ತನ್ನ ಮಗಳನ್ನು ಪ್ರೀತಿಸುತ್ತಿದ್ದ ಬಾಲಕನನ್ನು ಹೊಡೆದು ಕೊಲೆ ಮಾಡಿದ ತಂದೆ ಅರೆಸ್ಟ್

ವ್ಯಕ್ತಿಯೊಬ್ಬರು ಬಾಲಕನನ್ನು ದೊಣ್ಣೆಯಿಂದ ಹೊಡೆದು ಕೊಲೆ ಮಾಡಿದ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಕರಣ ಸಂಬಂಧ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಕೊಲೆಯಾದ ಬಾಲಕ ಆರೋಪಿಯ ಮಗಳನ್ನು ಪ್ರೀತಿಸುತ್ತಿದ್ದ ಎಂಬ ಅಂಶ ತಿಳಿದುಬಂದಿದೆ.

ತನ್ನ ಮಗಳನ್ನು ಪ್ರೀತಿಸುತ್ತಿದ್ದ ಬಾಲಕನನ್ನು ಹೊಡೆದು ಕೊಲೆ ಮಾಡಿದ ತಂದೆ ಅರೆಸ್ಟ್
ತನ್ನ ಮಗಳನ್ನು ಪ್ರೀತಿಸುತ್ತಿದ್ದ ಬಾಲಕನನ್ನು ಹೊಡೆದು ಕೊಲೆ ಮಾಡಿದ ತಂದೆ ಅರೆಸ್ಟ್ (ಸಾಂದರ್ಭಿಕ ಚಿತ್ರ)
Updated By: Rakesh Nayak Manchi

Updated on: Sep 08, 2023 | 11:15 AM

ಮಡಿಕೇರಿ, ಸೆ.8: ವ್ಯಕ್ತಿಯೊಬ್ಬರು ದೊಣ್ಣೆಯಿಂದ ಹೊಡೆದು ಬಾಲಕನನ್ನು ಹತ್ಯೆ (Murder) ಮಾಡಿದ ಘಟನೆ ಕೊಡಗು (Kodagu) ಜಿಲ್ಲೆಯ ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನಿನ್ನೆ ತಡರಾತ್ರಿ ಬಾಲಕ ಆರೋಪಿಯ ಮನೆಗೆ ಹೋಗಿದ್ದಾಗ ಈ ಘಟನೆ ನಡೆದಿದ್ದು, ಮೃತ ಬಾಲಕ ಆರೋಪಿಯ ಮಗಳನ್ನು ಪ್ರೀತಿಸುತ್ತಿದ್ದ ಎಂಬ ಶಂಕೆ ವ್ಯಕ್ತವಾಗಿದೆ.

ನಿನ್ನೆ ತಡರಾತ್ರಿ ಆರೋಪಿ ಮನೆಗೆ 16 ವರ್ಷದ ಬಾಲಕ ತೆರಳಿದ್ದನು. ಈ ವೇಳೆ, ಆರೋಪಿ ದೊಣ್ಣೆಯಿಂದ ಹಲ್ಲೆ ನಡೆಸಿದ್ದಾನೆ. ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡ ಬಾಲಕನನ್ನು ಆಸ್ಪತ್ರೆಗೆ ಸಾಗಿಸುವ ಪ್ರಯತ್ನ ಮಾಡಲಾಯಿತಾದರೂ ದಾರಿ ಮಧ್ಯೆ ಮೃತಪಟ್ಟಿದ್ದಾನೆ.

ಇದನ್ನೂ ಓದಿ: ಬೆಂಗಳೂರು: ಮೊದಲ ಪ್ರಿಯಕರನನ್ನು ಬಿಟ್ಟು ಮತ್ತೊಬ್ಬನ ಸಂಗಡ ಮಾಡಿದ್ದಕ್ಕೆ ತಾಯಿ ಮಗುವಿನ ಹತ್ಯೆ

ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡ ವಿರಾಜಪೇಟೆ ಗ್ರಾಮೀಣ ಠಾಣಾ ಪೊಲೀಸರು ಆರೋಪಿಯನ್ನು ಬಂಧಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ