ಕೊಡಗು: ದುಷ್ಕರ್ಮಿಗಳ ಗುಂಡೇಟಿಗೆ ಕಾಡಾನೆ ಬಲಿ

ಕಿಡಿಗೇಡಿಗಳು ಗುಂಡುಹಾರಿಸಿ 18 ವರ್ಷದ ಹೆಣ್ಣಾನೆಯನ್ನು ಕೊಂದಿರುವ ಘಟನೆ ಜಿಲ್ಲೆಯ ಕುಶಾಲನಗರ ತಾಲೂಕಿನ ಬಾಳುಗೋಡು ಗ್ರಾಮದಲ್ಲಿ ನಡೆದಿದೆ.

ಕೊಡಗು: ದುಷ್ಕರ್ಮಿಗಳ ಗುಂಡೇಟಿಗೆ ಕಾಡಾನೆ ಬಲಿ
ಮೃತ ಹೆಣ್ಣಾನೆ
Follow us
ವಿವೇಕ ಬಿರಾದಾರ
|

Updated on:May 21, 2023 | 10:16 AM

ಕೊಡಗು: ಕಿಡಿಗೇಡಿಗಳು ಗುಂಡುಹಾರಿಸಿ 18 ವರ್ಷದ ಹೆಣ್ಣಾನೆಯನ್ನು ಕೊಂದಿರುವ ಘಟನೆ ಜಿಲ್ಲೆಯ ಕುಶಾಲನಗರ (Kushalnagar) ತಾಲೂಕಿನ ಬಾಳುಗೋಡು ಗ್ರಾಮದಲ್ಲಿ ನಡೆದಿದೆ. ಕಿಡಿಗೇಡಿಗಳು ಕಳೆದ ರಾತ್ರಿ ಗುಂಡು ಹಾರಿಸಿ ಆನೆ ಕೊಂದಿದ್ದಾರೆ ಎಂದು ತಿಳಿದು ಬಂದಿದ್ದು, ಘಟನಾ ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಕುಶಾಲನಗರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಪಾರ್ಕಿಂಗ್ ಟಿಕೆಟ್ ಸಂಗ್ರಹ ವಿಚಾರವಾಗಿ ಗಲಾಟೆ

ಪಾರ್ಕಿಂಗ್ ಟಿಕೆಟ್ ಸಂಗ್ರಹ ವಿಚಾರವಾಗಿ ಗಲಾಟೆಯಾಗಿ ಪ್ರವಾಸಿಗರ ಮೇಲೆ ಸ್ಥಳೀಯರು ದೊಣ್ಣೆಯಿಂದ ಹಲ್ಲೆ ಮಾಡಿರುವ ಘಟನೆ ಮಡಿಕೇರಿ ತಾಲೂಕಿನ ಕೆ.ನಿಡುಗಣೆ ಗ್ರಾಮದ ಅಬ್ಬಿಫಾಲ್ಸ್‌ ಬಳಿ ನಡೆದಿದೆ. ಆರೋಪ ಕೇಳಿಬಂದಿದೆ. ಪಾರ್ಕಿಂಗ್ ಟಿಕೆಟ್ ಸಂಗ್ರಹಿಸುವ ಸಿಬ್ಬಂದಿ ವಿರುದ್ಧ ಹಲ್ಲೆ‌ ಆರೋಪ ಕೇಳಿಬಂದಿದೆ.

ಇದನ್ನೂ ಓದಿ: ಈಜಲು ತುಂಗಾ ನದಿಗೆ ಇಳಿದ ಇಬ್ಬರು ವಿದ್ಯಾರ್ಥಿಗಳು ನೀರುಪಾಲು

ಅನುಮಾನಸ್ಪದವಾಗಿ ಕರಡಿ ಸಾವು

ತುಮಕೂರು: ಅನುಮಾನಸ್ಪದವಾಗಿ ಕರಡಿ ಸಾವನ್ನಪ್ಪಿರುವ ಘಟನೆ ಜಿಲ್ಲೆ ಮಧುಗಿರಿ ತಾಲೂಕಿನ ರೆಡ್ಡಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಕರಡಿಗೆ ಹೊಡೆದು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಆಹಾರ ಹರಸಿ ಊರಿನ ಹೊರವಲಯಕ್ಕೆ ಬಂದಾಗ ಘಟನೆ ನಡೆದಿದೆ ಎಂಬ ಶಂಕೆ ವ್ಯಕ್ತವಾಗಿದೆ. ಮಧುಗಿರಿ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ವಿದ್ಯುತ್ ತಂತಿ ತಗುಲಿ ಕಾರ್ಮಿಕ ಸಾವು

ಮಂಡ್ಯ: ವಿದ್ಯುತ್ ತಂತಿ ತಗುಲಿ ಕಾರ್ಮಿಕ ಸಾವನ್ನಪ್ಪಿರುವ ಘಟನೆ ನಾಗಮಂಗಲ ತಾಲೂಕಿನ ಬೆಳ್ಳೂರು ಗ್ರಾಮದಲ್ಲಿ ನಡೆದಿದೆ. ಪಾಂಡವಪುರ ತಾಲೂಕಿನ ಟಿ.ಎಸ್.ಛತ್ರದ ಗ್ರಾಮದ ರಾಜು ಮೃತ ವ್ಯಕ್ತಿ. ಬೆಳ್ಳೂರಿನ ಮಯೂರ ಹೋಟೆಲ್ ನಲ್ಲಿ ಕೆಲಸ ಮಾಡ್ತಿದ್ದ ವ್ಯಕ್ತಿ ನಿನ್ನೆ ಮಾವಿನಕಾಯಿ ಕೀಳಲು ಹೋಗಿದ್ದ ವೇಳೆ ವಿದ್ಯುತ್ ತಂತಿ ತಗುಲಿ ಸಾವನ್ನಪ್ಪಿದ್ದಾನೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:11 am, Sun, 21 May 23

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ