವೇ ಅಪರಾಧಿ ಸ್ಥಾನದಲ್ಲಿದೆ: ಸ್ನೇಹಮಯಿ ಕೃಷ್ಣ
ಮುಡಾ ಪ್ರಕರಣದಲ್ಲಿ ಲೋಕಾಯುಕ್ತವೇ ಅಪರಾಧಿ ಸ್ಥಾನದಲ್ಲಿದೆ: ಸ್ನೇಹಮಯಿ ಕೃಷ್ಣ
ಮಹಾರಾಜನಾಗಿ ದರ್ಪ ತೋರಿದ್ರು; ಉಳಿದವರ ಉಪವಾಸ ಕೆಡವಿ ತಾನು ಊಟ ಮಾಡಿದ ಮಂಜು
ಮಹಾರಾಜನಾಗಿ ದರ್ಪ ತೋರಿದ್ರು; ಉಳಿದವರ ಉಪವಾಸ ಕೆಡವಿ ತಾನು ಊಟ ಮಾಡಿದ ಮಂಜು
ಚಲಿಸುತ್ತಿದ್ದ ರೈಲಿನಿಂದ ಹಾರಿದ ಮಹಿಳೆಯ ಜೀವ ಉಳಿಸಿದ ರೈಲ್ವೆ ಪೊಲೀಸ್
ಚಲಿಸುತ್ತಿದ್ದ ರೈಲಿನಿಂದ ಹಾರಿದ ಮಹಿಳೆಯ ಜೀವ ಉಳಿಸಿದ ರೈಲ್ವೆ ಪೊಲೀಸ್
ಕಾರ್ತಿಕ ಮಾಸದ ಕೊನೆ ಸೋಮವಾರ ಶಿವನ ಆರಾಧನೆ ಹೇಗೆ ಮಾಡುವುದು? ತಿಳಿಯಿರಿ
ಕಾರ್ತಿಕ ಮಾಸದ ಕೊನೆ ಸೋಮವಾರ ಶಿವನ ಆರಾಧನೆ ಹೇಗೆ ಮಾಡುವುದು? ತಿಳಿಯಿರಿ
Daily Horoscope: ಕಾರ್ತಿಕ ಮಾಸದ ಕೊನೆ ಸೋಮವಾರ ದಿನ ಭವಿಷ್ಯ ತಿಳಿಯಿರಿ
Daily Horoscope: ಕಾರ್ತಿಕ ಮಾಸದ ಕೊನೆ ಸೋಮವಾರ ದಿನ ಭವಿಷ್ಯ ತಿಳಿಯಿರಿ
ಭೈರತಿ ರಣಗಲ್: ಶಿವಮೊಗ್ಗದಲ್ಲಿ ಫ್ಯಾನ್ಸ್ ಜತೆ ಸಂಭ್ರಮಿಸಿದ ಶಿವರಾಜ್​ಕುಮಾರ್
ಭೈರತಿ ರಣಗಲ್: ಶಿವಮೊಗ್ಗದಲ್ಲಿ ಫ್ಯಾನ್ಸ್ ಜತೆ ಸಂಭ್ರಮಿಸಿದ ಶಿವರಾಜ್​ಕುಮಾರ್
ಬಿಜೆಪಿ ಸೋಲಿಗೆ ಯತ್ನಾಳ್​ನ ಹರಕು ಬಾಯಿ ಕಾರಣ: ರೇಣುಕಾಚಾರ್ಯ ವಾಗ್ದಾಳಿ
ಬಿಜೆಪಿ ಸೋಲಿಗೆ ಯತ್ನಾಳ್​ನ ಹರಕು ಬಾಯಿ ಕಾರಣ: ರೇಣುಕಾಚಾರ್ಯ ವಾಗ್ದಾಳಿ
ಸುದೀಪ್​ ಹೇಳಿದ ಒಂದೇ ಮಾತಿಗೆ ಉಗ್ರಂ ಮಂಜು, ಗೌತಮಿ ನಡುವಿನ ಸ್ನೇಹ ಕಟ್
ಸುದೀಪ್​ ಹೇಳಿದ ಒಂದೇ ಮಾತಿಗೆ ಉಗ್ರಂ ಮಂಜು, ಗೌತಮಿ ನಡುವಿನ ಸ್ನೇಹ ಕಟ್